Connect with us

ದಿನದ ಸುದ್ದಿ

ಮೋದಿ ‘ಸರ್ಜಿಕಲ್ ಸ್ಟ್ರೈಕ್’ ಅನ್ನು ಬಡತನ, ನಿರುದ್ಯೋಗದ ವಿರುದ್ಧ ಮಾಡಬೇಕಿತ್ತು : ಕಪಿಲ್ ಸಿಬಲ್ ಕಿಡಿ

Published

on

ಸುದ್ದಿದಿನ, ಬೆಂಗಳೂರು : ನರೇಂದ್ರ ಮೋದಿಯವರು ಸರ್ಜಿಕಲ್ ಸ್ಟ್ರೈಕ್ ಬಡತನದ ವಿರುದ್ಧ ಮಾಡಬೇಕಿತ್ತು. ನಿರುದ್ಯೋಗ ಸಮಸ್ಯೆ ವಿರುದ್ಧ ಮಾಡಬೇಕಿತ್ತು. ನಮ್ಮದೇ ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿವೆ ಅವುಗಳ ಬಗ್ಗೆ ಚಿಂತಿಸಲು ಅವರಿಗೆ ಸಮಯವಿಲ್ಲ.‌ ಆದರೆ ಕೇವಲ ಪಾಕಿಸ್ತಾನದ ಬಗ್ಗೆ ಮಾತನಾಡುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದರು.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ದೇಶದ ಅಭಿವೃದ್ಧಿ ದೃಷ್ಟಿಯಿಂದ ಅರ್ಥ ಶಾಸ್ತ್ರಜ್ಞರ ಸಲಹೆ ಸೂಚನೆ ಮೇರೆಗೆ ಸಿದ್ಧಪಡಿಸಲಾಗಿದ್ದು ಯುಪಿಎ ಅವಧಿಯಲ್ಲಿ ಹಲವು ಖಾತೆಗಳನ್ನು ನಿಭಾಯಿಸಿದ ಕಪಿಲ್ ಸಿಬಲ್ ಅವರು ಪ್ರಣಾಳಿಕೆಯನ್ನು ಪ್ರಸ್ತುತ ಪಡಿಸಿ ಮಾತನಾಡಿದರು.

ಮೋದಿ ಸರ್ಕಾರದ ಕೆಟ್ಟ ಆರ್ಥಿಕ ಕ್ರಮಗಳಿಂದಾಗಿ ಇಂದು ದೇಶವು ನ್ಯಾಯ ಪಥದಿಂದ ಅನ್ಯಾಯದ ಪಥದ ಕಡೆಗೆ ಸಾಗಿದೆ. ಅಚ್ಚೇದಿನ್ ತರುವುದು, 15 ಲಕ್ಷ ನೀಡುವುದು, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಮೋದಿಯವರ ಭರವಸೆಯು ಸುಳ್ಳಿಗೆ ನೀಡಬಹುದಾದ ಉದಾಹರಣೆಯಾಗಿ ಮಾರ್ಪಾಡಾಗಿವೆ.ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಗುಂಪು ಹಲ್ಲೆ, ದಲಿತರ ಮೇಲಿನ ದೌರ್ಜನ್ಯ ದಂತಹ ಘಟನೆಗಳು, ಆಂತರಿಕ ಭದ್ರತೆಯು ಆತಂಕಕಾರಿ ಸ್ಥಿತಿ ತಲುಪಿದೆ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಸ್ಥಿತಿಯನ್ನು ಕಾಂಗ್ರೆಸ್ ಬದಲಾಯಿಸಿ, ಸಾಮಾಜಿಕ ನ್ಯಾಯವನ್ನ ಎತ್ತಿ ಹಿಡಿಯಲಿದೆ. ಕಾಂಗ್ರೆಸ್ಸಿನ ನ್ಯಾಯ ಯೋಜನೆಯನ್ನು ಅತ್ಯಂತ ಯೋಜಿತವಾಗಿ ರೂಪಿಸಲಾಗಿದೆ.ಇದಕ್ಕಾಗಿ ಪೂರಕವಾಗ ಆರ್ಥಿಕ ಸ್ಥಿತಿಯನ್ನು ಅದ್ಯಯನ ಮಾಡಿ, ಅದರ ಸಾದಕ ಬಾದಕಗಳನ್ನ ಚರ್ಚಿಸಿ ಆ ಬಳಿಕ ಈ ಯೋಜನೆಯನ್ನು ಘೋಷಿಸಲಾಗಿದೆ. ಈ ಯೋಜನೆಯನ್ನು ನಾವು ನಿಶ್ಚಿತವಾಗಿ ಜಾರಿಗೆ ತರುತ್ತೇವೆ ಎಂದರು.

