ದಿನದ ಸುದ್ದಿ

ದಾವೋಸ್ ವಿಶ್ವ ಆರ್ಥಿಕ ಶೃಂಗದಲ್ಲಿ ಕರ್ನಾಟಕ ಹೂಡಿಕೆ ಆಕರ್ಷಣೆ ಕೇಂದ್ರ : ಡಾ. ಸಿ.ಎನ್.ಅಶ್ವತ್ಥ ನಾರಾಯಣ

Published

on

ಸುದ್ದಿದಿನ ಡೆಸ್ಕ್ : ದಾವೋಸ್ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಾಯಕತ್ವದಡಿ ಕರ್ನಾಟಕ ಜಗತ್ತಿನಾದ್ಯಂತ ಹೂಡಿಕೆಯನ್ನು ಆಕರ್ಷಿಸುತ್ತಿದೆ ಎಂದು ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಮುಂದಿನ ತಿಂಗಳು ಬೆಂಗಳೂರಿನ ನಾಗಸಂದ್ರದಲ್ಲಿ ಐಕಿಯ ಇಂಡಿಯಾ ಮಳಿಗೆ ಸ್ಥಾಪಿಸಲಿದೆ. ಇದರಿಂದ ಉದ್ಯೋಗಾವಕಾಶ ಹಾಗೂ ಆರ್ಥಿಕ ಪ್ರಗತಿಯಾಗಲಿದೆ ಎಂದು ಅವರು ಹೇಳಿದ್ದಾರೆ.

ಆಕ್ಸಿಸ್ ಬ್ಯಾಂಕ್ ಸಿಇಒ ಅಮಿತ್ ಚೌಧರಿ ಅವರೊಂದಿಗೆ ಮುಖ್ಯಮಂತ್ರಿ ಅವರೊಂದಿಗೆ ನಡೆಸಿದ ಸಭೆಯಲ್ಲಿ ಕೋವಿಡ್ ನಂತರದ ಪರಿಸ್ಥಿತಿ, ಡಿಜಿಟಲ್ ವ್ಯವಹಾರದ ಸವಾಲುಗಳು ಹಾಗೂ ರಾಜ್ಯದಲ್ಲಿ ವ್ಯವಹಾರ ವಿಸ್ತರಣೆ ಕುರಿತು ಚರ್ಚಿಸಲಾಯಿತು ಎಂದು ಸಚಿವರು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version