ರಾಜಕೀಯ
ಮಾಜಿ ಸಚಿವ ಎಚ್.ಆಂಜನೇಯ ಪ್ರತಿಷ್ಠೆ ಮಣ್ಣುಪಾಲು !
ಸುದ್ದಿದಿನ ವಿಶೇಷ: ಚಿತ್ರದುರ್ಗ ಜಿಲ್ಲೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪಾರುಪತ್ಯ ಸಾಧಿಸಿದ್ದು, ವಿಧಾನಸಭೆ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದ ಮಾಜಿ ಸಚಿವ ಎಚ್.ಆಂಜನೇಯ ಅವರಿಗೆ ತೀವ್ರ ಮುಖಭಂಗವಾಗಿದೆ.
ಚಿತ್ರದುರ್ಗ ನಗರಸಭೆಯ 32ರಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಸಿ.ತಾರಕೇಶ್ವರಿ ಗೆಲುವು ಸಾಧಿಸಿದ್ದು, ಮಾಜಿ ಸಚಿವರ ಪ್ರತಿಷ್ಠೆ ಮಣ್ಣು ಪಾಲಾಗಿದೆ. ಮಾಜಿ ಸಚಿವರು ವಿಶೇಷವಾಗಿ ಗಮನ ಹರಿಸಿದ್ದ ಕ್ಷೇತ್ರದಲ್ಲಿ ಗೆಲವು ಸಾಧಿಸಲು ಇನ್ನಿಲ್ಲದ ಪ್ರಯತ್ನ ನಡೆಸಿದ್ದರು ಎನ್ನಲಾಗಿದೆ. ಆದರೆ ಕೊನೆಗೆ ಬಿಜೆಪಿ ಅಭ್ಯರ್ಥಿ ಗೆಲುವಿನಿಂದ ನಿರಾಸೆ ಮೂಡಿಸಿದೆ.
ಹಿಂದೆ ಕಾಂಗ್ರೆಸ್ನ ಭದ್ರ ಕೋಟೆ ಎಂದು ಬಿಂಬಿತವಾಗಿದ್ದ ಚಿತ್ರದುರ್ಗ ಜಿಲ್ಲೆಯಲ್ಲಿ ಕಮಲ ಪಕ್ಷ ಎಲ್ಲೆಲ್ಲೂ ಅರಳಿ ನಿಂತಿದೆ. ಅತ್ತ ಹೊಸದುರ್ಗದಲ್ಲಿ ಕೂಡ ಶಾಸಕ ಗೂಳಿಹಟ್ಟಿ ಶೇಖರ್ ನೇತೃತ್ವದ ಬಿಜೆಪಿ ಪಕ್ಷ ತನ್ನ ಪ್ರಾಬಲ್ಯ ಸಾಧಿಸಿದೆ.
ಈ ಬಾರಿಯ ಮೂರು ಸ್ಥಳೀಯ ಸಂಸ್ಥೆಗಳ ಪೈಕಿ ಎರಡರಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ನಾಯಕರಾದ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಸಚಿವ ಎಚ್.ಆಂಜನೇಯ, ಜಿಪಂ ಅಧ್ಯಕ್ಷೆ ಸೌಭಾಗ್ಯ ಬಸವರಾಜ್ ಸೇರಿದಂತೆ ಹಲವರ ಶ್ರಮ ಹೇಳ ಹೆಸರಿಲ್ಲದಂತಾಗಿದೆ.

ರಾಜಕೀಯ
ದೇವರಮನೆ ಶಿವಕುಮಾರ್ ಬಿಜೆಪಿ ಸೇರ್ಪಡೆ | ನಾವು ಯಾರಿಗೂ ಆಮಿಷ ಒಡ್ಡಿಲ್ಲ : ಸಂಸದ ಜಿಎಂ ಸಿದ್ದೇಶ್ವರ್

ಸುದ್ದಿದಿನ, ದಾವಣಗೆರೆ : ದಾವಣಗೆರೆ ಮಹಾನಗರ ಪಾಲಿಕೆ ಗದ್ದುಕೆ ಹಿಡಿದಿದ್ದಕ್ಕೆ ಸಂಸದ ಜಿಎಂ ಸಿದ್ದೇಶ್ವರ ಹರ್ಷ ವ್ಯಕ್ತಪಡಿಸಿದ್ದು, ವರಿಷ್ಠರ ನಿರ್ಧಾರದಂತೆ ಎಸ್ ಟಿ ವೀರೇಶ್ ಅವರನ್ನ ಮೇಯರ್ ಆಗಿ ಆಯ್ಕೆ ಮಾಡಲಾಗಿದೆ ಎಂದರು.
ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
ಬುಧವಾರ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವರಮನೆ ಶಿವಕುಮಾರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದು ಅವರ ವೈಯಕ್ತಿ ವಿಚಾರವಾಗಿದೆ. ನಾವು ಯಾರಿಗೂ ಯಾವ ಆಮಿಷ ಒಡ್ಡಿಲ್ಲ. ಸ್ವತ: ಅವರೆ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ತಿನಿ ಅಂತ ಬಂದಿದ್ದರು, ಹಾಗಾಗಿ ಅವರನ್ನ ಬಿಜೆಪಿಗೆ ಸೇರಿಸಿಕೊಂಡಿದ್ದೇವೆ. ಇನ್ನು ಯಾರಾದರೂ ಬಿಜೆಪಿ ಸೇರ್ತಾರ ಎಂಬ ವರದಿಗಾರರ ಪ್ರಶ್ನೆಗೆ ಸಿದ್ದೇಶ್ವರ್ ಅವರು ‘ವೇಟ್ ಆ್ಯಂಡ್ ಸೀ ಎಂದು ಅಚ್ಚರಿ ಮೂಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ರಾಜಕೀಯ
ದಾವಣಗೆರೆ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ : ಮೇಯರ್ ಆಗಿ ಎಸ್.ಟಿ.ವೀರೇಶ್, ಉಪಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್

ಸುದ್ದಿದಿನ,ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ – ಉಪಮೇಯರ್ ಚುನಾವಣೆಯತಲ್ಲಿ ಬಿಜೆಪಿಯು ಭರ್ಜರಿ ಗೆಲುವು ಪಡೆಯಿತು. ಮೇಯರ್ ಆಗಿ ಬಿಜೆಪಿಯ ಎಸ್.ಟಿ. ವೀರೇಶ್ ಹಾಗೂ ಉಪ ಮೇಯರ್ ಆಗಿ ಶಿಲ್ಪಾ ಜಯಪ್ರಕಾಶ್ ಆಯ್ಕೆಯಾದರು.
29 ಮತಗಳನ್ನು ಪಡೆಯುವ ಮೂಲಕ ಬಿಜೆಪಿಯು ದಾವಣಗೆರೆ ಪಾಲಿಕೆ ಅಧಿಕಾರ ಹಿಡಿದಿದ್ದು, ಕಾಂಗ್ರೆಸ್ 22 ಮತಗಳನ್ನು ಮಾತ್ರ ಪಡೆಯುವಲ್ಲಿ ಯಶಸ್ವಿಯಾಯಿತು.
ಇದನ್ನೂ ಓದಿ | ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ರಾಜಕೀಯ
ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು

ಸುದ್ದಿದಿನ, ದಾವಣಗೆರೆ : ಕಾಂಗ್ರೆಸ್ ನ ಹಿರಿಯ ಮುಖಂಡ ಶಾಸಕ ಶಾಮನೂರು ಶಿವಶಂಕರಪ್ಪ ಗೈರು ಹಾಜರಿಯಲ್ಲಿ ದಾವಣಗೆರೆ ಮಹಾನಗರ ಪಾಲಿಕರ ಮೇಯರ್ ಉಪಮೇಯರ್ ಚುನಾವಣೆಯಲ್ಲಿ ಮತದಾನ ನಡೆಯಿತು.
ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಎಸ್. ಟಿ. ವೀರೇಶ್, ಕಾಂಗ್ರೆಸ್ ನಿಂದ ಗಡಿಗುಡಾಳ್ ಮಂಜುನಾಥ್ ಅವರು ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ಉಪಮೇಯರ್ ಸ್ಥಾನಕ್ಕೆ ಬಿಜೆಪಿಯಿಂದ ಶಿಲ್ಪ ಜಯಪ್ರಕಾಶ್ ನಾಮಪತ್ರ ಸಲ್ಲಿಸಿದ್ದರು.
ಬಿಜೆಪಿಯಿಂದ ಸಂಸದ ಜಿ ಎಂ ಸಿದ್ದೇಶ್ವರ್ , ಸಚಿವ ಆರ್ ಶಂಕರ್, ಚಿದಾನಂದಗೌಡ ಸೇರಿದಂತೆ ಬಿಜೆಪಿ ಪಕ್ಷದ 29 ಸದಸ್ಯರು ಇದ್ದರು. ಕಾಂಗ್ರೆಸ್ ನ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮೂವರು ಎಂ ಎಲ್ ಸಿ ಗಳಾದ ಕೆಸಿ ಕೊಂಡಯ್ಯ, ರಘು ಆಚಾರ್ , ಯುಬಿ ವೆಂಕಟೇಶ್ ಗೈರಾಗಿದ್ದರು. ವಿಧಾನ ಪರಿಷತ್ ಸದಸ್ಯ ಮೋಹನ್ ಕೊಂಡಜ್ಜಿ ಸೇರಿದಂತೆ ಮಹಾನಗರ ಪಾಲಿಕೆ 22 ಸದಸ್ಯರು ಹಾಜರಿದ್ದರು.
ಶಾಸಕ ಶಾಮನೂರು ಶಿವಶಂಕರಪ್ಪ ಆಪ್ತರಾಗಿದ್ದ ಶಿವಕುಮಾರ್ ದೇವರಮನಿ ಮಂಗಳವಾರ (ಫೆ.23) ಕಾಂಗ್ರೆಸ್ ಗೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವುದು ಖಚಿತವಾಗಿತ್ತು. ಇದರ ನಡುವೆ ಬೆಳಗ್ಗೆ ಕಾಂಗ್ರೆಸ್ ಹಿರಿಯ ಮುಖಂಡರ ಅನುಪಸ್ಥಿತಿಯಲ್ಲಿ ಚುನಾವಣೆ ನೆಡೆದಿದ್ದರಿಂದ ಬಿಜೆಪಿಗೆ ಗೆಲುವು ಸುಲಭವಾಯಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಲೈಫ್ ಸ್ಟೈಲ್6 days ago
ಏನಿದು ? ಗಡಿಮಾರಿ..!
-
ದಿನದ ಸುದ್ದಿ7 days ago
ಗೋಮಾಂಸವನ್ನು ವಿದೇಶಕ್ಕೆ ರಫ್ತು ಮಾಡಬಹುದು ; ವಿದೇಶದಿಂದ ಬರುವ ಗೋಮಾಂಸವನ್ನು ತಿನ್ನಬಹುದು, ಬಿಜೆಪಿಯ ಈ ಎಡಬಿಡಂಗಿ ನಿಲುವಿನ ಹಿಂದಿನ ಮರ್ಮ ಏನು..? ಮಾಜಿ ಸಿಎಂ ಸಿದ್ದರಾಮಯ್ಯ
-
ರಾಜಕೀಯ5 days ago
ಶಾಸಕ ಶಾಮನೂರು ಶಿವಶಂಕರಪ್ಪ ಸೇರಿದಂತೆ ಮೂವರು ಎಂ ಎಲ್ ಸಿ ಗಳು ಗೈರು : ಬಿಜೆಪಿಗೆ ಸುಲಭ ಗೆಲುವು
-
ದಿನದ ಸುದ್ದಿ7 days ago
ಚನ್ನಗಿರಿ | ಲಂಚ ಸ್ವೀಕರಿಸಿದ್ದ ಗ್ರಾಮ ಲೆಕ್ಕಾಧಿಕಾರಿಗೆ 2 ವರ್ಷ ಜೈಲು
-
ಬಹಿರಂಗ6 days ago
ಕ್ರಾಂತಿಕಾರಿ ರೈತ ಹೋರಾಟದ ಸ್ಫೂರ್ತಿಯ ಚಿಲುಮೆ `ಅಜಿತ್ ಸಿಂಗ್’
-
ನೆಲದನಿ6 days ago
ರೈತ ಹೋರಾಟಗಾರ `ಸಹಜಾನಂದ ಸರಸ್ವತಿ’
-
ರಾಜಕೀಯ4 days ago
ದೇವರಮನೆ ಶಿವಕುಮಾರ್ ಬಿಜೆಪಿ ಸೇರ್ಪಡೆ | ನಾವು ಯಾರಿಗೂ ಆಮಿಷ ಒಡ್ಡಿಲ್ಲ : ಸಂಸದ ಜಿಎಂ ಸಿದ್ದೇಶ್ವರ್
-
ಬಹಿರಂಗ6 days ago
ಪಾಂಡವರಿಗೂ ಭಾವ, ಕೌರವರಿಗೂ ಭಾವ..!