ದಿನದ ಸುದ್ದಿ
17 ಅನರ್ಹ ಶಾಸಕರ ಅರ್ಜಿ ತುರ್ತು ವಿಚಾರಣೆಗೆ ಅಂಗೀಕರಿಸಿದ ಸುಪ್ರೀಂ
ಸುದ್ದಿದಿನ,ದೆಹಲಿ: 17 ಅನರ್ಹ ಶಾಸಕರು ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರ್ಧರಿಸಿದೆ. ಅಂದಿನ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಆದೇಶ ಪ್ರಶ್ನಿಸಿ 17 ಅನರ್ಹ ಶಾಸಕರು ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ನಡಲ್ಲಿ ಸಲ್ಲಿಸಿದ್ದರು.
ಅನರ್ಹ ಶಾಸಕರ ಪರ ಹಿರಿಯ ವಕೀಲ ವಿ.ಗಿರಿ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಈ ಮನವಿಯನ್ನು ಪರಿಗಣಿಸಿದ ಕೋರ್ಟ್, ವಿಚಾರಣೆ ಪಟ್ಟಿಗೆ ಸೇರಿಸಲು ಕೋರ್ಟ್ ರಿಜಿಸ್ಟ್ರಾರ್ ಗೆ ಸೂಚನೆ ನೀಡಿದೆ.