ದಿನದ ಸುದ್ದಿ
ತೆಲಂಗಾಣಕ್ಕೆ ನಾರಾಯಣಪುರ ಜಲಾಶಯದಿಂದ ನೀರು ಬಿಡಲು ಕರ್ನಾಟಕ ಒಪ್ಪಿಗೆ
ಸುದ್ದಿದಿನ, ಬೆಂಗಳೂರು : ಕರ್ನಾಟಕದ ನಾರಾಯಣಪುರ ಜಲಾಶಯದಿಂದ ತೆಲಂಗಾಣದ ನಗರ ಪ್ರದೇಶಗಳಿಗೆ 2.50 ಟಿಎಂಸಿ ನೀರು ಬಿಡಲು ಕರ್ನಾಟಕ ಸರ್ಕಾರ ಒಪ್ಪಿಗೆ ಸೂಚಿಸಿದೆ. ತೆಲಂಗಾಣ ನಗರದ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವವಿದ್ದ ಕಾರಣ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಮುಖ್ಯಮಂತ್ರಿ ಕುಮಾರ ಸ್ವಾಮಿಯವರಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ನೀರು ಬಿಡಲು ಒಪ್ಪಿಗೆ ನೀಡಿದ್ದಾರೆ.
ಕರ್ನಾಟಕದಿಂದ ಹೋಗುವ ನೀರನ್ನು ತೆಲಂಗಾಣದ ಜುರಲಾ ಜಲಾಶಯಕ್ಕೆ ಬಿಡಲಾಗುತ್ತದೆ. ನಂತರ ಮೆಹಬೂಬ್ ನಗರ್ ಮೂಲಕ ಅಲ್ಲಿನ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರಿನ ಸರಬರಾಜು ಮಾಡಲಾಗುವುದು ಎಂದು ತೆಲಂಗಾಣ ಸರ್ಕಾರ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243