ಉದ್ಯೋಗ ಸೃಷ್ಟಿಸಲು ಸಂಪೂರ್ಣವಾಗಿ ವಿಫಲವಾಗಿರುವ ಮೋದಿ ಸರ್ಕಾರವು ಯುವಕರಿಗೆ ನೀಡಿದ ಭರವಸೆಯನ್ನು ಈಡೇರಿಸಿದೆ ಅವರನ್ನು ವಂಚಿಸಿದೆ. ಕಾಂಗ್ರೆಸ್ ಪ್ರಣಾಳಿಕೆಯು ಉದ್ಯೋಗ ಸಮಸ್ಯೆಯ ಗಂಭೀರತೆ ಅರಿತಿದ್ದು ಸಣ್ಣ, ಮಧ್ಯಮ ಪ್ರಮಾಣದ ಕೈಗಾರಿಕೆಗಳನ್ನು ಅಭಿವೃದ್ಧಿ ಪಡಿಸಿ ಉದ್ಯೋಗ ಸಮಸ್ಯೆಗೆ ಪರಿಹಾರ ನೀಡಲಿದೆ‌ ಎಂದರು

ಶ್ರೀಮಂತರು ಶ್ರೀಮಂತರಾಗಿ ಇರುವ, ಬಡವರು ಬಡವರಾಗಿ ಉಳಿಯುವ ವ್ಯವಸ್ಥೆಯನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ. 70 ರಿಂದ 80 ಕೋಟಿ ಜನರು 10000ರೂಕ್ಕಿಂತ ಕಡಿಮೆ ಆದಾಯ‌ ಇರುವ ಜನರು ಇದ್ದಾರೆ. ಇವರ ಆರ್ಥಿಕ ಸ್ಥಿತಿ ಸುಧಾರಿಸಲು‌ ಮೋದಿ ಸರ್ಕಾರ ಯಾವುದೇ ಕಾರ್ಯಕ್ರಮಗಳನ್ನು ಮಾಡಲಿಲ್ಲ
ಕಾಂಗ್ರೆಸ್ ಈ ಅಂತರವನ್ನು ಸರಿ ಮಾಡುತ್ತದೆ.ಕಾಂಗ್ರೆಸ್ ಈ ಹಿಂದೆ ಶಿಕ್ಷಣದ ಕಡ್ಡಾಯ ಹಕ್ಕನ್ನು ಜಾರಿಗೊಳಿಸಿತು. ಇನ್ನು ಮುಂದೆಯೂ 12 ನೇ ತರಗತಿಯವರೆಗೆ ಉಚಿತ ಶಿಕ್ಷಣವನ್ನು ನೀಡುವ ಬದ್ಧತೆಯನ್ನು ಕಾಂಗ್ರೆಸ್ ಪಕ್ಷವು ಹೊಂದಿದೆ.‌ ಶಿಕ್ಷಣದ ಮೇಲಿನ ಅನುದಾನವನ್ನು 6% ಜಿಡಿಪಿಗೆ ಹೆಚ್ಚಿಸುವ ಮೂಲಕ ಶಿಕ್ಷಣದ ಮೇಲಿನ ವೆಚ್ಚವನ್ನು ಕಡಿಮೆ ಮಾಡಲಿದ್ದೇವೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ಹುದ್ದೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ಕುರಿತು ಕಾಂಗ್ರೆಸ್ ಪಕ್ಷವು ಚಿಂತಿಸಿದ್ದು ಇದು ಭಾರತದ ಇತಿಹಾಸದಲ್ಲೇ ಮಹತ್ವದ ಬೆಳವಣಿಗೆ ಆಗಿದೆ.ನ್ಯಾಯಾಂಗ ವ್ಯವಸ್ಥೆಯನ್ನು ಬಲ ಪಡಿಸಲು ಇನ್ನಷ್ಟು ನ್ಯಾಯಾಧೀಶರನ್ನು ನೇಮಕ ಮಾಡಿ 6 ಪ್ರಾಂತೀಯ ಕೋರ್ಟ್ ಗಳನ್ನು ಸ್ಥಾಪಿಸಿ ಅನ್ಯಾಯಕ್ಕೆ ಒಳಗಾದವರಿಗೆ ಶೀಘ್ರ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. GST ಸಮಿತಿಯನ್ನು ರಚಿಸಿ ಎಲ್ಲರಿಗೂ ಅನುಕೂಲವಾಗುವಂತೆ ಅದನ್ನು ಸರಳೀಕರಿಸಲಾಗುವುದು. ಮೋದಿಯವರು GST, MGNREGA ಹಾಗೂ ಇನ್ನೂ ಹಲವಾರು ಕಾಂಗ್ರೆಸ್ ಯೋಜನೆಗಳ ಜಾರಿಗೆ ವಿರೋಧಿಸಿದ್ದು ನಂತರದಲ್ಲಿ ತಾವೇ ಅದನ್ನು ಲೋಪಭರಿತ ಅನುಷ್ಠಾನದಿಂದ ಜನತೆಗೆ ತೊಂದರೆ ನೀಡಿದರು ಎಂದು ನುಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ ನಡೆಸಿದರು.

ನಗರದ ಬಾರ್ ಲೈನ್ ದರ್ಗಕ್ಕೆ ತೆರಳಿ ಚಾದರ ಅರ್ಪಿಸಿದ ಸಮರ್ಥ ಶಾಮನೂರು ಅವರಿಗೆ ಮುಸ್ಲಿಂ ಸಮಾಜದ ಬಾಂಧವರು ಆತ್ಮೀಯವಾಗಿ ಸನ್ಮಾನಿಸಿದರು. ಬಳಿಕ ಅಲ್ಲಿಂದ ಪ್ರಚಾರವನ್ನು ಆರಂಭಿಸಿದ ಅವರು ಎಂ.ಬಿ ಕೇರಿ, ಮಟನ್ ಮಾರ್ಕೇಟ್, ಗಡಿಯಾರ ಕಂಬ, ಸ್ವಾಗೇರ್ ಪೇಟೆ, ಹೊಂಡದ ರಸ್ತೆ, ಕಾಯಿಪೇಟೆಯ ಮನೆ ಮನೆಗೆ ತೆರಳಿ ಮತಯಾಚಿಸಿದರು.

ಕಾಂಗ್ರೆಸ್ ಪಕ್ಷದ ಮುಖಂಡರಾದ ನರಸಿಂಹಪ್ಪ, ರವಿಕುಮಾರ್, ಕಾಶಿನಾಥ್ ಅವರ ಮನೆಗೆ ಅಭ್ಯರ್ಥಿ ಸಮರ್ಥ ಶಾಮನುರು ಅವರು ಭೇಟಿ ನೀಡಿದಾಕ್ಷಣ ಕುಟುಂಬಸ್ಥರು ದಿವಂಗತರಾದ ಡಾ.ಶಾಮನೂರು ಶಿವಶಂಕರಪ್ಪ ಅವರನ್ನು ನೆನೆದು ಭಾವುಕರಾದರು. ಶಾಮನೂರು ಸಮರ್ಥ ಅವರಿಗೆ ದಕ್ಷಿಣ ಕ್ಷೇತ್ರದಲ್ಲಿ ಪ್ರಚಂಡ ಬಹುಮತವನ್ನು ನೀಡಿ ಗೆಲ್ಲಿಸುತ್ತೇವೆ ಎಂದು ಮತದಾರರು ಅಭಿಪ್ರಾಯ ವ್ಯಕ್ತಪಡಿಸಿದರು.

