Connect with us

ದಿನದ ಸುದ್ದಿ

ಕಠಿಣ ಸಮಸ್ಯೆಗಳಿಗೆ ಇಲ್ಲಿದೆ ಸೂಕ್ತ ಪರಿಹಾರ : ಕರೆಮಾಡಿ

Published

on

ಶ್ರೀ ದುರ್ಗಾ ಪರಮೇಶ್ವರಿ ಅಮ್ಮನವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.

ಇಂದೇ ಕರೆ ಮಾಡಿ.
9945410150

ಮೇಷ ರಾಶಿ

ನಿಮ್ಮ ಜ್ಞಾನ ಮಟ್ಟದಿಂದ ಉತ್ತಮ ಸಾಧನೆ ರೂಪರೇಷೆ ಮಾಡುವಿರಿ. ಶೈಕ್ಷಣಿಕ ಸಂಬಂಧಪಟ್ಟ ವಿಚಾರಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಕೆಲಸದಲ್ಲಿ ಬಡ್ತಿಯ ಭಾಗ್ಯ ಆಗುವುದು ಖಚಿತವಾಗುತ್ತದೆ. ಕುಟುಂಬದ ಕಾರ್ಯಗಳಿಗೆ ಸಾಧ್ಯವಾದಷ್ಟು ಸಹಾಯ ಮಾಡುವ ಗುಣವನ್ನು ಬೆಳೆಸಿಕೊಳ್ಳಿ, ನಿಮ್ಮ ವರ್ಚಸ್ಸು ಹೆಚ್ಚುತ್ತದೆ. ಕೆಲಸದ ಬಗೆಗಿನ ವಿಷಯಗಳಲ್ಲಿ ಉತ್ತಮ ಫಲಿತಾಂಶ ಕಂಡು ಬರುತ್ತದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಷಭ ರಾಶಿ

ಕುಟುಂಬದ ಹಿತಾಸಕ್ತಿಗಾಗಿ ವಿಶೇಷ ಯೋಜನೆಗಳು ಮಾಡುವ ಸಿದ್ಧತೆ ನಡೆಸುತ್ತೀರಿ. ಕ್ರಿಯಾಶೀಲತೆಯಿಂದ ಈ ದಿನ ಕೆಲಸಗಳನ್ನು ಆರಂಭಿಸಲಿದ್ದೀರಿ. ಹಳೆಯ ಸಾಲಗಳನ್ನು ಯಶಸ್ವಿಯಾಗಿ ವಸೂಲಿ ಮಾಡುವ ಸಾಧ್ಯತೆ ಇದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಿಥುನ ರಾಶಿ

ನಿಮ್ಮ ಕನಸಿನ ಯೋಜಿತ ಕಾರ್ಯಗಳು ನನಸಾಗುವ ಸಂದರ್ಭ ಎದುರಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ವಿಶೇಷ ಆಸಕ್ತಿ ವಹಿಸುವ ಸಾಧ್ಯತೆ ಇದೆ. ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳುವ ದಿನವಿದು. ಸನ್ಯಾಸಿಯ ಮನಸ್ಥಿತಿ ನಿಮ್ಮ ವಿಚಾರಗಳಿಗೆ ವಿರುದ್ಧವಾಗಿ ವರ್ತಿಸಬಹುದು. ಹೊಸ ವಾಹನ ಖರೀದಿ ಪ್ರಕ್ರಿಯೆಗಳನ್ನು ಈಗ ಸದ್ಯಕ್ಕೆ ಬೇಡ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕರ್ಕಾಟಕ ರಾಶಿ

ಬಂಡವಾಳದ ಸಮಸ್ಯೆಗೆ ಪರಿಹಾರ ದೊರಕಲಿದೆ. ಮಕ್ಕಳ ಬೆಳವಣಿಗೆಗಾಗಿ ನೀವು ಅವರಿಗೆ ಸಹಕಾರ ನೀಡುವುದು ಒಳ್ಳೆಯದು. ಹೊಸತನದ ಆಲೋಚನೆ ನಿಮಗೆ ಶುಭದಾಯಕ ಕ್ಷಣಗಳನ್ನು ದಯಪಾಲಿಸುತ್ತದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಸಿಂಹ ರಾಶಿ

ಮಾಡುವ ವೃತ್ತಿಯಲ್ಲಿ ಸಂಪೂರ್ಣ ಬೆಂಬಲ ಸಿಗಲಿದೆ. ನಿಮ್ಮ ವಿಚಾರಗಳಲ್ಲಿ ಬದಲಾವಣೆ ಕಾಣಬಹುದು. ಚಿಂತನೆಗಳ ಸಾಕ್ಷಾತ್ಕಾರವು ಪೂರ್ಣ ಫಲವನ್ನು ನೀಡಲಿದೆ. ಆರ್ಥಿಕ ಅಭಿವೃದ್ಧಿ ನಿರೀಕ್ಷಿತ ಮಟ್ಟದಲ್ಲಿ ಸಾಗುತ್ತದೆ. ಕುಟುಂಬದಲ್ಲಿನ ಮನಃಸ್ತಾಪ ಕೊನೆಗೊಳ್ಳುವ ಸಂದರ್ಭ ಬಂದಿದೆ. ಬಂಧುಮಿತ್ರರೊಡನೆ ಶುಭಕಾರ್ಯದ ಬಗ್ಗೆ ಚರ್ಚೆ ನಡೆಸುವಿರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕನ್ಯಾ ರಾಶಿ

ಅಪರಿಚಿತರ ಸಂಘದಿಂದ ಆದಷ್ಟು ಅಂತರ ಕಾಯ್ದುಕೊಳ್ಳಿ. ಧಾರ್ಮಿಕ ವಿಧಿ ವಿಧಾನಗಳನ್ನು ಪೂರ್ಣವಾಗಿ ಪೂರೈಸಲಿದ್ದೀರಿ. ಮಕ್ಕಳ ಯೋಜನೆಗೆ ನಿಮ್ಮ ಬೆಂಬಲ ಅವಶ್ಯಕವಾಗಿ ಬೇಕಾಗಿದೆ, ಅವರ ಪ್ರತಿಯೊಂದು ಕಾರ್ಯಕ್ಕೆ ತಿದ್ದಿತೀಡಿ ಉತ್ತಮಪಡಿಸಿ. ಕುಟುಂಬದ ಆನಂದ ಕ್ಷಣಗಳನ್ನು ಸವಿಯುವ ಸಂದರ್ಭ ಬರಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ತುಲಾ ರಾಶಿ

ದೃಢ ಮನಸ್ಥಿತಿಯಿಂದ ಮಾಡಿದ ಕಾರ್ಯಗಳು ಬಲುಬೇಗನೆ ಯಶಸ್ಸು ನೀಡುವುದು ಖಚಿತ. ನಿಮ್ಮ ಯೋಜನೆಗಳಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವನ್ನು ತೆಗೆದು ಹಾಕಲು ಪ್ರಯತ್ನಿಸಿ. ಪಾಲುದಾರಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಈ ದಿನ ಉತ್ತಮ ವಹಿವಾಟು ನಿರೀಕ್ಷಿಸುವ ಸಾಧ್ಯತೆ ಇದೆ. ಆರ್ಥಿಕವಾಗಿ ಪ್ರಗತಿದಾಯಕ ಬೆಳವಣಿಗೆ ಕಂಡುಬಂದರು ಅನಗತ್ಯ ಖರ್ಚು ಗಳಿಂದ ಹೊರೆ ಹೆಚ್ಚಾಗಲಿದೆ. ಮಕ್ಕಳಿಗೆ ವಿದ್ಯೆ ಹಾಗೂ ಬದುಕಿನ ಪಾಠವನ್ನು ಕಲಿಸಿ ಅವರಿಗೆ ಹಣ ನೀಡುವುದು ಒಳ್ಳೆಯದಲ್ಲ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಶ್ಚಿಕ ರಾಶಿ

ಜಮೀನು ಖರೀದಿಯ ಬಯಕೆಗೆ ಸಕಾರಾತ್ಮಕವಾದ ಸ್ಪಂದನೆ ಸಿಗಲಿದೆ. ಉದ್ಯೋಗದಲ್ಲಿ ಸಹವರ್ತಿಗಳಿಂದ ಕಿರಿಕಿರಿ ಎದುರಾಗಬಹುದು, ಜಾಣ್ಮೆಯ ಮಾತುಗಳನ್ನಾಡುವುದರಿಂದ ಉದ್ಯೋಗದಲ್ಲಿನ ಸಮಸ್ಯೆಯನ್ನು ನಿವಾರಿಸಬಹುದಾಗಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಧನಸ್ಸು ರಾಶಿ

ಮಾಡುವ ಕೆಲಸದಿಂದ ಪ್ರಶಂಸೆ ಸಿಗಲಿದೆ. ನಿಮ್ಮ ಸಹಕಾರವನ್ನು ಹಲವರು ಬಯಸಿ ಬರಲಿದ್ದಾರೆ. ಹಣಕಾಸಿನ ವಿಷಯದಲ್ಲಿ ಜಾಗೃತೆ ಇರಲಿ. ನೀವು ಮಕ್ಕಳ ಬೆಳವಣಿಗೆಗೆ ನೀವು ಸಹ ಶ್ರಮ ಪಡಬೇಕಾಗಿದೆ. ಆತ್ಮೀಯರು ನಿಮ್ಮ ದೊಡ್ಡಮಟ್ಟದ ಕೆಲಸಗಳಿಗೆ ಸಹಾಯದ ಹಸ್ತ ನೀಡಲಿದ್ದಾರೆ. ಸೌಂದರ್ಯದ ಆರಾಧನೆಯನ್ನು ಮಾಡುವ ತವಕ ನಿಮ್ಮಲ್ಲಿ ಕಾಣಬಹುದು. ಯೋಜನೆಯ ವಿಷಯವಾಗಿ ಉತ್ತಮ ವಾದ ಮಂಡನೆ ಮಾಡಲಿದ್ದೀರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಕರ ರಾಶಿ

ನಿಮ್ಮ ವಿಷಯದಲ್ಲಿ ಅನಗತ್ಯ ತೊಂದರೆ ನೀಡುವವರನ್ನು ಈ ದಿನ ನಿಮ್ಮಿಂದಲೇ ಮೆಚ್ಚುಗೆ ಮಾತನಾಡಿ ಇದು ನಿಮ್ಮ ಸಮಸ್ಯೆ ನಿವಾರಣೆ ಮಾಡುತ್ತದೆ. ಪ್ರವಾಸದ ಚಿಂತನೆ ಮಾಡುವ ಸಾಧ್ಯತೆ ಇದೆ. ನಿಮ್ಮ ನಯವಾದ ವ್ಯಕ್ತಿತ್ವದಿಂದ ಸಮಸ್ಯೆಗಳನ್ನು ಪರಿಹಾರ ಮಾಡುವಿರಿ. ಪ್ರೇಮದ ಬಗ್ಗೆ ಆಸಕ್ತಿ ನಿಮ್ಮಲ್ಲಿ ಮೂಡುವುದು ಕಂಡುಬರುತ್ತದೆ. ದೈನಂದಿನ ಜೀವನಕ್ಕೆ ಅಗತ್ಯವಿರುವ ಕೆಲವು ಶೈಕ್ಷಣಿಕ ತರಬೇತಿಗಳನ್ನು ಪಡೆಯಲು ಮುಂದಾಗುತ್ತೀರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕುಂಭ ರಾಶಿ

ಹೊಸದಾಗಿ ಬರುವ ಕೆಲಸಕ್ಕೆ ನೀವು ಆತುರದಿಂದ ವರ್ತಿಸುವುದು ಬೇಡ ಯೋಜನೆಯ ಸಮಗ್ರವಾಗಿ ಅಧ್ಯಯನ ಮಾಡಿ ಮತ್ತು ವಿಳಂಬಮಾಡದೆ ಪಡೆದುಕೊಳ್ಳಿ. ಈ ದಿನ ನಿಮ್ಮಿಂದ ಗೃಹ ಕಾರ್ಯಗಳು ನಡೆಯಲಿದೆ, ಇದು ಮಡದಿಯ ಮನಸ್ಸಿಗೆ ಸಂತೋಷ ನೀಡುತ್ತದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮೀನ ರಾಶಿ

ಕುಟುಂಬದಲ್ಲಿ ಜೀವನದ ಏಳಿಗೆಗಾಗಿ ಚರ್ಚೆಗಳನ್ನು ನಡೆಸುವಿರಿ. ವ್ಯವಹಾರದಲ್ಲಿ ಉತ್ತಮ ಮಾತುಗಳು ಮತ್ತು ನೈಜತೆಯನ್ನು ಬೆಳೆಸಿಕೊಳ್ಳಿ. ಉದ್ಯೋಗ ಮಾಡಲು ಅವಕಾಶಗಳು ಹೆಚ್ಚಳವಾಗುತ್ತದೆ. ಈ ದಿನ ಸ್ನೇಹಮಯವಾಗಿದ್ದು ಹಲವರನ್ನು ಸ್ನೇಹಿತರನ್ನಾಗಿ ಮಾಡಿಕೊಳ್ಳುವಿರಿ. ನೆನೆಗುದಿಗೆ ಬಿದ್ದಿರುವ ಕಾರ್ಯವನ್ನು ಸಾಕಾರಗೊಳಿಸಲು ನಿಮ್ಮಿಂದ ಪ್ರಯತ್ನ ನಡೆಯಲಿದೆ. ಸಂಬಂಧಿಕರ ಭೇಟಿ ಹೊಸ ಹುಮ್ಮಸ್ಸು ಅಥವಾ ಆಲೋಚನೆ ತಂದುಕೊಡುತ್ತದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ

ಇಂದೇ ಕರೆ ಮಾಡಿ.
9945410150

ದಿನದ ಸುದ್ದಿ

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್ ಪಠ್ಯಕ್ರಮ” ಕುರಿತ ಒಂದು ದಿನದ ಕಾರ್ಯಗಾರವನ್ನು ದಿನಾಂಕ 02-03-2026 ರಂದು ಉದ್ಘಾಟಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಕರಿಬಸಪ್ಪ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ದಾವಣಗೆರೆ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಡಾ. ಲೋಕೇಶ್ ಎಂ.ಯು. ಭಾಗವಹಿಸಿ, ಎಸ್.ಇ.ಪಿ ಪಠ್ಯಕ್ರಮದ ಉದ್ದೇಶ, ವಿನ್ಯಾಸ ಮತ್ತು ಪರಿಣಾಮಕಾರಿತ್ವದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇಂಗ್ಲೀಷ್ ವಿಭಾಗದ ಸಂಯೋಜಕರಾದ ಡಾ. ಫಕ್ಕೀರೇಶ ಹಳ್ಳಳ್ಳಿ ಕಾರ್ಯಕ್ರಮದ ಉದ್ದೇಶವನ್ನು ವಿವರಿಸಿದರು.

ಈ ಕಾರ್ಯಗಾರದಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಖಾಸಗಿ ಅನುದಾನಿತ ಹಾಗೂ ಅನುದಾನರಹಿತ ಪದವಿ ಕಾಲೇಜುಗಳಲ್ಲಿ ಇಂಗ್ಲೀಷ್ ಭಾಷೆ ಮತ್ತು ಸಾಹಿತ್ಯ ಬೋಧಿಸುವ ಪ್ರಾಧ್ಯಾಪಕರು ಭಾಗವಹಿಸಿ, ಪಠ್ಯಕ್ರಮದ ಅನುಷ್ಠಾನ, ಬೋಧನಾ ವಿಧಾನಗಳು ಹಾಗೂ ಮೌಲ್ಯಮಾಪನ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಸಿದರು.ಸ.ಪ್ರ.ದ. ಮಹಿಳಾ ಕಾಲೇಜಿನಲ್ಲಿ ಇಂಗ್ಲೀಷ್ ಪಠ್ಯಕ್ರಮ ಕುರಿತ ಮಹತ್ವದ ಕಾರ್ಯಗಾರ ಯಶಸ್ವಿ.

ವೇದಿಕೆಯಲ್ಲಿ ಪ್ರಾಧ್ಯಾಪಕರಾದ ಡಾ. ಜಯಪ್ಪ, ಡಾ. ಭೀಮಪ್ಪ, ಡಾ. ಮಹೇಶ್ ನಾಯ್ಕ್, ಡಾ.ಮಧುಸೂದನ್, ಡಾ. ವಿಜಯಕುಮಾರ್, ಡಾ. ನಾಗನಗೌಡ ಹಾಗೂ ಡಾ. ಶಿವರಾಜ್, ಡಾ. ತ್ರಿವೇಣಿ, ಡಾ. ಶಶಿಕಲಾ ಉಪಸ್ಥಿತರಿದ್ದರು.

ಐ ಕ್ಯೂ ಏ ಸಿ ಸಂಯೋಜಕರು ಮತ್ತು ಆಂಗ್ಲ ವಿಭಾಗದ ಮುಖ್ಯಸ್ಥರಾದ ಡಾ. ಭೀಮಪ್ಪ ಎಂ ಪಿ ಕಾರ್ಯಕ್ರಮದ ಕುರಿತು ಪ್ರಸ್ತಾಪಿಸಿ ಮತ್ತು ಸ್ವಾಗತಿಸಿದರು, ಇತಿಹಾಸ ವಿಭಾಗದ ಮುಖ್ಯಸ್ಥರು ವಂದಿಸಿದರು ಮತ್ತು ಪ್ರೂ. ಮಂಜುನಾಥ ಜಿ ಕಾರ್ಯಕ್ರಮವನ್ನು ನಿರೂಪಿಸಿದರು.

ಇಂಗ್ಲೀಷ್ ಮೇಜರ್ ನಲ್ಲಿ ರ‌್ಯಾಂಕ್ ಪಡೆದವಿದ್ಯಾರ್ಥಿನಿಯರನ್ನು ಇಂಗ್ಲಿಷ್ ವಿಭಾಗದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

Published

on

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.

ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು

ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.

ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್‌ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.

ಯುವಕರು ಸ್ಕೂಲ್, ಕಾಲೇಜ್‌ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್‌ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.

ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.

ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.

ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್‌ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.

ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.

ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending