Connect with us

ದಿನದ ಸುದ್ದಿ

“ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೇ ಸಿಗಲಿ” : ಬೆಂಗಳೂರಲ್ಲಿ ಆಗಸ್ಟ್ 14-15 ರಂದು ಧರಣಿ

Published

on

ರ್ನಾಟಕದ ಉದ್ಯೋಗಗಳು ಕನ್ನಡಿಗರಿಗೇ ಸಿಗಲಿ” ಎಂದು ಒತ್ತಾಯಿಸಿ  ಅಗಸ್ಟ್ 14 ಮತ್ತು 15 ರಂದು ಬೆಂಗಳೂರಿನ ಆನಂದರಾವ್ ವೃತ್ತದ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ಉಪವಾಸ ಸತ್ಯಾಗ್ರಹ ಮತ್ತು ಅಹೋರಾತ್ರಿ ಧರಣಿಯ ಬಗ್ಗೆ ನಡೆಯಲಿದೆ.

ಕರ್ನಾಟಕದ ಯುವಜನತೆ ಎದುರಿಸುತ್ತಿರುವ ಸಮಸ್ಯೆಗಳಲ್ಲಿ ನಿರುದ್ಯೋಗ ಸಮಸ್ಯೆ ಪ್ರಮುಖವಾದುದು. ಸಾಕಷ್ಟು ಉದ್ಯೋಗ ಸೃಷ್ಟಿಯಾಗದೇ ಇರುವುದು ಒಂದೆಡೆಯಾದರೆ ಇನ್ನೊಂದೆಡೆ ಇಲ್ಲಿ ಸೃಷ್ಟಿಯಾದ ಉದ್ಯೋಗಗಳನ್ನು ಪರಭಾಷಿಕರು ಬಂದು ಕಬಳಿಸಿಕೊಳ್ಳುತ್ತಿದ್ದಾರೆ. ಹಾಗಾಗಿ ನಮ್ಮ ನೆಲದಲ್ಲಿನ ಉದ್ಯೋಗ ನಮ್ಮವರಿಗೆ ಸಿಗದಂತಾಗಿದೆ.

ರಾಜ್ಯದ ಸಂಪನ್ಮೂಲಗಳನ್ನು ಬಳಸಿಕೊಂಡು ಇಲ್ಲಿಯೇ ಬೀಡುಬಿಟ್ಟಿದ್ದರೂ ಇಲ್ಲಿನ ಬಹುರಾಷ್ತ್ರೀಯ ಕಂಪನಿಗಳು, ಬ್ಯಾಂಕುಗಳು ಮತ್ತು ಇತರ ಉದ್ಯಮಗಳು ಕನ್ನಡಿಗರಿಗೆ ಕೆಲಸ ಕೊಡಲು ಮೀನಮೇಷ ಎಣಿಸುತ್ತಿವೆ. ಹಾಗಾಗಿ ನಮ್ಮ ಕನ್ನಡಿಗರ ಅನ್ನಕ್ಕೆ ಇನ್ನಷ್ಟು ಕುತ್ತು ಬರುವುದನ್ನು ಹೇಗಾದರೂ ಮಾಡಿ ತಡೆಯಲೇಬೇಕೆಂದು ನಿರ್ಧರಿಸಿ ಈ ಹೋರಾಟ ಹಮ್ಮಿಕೊಂಡಿದ್ದೇವೆ ಎನ್ನುತ್ತಾರೆ ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷರಾದ ಬಿ.ಹರೀಶ್ ಕುಮಾರ್.

