ದಿನದ ಸುದ್ದಿ

ರೈತರು ಬೆಳೆದ ತರಕಾರಿಗಳನ್ನು ಸರ್ಕಾರವೇ ಖರೀದಿಸಿ ಮಾರಾಟ ಮಾಡಲಿದೆ : ಯಡಿಯೂರಪ್ಪ

Published

on

ಸುದ್ದಿದಿನ,ಬೆಂಗಳೂರು : ರೈತರು ಬೆಳೆದ ತರಕಾರಿಗಳು ಕೋವಿಡ್ನಿಂದಾಗಿ ಬೆಲೆ‌ ಕಳೆದುಕೊಂಡಿದ್ದು ಅದನ್ನು ನಾವೇ ಕೊಂಡುಕೊಂಡು ಕೋಲ್ಡ್ ಸ್ಟೋರೇಜ್ ನಲ್ಲಿ ಇಟ್ಟು ತದ‌ನಂತರ‌ ಮಾರಾಟ ಮಾಡುವಂತೆ‌ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಗುರುವಾರ ವಿಧಾನಸೌಧದಲ್ಲಿ ಸಿಎಂ ಬಿಎಸ್‌ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಿಳಿಸಲಾಗಿದ್ದು, ಹೆಚ್ಚುದಿನ‌ ಇಡೋದಕ್ಕೆ‌ ಸಾದ್ಯವಾಗದ ತರಕಾರಿಗಳು ಹಣ್ಣುಗಳು ಸೇರಿದಂತೆ ರೈತರು‌ ಬೆಳೆಯುವ ಬೆಳೆಗಳನ್ನು ಇತರೆ ರಾಜ್ಯಗಳಿಗೆ ಮತ್ತು ಹೊರದೇಶಗಳಿಗೆ ಕಳುಹಿಸಿ‌ ಮಾರಾಟ‌‌ ಮಾಡುವಂತೆಯೂ ಸೂಚನೆ‌‌ ನೀಡಿಲಾಯಿತು.

ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯಭಾಸ್ಕರ್ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version