ದಿನದ ಸುದ್ದಿ

ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ

Published

on

ಸುದ್ದಿದಿನ ಡೆಸ್ಕ್ : ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟಿಸಲಾಗಿದೆ. ಬೆಂಗಳೂರಿನಲ್ಲಿಂದು ನಡೆದ ಸ್ಥಾಯಿ ಸಮಿತಿ ಹಾಗೂ ಸರ್ವಸದಸ್ಯರ ಸಭೆಯ ನಂತರ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಪ್ರಶಸ್ತಿ ವಿಜೇತರ ಪಟ್ಟಿ ಪ್ರಕಟಿಸಿದರು.

ಬೆಂಗಳೂರಿನ ರಾಷ್ಟ್ರೋತ್ಥಾನ ಸಂಸ್ಥೆ ಅತ್ಯತ್ತಮ ಪ್ರಕಾಶನ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಡಾ. ಗುರುಲಿಂಗ ಕಾಪಸೆ ಅವರಿಗೆ ಡಾ. ಎಂ.ಎಂ.ಕಲಬುರಗಿ ಮಾನವಿಕ ಅಧ್ಯಯನ ಪ್ರಶಸ್ತಿ, ಮೂಡಬಿದರೆಯ ಡಾ.ಮೋಹನ್ ಆಳ್ವ ಅವರಿಗೆ ಡಾ.ಜಿ.ಪಿ.ರಾಜರತ್ನಂ ಪರಿಚಾರಕ ಪ್ರಶಸ್ತಿ, ಬೆಂಗಳೂರಿನ ಡಾ.ನಾ.ಸೋಮೇಶ್ವರ ಅವರಿಗೆ ಡಾ.ಅನುಪಮ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ ಪ್ರಕಟಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version