ಈ ಹೋರಾಟದ ಮತ್ತೊಬ್ಬ ಪ್ರಮುಖರಾದ ರಮಾನಂದ ಅಂಕೋಲಾರವರು ಮಾತನಾಡಿ, ರಾಜ್ಯದಲ್ಲಿ ಜನಜಾಗೃತಿ ಮೂಡಿಸುವ ಜೊತೆಗೆ ನಮ್ಮನ್ನಾಳುವ ಸರ್ಕಾರಗಳ ಗಮನ ಸೆಳೆಯಲು ಮೇ ತಿಂಗಳ ೩ನೇ ತಾರೀಖಿನಂದು ನಾವು #KarnatakaJobsForKannadigas ಎಂಬ ಅಡಿಬರಹದ ಟ್ವಿಟರ್ ಅಭಿಯಾನವನ್ನು ಹಮ್ಮಿಕೊಂಡಿದ್ದೆವು. ಇಡಿ ದೇಶವೇ ನಮ್ಮತ್ತ ತಿರುಗಿ ನೋಡುವಂತೆ ನಾಡಾಭಿಮಾನಿಗಳ ಸಹಕಾರದಿಂದ ನಡೆದ ಈ ಅಭಿಯಾನಕ್ಕೆ ಬೆಂಬಲ‌ಸೂಚಿಸುತ್ತಾ ಆಗಿನ ಮುಖ್ಯಮಂತ್ರಿಗಳಾದ  ಶ್ರೀಯುತ ಕುಮಾರ ಸ್ವಾಮಿಯವರು “ಕನ್ನಡಿಗರ ಹಕ್ಕೊತ್ತಾಯ ಪರಿಗಣಿಸಿ ಕಾನೂನಿನ ಚೌಕಟ್ಟಿನಲ್ಲಿ ಹೇಗೆ ಕಾರ್ಯರೂಪಕ್ಕೆ ತರಬಹುದು ಎಂದು ಸಲಹೆ ಪಡೆಯಲಾಗುವುದು” ಎಂದು ಹೇಳಿದ್ದರು. ನಂತರ ಮೇ 18ರಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬೃಹತ್ ಮಾನವ ಸರಪಳಿ ರಚಿಸಿ ಮತ್ತೊಮ್ಮೆ ನಮ್ಮ ಹಕ್ಕೊತ್ತಾಯವನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ನಂತರ ಕರ್ನಾಟಕದ ೧೫ಕ್ಕೂ ಹೆಚ್ಚು ಜಿಲ್ಲೆಗಳ ೫೦೦ಕ್ಕೂ ಹೆಚ್ಚು ಬ್ಯಾಂಕ್ ಶಾಖೆಗಳಿಗೆ ನಮ್ಮ ಕಾರ್ಯಕರ್ತರು ಖುದ್ದಾಗಿ ತೆರಳಿ ಕನ್ನಡಿಗರಿಗೇ ಉದ್ಯೋಗ ಕೊಡುವಂತೆ ಮನವಿ ಮಾಡಿದ್ದೇವೆ ಎನ್ನುತ್ತಾರೆ.

ಅಭಿಯಾನದ ಯಶಸ್ಸು ಎನ್ನುವಂತೆ ಈ  ಅಭಿಯಾನ ಶುರುವಾದ ಮೇಲೆಯೇ ಕರ್ನಾಟಕದ ಕೆಲವು ಲೋಕಸಭಾ ಸದಸ್ಯರು ನಮ್ಮ ಬೇಡಿಕೆಗಳಲ್ಲೊಂದಾಗಿದ್ದ ಐಬಿಪಿಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶಕೊಡುವ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತಿದ್ದರಿಂದ ನಮ್ಮ ತಾಯ್ನೆಲದ ಭಾಷೆಯಾದ ಕನ್ನಡದಲ್ಲೇ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿದೆ. ಕಳೆದ ವಾರವಷ್ಟೇ ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೇ ಮೀಸಲಾಗಬೇಕು ಎಂದು ಒತ್ತಾಯಿಸಿ ರಾಜ್ಯದ ನಾಲ್ಕು ಸಂಸದರು ರಾಜ್ಯಸಭೆಯಲ್ಲಿ ಧ್ವನಿ ಎತ್ತಿದ್ದಾರೆ. ನಂತರ ಮೊನ್ನೆ  ಅಂದರೆ ಅಗಸ್ಟ್ 10 ರಂದು ಮತ್ತೊಮ್ಮೆ ಟ್ವಿಟರ್ ಅಭಿಯಾನ ನಡೆಸಿ ನಮ್ಮ ಹಕ್ಕೊತ್ತಾಯವನ್ನು ಮಂಡಿಸಿದಾಗ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು  ಈಗಿನ ಮುಖ್ಯಮಂತ್ರಿಗಳಾದ ಶ್ರೀಯುತ ಯಡಿಯೂರಪ್ಪನವರು ನೀಡಿದ್ದಾರೆ.

ಹಿಂದಿನ ಮುಖ್ಯಮಂತ್ರಿಗಳು ನೀಡಿದ ಭರವಸೆಯಂತೆ ಇದೂ ಸಹ ಕೇವಲ ಟ್ವಿಟರಿನಲ್ಲಿ ನೀಡಿದ ಭರವಸೆಯಾಗಿ ಉಳಿದುಕೊಳ್ಳುವ ಸಾಧ್ಯತೆ ಇದೆ. ಕಳೆದ ತಿಂಗಳಷ್ಟೇ ನಮ್ಮ ಪಕ್ಕದ ರಾಜ್ಯವಾದ ಆಂಧ್ರಪ್ರದೇಶ ಸರ್ಕಾರ ಸ್ಥಳಿಯರಿಗೆ ತನ್ನ ಉದ್ಯೋಗದಲ್ಲಿ ಶೇಕಡ 75 ಮೀಸಲಾತಿ ನೀಡಲು ಶಾಸನ ಜಾರಿ ಮಾಡುವತ್ತ ಹೆಜ್ಜೆ ಇಟ್ಟಿದೆ.ನಮ್ಮ ರಾಜ್ಯದಲ್ಲೂ ಸಹ ಇಂತಹ ಒಂದು ಕಾಯ್ದೆಯನ್ನು ಮಾಡಿ ಎಂದು ನಾವು ನಮ್ಮ ಮುಖ್ಯಮಂತ್ರಿಯನ್ನು ಈ ಸಂದರ್ಭದಲ್ಲಿ ಬಲವಾಗಿ ಒತ್ತಾಯಿಸುತ್ತೇವೆ ಎಂದಿದ್ದಾರೆ.

ಅಗಸ್ಟ್ 14 ಮತ್ತು 15 ರಂದು ನಡೆಯುವ ಉಪವಾಸ ಸತ್ಯಾಗ್ರಹ ಮತ್ತು ಅಹೋರಾತ್ರಿ ಧರಣಿಯಲ್ಲಿ ಹೋರಾಟಗಾರರಾದ ವಾಟಾಳ್ ನಾಗರಾಜ್, ಕರವೇ ನಾರಾಯಣ ಗೌಡ, ಕರವೇ ಪ್ರವೀಣ್ ಕುಮಾರ್ ಶೆಟ್ಟಿ,  ಚಿತ್ರನಟ ಉಪೇಂದ್ರ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಸ್ ಜಿ ಸಿದ್ದರಾಮಯ್ಯ ಸೇರಿದಂತೆ ನಾಡಿನ ಹಿರಿಯ ಸಾಹಿತಿಗಳು, ಬರಹಗಾರರು, ಖ್ಯಾತ ಚಿತ್ರನಟರು, ಹೋರಾಟಗಾರರು, ರಾಜಕಾರಣಿಗಳು ಮತ್ತು ದೊಡ್ಡ ಪ್ರಮಾಣದ ಯುವಜನತೆ ಭಾಗವಹಿಸಲಿದ್ದಾರೆ. ಈ ಧರಣಿ ಅಗಸ್ಟ್ 14 ರಂದು ಬೆಳಿಗ್ಗೆ 10 ಗಂಟೆಗೆ ಶುರುವಾಗಿ ಅಗಸ್ಟ್ 15 ರ ಬೆಳಿಗ್ಗೆ 10 ಗಂಟೆಗೆ ಮುಕ್ತಾಯವಾಗಲಿದೆ ಎಂದು ಫೇಸ್ ಬುಕ್ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಹಕ್ಕೊತ್ತಾಯಗಳು

  1. ಎಲ್ಲಾ ಖಾಸಗಿ ವಲಯದ ಉದ್ಯಮಗಳಿಗೆ ರಾಜ್ಯ ಸರ್ಕಾರ ಹಲವು ಮೂಲಭೂತ(ನೆಲ,ಜಲ,ವಿದ್ಯುತ್, ರಸ್ತೆ ಮುಂತಾದ) ಸವಲತ್ತುಗಳನ್ನು ನೀಡುತ್ತಿರುವುದರಿಂದ ಕಟ್ಟುನಿಟ್ಟಾಗಿ ಉದ್ಯೋಗಗಳು ಸ್ಥಳಿಯರಿಗೆ(ಕನ್ನಡಿಗರಿಗೆ) ಮೀಸಲಿಡಲು ಕರಾರು ಪತ್ರದಲ್ಲೇ ಪೂರ್ವಷರತ್ತು ಹಾಕಬೇಕು. ರಾಜ್ಯದ ಸರ್ಕಾರಿ ವಲಯದ ಉದ್ಯಮಗಳಲ್ಲಿ ಎಲ್ಲ ಹುದ್ದೆಗಳಿಗೂ ಕನ್ನಡಿಗರನ್ನೇ ಆಯ್ಕೆ ಮಾಡಬೇಕು. ಅನಿವಾರ್ಯ ಸಂದರ್ಭದಲ್ಲಿ ಹೊರ ರಾಜ್ಯದವರನ್ನು ಆಯ್ಕೆ ಮಾಡಿಕೊಳ್ಳಬೇಕಾದರೆ ರಾಜ್ಯ ಸರ್ಕಾರದ ಪೂರ್ವಾನುಮತಿ ಪಡೆದು ನೇಮಕ ಮಾಡಿಕೊಳ್ಳಬೇಕು. ಇಲ್ಲಿನ ಐಟಿ ಉದ್ಯಮಗಳಿಗೆ ರಾಜ್ಯದ ಇಂಜಿನಿಯರಿಂಗ್/ಮ್ಯಾನೇಜ್ಮೆಂಟ್ ಕಾಲೇಜುಗಳಿಂದಲೇ ಕ್ಯಾಂಪಸ್ ನೇಮಕಾತಿ ಮಾಡಿಕೊಳ್ಳಲು ಸೂಚಿಸಬೇಕು.
  2. ಮಹಾರಾಷ್ಟ್ರದಲ್ಲಿ ಇರುವಂತೆ ರಾಜ್ಯ ಸರ್ಕಾರ ಸ್ಥಳೀಯರಿಗೆ ನಿಗದಿಪಡಿಸಿದ ಪ್ರಮಾಣದಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸುವ ಬಗ್ಗೆ ರಾಜ್ಯದ ಖಾಸಗಿ ಉದ್ದಿಮೆಗಳಿಂದ ಪ್ರತಿವರ್ಷ ಘೋಷಣೆ ಪತ್ರ ಪಡೆಯಬೇಕು. ಅಭ್ಯರ್ಥಿಗಳನ್ನು ಸ್ಥಳೀಯರು ಎಂದು ಪರಿಗಣಿಸಲು 15 ವರ್ಷಗಳ ಕಾಲ ಅವರು ರಾಜ್ಯದಲ್ಲಿ ವಾಸವಾಗಿದ್ದಲ್ಲದೇ ರಾಜ್ಯಭಾಷೆಯಾದ ಕನ್ನಡದಲ್ಲಿ ಮಾತನಾಡಲು,ಓದಲು ಮತ್ತು ಬರೆಯಲು ಬರಬೇಕು.
  3. ರಾಜ್ಯದಲ್ಲಿ ವ್ಯವಹರಿಸುವ ಎಲ್ಲಾ ಬ್ಯಾಂಕುಗಳು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವಾಗ ರಾಜ್ಯದ ಅಧಿಕೃತ ಭಾಷೆಯಾದ ಕನ್ನಡ ಭಾಷಾಜ್ಞಾನವನ್ನು ಕಡ್ಡಾಯಗೊಳಿಸಬೇಕು.ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (IBPS) ಸಂಸ್ಥೆಯು ಬ್ಯಾಂಕಿಂಗ್ ನೇಮಕಾತಿಗೆ ನಡೆಸುವ  ಪೂರ್ವಭಾವಿ ಮತ್ತು ಮುಖ್ಯಪರೀಕ್ಷೆಯನ್ನು  ಕನ್ನಡದಲ್ಲೂ ಬರೆಯುವ ಅವಕಾಶವಿರಬೇಕು.
  4. ರಾಜ್ಯ/ಕೇಂದ್ರ ಸರ್ಕಾರಿ ಉದ್ಯಮಗಳು ಹಾಗೂ ಇಲಾಖೆಗಳಲ್ಲಿ ದಿನಗೂಲಿ ಕೆಲಸಗಳಿಗೆ ಕಾರ್ಮಿಕರನ್ನು/ನೌಕರರನ್ನು ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಕನ್ನಡಿಗರನ್ನೇ ನೇಮಿಸಿಕೊಳ್ಳಬೇಕು. ಹೊರಗುತ್ತಿಗೆ ಸಂಸ್ಥೆಗಳಿಗೂ ಈ ಷರತ್ತು ವಿಧಿಸಬೇಕು.
  5. ಕೇಂದ್ರ/ರಾಜ್ಯ ಸರ್ಕಾರದ ಹುದ್ದೆಗಳ ನೇಮಕಾತಿಗಾಗಿ ನಡೆಯುವ ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಕಡ್ಡಾಯವಾಗಿ ಕನ್ನಡದಲ್ಲಿಯೂ ಇರಬೇಕು.

