Connect with us

ಸಿನಿ ಸುದ್ದಿ

ಸಂದರ್ಶನ: ನೀವು ಅರಿಯದ ತುಳಸಿ ಪ್ರಸಾದ್ !

ತುಳಸಿ ಪ್ರಸಾದ್ ಅವರನ್ನು ಸುದ್ದಿದಿನ ಸಂಪರ್ಕಿಸಿದ್ದು, ಅವರು ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಟ್ಟಿದ್ದಾರೆ.

Published

on

Tulasi_prasad funny_dubsmash
ಸುದ್ದಿದಿನ ಸಂದರ್ಶನ ( June 26) : ತನ್ನ ಹಾಡಿನ ಧಾಟಿಯಿಂದಾಗಿ ನೆಗಟಿವ್ ಕಮೆಂಟ್‍ಗಳಿಂದಲೇ ಖ್ಯಾತಿ ಪಡೆದಿರುವ ಹಾಸನ ಮೂಲದ ತುಳಸಿ ಪ್ರಸಾದ್ ಅವರನ್ನು ಸುದ್ದಿದಿನ ಸಂಪರ್ಕಿಸಿದ್ದು, ಅವರು ತಮ್ಮ ಮನದಾಳದ ಮಾತುಗಳನ್ನು ಬಿಚ್ಚಿಟ್ಟಿದ್ದಾರೆ.
ನನ್ನ ಹಾಡುಗಳ ಬಗ್ಗೆ ಕೆಟ್ಟದಾಗಿ ಕಮೆಂಟ್ ಮಾಡುವವರ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಕೇಳಲು ಚೆನ್ನಾಗಿಲ್ಲವೆಂದರೆ ಬಯ್ಯುವುದು ಅವರ ಹಕ್ಕು. ಹಾಗೆಯೇ ಹಾಡುವುದು ನನ್ನ ಹಕ್ಕು ಅದನ್ನು ಕಸಿಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನನಗೆ ಖಾಸಗಿಯಾಗಿ ಯಾವೊಬ್ಬ ನಟ, ಗಾಯಕರಿಗೂ ಅವಮಾನ ಮಾಡುವ ಉದ್ದೇಶವಿಲ್ಲ. ಹಾಡುವುದು ನನ್ನ ಅಭಿರುಚಿ. ಹಾಡಿ ಅದನ್ನು ಪ್ರಕಟಿಸುತ್ತಿದ್ದೇನೆ. ನಾನು ಹುಟ್ಟುತ್ತಲೇ ಇಂಥ ವಾಯ್ಸ್ ಬೇಕೆಂದು ಕೇಳಿಕೊಂಡು ಬಂದಿರಲಿಲ್ಲ. ನನ್ನ ಧ್ವನಿ ಚೆನ್ನಾಗಿಲ್ಲ ಎಂದು ಕೇಳುಗರಿಗೆ ಅನಿಸಬಹುದು. ಆದರೆ, ನನಗೆ ಚೆನ್ನಾಗಿದೆ ಅನ್ನಿಸುತ್ತಿದೆ ಅದಕ್ಕಾಗಿ ನಾನು ದೃಢ ಸಂಕಲ್ಪ ಮಾಡಿ ಇನ್ನಷ್ಟು ಹಾಡುಗಳನ್ನು ಪ್ರಕಟಿಸುತ್ತಲೇ ಇದ್ದೇನೆ ಎನ್ನುತ್ತಾರೆ ತುಳಸಿ.

ಚಂದನ್ ಶೆಟ್ಟಿ ಪ್ರೇರಣೆ

ಗಾಯನ ಎಂದರೆ ನನಗೆ ಮೊದಲು ನೆನಪಾಗುವುದು ಚಂದನ್ ಶೆಟ್ಟಿ. ಅವರೇ ನನಗೆ ಪ್ರೇರಣೆ. ಮೊದಲು ಅವರು ಮಾಡುತ್ತಿದ್ದ ಆಲ್ಬಂಗಳನ್ನು ಕೇಳಿ ಏನಿದು ಕಿರಿಕಿರಿ ಅನಿಸುತ್ತಿತ್ತು. ಬರುಬರುತ್ತಾ ಅವರು ಎಲ್ಲರಿಗೂ ಇಷ್ಟವಾದರು. ನಾನು ಮೊದಲು ಹಾಡಿದಾಗ ಎಲ್ಲ ಬೈದರು. ಈಗ ಬೆಂಬಲಕ್ಕೆ ನಿಂತಿದ್ದಾರೆ ಬಯ್ಯುವವರ ಬಗ್ಗೆ ನನಗೆ ಬೇಸರವಿಲ್ಲ ಎಂದು ಅವರು ಪುನರುಚ್ಚರಿಸಿದರು.

