ದಿನದ ಸುದ್ದಿ
ಕನ್ನಡ ರಾಜ್ಯೋತ್ಸವ : ಮಾರ್ಗಸೂಚಿ ಬಿಡುಗಡೆ
ಸುದ್ದಿದಿನ, ಬೆಂಗಳೂರು :ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವುದರಿಂದ ನ.1 ರಂದು ಆಚರಿಸಲ್ಪಡುವ ನಾಡಹಬ್ಬ ಕನ್ನಡ ರಾಜ್ಯೋತ್ಸವನ್ನು ಸರಳವಾಗಿ ಆಚರಿಸಬೇಕೆಂದು ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಈ ಪ್ರಕಾರ ಕನ್ನಡ ರಾಜ್ಯೋತ್ಸವ ಸಮಾರಂಭದ ಧ್ವಜಾರೋಹಣ ಸ್ಥಳದಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಮತ್ತು ಸ್ಯಾನಿಟೈಸರ್‍ಗಳನ್ನು ಕಡ್ಡಾಯವಾಗಿ ಬಳಸಬೇಕು. ಗರಿಷ್ಟ 100 ಜನರು ಮಾತ್ರ ಸೇರಲು ಅನುಮತಿಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡಬೇಕು.
ರಾಜ್ಯೋತ್ಸವ ಸಂದರ್ಭದಲ್ಲಿ ಯಾವುದೇ ರೀತಿಯ ಮೆರವಣಿಗೆಗೆ ಅವಕಾಶವಿಲ್ಲ. ಭುವನೇಶ್ವರಿ ಪೂಜೆ ಸಲ್ಲಿಸಿ, ನಂತರ ಧ್ವಜಾರೋಹಣ ಕಾರ್ಯಕ್ರಮವಿರುತ್ತದೆ. ದುರ್ಬಲ ವರ್ಗದವರು ಭಾಗವಹಿಸುವಂತಿಲ್ಲ. ಕೋವಿಡ್ 19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗು ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243