ಸ್ಥಳೀಯ ಮುಖಂಡರಾದ ಚಂದ್ರ ಶೇಖರ್, ಸೋಗಿ ಶಾಂತಕುಮಾರ್, ಪ್ರವೀಣ್ ರಾವ್, ಬಕ್ಕೇಶ್, ಪರಮೇಶ್, ಜಯರಾಜ್, ಹನುಮಂತ್, ರಾಘವೇಂದ್ರ, ಭೀಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

Published

on

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ದಾವಣಗೆರೆ ಜಿಲ್ಲಾ ವರದಿಗಾರರ ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸೋಮವಾರ ಮಧ್ಯಾಹ್ನ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಜಾರಿಗೆ ತರಲು ಹೊರಟಿರುವ ಕರ್ನಾಟಕ ಜಾಹೀರಾತು ನೀತಿ-2026 ಜಿಲ್ಲಾ‌ ಮಟ್ಟದ ಮತ್ತು ಪ್ರಾದೇಶಿಕ ಮಟ್ಟದ ಪತ್ರಿಕೆಗಳಿಗೆ ಮಾರಕವಾಗಿದ್ದು,ಇದರಿಂದ ಶತಶತಮಾನಗಳಿಂದ ಸಮಾಜದ ಮತ್ತು ಸರ್ಕಾರದ ಕೊಂಡಿಯಾಗಿ ಸೇವೆ ಮಾಡುತ್ತಿರುವ ಪತ್ರಿಕೆಗಳು ಮುಚ್ಚುತ್ತವೆ‌. ಯಾವುದೇ ಕಾರಣಕ್ಕೂ ಪತ್ರಿಕೆಗಳಿಗೆ ಮಾರಕವಾಗುವ ನಿಯಮಗಳನ್ನು ಅಳವಡಿಸದೇ ಪತ್ರಿಕೆಗಳ ಏಳಿಗೆಗೆ ಪೂರಕವಾದ ಅಂಶಗಳನ್ನು ಸೇರಿಸಿ ಕರ್ನಾಟಕ ಜಾಹೀರಾತು ನೀತಿಯನ್ನು ಜಾರಿಗೆ ತರಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ , ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಂಘಗಳ ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಜಾಹೀರಾತು ನೀತಿ ಪರಿಶೀಲಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ.ತಿಪ್ಪೇಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷರಾದ ಸುರೇಶ್ ಆರ್ ಕುಣೆಬೆಳಕೆರೆ, ಖಜಾಂಜಿ ಶಿವಮೂರ್ತಿ ಟಿ.ಜಿ , ರಾಜ್ಯ ಸಂಘದ ನಾಮನಿರ್ದೇಶನ ಸದಸ್ಯ ಕೆ.ಜೈಮುನಿ ಮತ್ತು
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಅಧ್ಯಕರಾದ ಇ.ಎಂ.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಬದ್ರಿನಾಥ್, ಖಜಾಂಚಿ ಜೆ.ಎಸ್.ವೀರೇಶ್ ಹಾಗೂ ದಾವಣಗೆರೆ ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷರಾದ ನಾಗರಾಜ ಬಡದಾಳ್ , ಹಿರಿಯ ಪತ್ರಕರ್ತರಾದ ಕೆ.ಏಕಾಂತಮ್ಮ, ಬಿ.ಎನ್.ಮಲ್ಲೇಶ್, ಮಲ್ಲಿಕಾರ್ಜುನ ಕಬ್ಬೂರು, ಆರ್.ಎಸ್.ತಿಪ್ಪೇಸ್ವಾಮಿ, ಕೊಟ್ರೇಶ್ ಅಣಬೂರುಮಠ, ನಿಂಗಪ್ಪ, ಗೋವಿಂದ ರಾಜು, ಫಕೃದ್ದೀನ್, ಆರ್.ರವಿ,ಬಿ.ವಾಸುದೇವ, ರಾಘವೇಂದ್ರ ರಾವ್, ವೇದಮೂರ್ತಿ,ನಿಂಗಪ್ಪ, ಪರಶುರಾಮ, ನಂದಕುಮಾರ್ ಮುಂತಾದವರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ದಾವಣಗೆರೆ | 18 ನೇ ವಾರ್ಡ್ ನಲ್ಲಿ ಕೈ ಅಭ್ಯರ್ಥಿ ಸಮರ್ಥ ಶಾಮನೂರು ಪ್ರಚಾರ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಮರ್ಥ್ ಶಾಮನೂರು ಅವರು ಮಂಗಳವಾರ 18 ನೇ ವಾರ್ಡ್ ವ್ಯಾಪ್ತಿಯಲ್ಲಿ ಅಬ್ಬರ ಪ್ರಚಾರ...