ಈ ಹೋರಾಟವು ಯಾವುದೇ ಬ್ಯಾನರಿನಡಿಯಲ್ಲಿ ನಡೆಯುತ್ತಿಲ್ಲ. ಹೋರಾಟದ ನೇತೃತ್ವವನ್ನು ಯಾವುದೇ ಸಂಘಟನೆ ಅಥವಾ ವ್ಯಕ್ತಿ ವಹಿಸಿಲ್ಲ. ಇದು ಸಮಗ್ರ ಕನ್ನಡಿಗರೆಲ್ಲಾರ ಹೋರಾಟ. ಎಲ್ಲರ ಭಾಗವಹಿಸುವಿಕೆ ಇರಲಿ ಎಂದು ಕರ್ನಾಟಕ ರಣಧೀರ ಪಡೆಯ ಪ್ರಮುಖರಾದ ದಾವಣಗೆರೆಯ ರಾಘು ದೊಡ್ಡಮನಿ, ಯವರು ಕೋರಿದ್ದಾರೆ.

ಸಂಪರ್ಕಕ್ಕಾಗಿ:  9844363474

ದಿನದ ಸುದ್ದಿ

ಪ್ರವಾಸೋದ್ಯಮ ಇಲಾಖೆ | ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಆಹಾರ ಕರಕುಶಲ ಸಂಸ್ಥೆ ಮೈಸೂರು ( Food Craft Institute ) ಮತ್ತು ಹೋಟೆಲ್ ನಿರ್ವಹಣಾ ಸಂಸ್ಥೆ ಬೆಂಗಳೂರು (Institute Of Hotel Management ) ಇವರ ಸಹಯೋಗದಲ್ಲಿ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಲ್ಟಿ ಕ್ಯೂಸಿನ್ ಕುಕ್ ( Multi Cusine Cook ) ಮತ್ತು ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್ ( Food And Beverage Service Steward ) ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಜಿಲ್ಲೆಯ ಅಭ್ಯರ್ಥಿಗಳು ಮಾ.25 ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿನ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಏಪ್ರಿಲ್ 3 ರೊಳಗೆ ನೇರವಾಗಿ ಇಲಾಖೆಗೆ ಸಲ್ಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಬಿ.ಕಾವ್ಯ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಯಲಕ್ಷ್ಮಿ ಕಾರಂತ್‌ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ

Published

on

ಸುದ್ದಿದಿನ,ದಾವಣಗೆರೆ:ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಜಯಲಕ್ಷ್ಮಿ ಕಾರಂತ್‌ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ಭಂಟರ ಭವನದಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಪೌಂಡೇಷನ್ ಟ್ರಸ್ಟ್ ಹಮ್ಮಿಕೊಳ್ಳಲಾದ ಮಹಿಳಾ ಘಟಕದ 8ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ “ಯಕ್ಷ ಧ್ರುವ” ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಎಂದು ಕಲಾಕುಂಚ ಯಕ್ಷರಂಗದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

ಹಿರಿಯ, ಕಿರಿಯ ಮಹಿಳೆಯರಿಗೆ, ಮಕ್ಕಳಿಗೆ ಯಕ್ಷಗಾನ ಮದ್ದಳೆ ತರಬೇತಿ, ಮಹಾಭಾರತ, ರಾಮಾಯಣ ಪರಂಪರೆಯ ಪೌರಾಣಿಕ ಪ್ರಸಂಗಗಳ ರಚನೆ, ನಿವೃತ್ತಿ ಶಿಕ್ಷಕಿಯಾದರೂ ಶೈಕ್ಷಣಿಕ ಕಾಳಜಿಯ ಸ್ವಯಂ ಸೇವೆಯೊಂದಿಗೆ, ಕಲೆ, ಸಾಹಿತ್ಯ, ಸಂಗೀತ, ಭಜನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಗುರುತಿಸಿ ಶ್ರೀಮತಿ ಜಯಲಕ್ಷ್ಮಿ ಕಾರಂತ್‌ರನ್ನು ಮಹತ್ವಪೂರ್ಣ ಈ ಪ್ರಶಸ್ತಿಗೆ ಭಾಜನಾಗಿದ್ದು ಕಲಾಕುಂಚ ಯಕ್ಷರಂಗ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ಅಲರ್ಟ್..!

Published

on

  • ಸುನೀತ ಕುಶಾಲನಗರ

ದಿಯ ನೇವರಿಸಿದ ಗಾಳಿ
ಮುದಗೊಳಿಸಿ ಸರಿಯಿತು.
ಜಡಿ ಮಳೆ ಧೋ ಎಂದು
ಸಕಾಲಿಕವಾಗಿ ಸುರಿದು
ಹೊಸ ಹುಟ್ಟು.

ಆದರೇನು?
ಹಿಂಗಾರು, ಮುಂಗಾರು
ಆಗೊಮ್ಮೆ ಈಗೊಮ್ಮೆ
ಪದೇ ಪದೇ ಅದೇ ರಾಗ .

ಸುರಿದು ತುಂತುರು
ಕಾಣಿಸಿ ನಿಂತಿತೆನ್ನುವಾಗ
ಮತ್ತೆ ನಿಲ್ಲದ ಹಠ.

ಮಳೆಗೆ ಈಗ ಮುಟ್ಟು
ನಿಲ್ಲುವ ಸಮಯವೋ?
ಗುಡುಗು,ಮಿಂಚಿನಿಂದ
ಮುಟ್ಟಿನಲ್ಲಿ ಏರುಪೇರೋ ?
ಒಟ್ಟಿನಲ್ಲಿ
ನದಿಯ ಸೋಕಿದ ಗಾಳಿ
ಸಮುದ್ರದೊಳಗೆ ವಿಲೀನ.

ಅಕಾಲಿಕ ಮಳೆ…
ಇಳೆಗೆ ಸೊಂಟ ಬೇನೆ
ನದಿಯ ತಾಕಿದ ಬೆಳದಿಂಗಳು
ಕಿವಿಯಲ್ಲಿ ಉಸುರಿತು

ಹರಿಯುತ್ತಿರುವ ನದಿಯು
ಬೀಸುವ ಗಾಳಿಯು
ತಲೆಯೆತ್ತಿ ನಿಂತ ಬೆಟ್ಟವೂ
ಸ್ಥಾನ ಬದಲಿಸಲು
ಹೊತ್ತು ಬೇಕೆ?
ನಿಲ್ಲದ ಮಳೆಯ ಮುಟ್ಟಿಗೆ
ಸಲ್ಲುವ ಘೋಷಣೆ
ಹೈ ಅಲರ್ಟ್!

ಬದುಕಿನ ಧ್ಯಾನ
ಯೆಲ್ಲೋ, ಆರೆಂಜ್, ರೆಡ್
ಬಣ್ಣಗಳ ಅಲರ್ಟ್ ನಲ್ಲೇ
ಕಳೆದು ಹೋಗುತ್ತಿದೆ.

ಕಾಮನ ಬಿಲ್ಲ ತೋರಿಸಿ
ಸರಿದು ಬಿಡು ಮಳೆಯೇ
ಇಳೆಯ ಉಸಿರು
ಹಸಿರಾಗಲಿ. (ಕವಯಿತ್ರಿ: ಸುನೀತ ಕುಶಾಲನಗರ)

ಕವಯಿತ್ರಿ: ಸುನೀತ ಕುಶಾಲನಗರ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ದಿನದ ಸುದ್ದಿ1 day ago

ಪ್ರವಾಸೋದ್ಯಮ ಇಲಾಖೆ | ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ...