ಡಿಪ್ರೆಶನ್ ನಲ್ಲಿದ್ದೆ

ಜೀವನದಲ್ಲಿ ಏನೂ ಸಾಧಿಸಲಿಲ್ಲ ಎಂಬ ಡಿಪ್ರೆಶನ್‍ನಲ್ಲಿದ್ದ ನನಗೆ ಕಲೆ ಕ್ಷೇತ್ರದಲ್ಲೇ ಮುಂದುವರಿಯಬೇಕೆಂಬ ಹಂಬಲ ಇತ್ತು. ಇದಕ್ಕಾಗಿಯೇ ನಾನು ಕಿರು ಚಿತ್ರಗಳನ್ನು ನಿರ್ಮಿಸಲು ಪ್ರಯತ್ನಿಸಿದೆ. ಮೂರು ಕಿರುಚಿತ್ರಗಳನ್ನು ನಿರ್ಮಿಸಿದೆ. ಕ್ಯಾಮೆರಾಮೆನ್ ಮಾತ್ರ ಇದ್ದರು. ಮಿಕ್ಕ ಎಲ್ಲವನ್ನು ನಾನೇ ಮಾಡಿಕೊಳ್ಳುತ್ತಿದ್ದೆ. ರಾತ್ರಿಯೆಲ್ಲ ನಿದ್ದೆಗೆಟ್ಟು ಎಡಿಟ್ ಮಾಡುತ್ತಿದ್ದೆವು. ಅಷ್ಟೆಲ್ಲ ಶ್ರಮ ಹಾಕಿದರೂ ನನ್ನ ಬಗ್ಗೆ ಯಾರೊಬ್ಬರೂ ಒಳ್ಳೆಯ ಮಾತನಾಡುತ್ತಿರಲಿಲ್ಲ. ಸ್ನೇಹಿತರು ಬೆಂಬಲಕ್ಕೆ ನಿಂತಿದ್ದರು.

ಬಿಟ್ಟುಬಿಡು ನಿಂಗ್ಯಾಕೊ ಇದಲ್ಲ ಎಂದರು

ತುಳಸಿ ಪ್ರಸಾದ್ ಅವರ ಹಾಡುಗಳ ಬಗ್ಗೆ ವ್ಯಕ್ತವಾಗುತ್ತಿದ್ದ ಕಮೆಂಟ್‍ಗಳನ್ನು ಗಮನಿಸಿದ ಮನೆಯವರು ಹಾಗೂ ನೆಂಟರಿಷ್ಟರು ನಿಂಗ್ಯಾಕೊ ಇದೆಲ್ಲ ಬಿಟ್ಟುಬಿಡಪ್ಪ ಎಂದಿದ್ದರಂತೆ. ಇದಕ್ಕೆಲ್ಲ ಸೊಪ್ಪು ಹಾಕದ ಅವರು ತಮ್ಮ ಛಲವನ್ನು ಎಂದಿಗೂ ಬಿಟ್ಟುಕೊಟ್ಟಿಲ್ಲ.

ತುಳಸಿ ಪ್ರಸಾದ್ ಕುರಿತ ಕೆಲವು ಕುತೂಹಲಕಾರಿ ಅಂಶಗಳು

ಫೇಸ್‍ಬುಕ್, ಯೂಟ್ಯೂಬ್‍ನಲ್ಲಿ ಹವಾ ಎಬ್ಬಿಸಿರುವ ತುಳಸಿ ಪರಸಾದ್ ಬಗ್ಗೆ ಈಗ ಎಲ್ಲರಿಗೂ ಚಿರಪರಿಚಿತ. ಫೇಸ್‍ಬುಕ್‍ನಲ್ಲಿ ನೆಗಟೀವ್ ಪಾತ್ರವಾಗಿ ಚಿತ್ರಿಸಲಾಗಿರುವ ತುಳಸಿ ಪ್ರಸಾದ್ ಕುರಿತ ಕೆಲವು ಕುತೂಹಲಕಾರಿ ಅಂಶಗಳು ಇಲ್ಲಿವೆ.
  • ತುಳಸಿಪ್ರಸಾದ್ ಮೂಲತಃ ಹಾಸನದವರು. ಆದಿ ಚುಂಚನಗಿರಿಯಲ್ಲಿ ವಿದ್ಯಾಭ್ಯಾಸ. ಮನೆಯಲ್ಲಿ, ಸ್ನೇಹಿತರು, ನೆಂಟರಿಷ್ಟರ ಪಾಲಿಗೆ ಒಬ್ಬ ಅಮಾಯಕ ಹುಡುಗ.
  • ಓದು ಮುಗಿದ ನಂತರ ಕಲೆ ಅವರನ್ನು ಕೈ ಬೀಸಿ ಕರೆಯಿತು. ಆಗ ಅವರು ಆಯ್ದುಕೊಂಡದ್ದು ಕಿರು ಚಿತ್ರ ನಿರ್ಮಾಣ ಕ್ಷೇತ್ರ.
  • ತುಳಸಿ ಪರಸಾದ್ ರಚಿಸಿ, ನಿರ್ಮಾಣ ಮಾಡಿ, ಅಭಿನಯಿಸಿರುವ ಎರಡು ಕಿರುಚಿತ್ರಗಳು ಈಗಲೂ ಫೇಸ್ಬುಕ್ ನಲ್ಲಿ ಲಭ್ಯವಿದೆ.
  • ನಿಗೂಢ ಹೂಮಳೆ ಕಿರಚಿತ್ರ ತುಳಸಿ ಅವರಿಗೆ ಹೆಸರು ತಂದುಕೊಟ್ಟಿತು. ಹೂವಿನ ಲೋಕ ಹಾಗೂ ದೇಶಪ್ರೇಮಿ ಎಂಬ ಕಿರು ಚಿತ್ರಗಳನ್ನೂ ಅವರು ನಿರ್ಮಿಸಿದ್ದಾರೆ.
  • ತುಳಸಿ ಅವರು ನಿರ್ಮಿಸಿರುವ ನಿಗೂಢ ಹೂಮಳೆ ಕಿರು ಚಿತ್ರ ಸಾಕಷ್ಟು ಹೆಸರು ತಂದುಕೊಟ್ಟಿತು. ಎರಡು ವರ್ಷಗಳ ಹಿಂದೆಯೇ ಅವರ ಬೆಂಬಲಿಗರ ಸಂಖ್ಯೆ ಹೆಚ್ಚಾಯಿತು.
  • ಮಿಕ್ಕ ಚಿತ್ರಗಳಲ್ಲಿ ಧ್ವನಿ ಸಂಗ್ರಹ ಸಮಸ್ಯೆಯಾದ ಕಾರಣ ಅವೆಲ್ಲವುಗಳಿಗೆ ಸರಿಯಾದ ಪ್ರಚಾರ ಸಿಗಲಿಲ್ಲ.
  • ಡೈನೋಸರ್ ಕುರಿತ ಫ್ಯಾಂಟಸಿ ಸಿನಿಮಾವೊಂದರ ನಿರ್ಮಾಣಕ್ಕೂ ಅವರು ಕೈ ಹಾಕಿದ್ದರು.
  • ಡೈನೊಸರ್ ಸಿನಿಮಾದ ಟೀಸರ್ ಸಹ ಬಿಡುಗಡೆ ಮಾಡಿದ್ದರು.
  • ತುಳಸಿ ಪ್ರಸಾದ್ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಪಕ್ಕಾ ಅಭಿಮಾನಿ.
  • ಫೇಸ್ ಬುಕ್‍ನಲ್ಲಿ ತುಳಸಿ ಕುರಿತು ಋಣಾತ್ಮಕ ಪ್ರತಿಕ್ರಿಯೆಗಳು ಕೇಳಿಬರುತ್ತಿದ್ದರೂ ರವಿಚಂದ್ರನ್ ಅಭಿಮಾನಿಗಳ ಸಂಘ ಅವರ ಬೆಂಬಲಕ್ಕೆ ನಿಂತಿದೆಯಂತೆ.
  • ಗಾಯನಕ್ಕಿಂತ ನಟನೆ, ನಿರ್ದೇಶನದ ಮೇಲೆ ತುಳಸಿ ಅವರಿಗೆ ಹೆಚ್ಚು ಪ್ರೇಮ ಇದೆಯಂತೆ.
  • ಫೇಸ್ ಬುಕ್‍ನಲ್ಲಿ ಕೇಳಿಬರುತ್ತಿದ್ದ ನೆಗಟಿವ್ ಕಮೆಂಟ್‍ಗಳಿಂದ ನೊಂದಿದ್ದ ತುಳಸಿ ಅವರು ಬಿಟಿವಿಯಲ್ಲಿ ಸಂದರ್ಶನಕ್ಕೆ ಹೋಗುವ ಎರಡು ವಾರಗಳ ಮುನ್ನ ತಮ್ಮ ಎಫ್‍ಬಿ ಪುಟವನ್ನು ಡಿಲಿಟ್ ಮಾಡಲು ಚಿಂತಿಸಿದ್ದರಂತೆ.
  • ನೆಗಟೀವ್ ಕಮೆಂಟ್ ಹಾಕುವವರಿಂದ ದೂರ ಇರುವ ಸಲುವಾಗಿ ತುಳಸಿ ಪ್ರಸಾದ್ ಎಂದಿದ್ದ ಎಫ್ ಬಿ ಪುಟವನ್ನು ರವಿ ಪ್ರಸಾದ್ ಎಂದು ಬದಲಿಸಿಕೊಂಡಿದ್ದಾರೆ.

ಅದೃಷ್ಟದ ಬಾಗಿಲು ತೆರೆದಾಗ !

ತುಳಸಿ ಪ್ರಸಾದ್ ಅವರಿಗೆ ಬಿಗ್‍ಬಾಸ್ ರಿಯಾಲಿಟಿ ಶೋನಲ್ಲಿ ಭಾಗವಹಿಸುವ ಅವಕಾಶ ಹುಡುಕಿಕೊಂಡು ಬಂದಿದೆ. ಶತಾಯ ಗತಾಯ ಸಿನಿಮಾದ ನಿರ್ದೇಶಕರು ತಮ್ಮ ಮುಂದಿನ ಚಿತ್ರದಲ್ಲಿ ಒಂದು ಪಾತ್ರ ನೀಡುವುದಾಗಿ ಭರವಸೆ ನೀಡಿದ್ದಾರೆ.  ಇನ್ನಷ್ಟು ಕಿರು ಚಿತ್ರಗಳ ನಿರ್ಮಾಣಕ್ಕೆ ತುಳಸಿ ಪ್ರಸಾದ್ ಕೈ ಹಾಕಲು ನಿರ್ಧರಿಸಿದ್ದಾರೆ.

 

ದಿನದ ಸುದ್ದಿ

777 ಚಾರ್ಲಿ ಚಿತ್ರಕ್ಕೆ ‘ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ’

Published

on

ಸುದ್ದಿದಿನ ಡೆಸ್ಕ್ : 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2021 ಪ್ರಕಟವಾಗಿದ್ದು, ಕನ್ನಡಕ್ಕೆ ನಾಲ್ಕು ಪ್ರಶಸ್ತಿಗಳು ಲಭಿಸಿವೆ.

ನಟ ರಕ್ಷಿತ್ ಶೆಟ್ಟಿ ಅಭಿನಯಿಸಿರುವ ಕಿರಣ್ ರಾಜ್ ನಿರ್ದೇಶನದ 777 ಚಾರ್ಲಿ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಜೇಕಬ್ ವರ್ಗೀಸ್ ನಿರ್ದೇಶನದ ಸಾಕ್ಷ್ಯಚಿತ್ರ ಆಯುಷ್ಮಾನ್‌ಗೆ ಅತ್ಯುತ್ತಮ ಅನ್ವೇಷಣಾ ಚಿತ್ರ ಪ್ರಶಸ್ತಿ ಲಭಿಸಿದೆ.

