ದಿನದ ಸುದ್ದಿ
ಕರ್ನಾಟಕ ಕಾಲೇಜಿನ ಕೌನ್ಸಲಿಂಗ್ ಬಹಿಷ್ಕರಿಸಿ ಎಚ್ಚೆತ್ತುಕೊಳ್ಳದಿದ್ದರೆ ಹೋರಾಟದ ಎಚ್ಚರಿಕೆ : ಮುತ್ತಪ್ಪ ಎಸ್ ಆಕ್ರೋಶ
ಸುದ್ದಿದಿನ,ಧಾರವಾಡ: ಕರ್ನಾಟಕ ಕಾಲೇಜಿನ ಪ್ರವೇಶ ಶುಲ್ಕದ ಹೆಸರಿನಲ್ಲಿ ವಿದ್ಯಾರ್ಥಿಗಳಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ವಿದ್ಯಾರ್ಥಿಗಳ ಸಂಘದ ರಾಜ್ಯಾಧ್ಯಕ್ಷ ಮುತ್ತಪ್ಪ ಎಸ್ ಆಕ್ರೋಶ ಹೊರ ಹಾಕಿದರು.
ಮಹಾವಿದ್ಯಾಲಯದ ಆವರಣದಲ್ಲಿ ಪ್ರತಿಭಟನಾ ನಿರತರಾಗಿ, ಕರ್ನಾಟಕ ಮಹಾವಿದ್ಯಾಲಯ ಹೆಚ್ಚುವರಿ ಶುಲ್ಕ ಹೆಸರಿನಲ್ಲಿ ಹಗಲು ದರೋಡೆ, ಎಸ್‌ಸಿ-ಎಸ್‌ಟಿ ಹಾಗೂ ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಕೋಟಾದಡಿಯಲ್ಲಿ ತುಂಬಾ ಅವ್ಯವಹಾರವಾಗಿದೆ ಎಂದು ಗಂಭೀರವಾಗಿ ಆರೋಪಿಸಿದರು.
ಬಡವರ ಮಕ್ಕಳ ವಸೂಲಿ ಮಾಡುವ ಮೂಲಕ ಕೆಸಿಡಿ ಹಗಲು ದರೋಡೆ ಮಾಡುತ್ತಿದೆ. ಸಿಬ್ಬಂದಿಯೂ ಸಹ ಸರಿಯಾದ ಸ್ಪಂದನೆ ವಿದ್ಯಾರ್ಥಿಗಳಿಗೆ ನೀಡುತ್ತಿಲ್ಲ. ನಾವು ಬಂದರೂ ನಿಖರವಾದ ಪ್ರವೇಶಾತಿಗಳ ಮಾಹಿತಿ ನೀಡದೇ ಇಲ್ಲಿನ ಆಡಳಿತ ಮಂಡಳಿಯು ಕಣ್ಣಾಮುಚ್ಚಾಲೆ ಆಟ ಆಡುತ್ತಿದೆ.
ಈ ಸಮಸ್ಯೆ ಬಗೆಹರಿದು ರೋಸ್ಟರ್ ಪದ್ಧತಿಯ ಅನುಸರಿಸಿ ಎಸ್‌ಸಿ-ಎಸ್‌ಟಿ ಹಾಗೂ ಕಲ್ಯಾಣ ಕರ್ನಾಟಕದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡದಿದ್ದರೆ ಉಗ್ರವಾಗಿ ಬಹುಸಂಖ್ಯಾತ ವಿದ್ಯಾರ್ಥಿಗಳೊಂದಿಗೆ, ನಮ್ಮ ಸಂಘಟನೆಯ ವತಿಯಿಂದ ಕಾಲೇಜಿನ ಪ್ರಾಂಶುಪಾಲರ ಕಛೇರಿಯ ವಿರುದ್ಧ ದೊಡ್ಡ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯಾಧ್ಯಾಕ್ಷ ಮುತ್ತಪ್ಪ ಎಸ್ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಗಂಗಾಧರ್, ವಿಕ್ರಮ್, ಮಂಜು, ಮುತ್ತುರಾಜ್, ತರುಣ್ ಹಾಗೂ ಅಸಂಖ್ಯೆಯಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಇದ್ದರು.ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


