ಸಿನಿ ಸುದ್ದಿ
ಇನ್ನೇನು ತಂದೆಯಾಗಲಿದ್ದರು ‘ಚಿರು’, ಅಷ್ಟರಲ್ಲಿ..!
ಸುದ್ದಿದಿನ,ಬೆಂಗಳೂರು: ನಟ ಚಿರಂಜೀವಿ ಸರ್ಜಾ (39) ತೀವ್ರ ಹೃದಯಾಘಾತದಿಂದ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ನಿನ್ನೆ ಸಂಜೆ ಚಿರಂಜೀವಿ ಸರ್ಜಾಗೆ ಎದೆನೋವು ಕಾಣಿಸಿಕೊಂಡಿತ್ತು. ಆದರೆ, ಇದುವರೆಗೂ ಅವರಿಗೆ ಆ ರೀತಿಯ ಯಾವುದೇ ಸಮಸ್ಯೆ ಕಂಡುಬರದ ಯಾರೂ ಅದನ್ನು ಹೆಚ್ಚು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ.
ಇಂದು ಮಧ್ಯಾಹ್ನ 3 ಗಂಟೆಗೆ ತಪಾಸಣೆಗಾಗಿ ಚಿರು ಅಪೋಲೋ ಆಸ್ಪತ್ರೆಯಲ್ಲಿ ಅಪಾಯಿಂಟ್ಮೆಂಟ್ ತೆಗೆದುಕೊಂಡಿದ್ದರು. ಆದರೆ, ಆಸ್ಪತ್ರೆಗೆ ಹೊರಡುವ ಮೊದಲೇ ಅವರು ಮನೆಯಲ್ಲಿ ಕುಸಿದು ಬಿದ್ದಿದ್ದರು. ತಕ್ಷಣ ಅವರನ್ನು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಷ್ಟರಲ್ಲಾಗಲೇ ಅವರ ಪಲ್ಸ್ ಕಡಿಮೆಯಾಗಿತ್ತು. ವೈದ್ಯರು ತಕ್ಷಣ ಚಿಕಿತ್ಸೆ ಶುರು ಮಾಡಿದ್ದರಿಂದ ಚಿರುಗೆ ಪ್ರಜ್ಞೆ ಬಂದಿತ್ತು. ಆದರೆ, ಮತ್ತೆ ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ಅವರು ಕೊನೆಯುಸಿರೆಳೆದಿದ್ದಾರೆ.
ಮಗುವಿನ ಮುಖ ನೋಡದೆ ಕೊನೆಯುಸಿರು
ನಟ ಚಿರಂಜೀವಿ ಸರ್ಜಾ ಮತ್ತು ನಟಿ ಮೇಘನಾ 2018ರಲ್ಲಿ ಮದುವೆಯಾಗಿದ್ದು, ಮೇಘನಾ ಈಗ 5 ತಿಂಗಳ ಗರ್ಭಿಣಿ. ಮಗುವಿನ ನಿರೀಕ್ಷೆಯಲ್ಲಿದ್ದ ಕುಟುಂಬಕ್ಕೆ ಇತ್ತೀಚೆಗಷ್ಟೇ ಪುಟ್ಟ ನಾಯಿಮರಿ ಯೊಂದನ್ನು ತಂದಿದ್ದರು ಚಿರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243