ದಿನದ ಸುದ್ದಿ
ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ
ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ ವೀರ ಯೋಧರಿಗೆ ಪ್ರಧಾನಿ ಗೌರವ ಸಮರ್ಪಣೆ ಮಾಡಲಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಶಿಂಕುನ್ ಲಾ ಸುರಂಗ ಮಾರ್ಗ ಯೋಜನೆಗೆ ವರ್ಚುವಲ್ ಮೂಲಕ ಚಾಲನೆ ನೀಡಲಿದ್ದಾರೆ.
ಈ ಯೋಜನೆಯಡಿ ನಿಮು-ಪದುಮ್-ಡಾರ್ಚಾ ರಸ್ತೆಯಿಂದ ಲೇಹ್‌ಗೆ ಎಲ್ಲಾ ಹವಾಮಾನಗಳಲ್ಲೂ ಸಂಪರ್ಕ ಕಲ್ಪಿಸಲು ಸುಮಾರು 15 ಸಾವಿರದ 800 ಅಡಿ ಎತ್ತರದಲ್ಲಿ 4.1 ಕಿಲೋಮೀಟರ್ ಉದ್ದದ ಜೋಡಿ ಸುರಂಗ ಮಾರ್ಗವನ್ನು ನಿರ್ಮಿಸಲಾಗುವುದು. ಈ ಕಾರ್ಯ ಪೂರ್ಣಗೊಂಡ ನಂತರ ವಿಶ್ವದಲ್ಲೇ ಇದು ಅತಿ ಎತ್ತರದ ಸುರಂಗ ಮಾರ್ಗವಾಗಲಿದೆ. ಸಶಸ್ತ್ರ ಪಡೆಗಳ ಸುಗಮ ಪ್ರಯಾಣಕ್ಕಷ್ಟೇ ಅಲ್ಲದೇ ಲಡಾಕ್‌ನಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೂ ಈ ಸುರಂಗ ಮಾರ್ಗವು ಸಹಕಾರಿಯಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243