Connect with us

ದಿನದ ಸುದ್ದಿ

ಪರಿಷ್ಕೃತ ಪಠ್ಯಪುಸ್ತಕ ವಿವಾದ : ತಮ್ಮ ಪಠ್ಯವನ್ನು ವಾಪಾಸ್ ಪಡೆದ ಸಾಹಿತಿಗಳು ; ಮುಂದುವರೆದ ಪ್ರತಿರೋಧ..!

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಬಿಜೆಪಿ ಸರ್ಕಾರ ಪರಿಷ್ಕೃತ ಪಠ್ಯ ಪುಸ್ತಕ ಸಮಿತಿಯ ಅಧ್ಯಕ್ಷನನ್ನಾಗಿ ರೋಹಿತ್ ಚಕ್ರತೀರ್ಥ ಎಂಬ ಬಲಪಂಥೀಯ ಧೋರಣೆಯುಳ್ಳ ವ್ಯಕ್ತಿಯನ್ನು ನೇಮಿಸಿಲಾಗಿದೆ. ಈತನ ಅಧ್ಯಕ್ಷತೆಯಲ್ಲಿ ತಯಾರಾಗಿರುವ ಪಠ್ಯ ಪುಸ್ತಕದಲ್ಲಿ ವಿಶ್ವ ಮಾನವ ಕುವೆಂಪು, ಮಾನವತಾವಾದಿ ಬಸವಣ್ಣ ಅವರನ್ನು ಉದ್ದೇಶ ಪೂರ್ವಕವಾಗಿಯೇ ಅವಮಾನಿಸಲಾಗಿದೆ.

ರಾಷ್ಟ್ರಕವಿ ಕುವೆಂಪು ಅವರು ಬರೆದಿರುವ ನಾಡಗೀತೆ ‘ಜೈ ಭಾರತ ಜನನಿಯ ತನುಜಾತೆ’ ನಾಡಗೀತೆಯನ್ನು  ಲೇವಡಿಮಾಡಿ ವಿಕೃತ ಮನಸ್ಥಿಯನ್ನು ಮೆರೆದಿದ್ದ ರೋಹಿತ್ ಚಕ್ರತೀರ್ಥ. ಈ ಹಿನ್ನೆಲೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಮತ್ತು ಅದರ ಅಧ್ಯಕ್ಷನಿಂದ ನಾಡಿನ ಹಿರಿಯ ಸಾಹಿತಿಗಳು ಮತ್ತು ಸಮಾಜ ಸುಧಾರಕರಿಗೆ ಆಗಿರುವ ಅವಮಾನ‌‌ವನ್ನು ಪ್ರತಿಭಟಿಸಿ ಸೂಕ್ಷ್ಮ ಮನಸ್ಸಿನ ಬರಹಗಾರರಾದ ದೇವನೂರು ಮಹಾದೇವ, ಎಸ್.ಜಿ.ಸಿದ್ದರಾಮಯ್ಯ, ಮೂಡ್ನಾಕೂಡು ಚಿನ್ನಸ್ವಾಮಿ, ಜಿ.ರಾಮಕೃಷ್ಣ,ಚಂದ್ರಶೇಖರ ತಾಳ್ಯ, ಬೋಳುವಾರು ಮಹಮ್ಮದ್ ಕುಂಞ, ರೂಪ ಹಾಸನ, ಪಾರ್ವತೀಶ ಬಿಳಿದಾಳೆ ಮತ್ತು ಈರಪ್ಪ ಕಂಬಳಿ ಅವರು ಪರಿಷ್ಕೃತ ಪಠ್ಯದಲ್ಲಿರುವ ತಮ್ಮ ಕವನಗಳನ್ನು ಹಾಗೂ ಗದ್ಯಗಳನ್ನು ಹಿಂದಕ್ಕೆ ಪಡೆದಿದ್ದಾರೆ.

ನಾಡಗೀತೆಯನ್ನೇ ಅವಮಾನಿಸಿದವರನ್ನು ಸರಕಾರ ಉನ್ನತ ಹುದ್ದೆಗೆ ನೇಮಿಸಿದ್ದನ್ನು ಪ್ರತಿಭಟಿಸಿ ಹಿರಿಯ ಲೇಖಕ ನಾಡೋಜ ಹಂ ಪ ನಾಗರಾಜಯ್ಯ ಅವರು ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ‌.

ಹಾಗೇ ದ್ವಿತಿಯ ಭಾಷಾ ಪುಸ್ತಕ ರಚನಾ ಸಮಿತಿ ಅಧ್ಯಕ್ಷ ಪ್ರೊ.ಕೆ.ಎಸ್.ಮಧುಸೂದನ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರತಿರೋಧ ಮುಂದುವರೆದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪಿಎಂ ಸ್ವನಿಧಿ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕøತ ಯೋಜನೆಯಾದ ಡೇ-ನಲ್ಮ್ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಉಪಘಟಕವಾದ ಪಿ.ಎಂ. ಸ್ವನಿಧಿ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಬೀದಿ ಬದಿ ವ್ಯಾಪಾರಸ್ಥರು, ಸಾರ್ವಜನಿಕ ಸ್ಥಳಗಳಲ್ಲಿ ಹಾಲು ಮಾರಾಟಗಾರರು, ದಿನಪತ್ರಿಕೆ ಹಾಕುವವರು, ಅಸಕ್ತ ಸಾರ್ವಜನಿಕರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಹಾಗೂ ಪಾನ್ ಕಾರ್ಡ್ ದಾಖಲಾತಿಗಳೊಂದಿಗೆ ಪಾಲಿಕೆಯ ನಗರ ಬಡತನ ನಿವಾರಣಾ ಕೋಶ, ನಲ್ಮ್ ಶಾಖೆ(ಎಸ್.ಜೆ.ಎಸ್.ಆರ್.ವೈ ಕೆಂಪು ಕಟ್ಟಡ) ಮಹಾಪಾಲಿಕೆ ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿ ವಾಸವಿದ್ದರೆ ಮಾಹಿತಿ ಕೊಡಿ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳ ಉಪಟಳ ತಡೆಯಲು ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಮತ್ತು ಸರ್ಕಾರಿ ಆಸ್ಪತೆಗಳು, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣಗಳಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಮಾಹಿತಿಯನ್ನು ಹರಿಹರ ಪೌರಾಯುಕ್ತರಿಗೆ ನೀಡಲು ತಿಳಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖರೀದಿಸಿದ ಸಾಮಾಗ್ರಿಗಳ ಬಿಲ್ಲಿನ ದಿನಾಂಕಕ್ಕೂ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಇರುವ ವ್ಯತ್ಯಾಸಕ್ಕೆ ಸ್ಪಷ್ಟನೆ ಕೋರಿ 3 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ಕರ್ತವ್ಯ ಲೋಪ ಎಸಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಕೆ.ಎ.ಓಬಳೇಶ್ ದೂರು ನೀಡಿದ್ದಾರೆ.

ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21 ರಿಂದ 2024-25ನೇ ಸಾಲಿನ ಅವಧಿಯ ದಾಸ್ತಾನು ವಹಿಯನ್ನು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಪಡೆದು ಪರಿಶಿಲನೆ ಮಾಡಿದಾಗ ಸಾಮಾಗ್ರಿಗಳು ಖರೀದಿ ದಿನಾಂಕ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಸಾಕಷ್ಟು ವ್ಯತ್ಯಾಸ ಕಂಡು ಬಂದಿದ್ದು, ಈ ಬಗ್ಗೆ ಸ್ಪಷ್ಟತೆ ನೀಡುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯವರಿಗೆ ಅರ್ಜಿ ಸಲ್ಲಿಸಿರುತ್ತಾರೆ. ನಿಗದಿತ ಅವಧಿಯಲ್ಲಿ ಯಾವುದೇ ಸ್ಪಷ್ಟನೆ ನೀಡದ ಕಾರಣ ಜ್ಞಾಪನವನ್ನು ನೀಡಲಾಗಿತ್ತು. ಜ್ಞಾಪನ ಪತ್ರ ನೀಡಿ ನಿಗದಿತ ಅವಧಿ ಮುಕ್ತಾಯವಾದರೂ ಯಾವುದೇ ಸ್ಪಷ್ಟನೆ ನೀಡದೆ ನಿರ್ಲಕ್ಷö್ಯ ತೋರಿದ ರೇಣುಕಾ ದೇವಿಯವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending