Connect with us

ಲೈಫ್ ಸ್ಟೈಲ್

ಮಂಗಳವಾರದ ಭವಿಷ್ಯ‌ | ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹದಂತಹ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ಪರಿಹಾರ : ಇಂದೇ ಕರೆಮಾಡಿ

Published

on

ಶ್ರೀ ಚಾಮುಂಡೇಶ್ವರಿ ಅಮ್ಮನವರ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.

ಇಂದೇ ಕರೆ ಮಾಡಿ.
9945410150

ಮೇಷ ರಾಶಿ

ಇಂದು ಹೆಚ್ಚು ಓಡಾಟದಲ್ಲಿ ಪಾಲ್ಗೊಳ್ಳಬಹುದು. ಧಾರ್ಮಿಕ ಕಾರ್ಯಗಳಿಂದ ನಿಮ್ಮ ಮನಸ್ಸಿಗೆ ಸಂತೋಷ ಹೆಚ್ಚಾಗಲಿದೆ. ಸಾಧು-ಸಂತರ ಪುಣ್ಯ ದರ್ಶನದಿಂದ ನಿಮ್ಮ ಜೀವನ ಸುಗಮವಾಗಿ ನಡೆಯಲಿದೆ. ಒಡಕು ಉಂಟಾಗಿರುವ ಸಂಬಂಧಗಳನ್ನು ಪುನ ಆತ್ಮೀಯತೆಯನ್ನು ವೃದ್ಧಿಸಿಕೊಳ್ಳಲು ಪ್ರಯತ್ನಿಸಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಷಭ ರಾಶಿ

ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹುಮುಖ್ಯ. ಕೆಲಸದಲ್ಲಿನ ನಿಮ್ಮ ಚಿಂತನೆ ಹಾಗೂ ಶ್ರಮವನ್ನು ಎಲ್ಲರೂ ಮೆಚ್ಚುತ್ತಾರೆ. ಆರ್ಥಿಕವಾಗಿ ಮುಂದುವರಿಯಲು ಹಲವು ಅವಕಾಶಗಳು ನಿಮ್ಮ ಹಿಂದೆ ಇದ್ದರು ಅದರ ಪೂರ್ಣ ಪ್ರಯೋಜನ ಪಡೆಯಲು ನೀವು ವಿಫಲರಾಗುತ್ತಿದ್ದೀರಿ. ನಿಮ್ಮ ವೈವಾಹಿಕ ಜೀವನದಲ್ಲಿ ಅತ್ಯುತ್ತಮ ವಾದಂತಹ ಸಂಗತಿಗಳು ಇಂದು ಜರುಗಬಹುದು, ಪತ್ನಿಯ ಪ್ರೇಮ ಹಾಗೂ ಅವರ ಆರೈಕೆ ನಿಮ್ಮನ್ನು ಸಂತುಷ್ಟಗೊಳಿಸುತ್ತದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಿಥುನ ರಾಶಿ

ಯೋಜನೆಯ ಸಂಬಂಧಪಟ್ಟ ಹಾಗೆ ದೊಡ್ಡಮಟ್ಟದ ಕಾರ್ಯಕ್ರಮ ರೂಪಿಸಬೇಕಾದ ಸಂದರ್ಭ ಬರಲಿದೆ ನೀವು ಈ ಕಾರ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಯಶಸ್ವಿಯಾಗಲಿದ್ದೀರಿ ಯಾವುದೇ ಕಾರಣಕ್ಕೂ ಭಯ ಬೇಡ. ಆರ್ಥಿಕ ಸುಧಾರಣೆಗೆ ಇಂದು ನೀವು ಪ್ರಶಸ್ತ್ಯ ನೀಡುವಿರಿ. ಪ್ರೀತಿಯ ಪ್ರತಿರೂಪವಾಗಿ ಇಂದು ನಿಮ್ಮ ಪ್ರೇಯಸಿಗೆ ಉಡುಗೊರೆಯನ್ನು ನೀಡಲು ಬಯಸುವಿರಿ. ಸಣ್ಣದಾಗಿ ಪ್ರಾರಂಭಿಸಿದ ಉದ್ಯಮವು ತುಂಬಾ ಲಾಭವನ್ನು ತಂದುಕೊಡಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕರ್ಕಾಟಕ ರಾಶಿ

ಕೆಲವು ಹಿನ್ನಡೆ ಎದುರಿಸುವ ಸಾಧ್ಯತೆಯಿದೆ. ಧೃತಿಗೆಡಬೇಡಿ ಹಾಗೂ ನಿರೀಕ್ಷಿತ ಫಲಿತಾಂಶ ಪಡೆಯಲು ಕಠಿಣ ಪರಿಶ್ರಮಪಡಿ. ಈ ಹಿನ್ನಡೆಗಳು ನಿಮ್ಮ ಯಶಸ್ಸಿನ ಸೋಪಾನಗಳಾಗಿರಲಿ. ಬಿಕ್ಕಟ್ಟಿನ ಸಮಯದಲ್ಲಿ ಸಂಬಂಧಿಗಳೂ ಸಹಾಯ ಮಾಡುತ್ತಾರೆ. ದೀರ್ಘಕಾಲದ ಲಾಭಗಳಿಗೆ ಸ್ಟಾಕ್‌ಗಳು ಮತ್ತು ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ ಮಾಡುವುದನ್ನು ಶಿಫಾರಸು ಮಾಡಲಾಗಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಸಿಂಹ ರಾಶಿ

ಧಾರ್ಮಿಕ ಸ್ಥಳಕ್ಕೆ ಅಥವಾ ಸಂಬಂಧಿಗಳ ಭೇಟಿ ಸಾಧ್ಯವಿದೆ. ನಿಮ್ಮ ಪ್ರೀತಿಪಾತ್ರರೊಡನೆ ಪ್ರಯಾಣಕ್ಕೆ ಹೋಗುವ ಮೂಲಕ ನಿಮ್ಮ ಅಮೂಲ್ಯ ಕ್ಷಣಗಳನ್ನು ಪುನಃ ಜೀವಿಸಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿನ ವೃತ್ತಿಪರರು ಉತ್ತಮ ವಾರ್ತೆಯನ್ನು ಪಡೆಯುತ್ತಾರೆ. ಕೆಲವು ಕಾರ್ಡ್ ಹೆಚ್ಚು ಪ್ರಚಾರ ಅವಕಾಶಗಳು ಇವೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕನ್ಯಾ ರಾಶಿ

ನೀವು ಸಂತೋಷ ದ್ವಿಗುಣ ಸಹೋದ್ಯೋಗಿಗಳು ನಿಮ್ಮ ಸಂತೋಷವನ್ನು ಹಂಚಿಕೊಳ್ಳಬಹುದು. ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮನ್ನು ಸಂತೋಷಗೊಳಿಸಲು ನಿಮ್ಮ ಜೀವನ ಸಂಗಾತಿ ಇಂದು ಬಹಳಷ್ಟು ಪ್ರಯತ್ನಗಳನ್ನು ಮಾಡುತ್ತಾರೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ತುಲಾ ರಾಶಿ

ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ. ಕೆಲಸದ ನಿಮಿತ್ತ ದೂರದ ಪ್ರಯಾಣವು ಅಪ್ರಯೋಜಕ ವಾಗಿರುತ್ತದೆ. ಕೆಲಸದ ಒತ್ತಡದಿಂದ ಹೆಚ್ಚು ಆಯಾಸ, ವಿಶ್ರಾಂತಿ ಅಗತ್ಯವಾಗಿ ಬೇಕಾಗಿದೆ. ಪತ್ನಿಯೊಡನೆ ಕೆಲವು ವಿಚಾರಗಳಲ್ಲಿ ವಾದ-ವಿವಾದ ಬರಬಹುದು ಶಾಂತ ರೀತಿಯಿಂದ ವರ್ತಿಸಿ. ಹಣಕಾಸಿನ ವ್ಯವಹಾರದಲ್ಲಿ ಉತ್ತಮ ಫಲಿತಾಂಶ ಇಂದು ಬರುವುದು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಶ್ಚಿಕ ರಾಶಿ

ಸಮಯವು ನಿಮ್ಮ ವಿಚಾರಕ್ಕೆ ತಕ್ಕ ಹಾಗೆ ನಡೆಯುತ್ತದೆ. ನಿಮ್ಮ ಮೇಲಿನ ವಿಶ್ವಾಸದಿಂದ ಯೋಜನೆಗಳಲ್ಲಿ ಬಂಡವಾಳ ಹೂಡಲು ಹಿರಿಯರು ತಯಾರಾಗುವರು. ಕೆಲವು ವಿಷಯಗಳನ್ನು ಗುಪ್ತವಾಗಿ ನಿಮ್ಮಲ್ಲಿಯೇ ಇರಿಸಿಕೊಳ್ಳಿ ಅನಗತ್ಯವಾಗಿ ಪರರ ಬಳಿ ಹೇಳಿಕೊಳ್ಳುವುದು ಸಮಸ್ಯೆಯಾಗುತ್ತದೆ. ಕೆಲಸದ ಒತ್ತಡದಿಂದ ನಿಮ್ಮ ಆರೋಗ್ಯದಲ್ಲಿ ಹೆಚ್ಚು ವ್ಯತ್ಯಾಸ ಆಗಬಹುದು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಧನಸ್ಸು ರಾಶಿ

ಭಾಕಿ ನೀಡಿರುವ ಹಣ ವಸೂಲಾತಿಗೆ ಮುಂದಾಗುವುದು ಒಳಿತು. ವೃತ ಹಿರಿಯರೊಡನೆ ವಾದ-ವಿವಾದ ಇಳಿಯಬೇಡಿ ಅದು ನಿಮಗೆ ಒಳ್ಳೆಯದಲ್ಲ. ಹಣಕಾಸಿನ ಉಳಿತಾಯದ ಬಗ್ಗೆ ಗಮನ ನೀಡಿ. ಇಂದು ದೈವ ದೇಗುಲ ಭೇಟಿ ನೀಡುವರು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಕರ ರಾಶಿ

ನಿಮ್ಮ ಮನಸ್ಸು ಆಸ್ತಿಕತೆಯಲ್ಲಿ ತುಂಬಿರುವುದು. ನಿಮ್ಮ ನವೀನ ಯೋಜನೆಯು ಕಾರ್ಯರೂಪಕ್ಕೆ ಬರಲಿದೆ. ಕುಟುಂಬಸ್ಥರೊಡನೆ ಪ್ರವಾಸಕ್ಕೆ ಹೋಗಲು ಸಿದ್ಧರಾಗುವಿರಿ. ಸಂಜೆಯ ವೇಳೆಗೆ ಶುಭ ಸುದ್ದಿಯನ್ನು ಕೇಳುವುದರಿಂದ ನಿಮ್ಮಲ್ಲಿ ಚೈತನ್ಯ ಹೆಚ್ಚುತ್ತದೆ. ಮೋಸದ ಹೂಡಿಕೆಗಳನ್ನು ಪ್ರೇರೇಪಣೆ ನೀಡಲು ಕೆಲವರು ಮುಖ್ಯ ಪಾತ್ರ ವಹಿಸುವವರು ಅವರಿಂದ ಎಚ್ಚರ ಇರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕುಂಭ ರಾಶಿ

ಆರ್ಥಿಕ ಮುಗ್ಗಟ್ಟಿನಿಂದ ಸ್ವಲ್ಪ ಮಟ್ಟಿಗೆ ಚಿಂತಾಕ್ರಾಂತರಾಗಿದ್ದರೆ ಕುಟುಂಬಸ್ಥರು ಜೊತೆ ಮಾತನಾಡಿ ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಿ. ಸ್ಥಳ ಬದಲಾವಣೆಗೆ ಇಂದು ಮನಸ್ಸು ಮಾಡುವ ಸಾಧ್ಯತೆ ಇದೆ. ನಿಮ್ಮ ಮನದಲ್ಲಿರುವ ಕನಸು ಇಂದು ನನಸಾಗುವ ಸಂದರ್ಭ ಬರುತ್ತದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮೀನ ರಾಶಿ

ವಿಶೇಷ ವ್ಯಕ್ತಿಗಳು ನಿಮ್ಮ ಯೋಜನೆಗೆ ಬೆಂಬಲವಾಗಿ ನಿಲ್ಲುವವರು. ಇಂದು ಜನಗಳ ಜೊತೆ ಹೆಚ್ಚು ಕಾಲ ಕಳೆಯುವುದರಿಂದ ಹೊಸ ಆಲೋಚನೆಯ ಸಹ ಬರಲಿದೆ. ನಿಮ್ಮ ಮಡದಿ ಈ ದಿನ ತುಂಬಾ ಸುಂದರವನ್ನಾಗಿ ಮಾಡುತ್ತಾರೆ. ನಿಮ್ಮಲ್ಲಿರುವ ಪ್ರತಿಭೆಗೆ ಹೆಚ್ಚಿನ ಬೇಡಿಕೆ ಇರುವುದು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ

ಇಂದೇ ಕರೆ ಮಾಡಿ:9945410150

ದಿನದ ಸುದ್ದಿ

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

Published

on

3 ವರ್ಷದ ನಂತರ ಬಡ್ಡಿ ನಿಲ್ಲುತ್ತದೆ ಎಂಬುದು ಹಳೆಯ ನಿಯಮ; 58 ವರ್ಷದವರೆಗೆ ಬಡ್ಡಿ ಗ್ಯಾರಂಟಿ, ಆದರೆ ಈ ತೆರಿಗೆ ನಿಯಮ ಗೊತ್ತಿರಲಿ

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ ಬಡ್ಡಿ ಸಿಗುತ್ತದೆಯೇ ಅಥವಾ ನನ್ನ ಹಣ ಹಾಗೆಯೇ ಉಳಿದುಕೊಳ್ಳುತ್ತದೆಯೇ?’ ಎಂಬುದು ಆ ಪ್ರಶ್ನೆ. ಈ ಪ್ರಶ್ನೆಗೆ ಇಪಿಎಫ್‌ಒ ನೇರವಾಗಿ ನೀಡಿರುವ ಉತ್ತರ – ಹೌದು, ಖಂಡಿತವಾಗಿಯೂ ಬಡ್ಡಿ ಸಿಗುತ್ತದೆ’.ಪಿಎಫ್‌ಗೆ ಹಣ ಜಮಾ ಮಾಡುವುದು ನಿಂತ ತಕ್ಷಣವೇ ಬಡ್ಡಿ ಬರುವುದು ನಿಂತುಹೋಗುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ವಾಸ್ತವವೇ ಬೇರೆ.

http://Visit : www.suddidina.com

3 ವರ್ಷಗಳ ಹಳೆಯ ನಿಯಮದ ಅಸಲಿ ಸತ್ಯವೇನು?

ಈ ಗೊಂದಲಕ್ಕೆ ಕಾರಣ 2016ಕ್ಕಿಂತ ಮೊದಲು ಇದ್ದ ನಿಯಮ. ಹಳೆಯ ನಿಯಮದ ಪ್ರಕಾರ, ಒಂದು ಪಿಎಫ್ ಖಾತೆಗೆ ಸತತ 36 ತಿಂಗಳು (3 ವರ್ಷ) ಯಾವುದೇ ವಂತಿಗೆ ಜಮೆಯಾಗದಿದ್ದರೆ, ಅದನ್ನು `ನಿಷ್ಕ್ರಿಯ ಖಾತೆ’ (Inoperative Account) ಎಂದು ಪರಿಗಣಿಸಲಾಗುತ್ತಿತ್ತು ಮತ್ತು ಅಂತಹ ಖಾತೆಗೆ ಬಡ್ಡಿ ನೀಡುವುದನ್ನು ತಡೆಹಿಡಿಯಲಾಗುತ್ತಿತ್ತು. ಇದರಿಂದಾಗಿ ಲಕ್ಷಾಂತರ ಖಾತೆದಾರರ ಹಣಕ್ಕೆ ಬಡ್ಡಿ ಸಿಗದೆ ನಷ್ಟವಾಗುತ್ತಿತ್ತು.ಆದರೆ ಚಂದಾದಾರರ ಹಿತದೃಷ್ಟಿಯಿಂದ ಇಪಿಎಫ್‌ಒ 2016 ರಲ್ಲಿ ಈ ನಿಯಮಕ್ಕೆ ಮಹತ್ವದ ತಿದ್ದುಪಡಿ ತಂದಿದೆ. ಹೊಸ ಮತ್ತು ಪ್ರಸ್ತುತ ಜಾರಿಯಲ್ಲಿರುವ ನಿಯಮದ ಪ್ರಕಾರ, ಖಾತೆದಾರನಿಗೆ 58 ವರ್ಷ ವಯಸ್ಸಾಗುವವರೆಗೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ನಿಯಮಿತವಾಗಿ ಚಕ್ರಬಡ್ಡಿ (Compounding Interest) ಜಮೆಯಾಗುತ್ತಲೇ ಇರುತ್ತದೆ. ನೀವು ಕೆಲಸದಲ್ಲಿದ್ದರೂ, ಇಲ್ಲದಿದ್ದರೂ ಇದು ಅನ್ವಯಿಸುತ್ತದೆ.

ಉದಾಹರಣೆ:

ಇದನ್ನು ಒಂದು ಉದಾಹರಣೆಯೊಂದಿಗೆ ನೋಡೋಣ. ಒಬ್ಬ ವ್ಯಕ್ತಿ ತಮ್ಮ 40ನೇ ವಯಸ್ಸಿನಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ, ತಮ್ಮ ಪಿಎಫ್ ಖಾತೆಯಲ್ಲಿದ್ದ 10 ಲಕ್ಷ ರೂಪಾಯಿಯನ್ನು ಹಿಂಪಡೆಯದೆ ಹಾಗೆಯೇ ಬಿಡುತ್ತಾರೆ ಎಂದುಕೊಳ್ಳಿ. ಅವರು ಮುಂದಿನ 5 ವರ್ಷಗಳ ಕಾಲ ಅಂದರೆ 45ನೇ ವಯಸ್ಸಿನವರೆಗೆ ಯಾವುದೇ ಹಣವನ್ನು ಜಮೆ ಮಾಡದಿದ್ದರೂ, ಅವರ ಖಾತೆಯಲ್ಲಿರುವ ಆ 10 ಲಕ್ಷ ರೂಪಾಯಿಗೆ ಇಪಿಎಫ್‌ಒ ಪ್ರತಿ ವರ್ಷ ಘೋಷಿಸುವ ಬಡ್ಡಿ ದರದಂತೆ (ಪ್ರಸ್ತುತ 8.25%) ಬಡ್ಡಿ ಸೇರ್ಪಡೆಯಾಗುತ್ತಲೇ ಹೋಗುತ್ತದೆ. ಇದು ಅವರಿಗೆ 58 ವರ್ಷ ತುಂಬುವವರೆಗೆ ಅಂದರೆ ಇನ್ನೂ 13 ವರ್ಷಗಳ ಕಾಲ ನಿರಂತರವಾಗಿ ಸಿಗುತ್ತದೆ. ಅದೇ ರೀತಿ 50ನೇ ವಯಸ್ಸಿನಲ್ಲಿ ಕೆಲಸ ಬಿಟ್ಟವರಿಗೆ 58 ವರ್ಷದವರೆಗೆ 8 ವರ್ಷಗಳ ಕಾಲ ಬಡ್ಡಿ ಸಿಗುತ್ತದೆ.

ಈ ಒಂದು ತೆರಿಗೆ ನಿಯಮವನ್ನು ಮಾತ್ರ ಮರೆಯಬೇಡಿ!

ನಿಮ್ಮ ಹಣಕ್ಕೆ ಬಡ್ಡಿ ಸಿಗುತ್ತದೆ ಎಂಬುದು ಖುಷಿಯ ವಿಚಾರವೇ, ಆದರೆ ಇಲ್ಲಿ ಒಂದು ಪ್ರಮುಖ ತೆರಿಗೆ ಎಚ್ಚರಿಕೆಯಿದೆ. ನೀವು ಕೆಲಸ ಮಾಡುತ್ತಿರುವಾಗ ನಿಮ್ಮ ಪಿಎಫ್ ಬಡ್ಡಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ. ಆದರೆ ನೀವು ಕೆಲಸ ಬಿಟ್ಟ ನಂತರ ನಿಮ್ಮ ಖಾತೆಗೆ ಜಮೆಯಾಗುವ ಬಡ್ಡಿಯನ್ನು ಆದಾಯ ತೆರಿಗೆ ಇಲಾಖೆಯು `ಇತರ ಮೂಲಗಳಿಂದ ಬಂದ ಆದಾಯ’ (Income from Other Sources) ಎಂದು ಪರಿಗಣಿಸುತ್ತದೆ. ಆದ್ದರಿಂದ ಆ ಬಡ್ಡಿಯ ಮೊತ್ತವನ್ನು ನೀವು ನಿಮ್ಮ ವಾರ್ಷಿಕ ಆದಾಯದಲ್ಲಿ ತೋರಿಸಿ, ನಿಮ್ಮ ತೆರಿಗೆ ಸ್ಲ್ಯಾಬ್‌ಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ.

ಖಾತೆದಾರರು ಏನು ಮಾಡಬೇಕು?

1. ಕೆಲಸ ಬದಲಾಯಿಸಿದ್ದರೆ: ಹಳೆಯ ಕಂಪನಿಯ ಪಿಎಫ್ ಹಣವನ್ನು ವಿತ್‌ಡ್ರಾ ಮಾಡುವ ಬದಲು, ನಿಮ್ಮ ಯುಎಎನ್ (UAN) ಮೂಲಕ ಹೊಸ ಕಂಪನಿಯ ಖಾತೆಗೆ ವರ್ಗಾವಣೆ (Transfer) ಮಾಡಿಕೊಳ್ಳಿ. ಇದರಿಂದ ನಿಮ್ಮ ಸೇವಾ ಅವಧಿ ನಿರಂತರವಾಗಿರುತ್ತದೆ.

2. ವೃತ್ತಿ ವಿರಾಮದಲ್ಲಿದ್ದರೆ: 58 ವರ್ಷದವರೆಗೆ ಹಣ ಸುರಕ್ಷಿತವಾಗಿ ಬೆಳೆಯುತ್ತದೆ. ಆದರೆ ನಿಮಗೆ ತುರ್ತು ಅಗತ್ಯವಿಲ್ಲದಿದ್ದರೆ, ಹೆಚ್ಚಿನ ಆದಾಯಕ್ಕಾಗಿ ಬೇರೆಡೆ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದು.

3. 58 ವರ್ಷದ ನಂತರ: ಖಾತೆದಾರನಿಗೆ 58 ವರ್ಷ ತುಂಬಿದ ನಂತರವೂ ಹಣವನ್ನು ಹಿಂಪಡೆಯದಿದ್ದರೆ ಮಾತ್ರ ಆ ಖಾತೆಯನ್ನು ಮತ್ತೆ `ನಿಷ್ಕ್ರಿಯ’ ಎಂದು ಪರಿಗಣಿಸಿ ಬಡ್ಡಿ ನೀಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ.ಆದ್ದರಿಂದ 5 ವರ್ಷದಿಂದ ಹಣ ಜಮೆಯಾಗದಿದ್ದರೂ ಚಿಂತಿಸಬೇಕಿಲ್ಲ, ನಿಮ್ಮ ಪಿಎಫ್ ಹಣ ಇಪಿಎಫ್‌ಒ ನಲ್ಲಿ ಸುರಕ್ಷಿತವಾಗಿ ಬಡ್ಡಿಯೊಂದಿಗೆ ಬೆಳೆಯುತ್ತಿದೆ.

