ದಿನದ ಸುದ್ದಿ

ಸಾಂಸ್ಕೃತಿಕ ಕಾರ್ಯಕ್ರಮಗಳ ಧನಸಹಾಯಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ನಾಡಿನ ಕಲೆ, ಸಾಹಿತ್ಯ, ಸಂಗೀತ, ಜನಪದ ನೃತ್ಯ, ನಾಟಕ ಸೇರಿದಂತೆ ಇತರೆ ಕಲಾಪ್ರಕಾರಗಳನ್ನು ಉಳಿಸಿ ಬೆಳೆಸುವ ಸಲುವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ 2020-21ನೇ ಸಾಲಿನ ಸಾಮಾನ್ಯ, ವಿಶೇಷಘಟಕ ಮತ್ತು ಗಿರಿಜನ ಉಪಯೋಜನೆಯಡಿ ನೋಂದಾಯಿತ ಸಾಂಸ್ಕೃತಿಕ ಸಂಘ ಸಂಸ್ಥೆಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಧನಸಹಾಯ, ಅಸಂಘಟಿತ ತಂಡಗಳು/ಏಕವ್ಯಕ್ತಿ ಕಲಾವಿದರಿಗೆ ವಾದ್ಯಪರಿಕರ/ವೇಷಭೂಷಣ ಖರೀದಿಗೆ ಧನಸಹಾಯ, ಚಿತ್ರಕಲೆ ಮತ್ತು ಶಿಲ್ಪಕಲೆಗಳ ಏಕವ್ಯಕ್ತಿ ತಂಡದ ಕಲಾವಿದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಧನಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಈ ಮೂರು ಯೋಜನೆಗಳಿಗೆ ಧನಸಹಾಯ ನೀಡಲು ಸೇವಾಸಿಂಧು Sevasindhu.karnataka.gov.in ಮುಖಾಂತರ ನ.26 ರಿಂದ ಡಿ.27 ರವರೆಗೆ ಕಲಾವಕಾಶ ನೀಡಲಾಗಿದೆ. ಮಾರ್ಗಸೂಚಿಗಳನ್ನು ಸೇವಾಸಿಂಧು ಪೋರ್ಟಲ್ ಹಾಗೂ ಇಲಾಖೆಯ ವೆಬ್‍ಸೈಟ್
www.kannadasiri.karnataka.gov.in ವೀಕ್ಷಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂ.ಸಂ: 080-222308282/080-22279954 ನ್ನು ಸಂಪರ್ಕಿಸಬಹುದೆಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version