ದಿನದ ಸುದ್ದಿ
ಜುಲೈ 1 ಕನ್ನಡ ಪತ್ರಿಕ್ಯೋದ್ಯಮದ ಐತಿಹಾಸಿಕ ದಿನ

ಪ್ರತಿ ವರ್ಷ ಕರ್ನಾಟಕದಲ್ಲಿ ಜುಲೈ 1 ರಂದು ‘ಪತ್ರಿಕಾ ದಿನ’ವನ್ನು ಆಚರಿಸಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ ಪ್ರಕಟಗೊಂಡ ದಿನವಾಗಿದ್ದು ಪತ್ರಿಕೋದ್ಯಮದ ಪರಿಚಯ, ಅದರ ಹಿನ್ನೆಲೆ, ಕಾಲಕ್ಕೆ ತಕ್ಕಂತೆ ಅದು ಬದಲಾದ ವೈಖರಿ ಬಗ್ಗೆ ಜನಸಾಮಾನ್ಯರಿಗೆ ತಿಳಿಸಬೇಕು ಎನ್ನುವ ಉದ್ದೇಶದಿಂದ ಈ ದಿನ ಕರ್ನಾಟದಲ್ಲಿ ಪತ್ರಿಕಾ ದಿನಾಚರಣೆ ಆಚರಿಸಲಾಗುತ್ತದೆ.
ಕನ್ನಡದ ಪ್ರಪ್ರಥಮ ಪತ್ರಿಕೆ ಮಂಗಳೂರು ಸಮಾಚಾರ 1843 ರ ಜುಲೈ 1 ರಂದು ಮಂಗಳೂರಿನಲ್ಲಿ ಬಾಸೆಲ್ ಮಿಷನ್‍ನವರ ಮುದ್ರಣಾಲಯದಿಂದ ಪ್ರಕಟವಾಯಿತು. ರೆವರೆಂಡ್ ಹರ್ಮನ್ ಮೋಗ್ಲಿಂಗ್ ಅವರು ಸಂಪಾದಕರಾಗಿದ್ದರು. ಜರ್ಮನ್‍ನ ಮತ ಪ್ರಚಾರಕರಾದ ಮೋಗ್ಲಿಂಗ್ ಅವರನ್ನು ಕನ್ನಡ ಪತ್ರಿಕೋದ್ಯಮದ ಮೂಲಪುರುಷ, ಕನ್ನಡ ಪತ್ರಿಕೋದ್ಯಮದ ಪಿತಾಮಹ ಎಂದು ಅವರನ್ನು ಕರೆಯಲಾಗುತ್ತದೆ.
ಮಂಗಳೂರು ಸಮಾಚಾರ ಪತ್ರಿಕೆ 8 ತಿಂಗಳ ಕಾಲ ಪಾಕ್ಷಿಕವಾಗಿ ಪ್ರಕಟವಾಯಿತು. ವರ್ತಮಾನಗಳು, ಸರಕಾರಿ ನಿರೂಪಗಳು ಕಾನೂನು, ಸುಬುದ್ಧಿಯನ್ನು ಹೇಳುವ ಸಾಮತಿಗಳು, ಹಾಡುಗಳು, ಕತೆಗಳು, ಅಂತರಾಜ್ಯ ವರ್ತಮಾನಗಳು, ವಾಚಕರ ವಾಣಿಗಳು ಅಂಕಣಗಳಾಗಿದ್ದವೆಂದು ಮಂಗಳೂರು ದರ್ಶನ ದಾಖಲಿಸಿದೆ. ಬಳಿಕ ಈ ಪತ್ರಿಕೆಯ ಹೆಸರನ್ನು ಕನ್ನಡ ಸಮಾಚಾರ ಎಂದು ಬದಲಿಸಿ ಬಳ್ಳಾರಿಯಿಂದ ಪ್ರಕಟಿಸಲು ಆರಂಭಿಸಿದರು.