ಅನಿರುಧ್ ಜತ್ಕರ್ ನಿರ್ದೇಶನದ ಬಾಳ ಬಂಗಾರ ಸಾಕ್ಷ್ಯಚಿತ್ರ ತೀರ್ಪುಗಾರರ ವಿಶೇಷ ಉಲ್ಲೇಖ ಪಡೆದಿದೆ. ಸಿನಿಮಾ ವಿಮರ್ಶೆ ವಿಭಾಗದಲ್ಲಿ ಹಿರಿಯ ಪತ್ರಕರ್ತ ಬಿ.ಎನ್.ಸುಬ್ರಹ್ಮಣ್ಯ ತೀರ್ಪುಗಾರರ ವಿಶೇಷ ಉಲ್ಲೇಖಕ್ಕೆ ಭಾಜನರಾಗಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಶ್ರೀಲಂಕಾದಲ್ಲಿ ಕನ್ನಡ ಚಲನಚಿತ್ರೋತ್ಸವ

Published

on

ಸುದ್ದಿದಿನ, ಕೊಲೊಂಬೋ : ಶ್ರೀಲಂಕಾದ ರಾಜಧಾನಿ ಕೊಲೊಂಬೋದಲ್ಲಿನ ತರಂಗಿಣಿ ಸಿನಿಮಾ ಹಾಲ್‌ನಲ್ಲಿ ಏರ್ಪಡಿಸಿದ್ದ ಕನ್ನಡ ಚಲನಚಿತ್ರೋತ್ಸವಕ್ಕೆ ಮಂಗಳವಾರ ಚಾಲನೆ ದೊರೆಯಿತು.

ಶ್ರೀಲಂಕಾದಲ್ಲಿನ ಭಾರತೀಯ ರಾಯಭಾರಿ ಗೋಪಾಲ್ ಬಾಗ್ಳೆ, ಶ್ರೀಲಂಕಾದ ಬಹು ಮಾಧ್ಯಮ ಖಾತೆ ಸಚಿವ ಡಾ. ಬಂದೂಲ ಗುಣವರ್ಧನೆ ಹಾಗೂ ಸಂಸ್ಕೃತಿ ಖಾತೆ ಸಚೆವ ವಿಧುರವಿಕ್ರಮ ನಾಯಕ್ ಮುಂತಾದವರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ, ಕನ್ನಡ ಚಲನಚಿತ್ರರಂಗದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತರ ಮಾತನಾಡಿದ ಸಚಿವ ಡಾ.ಗುಣವರ್ಧನೆ, ಉಭಯ ದೇಶಗಳ ನಡುವೆ ಸಾಂಸ್ಕೃತಿಕ ವಿನಿಮಯ, ಚಲನಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

ಮನರಂಜನಾ ಮಾಧ್ಯಮವು ಅತ್ಯಂತ ಜನಪ್ರಿಯ ಮಾಧ್ಯಮವಾಗಿದ್ದು, ಪ್ರಾದೇಶಿಕ ಚಲಚಿನಚಿತ್ರಗಳು, ಅದರಲ್ಲಿಯೂ ಭಾರತದ ಚಲನಚಿತ್ರ ಸಂಸ್ಕೃತಿಯ ಜೊತೆಗೆ ದೇಶದ ಪರಂಪರೆ ಹಾಗೂ ಇತಿಹಾಸವನ್ನು ಪ್ರತಿಬಿಂಬಿಸುತ್ತಿದೆ. ಸಾಮಾಜಿಕ ವಲಯದಲ್ಲಿ ಪ್ರಾದೇಶಿಕ ಬಾಷೆಯಲ್ಲಿ ಬರುವ ಚಿತ್ರಗಳು, ಚಿತ್ರ ಪ್ರೇಮಿಗಳಿಗೆ ಅದರಲ್ಲಿಯೂ ವಿದ್ಯಾರ್ಥಿಗಳಿಗೆ, ಪಠ್ಯಕ್ರಮದ ಭಾಗವಾಗಿ ಹಲವು ಪ್ರದೇಶಗಳಲ್ಲಿ ಅಧ್ಯಯನಕ್ಕೂ ಅನುಕೂಲವಾಗಿದೆ. ಇತ್ತೀಚೆಗೆ ಶ್ರಿಲಂಕಾದ ವಿದ್ಯಾರ್ಥಿಗಳು ಇದರ ಅನುಭವವನ್ನು ಪಡೆದುಕೊಳ್ಳಲು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ಮಾರ್ಗದರ್ಶನ ಅನುಕೂಲವಾಗಿದೆ ಎಂದು ಅವರು ಹೇಳಿದರು.

ಶ್ರೀಲಂಕಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 250 ರಿಂದ 300 ಚಲನಚಿತ್ರಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಿದೆ. ಕಳೆದ ವರ್ಷ ನಾಲ್ಕನೇ ಬಹುದೊಡ್ಡ ಕಾರ್ಯಗಾರ ಆಯೋಜಿಸಲಾಗಿತ್ತು ಎಂದು ನಾಗತಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಶ್ರೀಲಂಕಾ ವಿದ್ಯಾರ್ಥಿಗಳಿಗೆ, ಚಲನಚಿತ್ರರಂಗದ, ತರಬೇತಿ, ವೀಕ್ಷಣೆ ಹಾಗೂ ನಿರ್ಮಾಣದ ಬಗ್ಗೆ ಹಲವು ರೀತಿ ಪ್ರಾತ್ಯಕ್ಷಿಕೆ ಮೂಲಕ ಕಾರ್ಯಕ್ರಮಗಳನ್ನು ಪ್ರತಿ ವರ್ಷ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಈ ವರ್ಷ ಅಮೆರಿಕ-ಅಮೆರಿಕ, ಇಷ್ಠಕಾಮ್ಯ, ಮಾತಾಡ್ ಮಾತಾಡ್ ಮಲ್ಲಿಗೆ ಹಾಗೂ ಕೊಟ್ರೇಶಿ ಕನಸು ಚಿತ್ರಗಳನ್ನು ಪ್ರದರ್ಶಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಏನಿದು ವಿಚಿತ್ರ | ನಟಿಯ ಡೈವೋರ್ಸ್ ಫೋಟೋಶೂಟ್..!

Published

on

ಸುದ್ದಿದಿನ ಡೆಸ್ಕ್ : ನಟಿ ಶಾಲಿನಿ ತಮಿಳು ಧಾರಾವಾಹಿಗಳಲ್ಲಿ ನಟಿಸಿ ಜನಮನಗೆದ್ದಿದ್ದಾರೆ. ಮೊದಲ ಮದುವೆಯ ವಿಚ್ಛೇದನದ ನಂತರ ಆಕೆ ಮೊಹಮ್ಮದ್‌ ಎಂಬುವವರನ್ನು ಮದುವೆಯಾಗಿದ್ದರು. ಆ ದಾಂಪತ್ಯದಲ್ಲಿ ಹಲವು ಸಮಸ್ಯೆಗಳಿಂದ ವಿಚ್ಛೇದನ ಪಡೆದರು. ಅದನ್ನು ಸಂಭ್ರಮಿಸಲು ಫೋಟೋಶೂಟ್‌ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಹಾಕಿದ್ದಾರೆ.

ಮದುವೆಗೂ ಮುನ್ನ ತೆಗೆದಿರುವ ಫೋಟೋಶೂಟ್​​ಗಳು ಬಹಳಷ್ಟು ಬಂದಿವೆ. ಆದರೆ ವಿಚಿತ್ರ ರೀತಿಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಕ್ಕಾಗಿಯೇ ನಟಿ ಶಾಲಿನಿಫೋಟೋಗಳು ವೈರಲ್ ಆಗಿವೆ. ಡೈವೋರ್ಸ್ ಆಗಿದ್ದನ್ನೂ ಸಂಭ್ರಮಿಸುವ ಕಾರಣಕ್ಕಾಗಿ ಮಾಡಿದ ಈ ಫೋಟೋಶೂಟ್​ ಈಗ ಹಲವರ ಗಮನ ಸೆಳೆದಿದೆ.

ಜೀ ತಮಿಳು ಶೋ ಸೂಪರ್ ಮಾಮ್ ರಿಯಾಲಿಟಿ ಶೋನಲ್ಲಿ ಮಗಳೊಂದಿಗೆ ಶಾಲಿನಿ ಭಾಗವಹಿಸಿದ್ದರು. ಖುಷ್ಬು ಅಭಿನಯದ ಮೀರಾ ತಮಿಳು ಧಾರಾವಾಹಿಯಲ್ಲಿ ಕೂಡ ಆಕೆ ನಟಿಸಿದ್ದಾರೆ. ಈ ಧಾರಾವಾಹಿಯ ಮೂಲಕ ನಟಿ ಖುಷ್ಪು ಹಲವು ವರ್ಷಗಳ ನಂತರ ಕಿರುತೆರೆಯಲ್ಲಿ ನಟಿಸಿದ್ದಾರೆ.

