Connect with us

ಸಿನಿ ಸುದ್ದಿ

ಕರುನಾಡ ಚಕ್ರವರ್ತಿ ಶಿವಣ್ಣನ ಬಗ್ಗೆ ನಿಮಗೆಷ್ಟು ಗೊತ್ತು ?

Published

on

ಸುದ್ದಿದಿನ ವಿಶೇಷ: ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೊ ಶಿವಕುಮಾರ್ ತಮ್ಮ ಅಭಿನಯದ ಮೂಲಕ ನಾಡಿನಾದ್ಯಂತ ಲಕ್ಷಾಂತರ ಅಭಿಮಾನಿಗಳ ಪ್ರೀತಿಗೆ ಪಾತ್ರರಾಗಿದ್ದಾರೆ. ಸದ್ಯ ನಟ ಶಿವಕುಮಾರ್ ಅವರು ತಮ್ಮ 56ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅವರ ಕುರಿತ ಸ್ವಾರಸ್ಯಕರ ಮಾಹಿತಿ ಇಲ್ಲಿವೆ ಓದಿ.

ಕರುನಾಡ ಚಕ್ರವರ್ತಿ ಶಿವಕುಮಾರ್ ಕುರಿತು ನಿಮಗೆಷ್ಟು ಗೊತ್ತು

  •  ಶಿವಣ್ಣ ಅವರ ಮೂಲ ಹೆಸರು ನಾಗರಾಜು ಶಿವ ಪುಟ್ಟಸ್ವಾಮಿ
  • ಶಿವರಾಜ್ ಕುಮಾರ್ ಅವರು ಹುಟ್ಟಿದ್ದು ಮದ್ರಾಸ್‌ನಲ್ಲಿ
  • ಓದಿದ್ದು ಚೆನ್ನೈನ ದಿ ನ್ಯೂ ಕಾಲೇಜ್‌ನಲ್ಲಿ
  •  ತೆರೆ ಮೇಲೆ ನಾಯಕಿ ಜತೆ ಶಿವಣ್ಣ ಕೆಮಿಸ್ಟ್ರಿ ಚೆನ್ನಾಗಿದೆ ಅನ್ನೋರೇ ಜಾಸ್ತಿ. ಒಂದು ವಿಷಯ ಗೊತ್ತಿರಲಿ, ಶಿವಣ್ಣಗೆ ಕೆಮಿಸ್ಟ್ರಿ ಅಂದ್ರೆ ಇಷ್ಟ. ಅವರು ಓದಿದ್ದು ಬಿಎಸ್ಸಿ.
  • ಖ್ಯಾತ ನಿರ್ದೇಶಕ ಬಾಲ ಚಂದರ್ ಅವರೊಟ್ಟಿಗೆ ಎಂಜಿಆರ್ ಸರಕಾರಿ ನಟನಾ ತರಬೇತಿ ಸಂಸ್ಥೆಯಲ್ಲಿ ಶಿವಣ್ಣ ನಟನೆ ಕಲಿತರು.
  • ಶಿವಣ್ಣ ಅವರು ತಮ್ಮ ಮೊದಲ ಚಿತ್ರ ಆನಂದ್‌ನಲ್ಲಿ ನಟಿಸುವ ಮುನ್ನ  ಚೆನ್ನೈನ ವೆಂಪಟ್ಟಿ ಚಿನ್ನಿ ಸತ್ಯಂ ಎಂಬಲ್ಲಿ ಕುಚುಪುಡಿ ಕಲಿತಿದ್ದರು.
  • ಶಿವರಾಜ್ ಕುಮಾರ್ ಅವರಿಗೆ ಕಮಲ್ ಹಾಸನ್ ಅಂದ್ರೆ ಅಚ್ಚುಮೆಚ್ಚು. ಕಮಲ್ ಅವರ ಯಾವುದೇ ಸಿನಿಮಾ ಮೊದಲ ಶೋ ನೋಡಿದ್ರೆನೇ ಶಿವಣ್ಣ ಅವರಿಗೆ ಸಮಾಧಾನ
  • ಈ ವರ್ಷದ ಫೋರ್ಬ್ಸ್ ಪಟ್ಟಿಯ ಪ್ರಕಾರ ಶಿವರಾಜ್ ಕುಮಾರ್ ಅವರ ಆಸ್ತಿ 641 ಕೋಟಿ ರೂ.
  • ಶಿವಣ್ಣ ಅವರ ಮೂರು ಚಿತ್ರಗಳು ಸತತವಾಗಿ ಹಿಟ್ ಆದ ನಂತರ ಮಾಧ್ಯಮಗಳು ಹಾಗೂ ಅಭಿಮಾನಿಗಳು ಪ್ರೀತಿಯಿಂದ ಹ್ಯಾಟ್ರಿಕ್ ಹೀರೊ ಎಂಬ ಬಿರುದು ನೀಡಿದರು.
  • ಶಿವಣ್ಣ ಅವರಿಗೆ ಡಾಕ್ಟರೇಟ್ ನೀಡಿದ್ದು ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವ ವಿದ್ಯಾಲಯ
  • ಸುಗ್ರೀವ ಸಿನಿಮಾದ ಶೂಟಿಂಗ್ ಮುಗಿದದ್ದು ಕೇವಲ 18 ಗಂಟೆಗಳಲ್ಲಿ.
  • ಶಿವಣ್ಣ ನಟನೆಯ ಚೆಲುವೆಯೇ ನಿನ್ನ ನೋಡಲು ಸಿನಿಮಾವನ್ನು ಜಗತ್ತಿನ ಎಂಟು ಅದ್ಭುತಗಳ ಎದುರು ಶೂಟ್ ಮಾಡಲಾಗಿದೆ.
  •  ಶಿವಣ್ಣ ತಮ್ಮ ತಲೆಕೂದಲಿಗೆ ಕೈ ಹಾಕುವ ಅವಕಾಶ ಯಾವ ಮೇಕಪ್ ಕಲಾವಿದರಿಗೂ ಕೊಟ್ಟಿಲ್ಲ. ಆದರೆ, ಓಂ ಸಿನಿಮಾ ಚಿತ್ರೀಕರಣದ ವೇಳೆ ಉಪೇಂದ್ರ ಅವರೇ ಶಿವಣ್ಣಗೆ ತಲೆ ಬಾಚಿದ್ದರಂತೆ.

https://m.facebook.com/story.php?story_fbid=371453633381288&id=299499370576715

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಚಿತ್ರ ವಿಮರ್ಶೆ | ಸೂಲಗಿತ್ತಿ ತಾಯವ್ವ

Published

on

~ಡಾ. ಪುಷ್ಪಲತ ಸಿ ಭದ್ರಾವತಿ

ಚಿತ್ರ – ತಾಯವ್ವ ,ನಿರ್ಮಾಣ – ಅಮರ ಫಿಲಂಸ್, ನಿರ್ದೇಶನ- ಸಾತ್ವಿಕ ಪವನ ಕುಮಾರ್,ತಾರಾಗಣ – ಗೀತಪ್ರಿಯ. ಬೇಬಿ ಯಶಿಕಾ, ಮತ್ತಿತರರು

ನಾವು ಎಷ್ಟೇ ಆಧುನಿಕತೆ, ಸಮಾನತೆ, ಸ್ವಾತಂತ್ರ್ಯ ಎಂದು ಹೆಣ್ಣು ಮಾತನಾಡಿದರೂ, ಈ ಸಮಾಜದ ಸಂಕೋಲೆಯಲ್ಲಿ ಇವತ್ತಿಗೂ ನಾವು ಕಂಡು ಕಾಣದಂತೆ ಬಂಧಿಯಾಗಿದ್ದೇವೆ. ಈ ಪುರುಷ ನಿರ್ಮಿತ ಸಮಾಜದಲ್ಲಿ ಹೆಣ್ಣನ್ನು ತನ್ನ ಸಂಕೂಲೆಯಲ್ಲಿಯೇ ಬಂಧಿಸಿಟ್ಟಿರುವನು. ಅದೊಂದು ಸ್ವೇಚ್ಛಾಚಾರದ, ಸಮಾನತೆಯ, ಹೆಸರಿನ ಮುಖವಾಡ ತೊಟ್ಟಿದೆ ಅಷ್ಟೇ. ಈ ಮುಖವಾಡಗಳ ನಡುವಿನ ಪುರುಷ ನಿಯಂತ್ರಿತ ಬದುಕಿನಲ್ಲಿ ಹೋರಾಟವೆಂಬುದು ಹೆಣ್ಣಿಗೆ ನಿತ್ಯವಾಗಿದೆ.

ಸ್ತ್ರೀ ಅವಳು ಪ್ರಕೃತಿ, ಪ್ರಕೃತಿ ಇಲ್ಲವಾದರೆ ಇನ್ನೂ ನಾವೆಲ್ಲ ತೃಣಮೂಲ. ಇಂತಹ ಸತ್ಯ ಅರಿವಿದ್ದರೂ ನಾವು ಪದೇ ಪದೇ ಈ ಪ್ರಕೃತಿಯನ್ನು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಹಾಗೆಯೇ ಪ್ರಕೃತಿಯ ಇನ್ನೊಂದು ರೂಪವಾದ ‘ಹೆಣ್ಣನ್ನು’ ನಾವು ವಿನಾಶದಂಚಿಗೆ ತೆಗೆದುಕೊಂಡು ಹೋಗುತ್ತಿದ್ದೇವೆ. ಇದರ ಪರಿಣಾಮವಾಗಿಯೇ ಹೆಣ್ಣಿನ ಸರಾಸರಿ ಗಂಡಿಗಿಂತ ಗಣನೀಯವಾಗಿ ಕಡಿಮೆಯಾಗುತ್ತಿರುವುದು. ” ಹೆಣ್ಣು ಭ್ರೂಣಹತ್ಯೆ” ಎಂಬುದು ಸಮಾಜದ ಅದು ಹಾಗೂ ವಿಶ್ವಕ್ಕೂ ಮಾರಕ. ಇಂತಹ ಒಂದು ವಿಷಯ ವಸ್ತುವನ್ನು ಕೇಂದ್ರಿಕರಿಸಿಕೊಂಡು ಸಮಾಜಕ್ಕೆ ಜಾಗೃತಿ ಮೂಡಿಸುವ ಸಲುವಾಗಿ, ಎಚ್ಚರಿಕೆಯ ಕರೆಘಂಟೆಯೆಂಬಂತೆ “ತಾಯವ್ವ” ಸಿನಿಮಾ ಕರ್ನಾಟಕದಾದ್ಯಂತ ಬಿಡುಗಡೆಗೊಂಡಿದೆ.

ಕಳೆದ ವರ್ಷಗಳಲ್ಲಿಯೇ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯ ಹಿಂದೆ ಸುಮಾರು 500ಕ್ಕೂ ಹೆಚ್ಚಿನ ಭ್ರೂಣಗಳು ಸಿಕ್ಕವು. ವಿಚಾರ ಪ್ರಚಾರವೂ ಆಯಿತು. ಆದರೆ ಕೇವಲ ಸುದ್ದಿಯಾಗಿ ಕಣ್ಮರೆಯಾಗುತ್ತವೆ. ಇಂದಿನ ಸಮಾಜಕ್ಕೆ ಇಂತಹ ಸೂಕ್ಷ್ಮ ವಿಷಯಗಳನ್ನು ಮುನ್ನೆಲೆಗೆ ತಂದು ಯುವಕರಿಗೆ ಹಾಗೂ ಸಮಾಜಕ್ಕೆ ಜಾಗೃತಿಮೂಡಿಸಬೇಕಾಗಿದೆ. ಇಂತಹ ಕಾರ್ಯದಲ್ಲಿ
” ತಾಯವ್ವ” ಸಿನಿಮಾ ಗೆದ್ದಿದೆ ಎಂದರೆ ಅತಿಶಯೋಕ್ತಿಯೆನಲ್ಲಾ. ಈ ಗೆಲುವು ಚಿತ್ರದ ನಾಯಕಿ ” ಗೀತ ಪ್ರಿಯಾ” ಅವರ ಶ್ರಮ, ಹಾಗೂ ಅವರ ಪೂರ್ಣ ಪ್ರಮಾಣದ ಪಾತ್ರದ ತಲ್ಲೀನತೆಯು ಸಿನಿಮಾದುದ್ದಕ್ಕೂ ಕಾಣುತ್ತದೆ.

ಮೂಲತಃ ” ಗೀತ ಪ್ರಿಯಾ” ಅವರು ಕಳೆದ 35 ವರ್ಷಗಳ ಅಧಿಕವಾಗಿ ತಮ್ಮನ್ನು ತಾವು ಶೈಕ್ಷಣಿಕ ರಂಗದಲ್ಲಿ ತೊಡಗಿಸಿಕೊಂಡು ವಿಧ್ಯಾಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿದ್ದಾರೆ. ಇವರ ತಾಯಿ ನೆರಳಲ್ಲಿ ಹುಟ್ಟಿದ ಮಗುವೇ ” ಕೃಪಾನಿಧಿ ಗ್ರೂಪ್ ಸಂಸ್ಥೆ”. ಸದಾ ಮಿಡಿವ ತಾಯಿ ಹೃದಯ ಇವರದ್ದಾಗಿದ್ದರಿಂದಲೇ ತಮ್ಮ ಪ್ರಥಮ ಚಿತ್ರದಲ್ಲಿಯೇ ಗಂಭೀರ ವಿಷಯ ವಸ್ತುವಿನ ಆಯ್ಕೆ, ಗಂಭೀರವಾದ ಅಭಿನಯ, ಸಮಾಜಮುಖಿ ಕಾಳಜಿಯಿರುವುದರಿಂದಲೇ ಇದರೆಲ್ಲರ ಫಲಿತಗಳೆಂಬಂತೆೇ “ತಾಯವ್ವ” ರೂಪುಗೊಂಡಿದೆ.

ಸಿನಿಮಾ ಕಲಾಪ್ರಿಯರಿಗೆ ಒಂದೊಳ್ಳೆ ಸುಗ್ಗಿ, ಕುಟುಂಬದ ಸಮೇತ ಸಿನಿಮಾ ವೀಕ್ಷಿಸಬಹುದು. ಗೀತ ಪ್ರಿಯಾ ಅವರು ಈ ಸಿನಿಮಾದಲ್ಲಿ ಅಭಿನಯಿಸಿ, ಹಾಗೂ ಸಂಗೀತಕ್ಕೆ ತಮ್ಮ ಧ್ವನಿಯನ್ನು ನೀಡಿರುವುದು ಇನ್ನೂ ವಿಶೇಷ. ಬೇಬಿ ಯಶೀಕಾ ಮುಂದಿನ ಭವಿಷ್ಯ ಇನ್ನಷ್ಟು ಸಿನಿಮಾರಂಗದಲ್ಲಿ ಉಜ್ವಲವಾಗಿರಲಿ. ನಿರ್ದೇಶಕರ ಪ್ರಯತ್ನ. ಚಿತ್ರಕಥೆಯ ಹಿಡಿತ ಹಾಗೂ ಎಲ್ಲೂ ಸಡಿಲವಿರದೇ ಸಾಗಿರುವುದು ನಮ್ಮ ಕನ್ನಡ ಚಿತ್ರರಂಗಕ್ಕೆ ಪ್ರಸ್ತುತ ಕೊಡುಗೆಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

Published

on

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.

ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.

ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್​ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.

ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ16 hours ago

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ...

ದಿನದ ಸುದ್ದಿ16 hours ago

ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು. ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್...

ದಿನದ ಸುದ್ದಿ2 days ago

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ...

ಅಂಕಣ3 days ago

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು...

ದಿನದ ಸುದ್ದಿ3 days ago

ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ...

ದಿನದ ಸುದ್ದಿ3 days ago

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ...

ದಿನದ ಸುದ್ದಿ4 days ago

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ,...

ದಿನದ ಸುದ್ದಿ5 days ago

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು...

ದಿನದ ಸುದ್ದಿ7 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ....

ದಿನದ ಸುದ್ದಿ7 days ago

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು...

Trending