ದಿನದ ಸುದ್ದಿ
ಅರಣ್ಯ ಇಲಾಖೆ ಕೊಟ್ಟಿರುವ ಈ ‘ವಾಟ್ಸಾಪ್ ನಂಬರ್ ನಿಂದ ಮಾಹಿತಿ ಪಡೆಯಿರಿ’

ಸುದ್ದಿದಿನ ಡೆಸ್ಕ್ : ಕರ್ನಾಟಕ ಅರಣ್ಯ ಇಲಾಖೆಯು, ಇಲಾಖೆಯ ಬಗೆಗೆ ಸಾರ್ವಜನಿಕರಿಗೆ ಮಾಹಿತಿಕೊಡಲು ವಾಟ್ಸಾಪ್ ನಂಬರ್ ಒಂದನ್ನು ನೀಡಿದ್ದು, ಸಾರ್ವಜನಿಕರು ಮಾಹಿತಿ ಪಡೆಯ ಬಹುದು ಹಾಗೂ ಮಾಹಿತಿಯನ್ನು ಕೊಡಬಹುದಾಗಿದೆ. ಅರಣ್ಯ ಇಲಾಖೆಯ ಈ ಯೋಜನೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
ಕರ್ನಾಟಕ ಅರಣ್ಯ ಇಲಾಖೆಯ ಟ್ವಿಟರ್ ಅಕೌಂಟ್ ನಲ್ಲಿ ಈ ರೀತಿಯಾಗಿ ಪೋಸ್ಟ್ ಮಾಡಲಾಗಿದ್ದು ಅದರ ಕನ್ನಡ ಅನುವಾದ ಹೀಗಿದೆ.
ಕರ್ನಾಟಕ ಅರಣ್ಯ ಇಲಾಖೆ ಟ್ವೀಟ್
“ಯಾವುದೇ ಮಾಹಿತಿ, ಪ್ರತಿಕ್ರಿಯೆ ಇತ್ಯಾದಿಗಳನ್ನು ಪಡೆಯಲು KFD ವಿಶೇಷವಾದ WhatsApp ಸಂಖ್ಯೆ 6363308040 ಅನ್ನು ಪ್ರಾರಂಭಿಸಿದೆ. ದಯವಿಟ್ಟು ಇದನ್ನು ಯಾವಾಗ ಬೇಕಾದರೂ ಬಳಸಿಕೊಂಡು ಸದುಪಯೋಗ ಪಡೆದುಕೊಳ್ಳಿ”.
ಟ್ವೀಟ್
KFD launched an exclusive WhatsApp number 6363308040 to receive any information, feedback etc. Please use it as and when required.
— Karnataka Forest Department (@aranya_kfd) December 17, 2018
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಶಿಷ್ಯವೇತನಕ್ಕೆ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 15 ಕೊನೆಯದಿನವಾಗಿರುತ್ತದೆ. ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಂಬಂಧಿಸಿದ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ www.sw.kar.nic.in ಅಥವಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ಸಂಪರ್ಕಿಸಲು ಉಪನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹಜ್ಯೋತಿ ಆಗಸ್ಟ್ 1 ರಂದು ಜಾರಿಗೆ ಸಿದ್ಧತೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನೀಡುವ ’ಗೃಹಜ್ಯೋತಿ’ ಯೋಜನೆ ಆಗಸ್ಟ್ 1 ರಂದು ಹಾಗೂ ಮನೆ ಯಜಮಾನಿಗೆ 2ಸಾವಿರ ರೂಪಾಯಿ ಅವರ ಖಾತೆಗೆ ಹಾಕುವ ’ಗೃಹ ಲಕ್ಷ್ಮಿ’ ಯೋಜನೆಗೆ ಆಗಸ್ಟ್ 17 ಅಥವಾ 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಗೃಹ ಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು ಎಂದು ಅವರು ಹೇಳಿದರು. ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಗೃಹಲಕ್ಷ್ಮಿಯ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ತೆರಿಗೆ ಪಾವತಿಸುವವರು ಹಾಗೂ ಜಿಎಸ್ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. “ಪ್ರವೇಶ ಪತ್ರ” ತೋರಿಸಿ, ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಲೈಫ್ ಸ್ಟೈಲ್5 days ago
ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!
-
ದಿನದ ಸುದ್ದಿ7 days ago
ಈ ವರ್ಷವೇ ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಚಿಂತನೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
-
ದಿನದ ಸುದ್ದಿ7 days ago
ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ರಾಜ್ಯಾದ್ಯಂತ ಕ್ರಮ
-
ದಿನದ ಸುದ್ದಿ7 days ago
ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ5 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ
-
ದಿನದ ಸುದ್ದಿ7 days ago
ದಾವಣಗೆರೆ | ಶತಮಾನದ ಕೆ.ಆರ್.ಪೇಟೆ ಸರ್ಕಾರಿ ಶಾಲೆಗೆ ಡಿಸಿ ಶಿವಾನಂದ ಕಾಪಶಿ ಭೇಟಿ ; ಕಟ್ಟಡದ ಗುಣಮಟ್ಟದ ವರದಿ ನೀಡಲು ಇಂಜಿನಿಯರ್ಗೆ ಸೂಚನೆ
-
ದಿನದ ಸುದ್ದಿ5 days ago
ಜೂನ್ 8 ರಿಂದ ಕೋಳಿ ಸಾಕಾಣಿಕೆ ತರಬೇತಿ ಶಿಬಿರ