ದಿನದ ಸುದ್ದಿ3 days ago

ದಾವಣಗೆರೆ | ಕರ್ನಾಟಕ ಜಾಹೀರಾತು ನೀತಿಗೆ ಸಂಪಾದಕರ ವಿರೋಧ ; ಸಿಎಂಗೆ ಮನವಿ

ನೀತಿಯನ್ನು ಪರಿಶೀಲಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿದಿನ,ದಾವಣಗೆರೆ: ಕರ್ನಾಟಕ ಜಾಹೀರಾತು ನೀತಿ-2026 ರಲ್ಲಿ ಪತ್ರಿಕೆಗಳಿಗೆ ಮಾರಕವಾದ ನಿಯಮಗಳನ್ನು ಕೈಬಿಡುವಂತೆ ಕೋರಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ...

ದಿನದ ಸುದ್ದಿ2 weeks ago

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ...

ದಿನದ ಸುದ್ದಿ2 weeks ago

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು...

ದಿನದ ಸುದ್ದಿ2 weeks ago

ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ...

ದಿನದ ಸುದ್ದಿ3 weeks ago

ಸರ್ಕಾರಿ ಪ್ರಥಮ‌ ದರ್ಜೆ ಮಹಿಳಾ ಕಾಲೇಜಿನಲ್ಲಿ ಇಂಗ್ಲೀಶ್ ಪಠ್ಯಕ್ರಮ ಕಾರ್ಯಗಾರ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕರ ವೇದಿಕೆಯ (FODCET) ಸಂಯುಕ್ತ ಆಶ್ರಯದಲ್ಲಿ “ರಾಜ್ಯ ಶಿಕ್ಷಣ ನೀತಿ (S.E.P) ಇಂಗ್ಲೀಷ್...

ದಿನದ ಸುದ್ದಿ1 month ago

ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್

ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಸೋಮವಾರ(ಫೆ.23) ರಂದು ನಗರದ...

ದಿನದ ಸುದ್ದಿ1 month ago

ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ

ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ,...

ದಿನದ ಸುದ್ದಿ1 month ago

ಜನರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸುವುದು ಅಧಿಕಾರಿಗಳ ಕರ್ತವ್ಯ : ಡಾ.ಹೆಚ್.ಕೃಷ್ಣ

ಸುದ್ದಿದಿನ,ದಾವಣಗೆರೆ:ಆಹಾರ ಪಡೆಯುವುದು ಜನರ ಹಕ್ಕು, ಅದನ್ನು ಅನುಷ್ಠಾನಗೊಳಿಸುವುದು ನಮ್ಮ, ನಿಮ್ಮೆಲ್ಲರ ಕರ್ತವ್ಯ. ಅದಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ಸಹ ನಮ್ಮೆಲ್ಲರ ಜವಾಬ್ದಾರಿ. ಜನರಿಗೆ ಕೇವಲ ಆಹಾರ ಧಾನ್ಯಗಳನ್ನು...

ದಿನದ ಸುದ್ದಿ1 month ago

ದಾವಣಗೆರೆ | ಕಂದಾಯ ಹಕ್ಕು ಪತ್ರ ಮತ್ತು ಪಾವತಿ ಆಂದೋಲನ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ 298 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸಲಾಗಿದ್ದು, ಈಗಾಗಲೇ 12,000ಕ್ಕೂ ಹೆಚ್ಚು ಹಕ್ಕು ಪತ್ರಗಳನ್ನು ವಿತರಿಸಲಾಗಿದ್ದು, ಬಾಕಿ ಇರುವವರು ತಹಶೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ...

Trending