ಸಿನಿ ಸುದ್ದಿ
ಮಹಾತ್ಮ ಗಾಂಧಿ ಕುರಿತು ಅವಹೇಳನ ಕಾರಿ ಟ್ವೀಟ್ ಮಾಡಿದ ನಟಿ ಕಂಗನಾ

ಸುದ್ದಿದಿನ ಡೆಸ್ಕ್ : ವಿವಾದಾತ್ಮಕ ಹೇಳಿಕೆ ನೀಡುವುದರ ಮೂಲಕ ಆಗಾಗ ಸದ್ದು ಮಾಡುವ ಬಾಲಿವುಡ್ ನಟಿ ಕಂಗನಾ ರಾಣಾವತ್ ಈ ಬಾರಿ ಗಾಂಧೀಜಿ ವಿರುದ್ಧ ವಿವಾದಾತ್ಮಕ ಟ್ವೀಟ್ ಮಾಡುವುದರ ಮೂಲಕ ಮತ್ತೆ ಹೊಸ ವಿವಾದ ಹುಟ್ಟಿಹಾಕಿದ್ದಾರೆ.
ಈ ಭಾರಿ ನಟಿ ಕಂಗನಾ ಮಹಾತ್ಮಾ ಗಾಂಧೀಜಿ ಕುರಿತು ಟ್ವೀಟ್ ಮಾಡಿ, ಸ್ವಂತ ಮಕ್ಕಳಿಗೆ ಗಾಂಧೀಜಿ ಅವರು ಕೆಟ್ಟ ತಂದೆಯಾಗಿದ್ದರೆಂದು ಆರೋಪ ಮಾಡಿದ್ದಾರೆ. ‘ಅತಿಥಿಗಳ ಶೌಚಾಲಯ ಸ್ವಚ್ಚಗೊಳಿಸಲು ಪತ್ನಿ ನಿರಾಕರಿಸಿದ್ದಕ್ಕಾಗಿ ಅವರ ಹೆಂಡತಿಯನ್ನು ಮನೆಯಿಂದ ಹೊರಗೆ ತಳ್ಳಿದ ಬಗ್ಗೆ ಹಲವಾರು ಉಲ್ಲೇಖಗಳಿವೆ ಎಂದಿದ್ದಾರೆ.
ಮಹಾತ್ಮ ಗಾಂಧೀಜಿ ಅವರು ಒಬ್ಬ ಮಹಾನ್ ನಾಯಕರಾಗಿದ್ದರು. ಆದರೆ, ಅವರು ಒಳ್ಳೆಯ ಗಂಡ ಹಾಗೂ ತಂದೆಯಾಗಿರಲಿಲ್ಲ’ ಎಂಬ ಟ್ವೀಟ್ ಮಾಡುವುದರ ಮೂಲಕ ಹೊಸ ವಿವಾದವನ್ನು ಸೃಷ್ಟಿಸಿಕೊಂಡಿದ್ದಾರೆ.
ಈ ಟ್ವೀಟ್ ಗೆ ಸಂಬಂಧಿಸಿದಂತೆ ನೆಟ್ಟಿಗರು ಕಂಗನಾಗೆ ರೀಟ್ವೀಟ್ ಮಾಡುವುದರ ಮೂಲಕ ತರಾಟೆಗೆ ತೆಗೆದುಕೊಂಡಿದ್ದಾರೆ.
ಕಂಗನಾ ಟ್ವೀಟ್
Mahatma Gandhi was accused of being a bad parent by his own children, there are various mentions of him pushing his wife out of the house for refusing to manually clean guets toilets, he was a great leader may not a great husband but the world is forgiving when it comes to a man
— Kangana Ranaut (@KanganaTeam) March 12, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ

~ಡಾ. ಪುಷ್ಪಲತ ಸಿ ಭದ್ರಾವತಿ
ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು
ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.
ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.
ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.
ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.
ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್ಬೌನ್ಸ್ ಕೇಸ್ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ಗುರುಪ್ರಸಾದ್ ಮೇಲೆ ಸಾಲು ಸಾಲು ಚೆಕ್ಬೌನ್ಸ್ ಕೇಸ್ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್ ಕೂಡ ಆಗಿತ್ತು. ಗುರುಪ್ರಸಾದ್ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್ ಗೌಡ.
ಹಣ ವಾಪಸ್ ಕೊಡಲಾಗದೇ ಕಿರಿಕ್ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್ ಅವರು. ಈ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದ, ಗುರುಪ್ರಸಾದ್ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್ 24ರಂದು ಇದ್ದ ಕೋರ್ಟ್ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್. ಮೆಡಿಕಲ್ ರಿಪೋರ್ಟ್ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.
ನಿನ್ನೆ ಅಂದರೆ ನವೆಂಬರ್ 2ಕ್ಕೆ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್ ರೀಚಬಲ್ ಬಂದಿತ್ತು ಮೊಬೈಲ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ2 days ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ2 days ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ2 days ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ5 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ5 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ2 days ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