ದಿನದ ಸುದ್ದಿ
‘ದಾದಾಸಾಹೇಬ್ ಕಾನ್ಸಿರಾಂ ಜೀ’ ನುಡಿಮುತ್ತುಗಳು : ಮಿಸ್ ಮಾಡ್ದೆ ಓದಿ
ಭಾರತದ ಬಹುಜನ ರಾಜಕಾರಣ ಕಟ್ಟಿ ಯಶಸ್ವಿಯಾದ ರಾಜಕೀಯ ಸಾಮಾಜಿಕ ವಿಜ್ಞಾನಿ ‘ದಾದಾಸಾಹೇಬ್ ಕಾನ್ಸಿರಾಂ ಜೀ’ ಅವರನ್ನು ‘ಪೊಲಿಟಿಕಲ್ ಲೆಜೆಂಡ್ ಆಫ್ ಇಂಡಿಯಾ’ ಎಂದು ಕರೆಯಲಾಗುತ್ತದೆ. ರಾಜಕಾರಣ ಎಂದರೆ ನಮಗೆ ಬೇಡವೇ ಬೇಡ ಎನ್ನುವ ಅಸಮರ್ಥ ಅಸಹಾಯಕ ಸಮುದಾಯದ ಎದೆಯೊಳಗೆ ಅರಸೊತ್ತಿಗೆಯ ಕನಸು ಬಿತ್ತಿದ ಮಹಾನ್ ಚೇತನ ಕಾನ್ಸಿರಾಮ್ ಜಿ. ಅವರ ಕೆಲವು ನುಡಿಮುತ್ತುಗಳು ಹೀಗಿವೆ.
ದಾದಾಸಾಹೇಬ್ ಕಾನ್ಸಿರಾಂ ಜೀ ನುಡಿಮುತ್ತುಗಳು
- “ದಲಿತರು ಸಹ ದೊರೆಗಳಾಗಲೇಬೇಕು ಅದು ಸರಳ ನಿಮ್ಮಗಳ ಕೈಗಳನ್ನು ಕೆಳಗೆ ಮಾಡಿ ಬೇಡುವ ಬದಲಾಗಿ ಕೈಗಳನ್ನು ಮೇಲೆ ಮಾಡಿ ನೀಡುವ ಕೈಗಳಾಗಿ ಪರಿವರ್ತನೆ ಮಾಡಿಕೊಳ್ಳುವ ಮುಖೇನ ಆಳುವ ನೀಡುವ ವರ್ಗವಾಗಿ ನಿಲ್ಲಬೇಕು.
- “ಗುಲಾಮ ಸಮಾಜವನ್ನು, ಆಳುವ ಸಮಾಜವನ್ನಾಗಿಮಾಡುವುದೇ ನನ್ನ ಗುರಿ”.
- “ಯಾವ ಸಮುದಾಯಕ್ಕೆ ಪುಕ್ಕಟೆ ತಿನ್ನುವ ಅಭ್ಯಾಸ ಆಗಿದಿಯೋ ಆ ಜಾತಿ ಎಂದು ಬದಲಾವಣೆ ಬಯಸಲಾರದು ಮತ್ತು ಕ್ರಾಂತಿ ಮಾಡಲಾರದು.ಯಾವ ಸಮುದಾಯ ಕ್ರಾಂತಿ ಮಾಡುವುದಿಲ್ಲವೊ ಆ ಸಮುದಾಯ ಎಂದು ದೇಶ ಆಳಲಾರದು.ಯಾವ ಸಮುದಾಯ ದೇಶ ಆಳುವುದಿಲ್ಲವೋ ಅವರ ಮೇಲೆ ದೌರ್ಜನ್ಯ, ದಬ್ಬಾಳಿಕೆ, ಮತ್ತು ಹೆಣ್ಣುಮಕ್ಕಳು ಸುರಕ್ಷಿತರಾಗಿ ಇರಲಾರರು ಮತ್ತು ಅವರೆಂದೂ ನ್ಯಾಯ ಪಡೆಯಲಾರರು”.
- “ನನಗೆ ದಲಿತ ಚಳುವಳಿಯಲ್ಲಿ ಆಸಕ್ತಿ ಇಲ್ಲ, ರಾಜ್ಯಾಧಿಕಾರದ ಹೋರಾಟದಲ್ಲಿ ಅತೀವವಾದ ಆಸಕ್ತಿಯಿದೆ.
- ನಾವು ಜಾತಿಯನ್ನು ಅಲಕ್ಷ್ಯಿಸಲಿಲ್ಲ. ಜಾತಿಯನ್ನು ಗಣನೆಗೆ ತೆಗೆದುಕೊಂಡು, ಅದನ್ನು ಲಾಭಕರವಾಗಿ ನಿಭಾಯಿಸಲು ಕಲೆತವು.
- ಚಳುವಳಿಯನ್ನು ಮುನ್ನಡೆಸದಿರುವುದು ಹೇಗೆ ಎಂಬುದನ್ನು ತಿಳಿಯದು ಹೊರತು,ಚಳುವಳಿಯನ್ನು ಮುನ್ನೆಡೆಸುವುದು ಹೇಗೆ ಎಂಬುದನ್ನು ತಿಳಿಯಲು ಸಾದ್ಯವಿಲ್ಲ.
- ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
ಸುದ್ದಿದಿನ,ದಾವಣಗೆರೆ:ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್ ಸೇರಿದಂತೆ ವಿವಿಧ ಅಂಚೆ ಸೇವೆಗಳನ್ನು ಮನೆಯಿಂದಲೇ ಬುಕ್ ಮಾಡುವ ಅವಕಾಶವನ್ನು ಪಡೆಯಬಹುದು. ಇದರ ಮೂಲಕ ಅಂಚೆ ಕಚೇರಿಯಲ್ಲಿ ಸಾಲಿನಲ್ಲಿ ನಿಲುವ ಅನಿವಾರ್ಯತೆ ಕಡಿಮೆಯಾಗುತ್ತದೆ ಹಾಗೂ ಸಮಯದ ಉಳಿತಾಯವಾಗುತ್ತದೆ.
ಸೇವೆಯನ್ನು ಈ ಮೂಲಕ https://app.indiapost.gov.in/customer.selfservice/home ಪೂರ್ಣಗೊಳಿಸಿದ ನಂತರ ಸೃಷ್ಟಿಯಾಗುವ ಲೇಬಲ್, ಕ್ಯೂಆರ್ ಅನ್ನು ಮುದ್ರಿಸಿ ಹತ್ತಿರದ ಯಾವುದೇ ಅಂಚೆ ಕಚೇರಿಯಲ್ಲಿ ಸ್ಪೀಡ್ ಫೆÇೀಸ್ಟ್, ಪಾರ್ಸೆಲ್ ಅನ್ನು ಬುಕ್ಕಿಂಗ್ ಸಂಖ್ಯೆಯ ಮೂಲಕ ಹಸ್ತಾಂತರಿಸಬಹುದು. ಸಾರ್ವಜನಿಕರು ಈ ನವೀನ ಡಿಜಿಟಲ್ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಡಿಸೆಂಬರ್ 26 ಕೊನೆಯ ದಿನವಾಗಿದೆ.
ವಿಶೇಷ ಘಟಕ ಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸುವುದು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಪದವಿಯ ಎಲ್ಲ ವರ್ಷಗಳ ಅಂಕಪಟ್ಟಿಗಳು, ಸ್ನಾತ್ತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂಗಳ ಶಿಷ್ಯ ವೇತನ ನೀಡಲಾಗುವುದು. ತರಬೇತಿಯು 2026 ರ ಜನವರಿಯಿಂದ ಡಿಸೆಂಬರ್‍ವರೆಗೆ 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸಲು ಯಾವುದೇ ಅವಕಾಶ ಇರುವುದಿಲ್ಲ.
ತರಬೇತಿಯ ಅವಧಿಯಲ್ಲಿ ತರಬೇತಾರ್ಥಿಗಳು ಬೇರೆ ಉದ್ಯೋಗ ಮಾಡುವಂತಿಲ್ಲ. ತರಬೇತಿಯ ಅವಧಿಯ ಮಧ್ಯದಲ್ಲಿ ಬಿಟ್ಟು ಹೋದರೆ, ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದಿರುಗಿಸುವುದಿಲ್ಲ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.
ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇಲ್ಲಿ, ಮೊ.9480841218 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ
-
ದಿನದ ಸುದ್ದಿ7 days agoದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ
-
ದಿನದ ಸುದ್ದಿ4 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ3 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ2 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ19 hours agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ12 hours agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