Continue Reading

ದಿನದ ಸುದ್ದಿ

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

Published

on

ಸೆಪ್ಟೆಂಬರ್ ಅಂತ್ಯಕ್ಕೆ ಹೊಸ ಸೇವೆ ಜಾರಿ; ಮುಂದಿನ ವಾರವೇ `ನಮ್ಮ ಬಿಎಂಟಿಸಿ 2.0' ಆ್ಯಪ್ ಲೋಕಾರ್ಪಣೆ, 200 ಹೊಸ ಮಿನಿ ಡೀಸೆಲ್ ಬಸ್ ಖರೀದಿಗೆ ಸಿದ್ಧತೆ

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾಯುವಂತಹ ಪರಿಸ್ಥಿತಿ ಇರುವುದಿಲ್ಲ. ಖಾಸಗಿ ರೈಡ್-ಹೇಲಿಂಗ್ ಆ್ಯಪ್‌ಗಳಾದ ಓಲಾ, ಉಬರ್, ರ‍್ಯಾಪಿಡೋ ನಂತಹ ಆ್ಯಪ್‌ಗಳಲ್ಲೇ ನೇರವಾಗಿ ಬಿಎಂಟಿಸಿ ಬಸ್‌ಗಳ ಲೈವ್ ಲೋಕೇಶನ್ ಟ್ರ್ಯಾಕ್ ಮಾಡಲು ಮತ್ತು ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಮಹತ್ವದ ಸೇವೆಯು ಇದೇ ಸೆಪ್ಟೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಬಿಎಂಟಿಸಿ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.

http://Visit : www.suddidina.com

ಈ ಕುರಿತು ಮಾಹಿತಿ ನೀಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಘುನಂದನ್ ಮೂರ್ತಿ, ನಾವು ಹಲವು ಖಾಸಗಿ ರೈಡ್ ಅಗ್ರಿಗೇಟರ್ ಕಂಪನಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಇದಕ್ಕಾಗಿ ಶೀಘ್ರದಲ್ಲೇ ಒಂದು ಸಾಮಾನ್ಯ ಮಾನದಂಡದ ಒಪ್ಪಂದವನ್ನು (Standard Agreement) ಜಾರಿಗೆ ತರಲಿದ್ದೇವೆ. ಈ ಒಪ್ಪಂದದ ನಿಯಮಗಳಿಗೆ ಬದ್ಧರಾಗುವ ಯಾವುದೇ ಖಾಸಗಿ ಕಂಪನಿಯು ಬಿಎಂಟಿಸಿಯ ಲೈವ್ ಡೇಟಾವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಇದರಿಂದ ಪ್ರಯಾಣಿಕರಿಗೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಿಲ್ಲ. ಕ್ಯಾಬ್ ಅಥವಾ ಆಟೋಗಳಿಂದ ಇಳಿದು ಮುಂದಿನ ಪ್ರಯಾಣಕ್ಕೆ ಬಸ್ ಹಿಡಿಯುವವರಿಗೆ ಇದು ಅತ್ಯಂತ ಸಹಕಾರಿಯಾಗಲಿದೆ ಎಂದು ಹೇಳಿದರು.

ನಮ್ಮ ಬಿಎಂಟಿಸಿ 2.0′ ಆ್ಯಪ್‌ನಲ್ಲಿ ಏನಿದೆ ಹೊಸತು?

ಖಾಸಗಿ ಆ್ಯಪ್‌ಗಳ ಜೊತೆ ಡೇಟಾ ಹಂಚಿಕೊಳ್ಳುವುದರ ಜೊತೆಗೆ, ಬಿಎಂಟಿಸಿ ತನ್ನ ಸ್ವಂತ ಮೊಬೈಲ್ ಅಪ್ಲಿಕೇಶನ್ ಅನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುತ್ತಿದೆ. ನಮ್ಮ ಬಿಎಂಟಿಸಿ ಮೊಬೈಲ್ ಆ್ಯಪ್ 2.0′ ಅನ್ನು ಮುಂದಿನ ವಾರದ ಅಂತ್ಯದೊಳಗೆ ಲೋಕಾರ್ಪಣೆಗೊಳಿಸಲಾಗುವುದು. ಈ ಹಿಂದೆ ಆ್ಯಪ್ ಕುರಿತು ಪ್ರಯಾಣಿಕರು ನೀಡಿದ್ದ ದೂರುಗಳು ಮತ್ತು ತಾಂತ್ರಿಕ ದೋಷಗಳನ್ನು ಸಂಪೂರ್ಣವಾಗಿ ಸರಿಪಡಿಸಲಾಗಿದೆ. ಹೊಸ ಆ್ಯಪ್‌ನಲ್ಲಿ ಬಿಎಂಟಿಸಿ ನೆಟ್‌ವರ್ಕ್‌ನಲ್ಲಿ ಸಂಚರಿಸುವ ಪ್ರತಿಯೊಂದು ಬಸ್‌ನ ಲೈವ್ ಲೋಕೇಶನ್ ಅತ್ಯಂತ ನಿಖರವಾಗಿ ಲಭ್ಯವಾಗಲಿದೆ. ಪ್ರಸ್ತುತ ಬಿಎಂಟಿಸಿ ಬಳಿ 1,771 ಎಲೆಕ್ಟ್ರಿಕ್ ಬಸ್‌ಗಳು ಸೇರಿದಂತೆ ಒಟ್ಟು 6,938 ಬಸ್‌ಗಳಿವೆ. ಪ್ರತಿದಿನ ಸರಾಸರಿ 6,200 ಬಸ್‌ಗಳು ನಗರದಾದ್ಯಂತ ಕಾರ್ಯಾಚರಣೆ ನಡೆಸುತ್ತಿವೆ.

ಸಾರಿಗೆ ಸಚಿವರ ಮಹತ್ವದ ಸಭೆ ಮತ್ತು ನಿರ್ದೇಶನ: 

ವಿಧಾನಸೌಧದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರಿಗೆ ಇಲಾಖೆ, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

200 ಹೊಸ ಮಿನಿ ಬಸ್‌ಗಳ ಖರೀದಿ:

ಮೆಟ್ರೋ ಫೀಡರ್ ಸೇವೆ ಹಾಗೂ ನಗರದ ಕಿರಿದಾದ ರಸ್ತೆಗಳ ಸಂಪರ್ಕಕ್ಕಾಗಿ 200 ಹೊಸ 7 ಮೀಟರ್ ಉದ್ದದ ಮಿನಿ ಡೀಸೆಲ್ ಬಸ್‌ಗಳನ್ನು ಖರೀದಿಸಲು ಬಿಎಂಟಿಸಿ ನಿರ್ಧರಿಸಿದೆ. ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲಿನ ಕಿರಿದಾದ ರಸ್ತೆಗಳಲ್ಲಿ ಈ ಚಿಕ್ಕ ಬಸ್‌ಗಳು ಸುಲಭವಾಗಿ ಸಂಚರಿಸಬಲ್ಲವು. ಸದ್ಯ 9 ಮತ್ತು 12 ಮೀಟರ್ ಉದ್ದದ 255 ಬಸ್‌ಗಳು ಮೆಟ್ರೋ ಫೀಡರ್ ಆಗಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ ನಾಲ್ಕು ನಿಗಮಗಳಿಗೆ 1,000 ಬಸ್ ಖರೀದಿ ಯೋಜನೆಯ ಭಾಗವಾಗಿ ಈ ಖರೀದಿ ನಡೆಯಲಿದೆ. ಮುಂದಿನ 6 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್‌ನ 6 ನಿಲ್ದಾಣಗಳು ಸೇರಿದಂತೆ ಎಲ್ಲಾ ಮೆಟ್ರೋ ನಿಲ್ದಾಣಗಳಿಗೆ ಫೀಡರ್ ಸೇವೆ ವಿಸ್ತರಿಸಲು ಬಿಎಂಆರ್‌ಸಿಎಲ್ ಮತ್ತು ಸಂಚಾರ ಪೊಲೀಸರ ಜೊತೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ.

ಎಸಿ ಬಸ್ ಸೇವೆ ಹೆಚ್ಚಳಕ್ಕೆ ಸೂಚನೆ:

ಪಿಎಂ ಇ-ಡ್ರೈವ್ ಯೋಜನೆಯಡಿ ಬರಲಿರುವ 4,500 ಎಲೆಕ್ಟ್ರಿಕ್ ಬಸ್‌ಗಳ ಪೈಕಿ 200 ಮಿನಿ ಎಸಿ ಇ-ಬಸ್‌ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳ 5 ಕಿ.ಮೀ ವ್ಯಾಪ್ತಿಯಲ್ಲಿ ಓಡಿಸುವಂತೆ ಸಚಿವರು ಸೂಚಿಸಿದ್ದಾರೆ. ಐಟಿ ಕಂಪನಿ ಉದ್ಯೋಗಿಗಳು ಖಾಸಗಿ ವಾಹನ ಬಳಕೆ ಕಡಿಮೆ ಮಾಡಿ ಸಾರ್ವಜನಿಕ ಸಾರಿಗೆ ಬಳಸುವಂತೆ ಪ್ರೇರೇಪಿಸಲು ಐಟಿ ಪಾರ್ಕ್‌ಗಳ ಮಾರ್ಗಗಳಲ್ಲಿ ಎಸಿ ಬಸ್ ಸೇವೆ ಹೆಚ್ಚಿಸಲು ಮತ್ತು ಐಟಿ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ನಿಗಮಗಳಲ್ಲಿ ಆದಾಯ ಸೋರಿಕೆ ತಡೆದು ಅನಗತ್ಯ ವೆಚ್ಚ ಕಡಿತಗೊಳಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವರು ಸೂಚಿಸಿದ್ದಾರೆ.

Continue Reading

ದಿನದ ಸುದ್ದಿ

EV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ

Published

on

ಕರ್ನಾಟಕ – ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ

ಸುದ್ದಿದಿನ,ಬೆಂಗಳೂರು: ರಾಜ್ಯವು ಇವಿ ನೋಂದಣಿಯಲ್ಲಿ ದೇಶದಲ್ಲೇ ಪ್ರಮುಖ ಸ್ಥಾನ ಪಡೆದಿದ್ದು, ಶುದ್ಧ ಚಲನೆಗೆ ತಂತ್ರಜ್ಞಾನ ಮತ್ತು ಮೂಲಸೌಕರ್ಯವನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಹಾಗೂ ವಿಶ್ವ ಇವಿ ದಿನದ ಸಂದರ್ಭದಲ್ಲಿ ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ ಸಾಧಿಸಿರುವುದು ಶ್ಲಾಘನೀಯ.

http://Visit : www.suddidina.com

ಕರ್ನಾಟಕವು ಒಟ್ಟು ಇವಿ ನೋಂದಣಿಯಲ್ಲಿ 3ನೇ ಸ್ಥಾನ ಪಡೆದಿದ್ದು, e-2W (ಎಲೆಕ್ಟ್ರಿಕ್ ಎರಡು ಚಕ್ರ ವಾಹನ) ಮತ್ತು e-4W (ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನ) ನೋಂದಣಿಯಲ್ಲಿ 2ನೇ ಸ್ಥಾನ ಪಡೆದಿದೆ. ಇದು ರಾಜ್ಯದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಸ್ವೀಕರಿಸುವ ಪ್ರಮಾಣ ಹೆಚ್ಚುತ್ತಿರುವುದನ್ನು ತೋರಿಸುತ್ತದೆ. 2027 ಹಣಕಾಸು ವರ್ಷದಲ್ಲಿ EV ಪ್ರವೇಶ ಪ್ರಮಾಣ 14.67% ಆಗಿದ್ದು, ಇದು ದೇಶದ ಮಟ್ಟದಲ್ಲಿ ಗಮನಾರ್ಹ ಸಾಧನೆಯಾಗಿದೆ.

ರಾಜ್ಯದ ಇವಿ ಮೂಲಸೌಕರ್ಯ ಅಭಿವೃದ್ಧಿಗೆ ಬೆಸ್ಕಾಂ ನೊಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವಿ ಚಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆ, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವ ಚಾರ್ಜಿಂಗ್ ಸೌಲಭ್ಯ, ಹಾಗೂ ಶುದ್ಧ ಚಲನೆಗೆ ಅಗತ್ಯವಾದ ತಂತ್ರಜ್ಞಾನವನ್ನು ಒದಗಿಸುವಲ್ಲಿ ಬೆಸ್ಕಾಂ ಪ್ರಮುಖ ಪಾತ್ರವಹಿಸಿದೆ.

ಕರ್ನಾಟಕ ಸರ್ಕಾರವು ಶುದ್ಧ ಚಲನೆಗೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವಿ ಖರೀದಿಗೆ ಪ್ರೋತ್ಸಾಹಕ ಯೋಜನೆಗಳು, ಚಾರ್ಜಿಂಗ್ ಮೂಲಸೌಕರ್ಯ ವಿಸ್ತರಣೆ, ಹಾಗೂ ಹಸಿರು ತಂತ್ರಜ್ಞಾನವನ್ನು ಉತ್ತೇಜಿಸುವ ಕ್ರಮಗಳು ಇವಿ ಕ್ರಾಂತಿಗೆ ಬಲ ನೀಡಿವೆ.

ಇವಿ ಬಳಕೆಯ ಹೆಚ್ಚಳದಿಂದ ಪರಿಸರ ಮಾಲಿನ್ಯ ಕಡಿಮೆಯಾಗುವುದು, ಇಂಧನ ಅವಲಂಬನೆ ಕಡಿಮೆಯಾಗುವುದು ಹಾಗೂ ಶುದ್ಧ ಶಕ್ತಿಯ ಬಳಕೆ ಹೆಚ್ಚಾಗುವುದು. ಇದು ಕರ್ನಾಟಕವನ್ನು ಹಸಿರು ರಾಜ್ಯವಾಗಿ ರೂಪಿಸುವತ್ತ ಪ್ರಮುಖ ಹೆಜ್ಜೆಯಾಗಿದೆ.

ವಿಶ್ವ ಇವಿ ದಿನದ ಅಂಗವಾಗಿ, ಕರ್ನಾಟಕವು ತನ್ನ ಸಾಧನೆಗಳನ್ನು ಹಂಚಿಕೊಂಡು, ಮುಂದಿನ ದಿನಗಳಲ್ಲಿ ಶುದ್ಧ ಚಲನೆಗೆ ಇನ್ನಷ್ಟು ಬಲ ನೀಡಲು ಬದ್ಧವಾಗಿದೆ. ಇವಿ ಕ್ರಾಂತಿಯ ಮೂಲಕ ಕರ್ನಾಟಕವು ಭಾರತದ ಭವಿಷ್ಯವನ್ನು ಹಸಿರು ಮತ್ತು ಶಾಶ್ವತ ದಿಕ್ಕಿನಲ್ಲಿ ಮುನ್ನಡೆಸುತ್ತಿದೆ.

Continue Reading

Trending