ಮಂಗಳೂರ ಸಮಾಚಾರ ಪತ್ರಿಕೆ: ಮೋಗ್ಲಿಂಗ್ ಅವರು ಯುರೋಪಿಯನ್ ಪತ್ರಿಕೆಯ ಕುರಿತು ಅಪಾರ ಜ್ಞಾನ ಹೊಂದಿದ್ದರಿಂದ ಕನ್ನಡದ ಮೊದಲ ಪತ್ರಿಕೆಯು ವೃತ್ತಿಪರ ಸ್ಪರ್ಶವನ್ನು ಪಡೆಯಿತು. ಅವರು ಹಲವಾರು ಯುರೋಪಿಯನ್ ಭಾμÉಗಳ ಮೇಲೆ ಪಾಂಡಿತ್ಯವನ್ನು ಹೊಂದಿದ್ದರು. 1840 ರಲ್ಲಿ ಮಂಗಳೂರಿಗೆ ಬಂದಿಳಿದ ಕೂಡಲೇ ತುಳು, ಕೊಂಕಣಿ, ಕನ್ನಡ ಕಲಿತರು. ಅವರು ಮಿಷನರಿಯಾಗಿದ್ದರೂ, ಸ್ಥಳೀಯ ಸಾಹಿತ್ಯ ಮತ್ತು ಶಿಕ್ಷಣದಲ್ಲಿ ತೀವ್ರ ಆಸಕ್ತಿಯನ್ನು ತೋರಿಸಿದರು.
ಮಂಗಳೂರ ಸಮಾಚಾರ ಓದುಗರ ಮೇಲೆ ಪ್ರಭಾವ ಬೀರಿತು. ಹೆಚ್ಚಿನ ಸುದ್ದಿಗಳನ್ನು ವಿದೇಶಿ ಮತ್ತು ಭಾರತೀಯ ಪತ್ರಿಕೆಗಳಿಂದ ಸಂಗ್ರಹಿಸಲಾಗುತ್ತಿತ್ತು. ಇದು ಕಲ್ಲಚ್ಚಿನಲ್ಲಿ ಹದಿನೈದು ದಿನಗಳಿಗೊಮ್ಮೆ ಮಂಗಳೂರಿನಿಂದ ಪ್ರಕಟವಾಗುತ್ತಿತ್ತು. ನಾಲ್ಕು ಪುಟಗಳನ್ನೊಳಗೊಂಡ ಪತ್ರಿಕೆಯ ಬೆಲೆ ಒಂದು ಪೈಸೆ ನಿಗದಿ ಮಾಡಲಾಗಿತ್ತು. ಸಂಪಾದಕರಾಗಿ, ಮೋಗ್ಲಿಂಗ್ ಅವರೇ ಸುದ್ದಿಗಳನ್ನು ಆಯ್ಕೆ ಮಾಡುತ್ತಿದ್ದರು. ಇದರಲ್ಲಿ ಸ್ಥಳೀಯ ಸುದ್ದಿಗಳು, ಸರ್ಕಾರಿ ಅಧಿಸೂಚನೆಗಳು, ಕಾನೂನು ವಿಷಯಗಳು, ಹಾಡುಗಳು, ಕಥೆಗಳು ಮತ್ತು ಇತರ ರಾಜ್ಯಗಳ ಸುದ್ದಿಗಳು ಪ್ರಕಟವಾಗುತ್ತಿತ್ತು. ಭಾರತದ ವಿವಿಧ ಭಾಗಗಳನ್ನು ವಶಪಡಿಸಿಕೊಳ್ಳಲು ಬ್ರಿಟಿಷರು ಮಾಡುತ್ತಿದ್ದ ಪ್ರಯತ್ನಗಳ ಕುರಿತು ಅವರು ವ್ಯಾಪಕವಾಗಿ ಪ್ರಕಟಿಸಿದರು. ಜೊತೆಗೆ ಅಪರಾಧಗಳನ್ನು ಮಾಡಿದರೆ ಅದಕ್ಕೆ ತಕ್ಕ ಶಿಕ್ಷೆಯಾಗುತ್ತದೆ ಎಂಬ ತಿಳಿವಳಿಕೆ ಜನರಲ್ಲಿ ಉಂಟಾಗಬೇಕೆಂಬ ಉದ್ದೇಶದಿಂದ ಕೋರ್ಟಿನ ಪ್ರಕರಣಗಳಿಗೆ ಸಂಬಂಧಿಸಿದ ಸಮಾಚಾರಗಳನ್ನು ಹೆಚ್ಚಾಗಿ ಪ್ರಕಟಿಸಲಾಗುತ್ತಿತ್ತು.
:ಮೋಗ್ಲಿಂಗ್ ಅವರು ಒಬ್ಬ ಮಿಷನರಿಯಾಗಿದ್ದರೂ, ಕೂಡ ಶಿಕ್ಷಣ, ಸಾಹಿತ್ಯಿಕ ಚಟುವಟಿಕೆಗಳು ಮತ್ತು ಪತ್ರಿಕೆ ಪ್ರಕಟಣೆಗಳಿಗೆ ಹೆಚ್ಚಿನ ಸಮಯವನ್ನು ಮೀಸಲಿಟ್ಟರು. ಕನ್ನಡ ಸಾಹಿತ್ಯ ಮತ್ತು ಪತ್ರಿಕೋದ್ಯಮಕ್ಕಾಗಿ ಅವರು ಮಾಡಿದ ಶ್ಲಾಘನೀಯ ಕೆಲಸಕ್ಕಾಗಿ, ಟ್ಯೂಬಿಂಗೆನ್‍ನ ಎಬರ್‍ಹಾರ್ಡ್ ಕಾಲ್ರ್ಸ್ ವಿಶ್ವವಿದ್ಯಾನಿಲಯವು 1858 ರಲ್ಲಿ ಮೋಗ್ಲಿಂಗ್‍ಗೆ ಗೌರವ ಡಾಕ್ಟರೇಟ್ ಅನ್ನು ನೀಡಿದ್ದು ಕನ್ನಡಕ್ಕಾಗಿ ಮಾಡಿದ ಕಾರ್ಯಕ್ಕಾಗಿ ಅಂತಹ ಗೌರವವನ್ನು ಪಡೆದ ಮೊದಲ ವ್ಯಕ್ತಿಯಾಗಿದ್ದಾರೆ.
ಆಗಿನ ಬರಹದ ವ್ಯಾಕರಣ – ಪದ ಬಳಕೆಯ ಶೈಲಿಯಲ್ಲಿ ಈ ಪತ್ರಿಕೆ ಪಾಕ್ಷಿಕವಾಗಿ ಸುಮಾರು 8 ತಿಂಗಳ ಕಾಲ ಸತತವಾಗಿ ಪ್ರಕಟವಾಯಿತು. ಮಂಗಳೂರು ಸಮಾಚಾರ ಪತ್ರಿಕೆಯೊಂದಿಗೆ ಆರಂಭವಾದ ಕನ್ನಡ ಪತ್ರಿಕಾರಂಗ ಇಂದು ಅಧುನಿಕ ತಂತ್ರಜ್ಞಾನದೊಂದಿಗೆ ಬೆಳೆದಿದ್ದು ಈಗ ಅನೇಕ ಪತ್ರಿಕೆಗಳು, ಸ್ಯಾಟಲೈಟ್ ಚಾನೆಲ್‍ಗಳು, ದೇಶದಲ್ಲೇ ಗರಿಷ್ಠ ಎಂಬಂತೆ ಬಹುಭಾಷಾ ಪ್ರಾದೇಶಿಕ ಚಾನೆಲ್‍ಗಳು, ಆನ್‍ಲೈನ್ ಆವೃತ್ತಿಗಳು, ವೆಬ್‍ಸೈಟ್‍ಗಳು, ಸಂಜೆ ಪತ್ರಿಕೆಗಳು, ವೆಬ್ ಪತ್ರಿಕೆಗಳು, ಫೇಸ್‍ಬುಕ್- ವಾಟ್ಸ್ಪ್‍ಪ್ ಮಾಹಿತಿ- ಇಂಟರ್‍ನೆಟ್ ವಿನಿಮಯ ಗ್ರೂಪ್‍ಗಳು, ನೇರ ಪ್ರಸಾರ ನೀಡುವ ಸುದ್ದಿವಾಹಿನಿಗಳು… ಹೀಗೆ ಮಾಧ್ಯಮದ ಕ್ಷಣಕ್ಷಣದ ಸುದ್ದಿಗಳನ್ನು ನೀಡುವ ಮೂಲಕ ಜನಮಾನಸದಲ್ಲಿ ಒಂದಾಗಿದೆ. ಪತ್ರಿಕ್ಯೋದಮದಲ್ಲಿ ಉದ್ಯೋಗ ಅವಕಾಶವೂ ಸೃಷ್ಠಿಯಾಗಿ ಅನೇಕ ಪತ್ರಕರ್ತರು ರಾಜ್ಯ- ದೇಶ – ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ.
ಕನ್ನಡದ ಪತ್ರಿಕ್ಯೋದ್ಯಮದ ವಿಷಯದಲ್ಲಿ ಇಂದು ಎಲ್ಲಾ ವಿಶ್ವವಿದ್ಯಾಲಯಗಳಲ್ಲೂ ವೃತ್ತಪರ ಕೋರ್ಸ್ ರೂಪದಲ್ಲಿ ಪತ್ರಿಕ್ಯೊದ್ಯಮ ಪದವಿ, ಸ್ನಾತಕೋತ್ತರ ಪದವಿ, ಪಿಹೆಚ್‍ಡಿ ಸೇರಿದಂತೆ ಪಿಜಿ ಡಿಪ್ಲೋಮಾ ಕೋಸ್ರ್ಗಳನ್ನು ಸಹ ಆರಂಭಿಸಲಾಗಿದ್ದು ಪ್ರತಿವರ್ಷ ಸಾವಿರಾರು ವಿದ್ಯಾರ್ಥಿಗಳು ವಿದ್ಯಾಬ್ಯಾಸ ಮಾಡಿ ಪತ್ರಿಕೋದ್ಯಮದಲ್ಲಿ ಉದ್ಯೋಗವನ್ನು ಕಂಡುಕೊಳ್ಳುತ್ತಿದ್ದು, ಪತ್ರಿಕಾರಂಗ ಪ್ರಜಾಪ್ರಭುತ್ವದ ನಾಲ್ಕನೆ ಅಂಗವಾಗಿ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯವನ್ನು ನಿರ್ವಹಿಸುತ್ತಿದೆ. (ಬರಹ-ರಘು ಆರ್.
ಅಪ್ರೆಂಟಿಸ್, ವಾರ್ತಾ ಇಲಾಖೆ ಶಿವಮೊಗ್ಗ.)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.
ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.
ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.
ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.
ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ವಿಜ್ಞಾನಿಗಳ ಮೂಲಕ ರೈತರ ಸಮಸ್ಯೆಗಳಿಗೆ ಪರಿಹಾರ : ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್
-
ದಿನದ ಸುದ್ದಿ20 hours ago
ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಂಪುಟ ಸಭೆಯಲ್ಲಿ ಒಪ್ಪಿಗೆ : ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ20 hours ago
ರಾಜ್ಯದ ಹಲವೆಡೆ ಧಾರಾಕಾರ ಮಳೆ ; ಜನಜೀವನ ಅಸ್ತವ್ಯಸ್ತ
-
ದಿನದ ಸುದ್ದಿ19 hours ago
ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ
-
ದಿನದ ಸುದ್ದಿ4 days ago
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ; ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ20 hours ago
ಗುಜರಾತ್ನ ಅಹಮದಾಬಾದ್ನಲ್ಲಿ ಏರ್ಇಂಡಿಯಾ ಪ್ರಯಾಣಿಕ ವಿಮಾನ ಪತನ : 242 ಪ್ರಯಾಣಿಕರು ಸಾವು
-
ದಿನದ ಸುದ್ದಿ4 days ago
ಜೂನ್ 9, 2025 ರ ಅಡಿಕೆ ರೇಟು ಹೀಗಿದೆ
-
ದಿನದ ಸುದ್ದಿ19 hours ago
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