Connect with us

ಸಿನಿ ಸುದ್ದಿ

ದರ್ಶನ್ ಗೆ ಅಪಘಾತ: ಅಂಬಿ, ಶಿವಣ್ಣ ಹೇಳಿದ್ದೇನು ಗೊತ್ತಾ?

Published

on

ಸುದ್ದಿದಿನ ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಅಪಘಾತ ಆಗಿರುವ ಹಿನ್ನೆಲೆಯಲ್ಲಿ ಚಿತ್ರರಂಗದ ಹಿರಿಯ ನಟರಾದ ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ರೆಬೆಲ್ ಸ್ಟಾರ್ ಅಂಬರೀಶ್ ಮಾತನಾಡಿ, ಈಗಿನ ಕಾಲದ ಯುವಕರಿಗೆ ಜೋಶ್ ಹೆಚ್ಚಿರುವ ಕಾರಣ ದುಬಾರಿ ಕಾರು ಖರೀದಿಸುತ್ತಾರೆ. ಅಂತಹ ಕಾರುಗಳನ್ನು ಹಗಲಿನಲ್ಲಿ ಚಲಾಯಿಸಲು ಸಾಧ್ಯವಿರುವುದಿಲ್ಲ. ಹಾಗಾಗಿ ರಾತ್ರಿ ವೇಳೆ ಚಲಾಯಿಸುವ ಹುಮ್ಮಸ್ಸು ತೋರುತ್ತಾರೆ. ಆದರೆ ನನ್ನ ಪ್ರಕಾರ ಅಂತಹ ಕಾರುಗಳನ್ನು ಖರೀದಿಸುವುದೇ ತಪ್ಪು ಎಂದು ಹೇಳಿದ್ದಾರೆ.

ದರ್ಶನ್ ಆರೋಗ್ಯವಾಗಿದ್ದಾರೆ: ಶಿವಣ್ಣ

ನಟ ದರ್ಶನ್ ಅಪಘಾತಕ್ಕೆ ಈಡಾಗಿ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್ ಅವರು ಇಂದು ಮೈಸೂರಿಗೆ ಭೇಟಿ ನೀಡಿ ದರ್ಶನ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾತನಾಡಿದ ಅವರು, ದರ್ಶನ್ ಆರೋಗ್ಯವಾಗಿದ್ದಾರೆ. ಇನ್ನು ಎರಡು ದಿನಗಳ ಒಳಗೆ ಡಿಶ್ಚಾರ್ಜ್ ಆಗಲಿದ್ದಾರೆ ಎಂದು ಹೇಳಿದರು.

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

ಗುರುಪ್ರಸಾದ್‌ ಮೇಲೆ ಸಾಲು ಸಾಲು ಚೆಕ್‌ಬೌನ್ಸ್‌ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್‌ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್‌ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್‌ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್‌ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್‌ ಗೌಡ.

ಹಣ ವಾಪಸ್‌ ಕೊಡಲಾಗದೇ ಕಿರಿಕ್‌ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್‌ ಅವರು. ಈ ಬಗ್ಗೆ ಕೋರ್ಟ್‌ ಮೆಟ್ಟಿಲೇರಿದ್ದ, ಗುರುಪ್ರಸಾದ್‌ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್‌ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್‌. ಮೆಡಿಕಲ್‌ ರಿಪೋರ್ಟ್‌ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.

ನಿನ್ನೆ ಅಂದರೆ ನವೆಂಬರ್‌ 2ಕ್ಕೆ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್‌ ರೀಚಬಲ್‌ ಬಂದಿತ್ತು ಮೊಬೈಲ್‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

Published

on

ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.

52 ವರ್ಷದ ಕನಕಪುರ ಮೂಲದ ಗುರುಪ್ರಸಾದ್‌ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್‌ ಚಿತ್ರದ ಮೂಲಕ ಮನೆಮಾತಾಗಿದ್ದರು.

ನಿರ್ದೇಶಕ ʻಮಠʼ ಗುರುಪ್ರಸಾದ್‌ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್‌ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್‌ ಡೇ ವಿಶ್‌ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್‌ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್‌ ಅವರ ಮೊಬೈಲ್‌ ನಾಟ್‌ ರೀಚಬಲ್‌ ಆಗಿತ್ತು, ಗುರುಪ್ರಸಾದ್‌ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ11 hours ago

ವಿಕಲಚೇತನರ ಕ್ಷೇತ್ರದಲ್ಲಿ ಉತ್ತಮ ಸೇವೆ : ಜಿಲ್ಲಾ ಸಮಿತಿ ಸದಸ್ಯತ್ವಕ್ಕೆ ನೇಮಕ ಮಾಡಲು ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಸೆರೆಬ್ರಲ್ ಪಾಲ್ಸಿ, ಮಸ್ಕ್ಯುಲರ್ ಡಿಸ್ಟ್ರೋಫಿ, ಪಾರ್ಕಿನ್ಸನ್, ಮಲ್ಟಿಪಲ್ ಸ್ಕ್ಲೆರೋಸಿಸ್ (Crebral Palsy, Muscular Dystrophy, Parkinson’s and Multiple Sclerosis) ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ...

ದಿನದ ಸುದ್ದಿ11 hours ago

ದಾವಣಗೆರೆ | ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ರೈತರಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ತೋಟಗಾರಿಕೆ ಇಲಾಖೆಯಿಂದ ಹೊನ್ನಾಳಿ ಮತ್ತು ನ್ಯಾಮತಿ ಗ್ರಾಮ ಪಂಚಾಯಿತಿಯಲ್ಲಿ 2025-26ನೇ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಆಸಕ್ತ ರೈತರಿಂದ...

ದಿನದ ಸುದ್ದಿ11 hours ago

ಕಬ್ಬಳ ಗ್ರಾಮದ ಮಹಿಳೆ ನಾಪತ್ತೆ

ಸುದ್ದಿದಿನ,ದಾವಣಗೆರೆ: ಚನ್ನಗಿರಿ ತಾಲ್ಲೂಕಿನ ಬಸವಪಟ್ಟಣ ಪೊಲೀಸ್ ಠಾಣೆಯ ವ್ಯಾಪ್ತಿಯ ಕಬ್ಬಳ ಗ್ರಾಮದ ಮೇಘ.ಟಿ 29 ವರ್ಷ, ಇವರು ಕಳೆದ ಮೇ 1 ರಂದು ಬೆಳಿಗ್ಗೆ 10 ಗಂಟೆ...

ದಿನದ ಸುದ್ದಿ1 day ago

ದಾವಣಗೆರೆ | ಅಂತರಾಷ್ಟ್ರೀಯ ದತ್ತು ಮಾಸಾಚರಣೆ ಅಂಗವಾಗಿ ಕಾನೂನು ಬಾಹಿರವಾಗಿ ಮಕ್ಕಳ ಮಾರಾಟ ಕುರಿತು ಅರಿವು ಜಾಥ ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕ ಶಿಕ್ಷಣ ಇಲಾಖೆ,...

ದಿನದ ಸುದ್ದಿ1 day ago

ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಹೊಸದಾಗಿ ಮಂಜೂರಾಗಿರುವ ಅಲ್ಪಸಂಖ್ಯಾತರ 1 ಮೊರಾರ್ಜಿ ದೇಸಾಯಿ ಶಾಲೆ ಹಾಗೂ 3 ಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ ಆಂಗ್ಲ...

ದಿನದ ಸುದ್ದಿ1 day ago

ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಈ ವರ್ಷದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಸ್‌ಎಸ್‌ಪಿ ಪೋರ್ಟಲ್‌ನಲ್ಲಿ ಡಿ.ಬಿ.ಟಿ ಮುಖಾಂತರ ಪರಿಶಿಷ್ಟ...

ದಿನದ ಸುದ್ದಿ2 days ago

ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್‌ಡಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಹೆಚ್‌ಡಿ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ...

ದಿನದ ಸುದ್ದಿ2 days ago

ದಾವಣಗೆರೆ | ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಕ್ಕೆ ವಿಶೇಷ ಕಾರ್ಯಾಚರಣೆ ; ಒಂದೇ ದಿನ 1 ಕೋಟಿ 65 ಲಕ್ಷ ತೆರಿಗೆ ಸಂಗ್ರಹ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ತೆರಿಗೆ ಸಂಗ್ರಹಿಸಲು ಸೋಮವಾರ ಹಮ್ಮಿಕೊಳ್ಳಲಾಗಿದ್ದ. ವಿಶೇಷ ಕಾರ್ಯಾಚರಣೆಯಲ್ಲಿ 1.ಕೋಟಿ 65 ಲಕ್ಷ ತೆರಿಗೆ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ...

ದಿನದ ಸುದ್ದಿ3 days ago

ರಾಜ್ಯದಲ್ಲಿ ಭಾರೀ ಮಳೆ ಸಂಭವ ; ಐದು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಸುದ್ದಿದಿನಡೆಸ್ಕ್:ನವೆಂಬರ್ 14ರಿಂದ ರಾಜ್ಯದೆಲ್ಲೆಡೆ ಭಾರಿ ಮಳೆಯಾಗಲಿದ್ದು, ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಮೈಸೂರು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ,...

ದಿನದ ಸುದ್ದಿ3 days ago

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ. ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ...

Trending