ರಾಜಕೀಯ

ಸಿದ್ದು ಬಜೆಟ್ ನೆನಪಿಸಿಕೊಂಡ ಅಭಿಮಾನಿಗಳು

Published

on

ಸುದ್ದಿದಿನ ಡೆಸ್ಕ್: ಸದ್ಯ ಮುಖ್ಯಮಂತ್ರಿ ಕುಮಾರಸ್ವಾಮಿ ಮಂಡಿಸಿದ ರಾಜ್ಯ ಬಜೆಟ್ ಕುರಿತು ಹಲವು ಚರ್ಚೆಗಳು ಶುರುವಾಗಿವೆ‌. ಈ ಭಾರಿ ಬಜೆಟ್ ನಲ್ಲಿ ರಾಜ್ಯದ ಹಲವು ಭಾಗಗಳನ್ನು ಕಡೆಗಣಿಸಲಾಗಿದೆ ಎಂದು ಬಿಜೆಪಿ ನಾಯಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ ಗುರುವಾರ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ತಮ್ಮ ಬಜೆಟ್ ಅನ್ನು ಸಮರ್ಥಿಸಿಕೊಂಡಿದ್ದಾರೆ.

ಸಿದ್ದು ಬಜೆಟ್ ನೆನಪಿಸಿಕೊಂಡ ಅಭಿಮಾನಿಗಳು !

ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅಭಿಮಾನಿಗಳು ಕೂಡ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬಜೆಟ್ ಬಗ್ಗೆ ಟೀಕೆ ವ್ಯಕ್ತಪಡಿಸಿದ್ದು, ಇದು ಸಾಮಾಜಿಕ ನ್ಯಾಯದ ಪರವಾಗಿಲ್ಲ ಎಂದು ದೂರಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣ ಫೇಸ್‌ಬುಕ್‌, ಟ್ವಿಟರ್ ಗಳಲ್ಲಿ ಸಿದ್ದು ಪರ ಸಾವಿರಾರು ಅಭಿಮಾನಿಗಳಿದ್ದು, ತಮ್ಮ ಗ್ರೂಪ್ ಗಳಲ್ಲಿ ಈ ಹಿಂದೆ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ಗಳನ್ನು ನೆನಪು ಮಾಡಿಕೊಂಡು ಚರ್ಚಿಸುತ್ತಿದ್ದಾರೆ. ಸಾಮಾಜಿಕ ನ್ಯಾಯದ ಪರವಾಗಿ ಬಜೆಟ್ ಮಂಡಿಸುವ ಸಾಮರ್ಥ್ಯ ಸಿದ್ದರಾಮಯ್ಯ ಅವರಿಗೆ ಮಾತ್ರ ಇದೆ ಎಂದು ಗುಣಗಾನ ಮಾಡುತ್ತಿದ್ದಾರೆ. ಫೇಸ್‌ಬುಕ್‌ ನಲ್ಲಿನ‌ ಸಿದ್ದರಾಮಯ್ಯ ಬಳಗ, ಮತ್ತೊಮ್ಮೆ ಸಿದ್ದರಾಮಯ್ಯ ಸೇರಿದಂತೆ ವಿವಿಧ ಗ್ರೂಪ್ ಗಳಲ್ಲಿ ಚರ್ಚೆ ಶುರುವಾಗಿದೆ.

ಎಚ್ಡಿಕೆ ಅಭಿಮಾನಿಗಳಿಂದ ಫುಲ್ ಮಾರ್ಕ್ಸ್ !

ಸಾಲಮನ್ನಾ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜ್ಯಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ ಎಂದು ಅವರ ಅಭಿಮಾನಿಗಳು ಫುಲ್ ಮಾರ್ಕ್ಸ್ ನೀಡಿದ್ದಾರೆ. ಹಲವು ಸೋಷಿಯಲ್ ಮಿಡಿಯಾ ಗಳಲ್ಲಿ ತಮ್ಮ ನಾಯಕನ ಸಮರ್ಥನೆ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

Trending

Exit mobile version