ಮಹಿಳೆಯೊಬ್ಬರು ‘ಡೈವೋರ್ಸ್ಡ್’ ಎಂಬ ಫಲಕ ಹಿಡಿದ, ಪತಿಯೊಂದಿಗೆ ಇದ್ದ ಫೋಟೋದಲ್ಲಿನ ಪತಿಯ ಮುಖದ ಭಾಗವನ್ನು ಹರಿದು ಪ್ರತ್ಯೇಕಿಸಿದ, ಪತಿ-ಪತ್ನಿ ಇಬ್ಬರೂ ಜೊತೆಗಿದ್ದ ಫೋಟೋವನ್ನು ಚಪ್ಪಲಿ ಕಾಲಿನಲ್ಲಿ ತುಳಿದು ಹೊಸಕಿ ಹಾಕಿದಂಥ ಫೋಟೋಗಳು ಈ ಫೋಟೋಶೂಟ್​ನ ಪ್ರಮುಖ ಆಕರ್ಷಣೆ ಎನಿಸಿಕೊಂಡಿವೆ. ಅಲ್ಲದೆ, ‘ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!’ ಎಂಬ ಫಲಕವನ್ನು ಹಿಡಿದು ಸಂತಸದಿಂದ ಬೀಗುವಂಥ ಫೋಟೋ ಮೂಲಕ ‘ಪತಿ ಎಂಬ ಒಂದು ಸಮಸ್ಯೆಯನ್ನು ನಿವಾರಿಸಿಕೊಂಡಿದ್ದೇನೆ’ ಎಂಬ ಸಂದೇಶವನ್ನೂ ಈಕೆ ಸಾರಿದ್ದಾರೆ.

ಶಾಲಿನಿ ಇನ್ಸ್ಟಾ ಅಕೌಂಟ್ ಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://instagram.com/shalu2626?igshid=YmMyMTA2M2Y=

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ7 days ago

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ...

ದಿನದ ಸುದ್ದಿ1 week ago

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ...

ದಿನದ ಸುದ್ದಿ1 week ago

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ...

ದಿನದ ಸುದ್ದಿ1 week ago

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್

ಸುದ್ದಿದಿನ, ಬೆಂಗಳೂರು : ಕಾವೇರಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡ ಹಾಗೂ ವಿವಿಧ ರೈತಪರ ಸಂಘಟನೆಗಳು ಇಂದು ಕರ್ನಾಟಕ ರಾಜಧಾನಿ ಬೆಂಗಳೂರು ಬಂದ್‌ಗೆ ಕರೆಕೊಟ್ಟಿವೆ....

ದಿನದ ಸುದ್ದಿ3 weeks ago

ಪರಿಸರ ಗಣೇಶ ಚತುರ್ಥಿ ಆಚರಣೆ | ಪಿಓಪಿ ಮೂರ್ತಿ ಸಂಪೂರ್ಣ ನಿಷೇಧ : ಜಿಲ್ಲಾಧಿಕಾರಿ ಡಾ. ವೆಂಕಟೇಶ್

ಸುದ್ದಿದಿನ,ದಾವಣಗೆರೆ : ಗಣೇಶ ಚತುರ್ಥಿಯಲ್ಲಿ ಪಿಓಪಿ ಗಣೇಶ ಮೂರ್ತಿ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದ್ದು ಮಣ್ಣಿನಲ್ಲಿ ಮಾಡಿದ ಹಾಗೂ ಬೆಲ್ಲದ ಗಣೇಶ ಮೂರ್ತಿ ಪ್ರತಿಷ್ಟಾಪನೆ ಮಾಡುವ ಮೂಲಕ ಪರಿಸರ...

ದಿನದ ಸುದ್ದಿ3 weeks ago

ಸೆ. 14 ರಿಂದ 21 ರವರೆಗೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿನ ಜಿಲ್ಲೆಯ ಆರು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಲ್ಲೂಕುವಾರು ಆಯೋಜಿಸಲಾಗಿದೆ. ಸೆಪ್ಟೆಂಬರ್ 14 ರಂದು ಹರಿಹರ ತಾಲ್ಲೂಕಿಗೆ ಸಂಬಂಧಿಸಿದಂತೆ ರಾಜನಹಳ್ಳಿಯ ಶ್ರೀ...

ದಿನದ ಸುದ್ದಿ3 weeks ago

ಕಳಪೆ ಸಮವಸ್ತ್ರ ನೀಡಿದವರ ವಿರುದ್ಧ ಕ್ರಮ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಹುಬ್ಬಳ್ಳಿ : ಮಹದಾಯಿ, ಕೃಷ್ಣಾ ಮೇಲ್ದಂಡೆ, ಕಾವೇರಿ ವಿವಾದ ಸೇರಿದಂತೆ ಎಲ್ಲ ಯೋಜನೆಗಳ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸಲು ಸರ್ವ ಪಕ್ಷದ ನಿಯೋಗದೊಂದಿಗೆ ತೆರಳಲು ಪ್ರಧಾನಮಂತ್ರಿಗಳ ಸಮಯ ಕೋರಿ...

ದಿನದ ಸುದ್ದಿ4 weeks ago

ರೈತರಿಗೆ ಬಾಕಿ ಇದ್ದ ಪರಿಹಾರ ಹಣ ಬಿಡುಗಡೆ

ಸುದ್ದಿದಿನ, ಉ.ಕ: ಉತ್ತರ ಕರ್ನಾಟಕದ ಕಲ್ಬುರ್ಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನೆಟೆ ರೋಗದಿಂದ ಕಳೆದ ಸಾಲಿನಲ್ಲಿ ತೊಗರಿ ಬೆಳೆ ಹಾನಿಯಿಂದ ನಷ್ಟ ಅನುಭವಿಸಿದ್ದ ರೈತರಿಗೆ ಬಾಕಿ...

ದಿನದ ಸುದ್ದಿ4 weeks ago

ನಾಡಿನ ಹಲವು ಕ್ಷೇತ್ರಗಳಿಗೆ ತರಳಬಾಳು ಹಿರಿಯ ಶ್ರೀಗಳ ಕೊಡುಗೆ ಅಪಾರ: ಡಾ. ನಾ ಲೋಕೇಶ ಒಡೆಯರ್

ಸುದ್ದಿದಿನ,ದಾವಣಗೆರೆ : ಹಿರಿಯ ಶ್ರೀ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳುವರು ಕಟ್ಟಿ ಬೆಳಸಿದ ಸಂಸ್ಥೆ ಮತ್ತು ತಮ್ಮ ಆದರ್ಶ ವ್ಯಕ್ತಿತ್ವದ ಮೂಲಕ ಪೂಜ್ಯರು ಇಂದಿಗೂ ಎಂದೆಂದಿಗೂ...

ದಿನದ ಸುದ್ದಿ4 weeks ago

ಪರಿಶಿಷ್ಟ ಸಮುದಾಯಗಳ ಮೇಲೆ ಜಾತಿ ದೌರ್ಜನ್ಯ ಪ್ರಕರಣ; ಇಲಾಖೆಗಳ ನಡುವೆ ಸಮನ್ವಯದಿಂದ ಕಾರ್ಯನಿರ್ವಹಿಸಿ : ಅಧಿಕಾರಿಗಳಿಗೆ ಸಿಎಂ ಸೂಚನೆ

ಸುದ್ದಿದಿನ,ಬೆಂಗಳೂರು : ಪರಿಶಿಷ್ಟ ಸಮುದಾಯಗಳ ಮೇಲೆ ನಡೆಯುವ ಜಾತಿ ದೌರ್ಜನ್ಯ ಪ್ರಕರಣಗಳನ್ನು ತಗ್ಗಿಸುವುದರ ಜೊತೆಗೆ ದಾಖಲಾದ ಪ್ರಕರಣಗಳನ್ನು ಸಮರ್ಥವಾಗಿ ನಿರ್ವಹಿಸಲು ಪೊಲೀಸ್, ಕಾನೂನು, ಸಮಾಜ ಕಲ್ಯಾಣ ಸೇರಿದಂತೆ...

Trending