Connect with us

ಲೈಫ್ ಸ್ಟೈಲ್

ಗುರುವಾರದ ಭವಿಷ್ಯ | ಕರೆಮಾಡಿ ಸಮಸ್ಯೆ ಪರಿಹರಿಸಿಕೊಳ್ಳಿ

Published

on

ಶ್ರೀರಾಘವೇಂದ್ರ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.

ಇಂದೇ ಕರೆ ಮಾಡಿ.
9945410150

ಮೇಷ ರಾಶಿ

ನಿಮ್ಮ ಸ್ವಂತ ನಿರ್ಧಾರಗಳು ಗೆಲುವು ತಂದು ಕೊಡಲಿದೆ. ಇನ್ನೊಬ್ಬರ ಮೇಲೆ ಅವಲಂಬಿಸುವುದು ಬೇಡ. ಕುಟುಂಬದವರ ಹಿತಾಸಕ್ತಿಯನ್ನು ಕಡೆಗಣಿಸಬೇಡಿ ಮತ್ತು ಅವರ ಅಭಿಪ್ರಾಯಗಳಿಗೆ ಬೆಲೆ ನೀಡುವುದು ಒಳಿತು. ಹಿರಿಯರ ಆರೋಗ್ಯದ ಬಗ್ಗೆ ಲಕ್ಷ್ಯವಿರಲಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಷಭ ರಾಶಿ

ಕುಟುಂಬಸ್ಥರ ಬೆಂಬಲದಿಂದ ಕೆಲಸಗಳು ಯಶಸ್ವಿಯಾಗಲಿದೆ. ನೀವು ಅಂದುಕೊಂಡಿರುವ ಕಾರ್ಯಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತೀರಿ. ನಿಮ್ಮಲ್ಲಿ ಧೈರ್ಯ ಕಡಿಮೆಯಾಗಬಹುದು ಆದಷ್ಟು ಮಾನಸಿಕವಾಗಿ ಸಿದ್ಧತೆ ನಡೆಸಿ. ಹಾಸ್ಯ ಸ್ವಭಾವದಿಂದ ಎಲ್ಲರನ್ನೂ ರಂಜಿಸುವಿರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಿಥುನ ರಾಶಿ

ಕಚೇರಿ ಕಾರ್ಯಗಳಲ್ಲಿ ಉತ್ತಮ ನಿರ್ವಹಣೆ ತೋರುವಿರಿ. ಅಧಿಕಾರಿ ವಲಯದಿಂದ ಮನ್ನಣೆ ಸಿಗಲಿದೆ. ಸಹವರ್ತಿಗಳಿಂದ ಮತ್ಸರದ ಭಾವನೆ ಮೂಡಬಹುದು. ನಿಮ್ಮ ಬುದ್ಧಿವಂತಿಕೆಯಿಂದ ಅಸಾಧ್ಯವಾದ ಕಾರ್ಯವನ್ನು ಸಾಧಿಸುತ್ತೀರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕರ್ಕಾಟಕ ರಾಶಿ

ಅಪಪ್ರಚಾರ ನಿಂದನೆಗಳಿಂದ ಮಾನಸಿಕವಾಗಿ ಕುಗ್ಗಬಹುದು ಆದಷ್ಟು ಸದೃಢರಾಗಿ. ನಿಮ್ಮ ಕಾರ್ಯಗಳಲ್ಲಿ ತಪ್ಪಿರಬಹುದು ಇನ್ನೊಮ್ಮೆ ಪರಿಶೀಲಿಸುವುದು ಮುಖ್ಯ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರೋಗ್ಯದ ಕಡೆಗೆ ಗಮನ ಹರಿಸಿ. ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ವರ್ತನೆ ಇರಲಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಸಿಂಹ ರಾಶಿ

ಕೆಲಸದಲ್ಲಿ ಮಾರ್ಪಡಿಸುವ ಚಿಂತನೆ ಮಾಡಬೇಡಿ. ನವೀನ ಹೂಡಿಕೆಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸುವುದು ಸದ್ಯಕ್ಕೆ ಬೇಡ. ಆರ್ಥಿಕ ವ್ಯವಹಾರಗಳು ವ್ಯತಿರಿಕ್ತವಾಗಿ ನಡೆಯಬಹುದು. ಕುಟುಂಬದೊಂದಿಗೆ ವೈಮನಸ್ಸು ಸೃಷ್ಟಿಯಾಗಲಿದೆ. ಬರುವ ಹಣಕಾಸು ನಿಲ್ಲದೆ ಕೈಜಾರಿ ಹೋಗಬಹುದಾಗಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕನ್ಯಾ ರಾಶಿ

ಈ ದಿನದ ಕಾರ್ಯಕಲಾಪಗಳು ಕೊನೆಯ ಹಂತದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಮನೆಯನ್ನು ಬದಲಾಯಿಸುವ ಚಿಂತನೆ ನಡೆಯಲಿದೆ. ವೃತ್ತಿಯಲ್ಲಿ ಉತ್ತಮ ಪ್ರಗತಿ ಕಂಡುಬರುತ್ತದೆ. ಕೆಲವು ವಿಷಯಗಳು ನಿಮ್ಮಲ್ಲಿ ಅನಗತ್ಯವಾಗಿ ಕೋಪ ಸೃಷ್ಟಿಸಬಹುದು. ಹಿರಿಯರು ನೀಡುವ ಜವಾಬ್ದಾರಿಯನ್ನು ಪೂರೈಸಲು ಮುಂದಾಗಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ತುಲಾ ರಾಶಿ

ಕೆಲಸಕ್ಕಾಗಿ ಸಾಕಷ್ಟು ತಿರುಗಾಟ ಸಾಧ್ಯತೆ. ಹಣಕಾಸಿನ ಸ್ಥಿತಿ ಉತ್ತಮವಾಗಿದ್ದರೂ ಸುಖಾಸುಮ್ಮನೆ ಖರ್ಚು ಗಳಿಂದ ಸಮಸ್ಯೆ. ವೃತ್ತಿರಂಗದಲ್ಲಿ ನೀವೇ ಕೇಂದ್ರಬಿಂದು ಆಗಿರುವಿರಿ. ಪ್ರೇಮಿಗಳಿಗೆ ಶುಭ ಫಲ. ನಿಮ್ಮ ಕೆಲವು ಕೆಲಸಗಳ ಬಗ್ಗೆ ಯಾರೊಂದಿಗೂ ಹಂಚಿಕೊಳ್ಳಬೇಡಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಶ್ಚಿಕ ರಾಶಿ

ಕ್ಷಣಿಕ ಆನಂದ ತರುವ ಕಾರ್ಯದಲ್ಲಿ ಮಗ್ನರಾಗುವುದು ಬಿಟ್ಟು ನಿಮ್ಮ ಶ್ರಮದಿಂದ ಮುಂದಿನ ಭವಿಷ್ಯ ಕಟ್ಟಿಕೊಳ್ಳಲು ಸಿದ್ಧರಾಗಿ ಕೌಟುಂಬಿಕ ಕಲಹಗಳು ನಿಮ್ಮನ್ನು ಬಾದೆ ಪಡಿಸುತ್ತದೆ ನಿಮ್ಮ ಕೆಲವು ಅನಿಯಂತ್ರಿತ ಆಸೆಗಳನ್ನು ಹದ್ದು ಬಸ್ತಿನಲ್ಲಿಡುವ ಸೂಕ್ತ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಧನಸ್ಸು ರಾಶಿ

ನಿಮ್ಮ ಮಹತ್ವಾಕಾಂಕ್ಷೆಯ ಕೆಲಸ ಒಳ್ಳೆಯ ಫಲಿತಾಂಶ ಕಾಣಬಹುದಾಗಿದೆ. ಉದ್ಯೋಗ ನಿಮಿತ್ತ ಪ್ರವಾಸ ಮಾಡಲಿದ್ದೀರಿ. ಇಂದು ನಿಮ್ಮಲ್ಲಿ ಸಾಲ ಕೇಳಲು ಬಂದ ಜನರನ್ನು ನಗುನಗುತಾ ಕಳಿಸಿಕೊಡಿ, ಸಾಲ ಮಾತ್ರ ನೀಡದಿರಿ. ಧಾರ್ಮಿಕ ಕಾರ್ಯ ವಿಧಿವಿಧಾನಗಳಲ್ಲಿ ಪಾಲ್ಗೊಳ್ಳುವಿರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಕರ ರಾಶಿ

ಕುಟುಂಬದಲ್ಲಿ ಶಾಂತಿ ನೆಲೆಸುವಂತೆ ಪ್ರಯತ್ನಪಡಿ. ದುಡುಕಿನ ನಿರ್ಧಾರ ಗಳಿಂದ ಕಷ್ಟಕ್ಕೆ ಸಿಲುಕಬಹುದು. ಮನೆ ಕಟ್ಟುವ ಯೋಜನೆ ಮುಂದಕ್ಕೆ ಹೋಗಬಹುದು. ಆರ್ಥಿಕ ಹೊಡೆತದಿಂದ ಸಾಲ ಬಾದೆ. ಉದ್ಯಮಿಗಳಿಗೆ ನಿರೀಕ್ಷಿತ ಲಾಭವಿಲ್ಲ. ಕುಟುಂಬದಲ್ಲಿ ಹೊಸ ಸದಸ್ಯರ ಆಗಮನ ಸಂತೋಷ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕುಂಭ ರಾಶಿ

ಮಕ್ಕಳ ಶಿಕ್ಷಣಕ್ಕಾಗಿ ಹಣಕಾಸಿನಲ್ಲಿ ವೆಚ್ಚ. ಒತ್ತಡದಿಂದ ಆಯಾಸ. ಹೊಸ ವಸ್ತುಗಳ ಖರೀದಿಯ ಭರಾಟೆ. ಮನೆಗಾಗಿ ವಿಶೇಷ ಕಾಣಿಕೆ ಕಂಡುಕೊಳ್ಳುವಿರಿ. ಸಂಗಾತಿಯಿಂದ ಪ್ರೇಮ ನಿರೀಕ್ಷೆ. ಇಂದು ನೀವು ಆರಾಮವಾಗಿರುವ ಭಾವನೆ ಹೊಂದಿರುತ್ತೀರಿ ಮತ್ತು ಆನಂದಿಸಲು ಸೂಕ್ತ ಮನೋಭಾವದಲ್ಲಿರುತ್ತೀರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮೀನ ರಾಶಿ

ವಿದೇಶದಲ್ಲಿ ವ್ಯಾಪಾರ ಮಾಡುವ ಈ ರಾಶಿಚಕ್ರದ ಜನರಿಗೆ ಇಂದು ಸಾಕಷ್ಟು ಹಣದ ಲಾಭವನ್ನು ಪಡೆಯಬಹುದು. ಕುಟುಂಬದ ಸದಸ್ಯರೊಂದಿಗೆ ಕೆಲವು ವಿಶ್ರಾಂತಿಯ ಕ್ಷಣಗಳನ್ನು ಕಳೆಯಿರಿ. ಹೊಸ ಪ್ರೀತಿಯ ಸಂಪರ್ಕವನ್ನು ಹೊಂದುವ ಅವಕಾಶಗಳು ಬಲವಾಗಿದ್ದರೂ ವೈಯಕ್ತಿಕವಾದ ಮತ್ತು ಗೌಪ್ಯವಾದ ಮಾಹಿತಿಯನ್ನು ಬಹಿರಂಗಪಡಿಸಬೇಡಿ. ನಿಮ್ಮ ಸರ್ವಾಧಿಕಾರಿ ಧೋರಣೆ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುತ್ತದೆ. ಇಂದು ನೀವು ಉಚಿತ ಕ್ಷಣಗಳಲ್ಲಿ ಯಾವುದೇ ಹೊಸ ಕೆಲಸವನ್ನು ಮಾಡಲು ಯೋಚಿಸುವಿರಿ ಆದರೆ ನಿಮ್ಮ ಅಗತ್ಯವಾದ ಕೆಲಸಗಳು ಸಹ ತಪ್ಪುವಷ್ಟು ನೀವು ಈ ಕೆಲಸದಲ್ಲಿ ಸಿಲುಕಬಹುದು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ

ಇಂದೇ ಕರೆ ಮಾಡಿ.
9945410150

ಕ್ರೀಡೆ

ಬೆಳಗಿನ ಸುದ್ದಿ ಮುಖ್ಯಾಂಶಗಳು

Published

on

ಬೆಳಗಿನ ಸುದ್ದಿ ಮುಖ್ಯಾಂಶಗಳು

  1. ರಾಜ್ಯ ವಿಧಾನಪರಿಷತ್ತಿನ 6 ಸ್ಥಾನಗಳಿಗೆ ಮುಂದಿನ ತಿಂಗಳ 3 ರಂದು ಚುನಾವಣೆ ನಡೆಯಲಿದೆ. ದ್ವೈವಾರ್ಷಿಕ ಚುನಾವಣೆಗೆ ಸಲ್ಲಿಕೆಯಾದ ನಾಮಪತ್ರಗಳ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು 91ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆಯ ದಿನವಾಗಿದೆ.
  2. ದೇಶದ ಉತ್ತರದ ರಾಜ್ಯಗಳಲ್ಲಿ ನಿನ್ನೆ ತೀವ್ರ ಬಿಸಿಗಾಳಿ ವಾತಾವರಣ ಉಂಟಾಗಿತ್ತು. ಮುಂದಿನ 4 ದಿನಗಳಲ್ಲಿ ವಾಯವ್ಯ ಪೂರ್ವ ಹಾಗೂ ಮಧ್ಯಭಾರತದ ಬಯಲು ಪ್ರದೇಶಗಳಲ್ಲಿ ತೀವ್ರ ಬಿಸಿಗಾಳಿ ವಾತಾವರಣವಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚಿಸಿದೆ.
  3. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಪ್ರದೇಶಾದ್ಯಂತ 40 ರಿಂದ 55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಸಮುದ್ರ ಉಕ್ಕೇರಲಿದ್ದು, ಮುಂಜಾಗ್ರತಾ ಕ್ರಮವಾಗಿ ಬುಧವಾರದವರೆಗೆ ಸಮುದ್ರಕ್ಕೆ ಇಳಿಯಬಾರದು ಎಂದು ಮೀನುಗಾರರಿಗೆ ಉತ್ತರಕನ್ನಡ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ.
  4. ತೈವಾನ್‌ನ ಅಧ್ಯಕ್ಷ ಹುದ್ದೆ ಆಯ್ಕೆಯಾಗಿರುವ ಲೈ ಛಿಂಗ್-ತೆ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅವರು ಜನವರಿಯಲ್ಲಿ ನಡೆದ ಚುನಾವಣೆಯಲ್ಲಿ ಜಯ ಸಾಧಿಸಿದ್ದಾರೆ. ಕಳೆದ 4 ವರ್ಷಗಳಿಂದ ದೇಶದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ 64 ವರ್ಷದ ಲೈ ಅವರು, ತೈವಾನ್‌ನ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುವುದಾಗಿ ಹೇಳಿದ್ದಾರೆ.
  5. ಶ್ರೀಲಂಕಾದ ಸೀತಾಮಾತೆ ಮಂದಿರ-ಸೀತಾ ಇಳಿಯಾದಲ್ಲಿ ನಿನ್ನೆ ಕುಂಬಾಭಿಷೇಕ ಶ್ರದ್ಧಾ-ಭಕ್ತಿ ಸಡಗರ ಸಂಭ್ರಮಗಳಿಂದ ಜರುಗಿತು. ಅಯೋಧ್ಯೆಯ ಸರಯೂ ನದಿಯಿಂದ ತರಲಾಗಿದ್ದ ಸುಮಾರು 25ಲೀಟರ್ ಪವಿತ್ರ ಜಲದಿಂದ ಮಂದಿರದ ಗೋಪುರಕ್ಕೆ ಅಭಿಷೇಕ ನೆರವೇರಿಸಲಾಯಿತು. ಭಾರತ-ನೇಪಾಳ, ಶ್ರೀಲಂಕಾ ಸೇರಿದಂತೆ ವಿವಿಧ ಕಡೆಗಳಿಂದ ಆಗಮಿಸಿದ್ದ ಭಕ್ತಾದಿಗಳು ಈ ದೃಶ್ಯವನ್ನು ಕಣ್ಮನಗಳಲ್ಲಿ ತುಂಬಿಕೊಂಡರು.
  6. ಭಾರತದ ಗ್ರಾಂಡ್ ಮಾಸ್ಟರ್ ಅರವಿಂದ್ ಚಿದಂಬರಂ ಶಾರ್ಜಾ ಮಾಸ್ಟರ್‍ಸ್ ಚೆಸ್ ಪಂದ್ಯಾವಳಿಯಲ್ಲಿ ಅತಿಥೇಯ ಶಾರ್ಜಾದ ಎ.ಆರ್. ಸುಲೆಹ್ ಸಲೀಂ ಅವರನ್ನು ಪರಾಭವಗೊಳಿಸಿ 4.5ಅಂಕಗಳೊಂದಿಗೆ ಮುನ್ನಡೆ ಸಾಧಿಸಿದ್ದಾರೆ.
  7. ಗುವಾಹಾಟಿಯಲ್ಲಿ ನಿನ್ನೆ ರಾತ್ರಿ ನಡೆಯಬೇಕಿದ್ದ ರಾಜಸ್ಥಾನ ರಾಯಲ್ಸ್ ಹಾಗೂ ಕೊಲ್ಕೊತ್ತಾ ನೈಟ್ ರೈಡರ್‍ಸ್ ನಡುವಿನ ಐಪಿಎಲ್ ಪಂದ್ಯ ಮಳೆಯಿಂದಾಗಿ ರದ್ದುಗೊಂಡಿತು. ಕೆಲಕಾಲ ಮಳೆ ಬಂದು ನಿಂತ ನಂತರ ನಡೆದ ಟಾಸ್ ಗೆದ್ದ ಕೊಲ್ಕತ್ತಾ ತಂಡ ಫೀಲ್ಡಿಂಗ್ ಆಯ್ದುಕೊಂಡಿತ್ತು. ಆದರೆ ಪುನಃ ಮಳೆ ಬಂದ ಹಿನ್ನೆಲೆ ಪಂದ್ಯ ರದ್ದುಗೊಳಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತಂತ್ರಜ್ಞಾನ ಮೋಡಿ : ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Published

on

  • ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ

90ರ ದಶಕದಿಂದೀಚೆಗೆ, ಎಲ್ಲೆಡೆ ಸದ್ದಿಲ್ಲದೇ ಕ್ರಮೇಣ ಒಕ್ಕರಿಸತೊಡಗಿದೆ ಆಧುನಿಕ ಯಾಂತ್ರಿಕೃತ ಬದುಕು.

ಜನಸಾಮಾನ್ಯರ ಅರಿವಿನ-ಪರಿಧಿ ತಿಳಿಗೊಳ್ಳುವುದರ ಮೊದಲೇ ಊಹಿಸಲಾರದಷ್ಟು ಮಟ್ಟಿಗೆ ಇಂದು, ಸ್ವಚ್ಛಂದ ಹಳ್ಳಿ-ಸೊಬಗಿನ ಕೂಡು-ಕುಟುಂಬದ, ಮೈ-ಮನಸ್ಸು ತುಂಬಿದ, ಪರಿಶುದ್ಧ ಜೀವನ ಪ್ರೀತಿ, ಉತ್ಸಾಹ, ಮಮತೆಯನ್ನು ಇನ್ನಿಲ್ಲವಾಗಿಸಿದೆ ಎನಿಸುತ್ತದೆಯಲ್ಲವೆ?

ಹೇಗೆಂದರೆ, ಕಲ್ಪಿಸಿಕೊಂಡರೂ ಕಣ್ಣೆದುರಿಗೆ ತೆರೆದಿಡುವ ಅಮೂಲ್ಯ ಬದುಕು, ಅದೆಷ್ಟು ಬೇಗ ದಿಕ್ಕು-ದೆಸೆಯಿಲ್ಲದೆ ಕಣ್ಣು-ಕಟ್ಟಿದ ಸ್ಪರ್ಧೆಗಿಳಿದ ಕುದುರೆಯಂತೆ ಅಲೆಯುವಂತಾಗಿದೆ! ಅರೆಕ್ಷಣ, ಮೈಮನ ಕಸಿವಿಸಿಗೊಳ್ಳುತ್ತೆ! ಜೀವ ಮರುಗುತ್ತೆ. ಮತ್ತೆ ಮತ್ತೆ ಆ ಬಾಲ್ಯ, ಹಳ್ಳಿ ಬದುಕನ್ನ ಅರಸಿ ಬಯಸುತ್ತೆ! ಜನತೆ, ಹಳ್ಳಿಯಲ್ಲಿನ ಗಿಡ-ಮರ, ಪಶು-ಪಕ್ಷಿ, ಹಳ್ಳ-ಕೊಳ್ಳ, ಬೆಟ್ಟ-ಗುಡ್ಡ ಮುಂತಾದ ಪರಿಸರದ ಸಕಲ ಜೀವಿಗಳೊಂದಿಗೆ ಒಂದಾಗಿ ನಲ್ಮೆಯಿಂದ ಪರಿಶುದ್ಧ ಮನದಿ, ಭೂ ತಾಯಿ, ತಿಳಿ-ನೀಲಿ ಆಗಸ, ಮಳೆ, ಗಾಳಿ, ಬೆಳಕನ್ನ ಇನ್ನಿಲ್ಲದೆ ಅಪ್ಪಿ, ಅತ್ಯಂತ ಸಂತಸ-ಖುಷಿಯಿಂದ, ಇರುವ ಪರಿಸ್ಥಿತಿಗೆ ಒಗ್ಗಿ , ಬದುಕು ರೂಪಿಸಿಕೊಂಡು ಜೀವನೋತ್ಸಾಹ ತಳೆಯುತ್ತಿದ್ದರು.

ನಿಜ ಹೇಳಬೇಕೆಂದರೆ, ಪರಿಸರವೇ ಪಾಠ; ಭೂ ತಾಯಿಯೇ ಹಾಸಿಗೆ; ಆಗಸವೇ ಹೊದಿಕೆಯಾಗಿ, ದುಡಿದ, ದಣಿವರಿದ ಮನದಿ, ಕಣ್ತುಂಬಿ ನೆಮ್ಮದಿಯ ನಿಟ್ಟುಸಿರುಗೈವ ಕ್ಷಣಗಳು ಅದಾಗಿತ್ತು!

ಹಳ್ಳಿಯಲ್ಲಿನ ಆಟೋಟಗಳು, ತಮಾಷೆಯ ಕ್ಷಣಗಳು, ಆಟಿಕೆಗಳು, ಸಾಮಾನುಗಳು, ಹಬ್ಬ-ಹರಿದಿನಗಳು, ಜಾತ್ರೆ-ಸಂತೆಗಳು, ಒಕ್ಕಲು ಸಮಯದ ಸುಗ್ಗಿಯ ಮಧುರ ಕ್ಷಣಗಳು ಇತ್ಯಾದಿ ಜನತೆಯ ಮುಗ್ಧ -ಮನಸ್ಸು ಮತ್ತು ಹೊಳೆವ ಮುಖದಲ್ಲಿ, ನಿಷ್ಕಲ್ಮಶ ಮಂದಹಾಸ ಮೂಡಿಸಿ, ಬೆಲೆ ಕಟ್ಟಲಾಗದ ಖುಷಿಯ ಕ್ಷಣಗಳನ್ನು ಸದಾ ಅವರಲ್ಲಿ ಕಂಗೊಳಿಸುತ್ತಿದ್ದವು.

ಎಲ್ಲರೂ ದುಡಿವವರು; ಎಲ್ಲರೂ ಭಾಗಿಯಾಗುವವರು; ಎಲ್ಲರೊಳಗೊಂದಾಗಿ ಬಾಳುವವರು; ಎಲ್ಲರಲ್ಲೂ ಧನ್ಯತಾ ಭಾವ; ಆದರಣೀಯತೆ, ಪೂಜ್ಯತಾ-ಭಾವ ತುಂಬಿತ್ತು! ಅಂತಃಕರಣೆ, ಕರುಣೆ, ಪ್ರೀತಿ-ವಿಶ್ವಾಸ, ತಕ್ಕಮಟ್ಟಿಗೆ ಮಾನವೀಯತೆ ಬದುಕ-ಪ್ರೀತಿ ಹೆಚ್ಚಿಸಿತ್ತು!

ಈಗಾಗಲೇ, ನಾವು ಯಾವ ಸ್ಥಿತಿ ತಲುಪಿದ್ದೇವೆಂದರೆ: ಶಾಲಾ ರಜೆಯ ದಿನಗಳಲ್ಲಿ, ಈಗಿನ ಮಕ್ಕಳಿಗೆ ಆ ಕಾಲದ ಹಳ್ಳಿಗಳ ಜೀವನ ಪರಿಚಯಿಸಲು ಗೊಟಗೋಡಿಯ ರಾಕ್ ಗಾರ್ಡನ್ – ಹಾವೇರಿ, ಹೆರಿಟೇಜ್ ವಿಲೇಜ್ – ಮಣಿಪಾಲ, ಅಲ್ಲಲ್ಲಿ ಸಾರ್ವಜನಿಕ ಉದ್ಯಾನವನ, ಹಾಗೂ ಇತರೆ ಕೆಲವು ಮ್ಯೂಸಿಯಮ್ ಗಳತ್ತ ಮುಖ ಮಾಡಿಬೇಕೆ ಹೊರತು ನೈಜ ಚಿತ್ರಣ ಪ್ರಸ್ತುತ ಹಳ್ಳಿಗಾಡಿನಲ್ಲೂ ಕಾಣಸಿಗದು! ಸ್ವತಃ ಹಳ್ಳಿಗರೇ ಪರಿತಪಿಸುವ ಸ್ಥಿತಿ.

ಕಾರಣ ಇಷ್ಟೆ: ತಂತ್ರಜ್ಞಾನದ ಆವಿಷ್ಕಾರ ಮತ್ತು ಎಲ್ಲ ಕ್ಷೇತ್ರಗಳಲ್ಲೂ ಹೊಕ್ಕಿರುವ ಅದರ ಗಾಢವಾದ ಛಾಯೆ. ಇಡೀ ‘ಪ್ರಪಂಚವೇ ಒಂದು ಹಳ್ಳಿ’ (Global Village) ಯಾಗಿ ಮಾರ್ಪಟ್ಟಿರುವ ಭಾವನೆ. ವಿಶೇಷವಾಗಿ, ದೂರವಾಣಿ, ಇಂಟರ್ನೆಟ್, ಯುಟ್ಯೂಬ್, ನೇರ ಮೆದುಳಿಗೆ ಕೈ ಹಾಕಿರುವ ಸಾಮಾಜಿಕ ಜಾಲತಾಣಗಳ ಡ್ರಗ್ಸ್ ರೀತಿಯ ಮಾನಸಿಕ ಮೋಹ ಬೆಂಬಿಡದೆ ಇಂದಿನ ಆಧುನಿಕ ಜನತೆಯ ಚಿಂತನಾರ್ಹ ಯೋಚನಾ ಶಕ್ತಿ, ಆರೋಗ್ಯ , ಕೌಟುಂಬಿಕ ಮೌಲ್ಯಗಳು, ಮಾನವೀಯ ಗುಣಗಳು ಹಾಗೂ ಒಟ್ಟಾರೆ ಜೀವನ ಶೈಲಿಯನ್ನೇ ಅಕ್ಷರಸಃ ನುಂಗಿಹಾಕಿವೆ! ಅಲ್ಲದೆ, ಇದು ಇಂದಿನ ಅನಿವಾರ್ಯವೆಂಬಂತೆ ಕಠೋರ ಸನ್ನಿವೇಶ ಹುಟ್ಟುಹಾಕಿವೆ.

ಒಂದೆಡೆ, ‘ಅತೀಯಾದ ಅಮೃತವೂ ವಿಷ’ವೆನ್ನುವಂತೆ, ಹಾಗೂ ಊಟದಲ್ಲಿ ‘ರುಚಿಗೆ ತಕ್ಕಷ್ಟು ಉಪ್ಪಿ’ರುವಂತೆ ಹಲವು ಒಳಿತು-ಕೆಡುಕಗಳ ನಡುವೆ ಎಲ್ಲವೂ ಹಿತಮಿತವಾಗಿ ಬಳಕೆಯಲ್ಲಿದ್ದರೆ ಚೆನ್ನ. ಅಲ್ವೇ? ಮೈ ಮನ ಆರೋಗ್ಯಕರವಾಗಿರುತ್ತೆ; ಜೀವನ ಉತ್ಸಾಹದಿಂದ ಕೂಡಿರುತ್ತೆ.
ಜೊತೆಗೆ, ಇತ್ತೀಚೆಗೆ ಜಗತ್ತಿನೆಲ್ಲೆಡೆ ಭಾರೀ ಸಂಚಲನ ಸೃಷ್ಟಿಸಿರುವ ‘ಕೃತಕ ಬುದ್ಧಿಮತ್ತೆ’ (Artificial Intelligence – AI) ಹಾಗೂ ‘ಬಯೋಚಿಪ್’ ತಂತ್ರಜ್ಞಾನಗಳು. ಈ ಎರಡೂ ತಂತ್ರಜ್ಞಾನಗಳು ಬಹುತೇಕ ಮನುಷ್ಯನನ್ನ ಸಹ ಒಂದು ಸರಕಾಗಿ ನೋಡುವ ದೂರದೃಷ್ಟಿ ಹೊಂದಿವೆ ಎಂದರೆ ತಪ್ಪಾಗಲಿಕ್ಕಿಲ್ಲ! ತೀರ ಇತ್ತೀಚೆಗೆ, ತಂತ್ರಜ್ಞಾನ ಜಗತ್ತಿನ ಹೆಸರಾಂತ ಉದ್ಯಮಿ: ಎಲಾನ್ ಮಸ್ಕ್ ತಮ್ಮ ‘ನ್ಯೂರಾಲಿಂಕ್’ (Neuralink) ಸಂಸ್ಥೆಯ ಮೂಲಕ ಪ್ರಪಂಚದ ಮೊಟ್ಟ ಮೊದಲ ಪ್ರಯತ್ನವಾಗಿ ಆರೋಗ್ಯವಂತ ವ್ಯಕ್ತಿಯೊಬ್ಬರ ಮೆದುಳಿನಲ್ಲಿ ಪ್ರಾಯೋಗಿಕ – ‘ಮೊದಲ ಬಯೋಚಿಪ್’ ಅಳವಡಿಸಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ! ಇದುವರೆಗೂ, ಮೊಬೈಲ್ ನಲ್ಲಿ ಕೇವಲ ‘ಮೆಮೊರಿ ಕಾರ್ಡ್’ ಬಳಸಿ, ಅದರಲ್ಲಿ ಸಂಗ್ರಹಿಸಿದ ಮಾಹಿತಿ ಬೇಕೆಂದಾಗ ಆಲಿಸುವ, ನೋಡುವ ಪರಿಪಾಠದ ಪರಿಚಯವಿದ್ದ ನಮಗೆ, AI ಹಾಗೂ Biochip ತಂತ್ರಜ್ಞಾನಗಳ ಅವತಾರಗಳು ಊಹೆಗೂ ಮೀರಿದ್ದು ಅನ್ಸುತ್ತೆ ಕೂಡ.

ಆಗ, ಜಗತ್ತು ಹೇಗಿರಬೇಡ? ತಂತ್ರಜ್ಞಾನ ತೊರೆದು ಮನುಷ್ಯ, ಜೀವನ ಕಲ್ಪಿಸಿಕೊಳ್ಳಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಅದು, ಕೇವಲ ಮನುಷ್ಯನ ಅವಶ್ಯಕತೆಗಳಿಗೆ ಪೂರಕವಾಗಿರಬೇಕೆ ಹೊರತು; ಆತನನ್ನ ಆಳುವ ಸ್ಥಿತಿ ತಲುಪಬಾರದು! ಮುಂದಿನ ದಿನಗಳಲ್ಲಿ, ಮನುಷ್ಯ ಎದುರಿಸಬಹುದಾದ ಭಯಾನಕ ತಂತ್ರಜ್ಞಾನ ಸಂಕೋಲೆಗಳನ್ನು ಕುರಿತು ಚರ್ಚಿಸುವ ಅಗತ್ಯ ಇಂದಿನ ತುರ್ತು ಅನಿವಾರ್ಯ. ಆದರೆ, ಎಲ್ಲವೂ ಸಲೀಸಾಗಿ ಕೈಗೆಟುಕುವ ಇಂದಿನ ದಿನಗಳಲಿ, ಅತಿಯಾಗಿ ಮಿತಿಮೀರಿರುವ ಅನುಕೂಲಗಳು ಅಮೂಲ್ಯ ಖುಷಿಯ ಕ್ಷಣಗಳನ್ನು ಎಂದಿಗೂ ನೀಡಲಾರವು.

ಬದಲಿಗೆ, ಪ್ರತಿಷ್ಠೆಯ ಹೆಮ್ಮರಗಳಾಗಿ, ಜನತೆ ನಾಲ್ಕು ದಿನದ ಈ ಬಾಳಲಿ ಏನೋ ಬಹುದೊಡ್ಡ ಸಾಧನೆಗೈದವರಂತೆ, ಯಂತ್ರಮಾನವರಂತೆ ಬೀಗುವವರೆ!!? ಮೂಲಭೂತವಾಗಿ, ಮಾನವ ಸಹಿತ ಸಕಲ ಜೀವ-ಸಂಕುಲವೂ ವಾಸಯೋಗ್ಯ ಸ್ವಚ್ಛಂದ ಭೂಮಿ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಭೂಮಿಯಲ್ಲಿ, ಮಣ್ಣಿನ ಫಲವತ್ತತೆ ಹಾಗೂ ನೀರು ಸಂರಕ್ಷಿಸದೆ; ಗಿಡ-ಮರ ಬೆಳೆಸದೆ; ಹಸಿರು ಹೆಚ್ಚಿಸದೆ, ಮತ್ತು ಪರಿಸರ ಸಮತೋಲನ ಕಾಪಾಡದೆ; ಕೇವಲ ತಂತ್ರಜ್ಞಾನ ತಲೆಯಲಿ ಹೊತ್ತು, ಮನುಷ್ಯ ಉತ್ತಮ ಆಹಾರ, ಆರೋಗ್ಯ ಮತ್ತು ಜೀವನ ಕಟ್ಟಿಕೊಳ್ಳಲು ಎಂದಿಗೂ ಸಾಧ್ಯವಿಲ್ಲ. ಸಮರೋಪಾದಿಯಲ್ಲಿ, ಜನತೆ ಸ್ವ ಇಚ್ಛೆಯಿಂದ ಹಳ್ಳಿ-ಹಳ್ಳಿಗಳಿಂದ, ನಗರಗಳು, ಬೆಟ್ಟ-ಗುಡ್ಡಗಳಲ್ಲೆಡೆ ಬೃಹತ್ ಸಂಖ್ಯೆಯಲ್ಲಿ ಸಸಿಗಳನ್ನ ನೆಟ್ಟು, ಪಾಲನೆ-ಪೋಷಣೆಗೈಯ್ಯುವ ಚಳುವಳಿ ರೂಪದ ಆಂದೋಲನ ದೇಶಾದ್ಯಂತ ಅತ್ಯಂತ ತ್ವರಿತವಾಗಿ ಕೈಗೂಡಬೇಕು. ಈ ನಿಟ್ಟಿನಲ್ಲಿ, ಎಲ್ಲರೂ ಕೈಜೋಡಿಸಬೇಕು.

(ಲೇಖಕರು : ಡಾ. ಚಂದ್ರಪ್ಪ ಎಚ್, ಸಹಾಯಕ ಪ್ರಾಧ್ಯಾಪಕರು, ಭೌತವಿಜ್ಞಾನ ವಿಭಾಗ, ಸರ್ಕಾರಿ ವಿಜ್ಞಾನ ಕಾಲೇಜು, ಚಿತ್ರದುರ್ಗ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ನಿಷೇಧ : ಸಚಿವ ದಿನೇಶ್ ಗುಂಡೂರಾವ್

Published

on

ಸುದ್ದಿದಿನ, ಬೆಂಗಳೂರು : ಕೃತಕ ಬಣ್ಣ ಬಳಸಿದ ಕಾಟನ್ ಕ್ಯಾಂಡಿ ಮತ್ತು ಗೋಬಿ ಮಂಚೂರಿ ಮಾರಾಟವನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ನಿಷೇಧಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆದಾಗ್ಯೂ, ಬಣ್ಣ ಹಾಗೂ ರಾಸಾಯನಿಕ ಹಾಕದೇ ಇರುವ ಈ ತಿನಿಸುಗಳ ಮಾರಾಟಕ್ಕೆ ನಿರ್ಬಂಧ ಇಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಕ್ಕಳು ಸೇರಿದಂತೆ ಎಲ್ಲ ವಯೋಮಾನದವರಿಗೂ ಅಚ್ಚುಮೆಚ್ಚಾದ ಈ ಎರಡು ತಿನಿಸುಗಳನ್ನು ಆಕರ್ಷಕವಾಗಿ ಕಾಣುವಂತೆ ಮಾಡಲು ಬಳಸುವ ಕೃತಕ ಬಣ್ಣಗಳಲ್ಲಿ ಅಪಾಯಕಾರಿ ರಾಸಾಯನಿಕಗಳು ಇರುವುದು ಪರೀಕ್ಷೆಗಳಿಂದ ದೃಢಪಟ್ಟಿದೆ ಎಂದರು. ರಾಜ್ಯದ ಹಲವೆಡೆ ಬೀದಿಬದಿಯ ಗಾಡಿಗಳು, ಹೋಟೆಲ್‌ಗಳಲ್ಲಿ ತಯಾರಿಸಿದ ಗೋಬಿ ಮಂಚೂರಿ ತಿನಿಸಿನ 171ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 107ಮಾದರಿಗಳಲ್ಲಿ ಅಸುರಕ್ಷಿತ ರಾಸಾಯನಿಕಗಳು ಪತ್ತೆಯಾಗಿರುವುದು ಆತಂಕಕಾರಿಯಾಗಿದೆ ಎಂದರು.

ಕೃತಕ ಬಣ್ಣಗಳಲ್ಲಿರುವ ರೋಡೊಮೈನ್-ಬಿ ಮತ್ತು ಟಾಟ್ರಝೀನ್ ರಾಸಾಯನಿಕಗಳು ಕ್ಯಾನ್ಸರ್ ರೋಗಕ್ಕೆ ಕಾರಣವಾಗಬಹುದು ಎನ್ನುವ ಅಂಶ ತಿಳಿದುಬಂದಿದೆ. ಬಣ್ಣ ಹಾಕಿದ ಗೋಬಿಮಂಚೂರಿ ಮತ್ತು ಕಾಟನ್‌ಕ್ಯಾಂಡಿಗಳನ್ನು ಮಾರಾಟ ಮಾಡುವವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಏಳು ವರ್ಷದರೆಗೆ ಜೈಲು ಶಿಕ್ಷೆ, 10 ಲಕ್ಷ ರೂಪಾಯಿವರೆಗೆ ದಂಡ ಅಥವಾ ಜೀವಾವಧಿ ಶಿಕ್ಷೆಗೂ ಅವಕಾಶವಿದೆ ಎಂದು ಸಚಿವರು ಎಚ್ಚರಿಕೆ ನೀಡಿದರು.

ಹೇಳಿಕೆ


  • ಬಣ್ಣ ಹಾಕಿರುವ ಈ ಎರಡು ತಿನಿಸುಗಳನ್ನು ಸೇವಿಸಬಾರದು ಎಂದು ಸಾರ್ವಜನಿಕರಿಗೂ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದಲ್ಲದೇ, ಕಬಾಬ್, ಪಾನಿಪೂರಿ ಮೊದಲಾದ ತಿನಿಸುಗಳಲ್ಲೂ ಕೃತಕ ಬಣ್ಣಗಳ ಬಳಕೆ ಆಗುತ್ತಿದೆಯೇ ಎಂದು ಪರಿಶೀಲಿಸಲಾಗುತ್ತಿದೆ.

            | ಸಚಿವ ದಿನೇಶ್ ಗುಂಡೂರಾವ್


ಟ್ವೀಟ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending