ದಿನದ ಸುದ್ದಿ

ಕನ್ನಡ ವಿವಿ ಅಭಿವೃದ್ಧಿಗೆ ಡಿಎಂಎಫ್‍ನಿಂದ 10 ಕೋಟಿ ರೂ:ಡಿಸಿಎಂ ಡಾ.ಅಶ್ವತ್ ನಾರಾಯಣ

Published

on

ಸುದ್ದಿದಿನ,ಬಳ್ಳಾರಿ: ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿನ ಮೂಲಸೌಕರ್ಯಗಳ ಅಭಿವೃದ್ಧಿಗೆ ಜಿಲ್ಲಾ ಖನಿಜ ನಿಧಿಯಿಂದ 10 ಕೋಟಿ ರೂ.ಒದಗಿಸಲಾಗುತ್ತಿದೆ. ಇದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಅವರು ಸಮ್ಮತಿಸಿದ್ದಾರೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದರು.

ಹಂಪಿ ಕನ್ನಡ ವಿಶ್ವ ವಿದ್ಯಾಲಯದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಂಗೀತ ವಿಭಾಗದ ಕಟ್ಟಡವನ್ನು ಮಂಗಳವಾರ ಉದ್ಘಾಟಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಡಿಎಂಎಫ್ ನಿಂದ ಲಭ್ಯವಾಗುವ 10 ಕೋಟಿ ರೂ.ಗಳಲ್ಲಿ ವಿಶ್ವವಿದ್ಯಾಲಯವು ಬೇಸಿಗೆ ಸಂದರ್ಭದಲ್ಲಿ ಎದುರಿಸುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಮತ್ತು ವಿವಿಯ 750 ಎಕರೆ ವಿಶಾಲವಾದ ವ್ಯಾಪ್ತಿಗೆ ಕಂಪೌಂಡ್ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.

ಕನ್ನಡ ವಿವಿಗೆ ಎಲ್ಲ ರೀತಿಯಿಂದಲೂ ಸಮೃದ್ಧವಾಗುವ ನಿಟ್ಟಿನಲ್ಲಿ ಅಗತ್ಯಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ ಅವರು ಹಂಪಿ ವಿವಿಯ ಭೋದಕೇತರ ಸಿಬ್ಬಂದಿಗೆ ಕಳೆದ ಹಲವು ತಿಂಗಳಿಂದ ವೇತನದ ಸಮಸ್ಯೆ ಇರುವುದನ್ನು ಗಮನಕ್ಕೆ ಬಂದಿದ್ದು, ಅದನ್ನು ಆದಷ್ಟು ಶೀಘ್ರ ಬಗೆಹರಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಇದೇ ತಿಂಗಳ 17 ರಿಂದ ಉನ್ನತ ಶಿಕ್ಷಣ ಕಾಲೇಜುಗಳ ಆರಂಭಕ್ಕೆ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಕಾಲೇಜಿಗೆ ಬರುವ ವಿದ್ಯಾರ್ಥಿಗಳು ಪೆÇೀಷಕರಿಂದ ನಿರಾಪೇಕ್ಷಣ ಪತ್ರ ಮತ್ತು ಕೋವಿಡ್ ಪರೀಕ್ಷೆ ಮಾಡಿಕೊಂಡು ಸೋಂಕು ರಹಿತರೆಂಬ ಪ್ರಮಾಣ ಪತ್ರ ತೆಗೆದುಕೊಂಡು ಬರಬೇಕು. ಕೋವಿಡ್ ಪರೀಕ್ಷೆಯನ್ನು ವಿದ್ಯಾರ್ಥಿಗಳಿಗೆ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಮಾಡಲಾಗುತ್ತದೆ ಎಂದರು.

ನಮ್ಮ ಇಲಾಖೆಯಲ್ಲಿ ವಿವಿಗಳ ಉಪ ಕುಲಪತಿಗಳ ನೇಮಕದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆದಿಲ್ಲ, ಎಲ್ಲವೂ ಪಾರದರ್ಶಕವಾಗಿ ನಡೆದಿದೆ. ಪ್ರೊ.ಅಶೋಕ್ ಕುಮಾರ್ ಆತ್ಯಹತ್ಯೆ ಕುರಿತು ಕೆಪಿಸಿಸಿ ಅಧ್ಯಕ್ಷರು ಮಾಡಿರುವ ಆರೋಪ ನಿರಾಧಾರವಾದುದು ಎಂದರು.

ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್, ಕುಲಪತಿ ಡಾ.ಸ.ಚಿ.ರಮೇಶ ಮತ್ತಿತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version