ದಿನದ ಸುದ್ದಿ
ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳ ಸೌಲಭ್ಯಗಳಳಿಗೆ ಅರ್ಜಿ ಅಹ್ವಾನ
ಸುದ್ದಿದಿನ,ದಾವಣಗೆರೆ : 2022-23 ನೇ ಸಾಲಿನಲ್ಲಿ ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ (ನಿ) ದ ವತಿಯಿಂದ ಜನರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಟಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ ಒಕ್ಕಲಿಗ, ಗಂಗಡ್‍ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮಾ, ರೆಡ್ಡಿ, ಗೌಡರ್, ನಾಮದಾರಿಗೌಡ, ಉಪ್ಪಿನ ಕೊಳಗ/ಉತ್ತಮ ಕೊಳಗ ಒಕ್ಕಲಿಗ ಸಮುದಾಯದವರಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಸೌಲಭ್ಯಗಳನ್ನು ಪಡೆಯಲಿಚ್ಚಿಸುವ ಫಲಾಪೇಕ್ಷಿಗಳು ಅರ್ಜಿಸಲ್ಲಿಸಲು ಆಗಸ್ಟ್.18 ಕಡೇ ದಿನಾಂಕ ವಾಗಿರುತ್ತದೆ.
ಯೋಜನೆಗಳು ಮತ್ತು ಸೌಲಭ್ಯಗಳು
ಒಕ್ಕಲಿಗ ಸಮುದಾಯದವರು ಸ್ವಯಂ ಉದ್ಯೋಗಕ್ಕೆ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಸ್ವಯಂ ಉದ್ಯೋಗ ಸಾಲ ಯೋಜನೆ. ನಿರುದ್ಯೋಗಿ ಯುವಕರಿಗೆ ಟೂರಿಸ್ಟ್ ಟ್ಯಾಕ್ಸಿ/ಸರಕು ಸಾಗಾಣಿಕೆ ವಾಹನ ಕೊಳ್ಳಲು ಸಹಾಯಧನ ಯೋಜನೆ. ಸಣ್ಣ ಮತ್ತು ಅತೀ ಸಣ್ಣ ರೈತರ ಜಮೀನುಗಳಿಗೆ ಗಂಗಾ ಕಲ್ಯಾಣ ಯೋಜನೆ. ಹಾಗೂ ಸಮುದಾಯದ ಯುವಜನತೆಯನ್ನು ಕೌಶಲ್ಯ ಅಭಿವೃದ್ಧಿಪಡಿಸಿ ಉದ್ಯೋಗ ಮುಖಿಯನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ITIs, GTTC, KGTTI ಇತ್ಯಾದಿಗಳಲ್ಲಿ ಅಲ್ಪಾವಧಿ ಕೋರ್ಸುಗಳ ಮೂಲಕ ಕೌಶಲ್ಯ ತರಬೇತಿ ನೀಡಲು ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಯನ್ನು ರೂಪಿಸಿದೆ.
ಯೋಜನೆಗೆ ಆನ್‍ಲೈನ್ ಮೂಲಕ “ಸುವಿಧಾ” ಪೋರ್ಟಲ್ https://suvidha.karnataka.gov.in ಮತ್ತು ಕೌಶಲ್ಯ ಕರ್ನಾಟಕ ಪೋರ್ಟಲ್ https://www.kaushalkar.com ತಂತ್ರಾಂಶದ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ವೆಬ್‍ಸೈಟ್ https://kvcdc.karnataka.gov.in ನಲ್ಲಿ ಅಥವಾ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ: 080-29904268 ನ್ನು / ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ: 08192 230934 ನ್ನು ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ), ಕುರುಬರ ಹಾಸ್ಟೆಲ್ ಕಟ್ಟಡ, ಜಯದೇವ ಸರ್ಕಲ್ ಹತ್ತಿರ, ದಾವಣಗೆರೆ ಕಚೇರಿಯನ್ನು ಸಂಪರ್ಕಿಸನಹುದು ಎಂದು ದಾವಣಗೆರೆ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಎಸ್.ಎಸ್.ಎಲ್.ಸಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ; ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನ
ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಗೆ ಪ್ರೊತ್ಸಾಹಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ಇಲಾಖೆ ಕಚೇರಿಗೆ ಸಲ್ಲಿಸಲು ಜಂಟಿ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ; ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ
ಸುದ್ದಿದಿನ,ದಾವಣಗೆರೆ: ಖಾಸಗಿ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದ್ದು ಈ ಬಸ್ ನಿಲ್ದಾಣವು ಸುಸಜ್ಜಿತ ಹಾಗೂ ಹಲವು ಸೌಲಭ್ಯಗಳನ್ನು ಹೊಂದಿದೆ ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪ ತಿಳಿಸಿದರು.
ಅವರು (07) ರಂದು ಪಿ.ಬಿ ರಸ್ತೆಯಲ್ಲಿನ ಡಾ. ಶಾಮನೂರು ಶಿವಶಂಕರಪ್ಪ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಈ ಬಸ್ ನಿಲ್ದಾಣ ಸ್ಮಾರ್ಟ್ ಸಿಟಿ’ ಯೋಜನೆಯಡಿ 20 ಕೋಟಿ ವೆಚ್ಚದಲ್ಲಿ ಸಿದ್ದಗೊಂಡು, ಈಚೆಗಷ್ಟೇ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರುವ ಈ ಬಸ್ ನಿಲ್ದಾಣವು ಸುಸಜ್ಜಿತವಾಗಿದ್ದು, ಹತ್ತಾರು ಸೌಲಭ್ಯಗಳನ್ನು ಹೊಂದಿದೆ. 84 ಮಳಿಗೆ ಹಾಗೂ ಏಕಾಲಕ್ಕೆ 16 ಬಸ್ ನಿಲ್ಲಿಸಬಹುದಾಗಿದೆ. 200 ದ್ವೀಚಕ್ರ ವಾಹನ ನಿಲುಗಡೆಗೆ ಕೂಡ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಸುಸಜ್ಜಿತ ಬಸ್ ನಿಲ್ದಾಣವನ್ನು ದಾವಣಗೆರೆ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಯಿತು. ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್, ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಉಪಮೇಯರ್ ಸೋಗಿ ಶಾಂತಕುಮಾರ್, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರಾದ ಮಲ್ಲೇಶಪ್ಪ, ಖಾಸಗಿ ಬಸ್ ಏಜೆಂಟರ ಸಂಘದ ಅಧ್ಯಕ್ಷರಾದ ಉಮೇಶ್‍ರಾವ್ ಸಾಳಂಕಿ, ಹಾಗೂ ದಾವಣಗೆರೆ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಪದಾಧಿಕಾರಿಗಳು, ಖಾಸಗಿ ಬಸ್ ಏಜೆಂಟ್ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿ.ಯು.ಸಿ. ಮತ್ತು ಪದವಿ ,ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಗೆ ಪ್ರೊತ್ಸಾಹಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳು ತಮ್ಮ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಜಂಟಿ ನಿರ್ದೇಶಕಾರಾದ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಎಂಬ್ರಾಯ್ಡರಿ ಮತ್ತು ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಗನ್ ಮಿಸ್ ಫೈರ್ | ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು
-
ದಿನದ ಸುದ್ದಿ7 days ago
ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
-
ದಿನದ ಸುದ್ದಿ7 days ago
ದಿವಾಕರ. ಡಿ ಮಂಡ್ಯ ಅವರಿಗೆ ಪಿ ಎಚ್ ಡಿ ಪದವಿ
-
ದಿನದ ಸುದ್ದಿ7 days ago
ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್
-
ದಿನದ ಸುದ್ದಿ6 days ago
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ಬಹದ್ದೂರ್ ಶಾಸ್ತ್ರಿ ಜನ್ಮದಿನ ; ದೇಶದೆಲ್ಲೆಡೆ ಸ್ಮರಣೆ
-
ದಿನದ ಸುದ್ದಿ7 days ago
ಚಿನ್ನದ ಬೆಲೆ ಇಳಿಕೆ
-
ದಿನದ ಸುದ್ದಿ7 days ago
ಈ ದಿನ ಅಂತರಾಷ್ಟ್ರೀಯ ಹಿರಿಯ ನಾಗರಿಕರ ದಿನ