ರಾಜಕೀಯ
ಕರ್ನಾಟಕದಲ್ಲಿ ಬಿಜೆಪಿಯಿಂದ ಜನತಂತ್ರ ಬುಡಮೇಲು ಕೃತ್ಯ
- ಕರ್ನಾಟಕದಲ್ಲಿ ಜನತಾಂತ್ರಿಕ ನಿಯಮಗಳನ್ನು ಬಿಜೆಪಿ ಬುಡಮೇಲು ಮಾಡುತ್ತಿರುವುದು ಮೋದಿ ಸರಕಾರದಡಿ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ವ್ಯಾಪಕ ದಾಳಿಯ ಭಾಗವಾಗಿದೆ. ಪ್ರಜಾಪ್ರಭುತ್ವ ಮತ್ತು ಜನತಾಂತ್ರಿಕ ಸಂಸ್ಥೆಗಳನ್ನು ರಕ್ಷಿಸುವುದು, ಚುನಾವಣೆ ಸುಧಾರಣೆಗಳು ಮತ್ತು ಪಕ್ಷಾಂತರಿ ಹಾಗೂ ಭ್ರಷ್ಟ ಜನಪ್ರತಿನಿಧಿಗಳಿಗೆ ಶಿಕ್ಷೆ ನೀಡುವುದು ಮುಂದಿನ ದಿನಗಳಲ್ಲಿ ದೇಶದ ಜನತಾಂತ್ರಿಕ ಶಕ್ತಿಗಳ ಕಾರ್ಯಸೂಚಿಯ ಆದ್ಯತೆಯಾಗಬೇಕು.
ಕಾಂಗ್ರೆಸ್, ಜನತಾ ದಳ (ಎಸ್)ದ 12ಮತ್ತು ಮೈತ್ರಿಕೂಟಕ್ಕೆ ಬೆಂಬಲ ನೀಡುತ್ತಿದ್ದ ಇಬ್ಬರು ಪಕ್ಷೇತರ ಶಾಸಕರು- ಹೀಗೆ ಒಟ್ಟು 14 ಶಾಸಕರು ರಾಜಿನಾಮೆ ನೀಡುವುದರೊಂದಿಗೆ ಕರ್ನಾಟಕದ ರಾಜಕೀಯ ಬೆಳವಣಿಗೆಗಳು ಚರಮ ಸ್ಥಿತಿಯನ್ನು ತಲುಪಿವೆ. ಕುಮಾರಸ್ವಾಮಿ ಸರಕಾರವನ್ನು ಉರುಳಿಸಲು ಕಳೆದ ಒಂದು ವರ್ಷದಿಂದ ಬಿಜೆಪಿ ಹಲವು ಬಾರಿ ನಡೆಸಿದ ಪ್ರಯತ್ನಗಳ ನಂತರ ಈ ಬೆಳವಣಿಗೆ ನಡೆದಿದೆ. ೨೦೧೮ರ ವಿಧಾನಸಭೆ ಚುನಾವಣೆಯಲ್ಲಿ ತಾನು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತದಿಂದ ತನಗೆ ಸರಕಾರ ನಡೆಸಲಾಗದು ಎಂಬ ವಾಸ್ತವವನ್ನು ಜೀರ್ಣಿಸಿಕೊಳ್ಳಲು ಬಿಜೆಪಿಗೆ ಆಗುತ್ತಿಲ್ಲ. ಆಳುವ ಮೈತ್ರಿಕೂಟದ ಶಾಸಕರಿಗೆ ಆಮಿಷ ಒಡ್ಡಲು ಹಾಗೂ ಲಂಚ ನೀಡಲು ಬಿಜೆಪಿ ಯಾವುದೇ ಹಿಂಜರಿಕೆ ತೋರಿಲ್ಲ. ಕೆಲವು ವರ್ಷಗಳ ಹಿಂದೆ ತಾನು ಚಾಲ್ತಿಗೆ ತಂದ ಆಪರೇಷನ್ ಕಮಲಕ್ಕೆ ಅದು ಮುಂದಾಗಿದೆ.
ಚುನಾಯಿತ ಪ್ರತಿನಿಧಿಗಳಿಗೆ ಲಂಚ ನೀಡಿ ಹಾಗೂ ಸ್ಥಾನಮಾನದ ಆಮಿಷಗಳನ್ನೊಡ್ಡುವುದು ಹಾಗೂ ಚುನಾಯಿತ ಸರಕಾರವನ್ನು ಬುಡಮೇಲು ಮಾಡಲು ಅಪಾರ ಪ್ರಮಾಣದ ಸಂಪನ್ಮೂಲವನ್ನು ಬಳಕೆ ಮಾಡುವುದು ಬಿಜೆಪಿಯ ಚಾಳಿಯಾಗಿ ಬಿಟ್ಟಿದೆ. ಇದಕ್ಕೂ ಮೊದಲು ಅರುಣಾಚಲ ಪ್ರದೇಶ ಮತ್ತು ಗೋವಾದಲ್ಲಿ ಸರಕಾರಗಳನ್ನು ರಚಿಸಲಿಕ್ಕಾಗಿ ಅದು ಪಕ್ಷಾಂತರಗಳನ್ನು ನಡೆಸಿತ್ತು. ಇಂಥ ಕೀಳು ಮಟ್ಟದ ತಂತ್ರಗಳ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮಲಿನಗೊಳಿಸಲು ಮೋದಿ-ಷಾ ಜೋಡಿ ನೇರವಾಗಿ ಹೊಣೆಗಾರನಾಗಿದೆ.
ರಚನೆಯಾದಂದಿನಿಂದ ಯಾವುದೇ ತಾಳಮೇಳವಿಲ್ಲದ ಅಥವಾ ದಿಕ್ಕುದೆಸೆಯಿಲ್ಲದಂತೆ ವರ್ತಿಸುತ್ತಿರುವ ಕಾಂಗ್ರೆಸ್-ಜೆಡಿಎಸ್ ರಚಿಸಿದ ಅಸ್ಥಿರ ಸರಕಾರದ ಸನ್ನಿವೇಶವನ್ನು ಬಳಸಿಕೊಂಡು ಇಂಥ ಪಕ್ಷಾಂತರಗಳನ್ನು ಸಂಘಟಿಸುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಕಾಂಗ್ರೆಸ್ ನಾಯಕರ ಕಚ್ಚಾಟ ಮತ್ತು ಅದರ ಕೆಲವು ಅಧಿಕಾರದಾಹಿ ಶಾಸಕರ ಕುತಂತ್ರಗಳು ಕೂಡ ಪ್ರಸ್ತುತ ಸನ್ನಿವೇಶಕ್ಕೆ ಕೊಡುಗೆ ನೀಡಿವೆ.
ಕರ್ನಾಟಕದ ರಾಜಕೀಯದಲ್ಲಿನ ಈ ಅವನತಿಯು ಭಾರತೀಯ ರಾಜಕೀಯ ವ್ಯವಸ್ಥೆಯನ್ನು ಕಾಡುತ್ತಿರುವ ಇನ್ನೂ ಆಳವಾದ ರೋಗದ ಸೂಚನೆಯಾಗಿದೆ. ದೊಡ್ಡ ಹಣಕಾಸು ಮತ್ತು ನವ ಉದಾರವಾದಿ ಬಂಡವಾಳದ ಆಕ್ರಮಣವು ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಪಕ್ಷ ವ್ಯವಸ್ಥೆಯ ಸಾರವನ್ನೇ ನಾಶಮಾಡಿದೆ. ಆಯ್ಕೆಯಾಗುತ್ತಿರುವ ಹೆಚ್ಚೆಚ್ಚು ಶಾಸಕರು ರಿಯಲ್ ಎಸ್ಟೇಟ್, ಸಾರಾಯಿ ದಂಧೆ, ಕಂಟ್ರಾಕ್ಟ್ ಇತ್ಯಾದಿ ವ್ಯಾಪಾರಿ ಹಿತಾಸಕ್ತಿ ಹೊಂದಿರುವವರಾಗಿದ್ದಾರೆ ಅಥವಾ ಗ್ರಾಮೀಣ ಸಮಾಜದ ಶ್ರೀಮಂತ ವರ್ಗಗಳಿಗೆ ಸೇರಿದವರಾಗಿದ್ದಾರೆ. ಈ ಶಕ್ತಿಗಳಿಗೆ ಬಂಡವಾಳಶಾಹಿ ಪಕ್ಷಗಳ ಟಿಕೆಟ್ ಸಿಗುತ್ತದೆ. ಈ ಜನರಲ್ಲಿ ಯಾವುದೇ ತತ್ವ ಸಿದ್ಧಾಂತದ ಲವಲೇಷವೂ ಇರುವುದಿಲ್ಲ.
ಕರ್ನಾಟಕದಲ್ಲಿ ಶಾಸಕರ ಕುದುರೆ ವ್ಯಾಪಾರ ನಡೆದಂತೆ ಆಂಧ್ರ ಪ್ರದೇಶದಲ್ಲಿ ತೆಲುಗು ದೇಶಂ ಶಾಸಕರು ಮತ್ತು ಸಂಸತ್ ಸದಸ್ಯರು ಬಿಜೆಪಿಗೆ ಸೇರಿದ್ದನ್ನು ನಾವು ನೋಡಿದ್ದೇವೆ. ಪಕ್ಷಾಂತರ ಮಾಡಿದ ತೆಲುಗುದೇಶಂನ ಎಲ್ಲಾ ನಾಲ್ವರು ರಾಜ್ಯಸಭೆ ಎಂಪಿಗಳು ವ್ಯಾಪಾರೋದ್ಯಮಿಗಳು ಎನ್ನುವುದು ಗಮನಾರ್ಹ.
ಬಿಜೆಪಿ ರಾಜಕೀಯದಲ್ಲಿ ವ್ಯಾಪಾರವನ್ನು ಬೆರೆಸುವ ಈ ವಿದ್ಯಮಾನದ ಉತ್ತುಂಗವನ್ನು ಪ್ರತಿನಿಧಿಸುತ್ತದೆ. ಈ ಪಕ್ಷ ಕಾರ್ಪೊರೇಟ್‌ಗಳಿಂದ ಹೆಚ್ಚು ಅನುಕೂಲ ಪಡೆದ ಪಕ್ಷವಾಗಿದ್ದು ತನ್ನ ರಾಜಕೀಯ ಕುತಂತ್ರದಾಟಗಳಿಗೆ ಈ ಹಣವನ್ನು ಬಳಸಿಕೊಳ್ಳುತ್ತಿದೆ. ಪಕ್ಷಾಂತರ ಮಾಡಿದ ಶಾಸಕರನ್ನು ಉದ್ಯಮಿ ಹಾಗೂ ಬಿಜೆಪಿ ನಾಯಕನಾಗಿರುವ ರಾಜ್ಯಸಭೆಯ ಸದಸ್ಯರೊಬ್ಬರ ಮಾಲಿಕತ್ವದ ಖಾಸಗಿ ಜೆಟ್ ಕಂಪೆನಿಯ ವಿಮಾನದಲ್ಲಿ ಮುಂಬಯಿಯ ಒಂದು ಪಂಚತಾರಾ ಹೊಟೇಲ್‌ಗೆ ಕರೆದುಕೊಂಡು ಹೋಗಿದ್ದು ಅಚ್ಚರಿಯ ಸಂಗತಿಯೇನೂ ಅಲ್ಲ.
ಕರ್ನಾಟಕದಲ್ಲಿ ಜನತಾಂತ್ರಿಕ ನಿಯಮಗಳನ್ನು ಬಿಜೆಪಿ ಬುಡಮೇಲು ಮಾಡುತ್ತಿರುವುದು ಮೋದಿ ಸರಕಾರದಡಿ ಪ್ರಜಾಪ್ರಭುತ್ವದ ಮೇಲೆ ನಡೆಯುತ್ತಿರುವ ವ್ಯಾಪಕ ದಾಳಿಯ ಭಾಗವಾಗಿದೆ. ಪ್ರಜಾಪ್ರಭುತ್ವ ಮತ್ತು ಜನತಾಂತ್ರಿಕ ಸಂಸ್ಥೆಗಳನ್ನು ರಕ್ಷಿಸುವುದು, ಚುನಾವಣೆ ಸುಧಾರಣೆಗಳು ಮತ್ತು ಪಕ್ಷಾಂತರಿ ಹಾಗೂ ಭ್ರಷ್ಟ ಜನಪ್ರತಿನಿಧಿಗಳಿಗೆ ಶಿಕ್ಷೆ ನೀಡುವುದು ಮುಂದಿನ ದಿನಗಳಲ್ಲಿ ದೇಶದ ಜನತಾಂತ್ರಿಕ ಶಕ್ತಿಗಳ ಕಾರ್ಯಸೂಚಿಯ ಆದ್ಯತೆಯಾಗಬೇಕು.
–ಪ್ರಕಾಶ್ ಕಾರಟ್
ಅನು: ವಿಶ್ವ
ಕೃಪೆ : ಜನಶಕ್ತಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರೈತರಿಗೆ ಉಚಿತ ವಿದ್ಯುತ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳ ಸ್ಥಾಪನೆ : ಸಚಿವ ಕೆ.ಜೆ.ಜಾರ್ಜ್
ಸುದ್ದಿದಿನ,ಚಿತ್ರದುರ್ಗ:ರೈತರಿಗೆ ಹಗಲು ಹೊತ್ತು ಏಳು ಘಂಟೆ ಉಚಿತ ಕರೆಂಟ್ ನೀಡಲು ರಾಜ್ಯಾದ್ಯಂತ ಸೋಲಾರ್ ಘಟಕಗಳಿಗೆ ಚಾಲನೆ ನೀಡಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ನೀರಗುಂದ ಗ್ರಾಮದ ಬಳಿ ನೂತನವಾಗಿ ನಿರ್ಮಾಣವಾಗಿರುವ ಸೋಲಾರ್ ಘಟಕದ ಕಾಮಗಾರಿ ಪರಿಶೀಲಿಸಿದ ಅವರು, ಜಿಲ್ಲೆಯ ಆರೂ ತಾಲೂಕುಗಳಲ್ಲಿ ಒಂಬತ್ತು ಸೋಲಾರ್ ಘಟಕಗಳು ಸ್ಥಾಪನೆಯಾಗಲಿದ್ದು ಇದರಿಂದ ಅರವತ್ತೆರಡು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುವುದು ಎಂದು ಹೇಳಿದರು.
ಇಂಧನ ಇಲಾಖೆಯು ರಾಜ್ಯಾದ್ಯಂತ 154 ಸೋಲಾರ್ ಘಟಕಗಳನ್ನು ಸ್ಥಾಪಿಸಿ 1 ಸಾವಿರದ 81 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿ ಸ್ವಾವಲಂಬನೆ ಸಾಧಿಸಲು ನಿರ್ಧರಿಸಿದೆ ಎಂದು ತಿಳಿಸಿದರು.
ಇನ್ನೊಂದೆಡೆ ತುಮಕೂರಿನ ಸಿರಾ ತಾಲ್ಲೂಕಿನ ಚೆಂಗಾವರದಲ್ಲಿ ಪಿ.ಎಂ.ಕುಸುಮ್ ಯೋಜನೆಯಡಿ ನಿರ್ಮಿಸಿರುವ ಸೋಲಾರ್ ಪಾರ್ಕ್ ವೀಕ್ಷಿಸಿ ಮಾತನಾಡಿದ ಅವರು, ರಾಜ್ಯದಾದ್ಯಂತ ಸೋಲಾರ್ ಘಟಕಗಳನ್ನು ನಿರ್ಮಿಸಿ 3 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನ ; ನಾಳೆ ಸರ್ಕಾರಿ ರಜೆ ಘೋಷಣೆ
ಸುದ್ದಿದಿನಡೆಸ್ಕ್:ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು ಘೋಷಣೆ ಮಾಡಲಾಗಿದೆ. ನಾಳೆ ಅವರ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಯಲಿದ್ದು, ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.
ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ವಿದೇಶಾಂಗ ಸಚಿವ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಇಂದು ನಸುಕಿನ ಜಾವ 2:30ರ ಸುಮಾರಿಗೆ ನಿಧನರಾಗಿದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ನಾಳೆ ಬೆಳಗಾವಿ ಸೌಧದಲ್ಲಿ ನಡೆಯ ಬೇಕಾಗಿದ್ದ ಕಲಾಪಗಳನ್ನು ಗುರುವಾರಕ್ಕೆ ಮುಂದೂಡಲಾಗಿದೆ.
ವಯೋಸಹಜ ಅನಾರೋಗ್ಯದ ಕಾರಣ ಅವರು ಇತ್ತೀಚೆಗಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆಯಾಗಿದ್ದರು. ಆದಾಗ್ಯೂ ನಂತರ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.
ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಮೃತರ ಅಂತ್ಯ ಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
2009 ರಿಂದ 2012ರ ಅಕ್ಟೋಬರ್ 28ರವರೆಗೆ ವಿದೇಶಾಂಗ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಸ್. ಎಂ. ಕೃಷ್ಣ ಅವರು, 2004ರಿಂದ 2008ರವರೆಗೆ ಮಹಾರಾಷ್ಟ್ರದ 18ನೇ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
1999ರ ಅಕ್ಟೋಬರ್ 11ರಿಂದ 2004ರ ಮೇ 28ರವರೆಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದ ಎಸ್. ಕೃಷ್ಣ ಅವರು, ಉಪಮುಖ್ಯಮಂತ್ರಿಯಾಗಿ, ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ.
ಕೃಷ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಹಾಗೂ ಹಿರಿಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ರಾಜಕೀಯ ನಿವೃತ್ತಿಯ ಅಂಚಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243