ದಿನದ ಸುದ್ದಿ1 day ago

ಜಯಲಕ್ಷ್ಮಿ ಕಾರಂತ್‌ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ

ಸುದ್ದಿದಿನ,ದಾವಣಗೆರೆ:ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಜಯಲಕ್ಷ್ಮಿ ಕಾರಂತ್‌ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ...

ಅಂಕಣ3 days ago

ಕವಿತೆ | ಅಲರ್ಟ್..!

ಸುನೀತ ಕುಶಾಲನಗರ ನದಿಯ ನೇವರಿಸಿದ ಗಾಳಿ ಮುದಗೊಳಿಸಿ ಸರಿಯಿತು. ಜಡಿ ಮಳೆ ಧೋ ಎಂದು ಸಕಾಲಿಕವಾಗಿ ಸುರಿದು ಹೊಸ ಹುಟ್ಟು. ಆದರೇನು? ಹಿಂಗಾರು, ಮುಂಗಾರು ಆಗೊಮ್ಮೆ ಈಗೊಮ್ಮೆ...

ದಿನದ ಸುದ್ದಿ6 days ago

ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ...

ದಿನದ ಸುದ್ದಿ6 days ago

ದಾವಣಗೆರೆ | ನಾಳೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭ, 81 ಕೇಂದ್ರಗಳಲ್ಲಿ 22579 ವಿದ್ಯಾರ್ಥಿಗಳು

ಸುದ್ದಿದಿನ,ದಾವಣಗೆರೆ:2024-25 ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಜರುಗಲಿವೆ. ಹೊಸದಾಗಿ ಒಟ್ಟು 21704 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಇದರಲ್ಲಿ 10587...

ಅಂಕಣ6 days ago

ಸಿದ್ಧಾಂತ ಮತ್ತು ಪತ್ರಿಕೋದ್ಯಮ

ಹರ್ಷಕುಮಾರ್‌ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್ ಇದು ಸುಮಾರು 2002-03ರ ಸಂದರ್ಭ. ಶಿವಮೊಗ್ಗದಲ್ಲಿ ನಾವು ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಕಾಲ. ಒಬ್ಬ ಪತ್ರಕರ್ತ ಮಿತ್ರರೊಂದಿಗೆ ಹೀಗೇ ಚರ್ಚೆ ನಡೆಯುತ್ತಿತ್ತು....

ದಿನದ ಸುದ್ದಿ6 days ago

ಅಮಾನವೀಯ ಕೃತ್ಯ | ಹೆಣ್ಣು ಮಗು ಮಾರಾಟ ಮಾಡಿದ ಪೋಷಕರು

ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಮಕ್ಕಳ ಮಾರಾಟ ಜಾಲ ಎಗ್ಗಿಲ್ಲದೆ ನಡೆಯುತ್ತಿದೆ. ಇಂತಹ ಸಂಧರ್ಭದಲ್ಲಿ ಮೈಸೂರಿನಲ್ಲೊಂದು ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಅಮಾನವೀಯ ಕೃತ್ಯ ನಡೆದಿದೆ. 14ಸಾವಿರ ರೂ ಗೆ ಹೆಣ್ಣು...

ದಿನದ ಸುದ್ದಿ6 days ago

ಕ್ಯೂ-ಸ್ಪೈಡರ್ಸ್ ವತಿಯಿಂದ ಉಚಿತ ಉದ್ಯೋಗದರಿತ ಕೌಶಲ್ಯ ತರಬೇತಿ ಆಯ್ಕೆ ಪ್ರಕ್ರಿಯೆ

(ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಸೆಲ್ ಅಡಿಯಲ್ಲಿ ಆಯೋಜನೆ) ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ಲೇಸ್ಮೆಂಟ್ ಸೆಲ್ ನೇತೃತ್ವದಲ್ಲಿ ಖ್ಯಾತ ಐಟಿ ತರಬೇತಿ...

ದಿನದ ಸುದ್ದಿ7 days ago

ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

ಸುದ್ದಿದಿನ,ದಾವಣಗೆರೆ: ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ...

ದಿನದ ಸುದ್ದಿ1 week ago

ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆರೆಬಿಳಚಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ ,ಕ್ರಿಶ್ಚಿಯನ್, ಜೈನ್ ,ಬೌದ್ಧ ಸಿಖ್...

Trending