Connect with us

ದಿನದ ಸುದ್ದಿ

ಕರ್ನಾಟಕ ಜಾನಪದ ವಿವಿಯ ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಗೊಟಗೋಡಿ/ಶಿಗ್ಗಾಂವಿ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯವು 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಕೇಂದ್ರಸ್ಥಾನದ ಹಾಗೂ ಪ್ರಾದೇಶಿಕ ಜಾನಪದ ಅಧ್ಯಯನ ಕೇಂದ್ರಗಳಲ್ಲಿನ ಸ್ನಾತಕೋತ್ತರ ಪದವಿ/ ಸ್ನಾತಕೋತ್ತರ ಡಿಪ್ಲೊಮಾ/ಸರ್ಟಿಫಿಕೇಟ್ ಕೋರ್ಸ್‍ಗಳ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಎಂ.ಎ ಕೋರ್ಸಗಳಾದ ಜಾನಪದ ವಿಜ್ಞಾನ, ಜನಪದ ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ, ಜನಪದ ಕಲೆ, ಕನ್ನಡ- ಜಾನಪದ, ಪ್ರವಾಸೋದ್ಯಮ, ಬುಡಕಟ್ಟು ಅಧ್ಯಯನ, ಗ್ರಾಮೀಣ- ಬುಡಕಟ್ಟು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮಹಿಳಾ ಅಧ್ಯಯನ, ಇಂಗ್ಲಿಷ್ (ಜಾನಪದ ಮತ್ತು ಅನುವಾದ ಅನುಲಕ್ಷಿಸಿ) ಅರ್ಥಶಾಸ್ತ್ರ(ಗ್ರಾಮೀಣ), ಸಮಾಜಶಾಸ್ತ್ರ(ಗ್ರಾಮೀಣ) ಎಂ.ಬಿ.ಎ ಗ್ರಾಮೀಣ ಮತ್ತು ಬುಡಕಟ್ಟು ನಿರ್ವಹಣೆ, ಪ್ರವಾಸೋದ್ಯಮ ಮತ್ತು ಪ್ರವಾಸೋದ್ಯಮ ನಿರ್ವಹಣೆ, ಎಂ.ಎಸ್ಸಿ ಪಾರಂಪರಿಕ ವಿಜ್ಞಾನ ಮತ್ತು ತಂತ್ರಜ್ಞಾನ, ಎಂ.ಪಿ.ಎ ಪ್ರದರ್ಶನ ಕಲೆ, ಎಂ.ವಿ.ಎ ದೃಶ್ಯ ಕಲೆ, ಎಂ.ಎಸ್.ಡಬ್ಲ್ಯೂ ಸಮಾಜ ಕಾರ್ಯ (ಜನಪದ ಮತ್ತು ಬುಡಕಟ್ಟು ಅಭಿವೃದ್ಧಿ ಅನುಲಕ್ಷಿಸಿ) ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಬಯಸುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಯುಜಿಸಿ ಅಂಗೀಕೃತ ಯಾವುದೇ ವಿಶ್ವವಿದ್ಯಾಲಯದ ಪದವಿಯಲ್ಲಿ ಉತ್ತೀರ್ಣರಾಗಿರುವ ಹಾಗೂ ಪರೀಕ್ಷೆಗೆ ಹಾಜರಾಗಿ ಫಲಿತಾಂಶ ನಿರೀಕ್ಷಿಸುತ್ತಿರುವ ವಿದ್ಯಾರ್ಥಿಗಳು ಸಹ ಅರ್ಜಿಗಳನ್ನು ಸಲ್ಲಿಸಬಹುದು. ಆದರೆ, ಫಲಿತಾಂಶ ಪ್ರಕಟಣೆಯ ನಂತರ ಅಂಕಪಟ್ಟಿಗಳನ್ನು ಕೂಡಲೇ ಇಂಟರ್‍ನೆಟ್ ಮೂಲಕ ಪಡೆದು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸರ್ಟಿಫಿಕೇಟ್/ ಡಿಪ್ಲೊಮಾ ಕೋರ್ಸ್

ಸಮರ ಕಲೆ, ಜನಪದ ಗೀತ ಸಂಪ್ರದಾಯ, ಕಸೂತಿ ಕಲೆ, ಜನಪದ ನೃತ್ಯ, ದೊಡ್ಡಾಟ, ಪ್ರವಾಸೋದ್ಯಮ, ತೊಗಲು ಗೊಂಬೆಯಾಟ, ಬಿದರಿ ಕಲೆ, ಬೀಸು ಕಂಸಾಳೆ ಮತ್ತು ಡೊಳ್ಳು ಕುಣಿತ ಸೇರಿದಂತೆ ಸ್ನಾತಕೋತ್ತರ ಡಿಪ್ಲೊಮಾ ಕೋರ್ಸ್‍ಗಳಾದ ಜನಪದ ಮಹಾಕಾವ್ಯ, ಪಾರಂಪರಿಕ ಹೈನುಗಾರಿಕೆ, ಪಾರಂಪರಿಕ ತೋಟಗಾರಿಕೆ ಹಾಗೂ ಡಿಪ್ಲೊಮಾ ಕೋರ್ಸ್‍ಗಳಾದ ಜಾನಪದ ಬಯಲಾಟ (ಮೂಡಲಪಾಯ), ಯಕ್ಷಗಾನ ಬಯಲಾಟ, ಪಾರಂಪರಿಕ ಸೌಂದರ್ಯ ಶಾಸ್ತ್ರ, ಹಚ್ಚೆ, ಪಾರಂಪರಿಕ ಸಮರ ಕಲೆ, ಯೋಗ ಕೋರ್ಸಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಹತೆ, ಅರ್ಜಿ ನಮೂನೆ, ಪ್ರವೇಶ ಶುಲ್ಕ ಹಾಗೂ ಇತರ ಮಾಹಿತಿಗಳನ್ನು ವಿಶ್ವವಿದ್ಯಾಲಯದ ವಿವರಣಾ ಪುಸ್ತಕದಿಂದ ಪಡೆಯಬಹುದು ಅಥವಾ ವಿಶ್ವವಿದ್ಯಾಲಯದ ವೆಬ್‍ಸೈಟ್ http://www.janapadauniversity.ac.inನ್ನು ಸಂಪರ್ಕಿಸಬಹುದಾಗಿದೆ. ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮಲೆಮಹದೇಶ್ವರ ಬೆಟ್ಟ, ಬೀದರ್, ಮಂಡ್ಯ ಮತ್ತು ಜೋಯಿಡಾ ಗಳಲ್ಲಿರುವ ಪ್ರಾದೇಶಿಕ ಜನಪದ ಕಲೆಗಳ ಕಲಿಕಾ ಕೇಂದ್ರಗಳಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‍ಗಳಿಗೆ ಪ್ರವೇಶ ಬಯಸುವವರು ಸಂಬಂಧಿಸಿದ ಅಧ್ಯಯನ ಕೇಂದ್ರಗಳಿಂದಲೂ ಅರ್ಜಿ ಪಡೆದು ಭರ್ತಿ ಮಾಡಿ ದೃಢೀಕರಿಸಿದ ಪೂರಕ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ವಿಶ್ವವಿದ್ಯಾಲಯದ ಕಚೇರಿಗೆ ಭೇಟಿ ನೀಡಿ ವಿಚಾರಿಸಬಹುದು ಅಥವಾ ದೂ.ಸಂ: 6366266465, 9449233966, 9482810694 ನ್ನು ಸಂಪರ್ಕಿಸಬಹುದೆಂದು ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending