Connect with us

ರಾಜಕೀಯ

ಬರಿದಾಗುತ್ತಿದೆ ಕರ್ನಾಟಕದ ಖಜಾನೆ

Published

on

  • ವಿವೇಕಾನಂದ ಹೆಚ್.ಕೆ

ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ. ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ ಸಂಸಾರದಂತಾಗಿದೆ. ಮೈನಸ್ ಬಜೆಟ್ ಆಗಿ ಮುಂದುವರಿಯುತ್ತಿದೆ. ಹೇಗೋ ಕಷ್ಟ ಪಟ್ಟು ತೂಗಿಸಿಕೊಂಡು ಹೋಗುವಂತಾಗಿದೆ.

ಕರ್ನಾಟಕ ಮೂಲದ ವಿಪ್ರೋ, ಇನ್ಫೋಸಿಸ್, ಬಯೋಕಾನ್ ಮುಂತಾದ ಖಾಸಗಿ ಸಂಸ್ಥೆಗಳು ಏರು ಮುಖದ ಪ್ರಗತಿ ದಾಖಲಿಸುತ್ತಿವೆ. ಸರ್ಕಾರದ ಲೆಕ್ಕವೂ ಏರು ಮುಖದಲ್ಲಿದೆ ಆದರೆ ಸಾಲ ಮತ್ತು ಬಡ್ಡಿಯ ಲೆಕ್ಕದಲ್ಲಿ. ಇದಕ್ಕೆ ಕೇವಲ ಒಂದು ಪಕ್ಷ, ಸರ್ಕಾರ ಅಥವಾ ವ್ಯಕ್ತಿ ಕಾರಣವಲ್ಲ. ಇಡೀ ಸರ್ಕಾರಿ ವ್ಯವಸ್ಥೆಯ ಇತಿಹಾಸ ಕಾರಣವಾಗಿದೆ. ಇದೇನು ಆಶ್ಚರ್ಯಪಡುವಂತಹ ವಿಷಯವಲ್ಲ. ಸರ್ಕಾರದ ಆದಾಯ ಖರ್ಚು ಲೆಕ್ಕಗಳನ್ನು ಸೂಕ್ಷ್ಮವಾಗಿ ಮತ್ತು ಕೂಲಂಕಷವಾಗಿ ಪರಿಶೀಲಿಸಿದರೆ ಎಲ್ಲರಿಗೂ ಅರ್ಥವಾಗುತ್ತದೆ.

ಸರ್ಕಾರವೆಂಬುದು ಆಳುವ ಪಕ್ಷಗಳಿಗೆ ಬಾಡಿಗೆ ಮನೆ ಇದ್ದಂತೆ. ಅದು ಯಾವತ್ತಿಗೂ ತಾತ್ಕಾಲಿಕ ಎಂಬ ಅರಿವು ಅಧಿಕಾರಸ್ಥರಿಗೆ ತಿಳಿದಿರುತ್ತದೆ. ಆದ್ದರಿಂದ ಅವರು ಎಷ್ಟು ಸಾಧ್ಯವೋ ಅಷ್ಟು ತಮ್ಮ ಹಿತಾಸಕ್ತಿಗೆ ಅನುಕೂಲಕರ ಕೆಲಸಗಳನ್ನು ಮಾಡಿ ತಕ್ಷಣದ ಲಾಭಗಳನ್ನು ಮಾಡಿಕೊಂಡು ದೀರ್ಘಕಾಲದಲ್ಲಿ ಅದರ ಪರಿಣಾಮಗಳನ್ನು ನಿರ್ಲಕ್ಷಿಸುತ್ತಾರೆ.

ಅದರಿಂದಾಗಿಯೇ ಇವತ್ತಿನ ಖಜಾನೆಯ ಪರಿಸ್ಥಿತಿ. ಇದು ತಾತ್ಕಾಲಿಕವೇ ಇರಬಹುದು. ಮುಂದೆ ಸರಿ ಹೋಗಬಹುದು. ಆದರೆ ಸರ್ಕಾರದ ಮಟ್ಟದಲ್ಲಿ ಈ ಸ್ಥಿತಿ ಒಳ್ಳೆಯದಲ್ಲ. ಒಬ್ಬ ವ್ಯಕ್ತಿ ಅಥವಾ ಒಂದು ಖಾಸಗಿ ಸಂಸ್ಥೆಯ ಏರಿಳಿತಗಳು ಸಹಜ ಮತ್ತು ಅದರ ಪರಿಣಾಮ ಕಡಿಮೆ ಪ್ರಮಾಣದಲ್ಲಿ ಇರುತ್ತದೆ. ಆದರೆ ಶಾಸಕಾಂಗ ಕಾರ್ಯಾಂಗ ನ್ಯಾಯಾಂಗಗಳ ಹದ್ದಿನ ಕಣ್ಣಿನಲ್ಲಿ, ಅಂಕಗಳ ದೃಷ್ಟಿಯಿಂದ ಅತಿ ಬುದ್ದಿವಂತರಾದವರು ಇದನ್ನು ನಿರ್ವಹಿಸುತ್ತಿರುತ್ತಾರೆ. ರಾಜ್ಯದ ಎಲ್ಲಾ ಅಧಿಕಾರ ಮತ್ತು ಸಂಪನ್ಮೂಲಗಳು ಅವರ ನಿಯಂತ್ರಣದಲ್ಲಿಯೇ ಇರುತ್ತವೆ. ಅಲ್ಲದೆ ಇಡೀ ರಾಜ್ಯದ ಜನರ ಬದುಕಿನ ಪ್ರಶ್ನೆ ಅಡಗಿರುತ್ತದೆ. ಆದ್ದರಿಂದ ತುಂಬಾ ತುಂಬಾ ಜವಾಬ್ದಾರಿಯುತವಾಗಿ ಆರ್ಥಿಕ ಪರಿಸ್ಥಿತಿ ನಿಭಾಯಿಸಬೇಕಾಗುತ್ತದೆ.

ಕೇವಲ ಇಷ್ಟೇ ಅಲ್ಲ. ಈ ಸರ್ಕಾರ ನಡೆಸಲು ರಾಜ್ಯ ಆದಾಯದ ಅತಿದೊಡ್ಡ ಭಾಗ ಅದರ ನಿರ್ವಹಣೆಗೇ ಹೋಗುತ್ತದೆ. ಹೀಗಿದ್ದರೂ ಅವ್ಯವಸ್ಥೆ ಇದೆ ಎಂದರೆ ಸರ್ಕಾರದ ಅದಕ್ಷತೆಗೆ ಇದಕ್ಕಿಂತ ಉದಾಹರಣೆ ಬೇಕಿಲ್ಲ.

ಹಾಗಾದರೆ, ಕರ್ನಾಟಕ ಭಾರತದಲ್ಲಿ ಬಡ ರಾಜ್ಯವೇ ? ಇಲ್ಲಿನ ಆದಾಯ ಕಡಿಮೆಯಾಗುತ್ತಿದೆಯೇ ? ಸಂಪನ್ಮೂಲಗಳು ಬರಿದಾಗಿವೆಯೇ ?ಖಂಡಿತ ಇಲ್ಲ. ಹಣವೇ ಅಭಿವೃದ್ಧಿ ಎಂದು ಭಾವಿಸಿರುವ ಈ ಆಧುನಿಕ ಕಾಲದಲ್ಲಿ, ಮಾಹಿತಿ ತಂತ್ರಜ್ಞಾನದ ಸೇವೆಯಲ್ಲಿ ಬೆಂಗಳೂರು ವಿಶ್ವದ ಒಂದೋ ಎರಡನೆಯದೋ ಅತಿ ಹೆಚ್ಚು ಹಣ ಸಂಪಾದನೆಯ ನಗರವಾಗಿದೆ. ಶಿಕ್ಷಣ, ಆರೋಗ್ಯ ವಿಷಯದಲ್ಲೂ ಮುಂಚೂಣಿಯಲ್ಲಿದೆ. ಪ್ರವಾಸೋದ್ಯಮದಲ್ಲಿ ಮೈಸೂರು, ರೇಷ್ಮೆ ಬೆಳೆಯಲ್ಲಿ ರಾಮನಗರ, ಮತ್ಸೋದ್ಯಮದಲ್ಲಿ ಕರಾವಳಿ ಕರ್ನಾಟಕ, ಅಡಿಕೆ ಕಾಫಿ ಉತ್ಪಾದನೆಯಲ್ಲಿ ಮಲೆನಾಡು, ವಾಣಿಜ್ಯ ನಗರಗಳಾಗಿ ಹುಬ್ಬಳ್ಳಿ ಬೆಳಗಾವಿ, ದ್ರಾಕ್ಷಿ ದಾಳಿಂಬೆ ತರಕಾರಿ ಕೃಷಿಯಲ್ಲಿ ಬಿಜಾಪುರ ಯಾದಗಿರಿ, ಸಿದ್ದ ಉಡುಪು ಕ್ಷೇತ್ರದಲ್ಲಿ ದಾವಣಗೆರೆ ಮುಂತಾದ ಲಾಭದಾಯಕ ಪ್ರದೇಶಗಳನ್ನು ಕರ್ನಾಟಕ ಒಳಗೊಂಡಿದೆ. ಆದರೂ ಈ ಪರಿಸ್ಥಿತಿ ಏಕೆ ?

ವಾಸ್ತವದಲ್ಲಿ ಸರ್ಕಾರದ ಆದಾಯ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದೆ. ಆದರೆ ಅದನ್ನು ಖರ್ಚು ಮಾಡುವ ರೀತಿ ಅಸಮರ್ಪಕವಾಗಿದೆ. ಮುಖ್ಯವಾಗಿ ಭ್ರಷ್ಟಾಚಾರ ಮತ್ತು ದುಂದು ವೆಚ್ಚ ಇದಕ್ಕೆ ಅತಿಮುಖ್ಯ ಕಾರಣವಾಗಿದೆ. ಉದಾಹರಣೆಗೆ 100 ರೂಪಾಯಿ ಖರ್ಚು ಮಾಡುವ ಅವಶ್ಯಕತೆ ಇರುವಲ್ಲಿ ಸುಮಾರು 500 ರಷ್ಟು ರೂಪಾಯಿ ಅಧಿಕೃತವಾಗಿಯೇ ಖರ್ಚಾಗುತ್ತದೆ. ಪಾರದರ್ಶಕ ಕಾನೂನು, ಟೆಂಡರ್ ಪ್ರಕ್ರಿಯೆ ಎಲ್ಲಾ ಇದ್ದರೂ ಆ ನಿಯಮಗಳನ್ನು ಸಹ ವಂಚಿಸಲಾಗುತ್ತದೆ.

ಈ ಅವ್ಯವಸ್ಥೆ ತಡೆಯಲು ನಮ್ಮಲ್ಲಿ ಕಂಟ್ರೋಲರ್ ಅಂಡ್ ಆಡಿಟರ್ ಜನರಲ್ ಎಂಬ ಲೆಕ್ಕ ಪತ್ರ ಇಲಾಖೆಯಿದೆ. ರಿಸರ್ವ್ ಬ್ಯಾಂಕ್, ಚುನಾವಣಾ ಆಯೋಗ, ತೆರಿಗೆ ಇಲಾಖೆಯ ರೀತಿ ಇದೂ ಸಹ ಸರ್ಕಾರದ ನಿಯಂತ್ರಣದಲ್ಲಿ ಇಲ್ಲದ ಸ್ವಾಯುತ್ತ ಸಂಸ್ಥೆ. ಸರ್ಕಾರದ ಪ್ರತಿ 1 ರೂಪಾಯಿ ಖರ್ಚು ವೆಚ್ಚ ಮತ್ತು ಅದರ ಸದುಪಯೋಗದ ಮೇಲೆ ನಿಗಾ ಇಡುವ ಸಂಸ್ಥೆ ಇದು. ಆದರೂ ವ್ಯವಸ್ಥೆಯ ಮೇಲೆ ನಿಯಂತ್ರಣ ಸಾಧ್ಯವಾಗುತ್ತಿಲ್ಲ.

ಸಾಮಾನ್ಯ ಪರಿಸ್ಥಿತಿಯಲ್ಲಿಯೇ ಹಣದ ಕೊರತೆಯ ವಿಷಯದಲ್ಲಿ ಎದುಸಿರು ಬಿಡುತ್ತಿರುವಾಗ ಇನ್ನು ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಭೀಕರತೆ ಎದುರಾಗದೆ ಇರುತ್ತದೆಯೇ ? ಸರ್ಕಾರಗಳು ಓಟಿನ ರಾಜಕೀಯದಲ್ಲಿ ತಮಗೆ ಇಷ್ಟ ಬಂದಂತೆ ಯೋಜನೆಗಳನ್ನು ಘೋಷಿಸುತ್ತಾರೆ. ಯಾವುದೇ ಪೂರ್ವ ತಯಾರಿ, ಹಣಕಾಸಿನ ನಿರ್ಧಿಷ್ಟ ಮಾನದಂಡ ಇರುವುದಿಲ್ಲ. ಹೇಗೋ ಮುಂದೆ ನೋಡೋಣ. ಈಗ ಜನ ಮೆಚ್ಚಿದರೆ ಸಾಕು ಎಂದು ಧೋರಣೆ ಇವರದು. ಜನರೂ ಸಹ ತಾತ್ಕಾಲಿಕ ಲಾಭಕ್ಕೆ ಹೆಚ್ಚು ಕಾತುರರಾಗಿರುತ್ತಾರೆ. ಆ ಎಲ್ಲದರ ಪರಿಣಾಮ ಸದ್ಯಕ್ಕೆ ದಿವಾಳಿಯತ್ತ ಕರ್ನಾಟಕ ಸರ್ಕಾರದ ಆರ್ಥಿಕ ಪರಿಸ್ಥಿತಿ.

ಭಯ ಪಡುವ ಅವಶ್ಯಕತೆ ಇಲ್ಲ. ಕರ್ನಾಟಕ ನಿಜಕ್ಕೂ ಸಂಪದ್ಭರಿತ ರಾಜ್ಯ. ಆದರೆ ಇತ್ತೀಚಿನ ಸಮ್ಮಿಶ್ರ ಸರ್ಕಾರಗಳ ಬ್ಲ್ಯಾಕ್ ಮೇಲ್ ರಾಜಕೀಯದಲ್ಲಿ, ಜಾತಿ ಅಭಿಮಾನದಲ್ಲಿ, ಮತ್ತು ಒಟ್ಟು ವ್ಯವಸ್ಥೆಯ ಭ್ರಷ್ಟಾಚಾರದಲ್ಲಿ ನಲುಗುತ್ತಿದೆ. ಜನರು ಚುನಾವಣಾ ವ್ಯವಸ್ಥೆಯಲ್ಲಿ ಜಾಗೃತರಾದರೆ ಇದಕ್ಕೆ ಪರಿಹಾರ ಖಂಡಿತ ಸಿಗುತ್ತದೆ. ಅಲ್ಲಿಯವರೆಗೂ ಜನರನ್ನು ಪ್ರಬುದ್ದರಾಗಿಸುವ ಕೆಲಸ ನಾವು ಮಾಡೋಣ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ14 hours ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ....

ದಿನದ ಸುದ್ದಿ14 hours ago

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು...

ದಿನದ ಸುದ್ದಿ2 days ago

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ...

ದಿನದ ಸುದ್ದಿ3 days ago

ಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲಿಸುವ ಯೋಜನೆಯಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿ̧ದೆ, ಅರ್ಜಿಗಳನ್ನು ಏಪ್ರಿಲ್‌...

ದಿನದ ಸುದ್ದಿ3 days ago

ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಸೇರಲು ಆಸಕ್ತರು ಏಪ್ರಿಲ್‌ 10 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಆಸಕ್ತರು ಸೇನೆಯ ಅಧಿಕೃತ ವೆಬ್‌ಸೈಟ್ www.joinindianarmy.nic.in ಗೆ...

ದಿನದ ಸುದ್ದಿ3 days ago

ಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ

ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 9 ರಂದು ನಡೆಯಲಿರುವ ಮತದಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ಚುನಾವಣಾ ಆಯೋಗವು ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು...

ಅಂತರಂಗ4 days ago

ಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ

~ಗೋವರ್ಧನ ನವಿಲೇಹಾಳು  ಮಧ್ಯ ಕರ್ನಾಟಕದ ಹೃದಯಭಾಗವಾದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಈಗ ಉಪಚುನಾವಣೆಯ ಕಾವು‌ ಏರುತ್ತಲೇ ಇದೆ. ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದಾಗಿ...

ದಿನದ ಸುದ್ದಿ7 days ago

ಕಾಂಗ್ರೆಸ್ ನಿಂದ ಮಾತ್ರ ಜನಪರ ಯೋಜನೆ ನೀಡಲು ಸಾಧ್ಯ: ಡಾ. ಪ್ರಭಾ ಮಲ್ಲಿಕಾರ್ಜುನ

ಸುದ್ದಿದಿನ,ದಾವಣಗೆರೆ:ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೆ ತರುತ್ತಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕೋಟಿ ರೂಪಾಯಿ ಅನುದಾನ ನೀಡಿದ್ದಾರೆ. ಕಾಂಗ್ರೆಸ್...

ಅಂಕಣ7 days ago

ಸಂಪಾದಕೀಯ | ಯುದ್ಧದ ನರಕ ; ಅಮೆರಿಕಾ-ಇಸ್ರೇಲ್ ಆಕ್ರಮಣ : ಇರಾನ್ ಮೇಲಿನ ಅಮಾನುಷ ಹಲ್ಲೆ

~ಗೋವರ್ಧನ ನವಿಲೇಹಾಳು ಏಪ್ರಿಲ್ 3, 2026 ರಿಂದ ಇರಾನ್-ಇಸ್ರೇಲ್-ಅಮೆರಿಕಾ ಸಂಘರ್ಷವು ಐದನೇ ವಾರಕ್ಕೆ ಕಾಲಿಟ್ಟಿದೆ. ತೆಹ್ರಾನ್ ಮತ್ತು ಇಸ್ಫಹಾನ್‌ನಲ್ಲಿ ಧೂಮ್ರಜಾಲದ ಕಪ್ಪು ಮೋಡಗಳು, ಬೆಂಕಿಯ ಉರಿ ಭುಗಿಲೆದ್ದಿದೆ....

ದಿನದ ಸುದ್ದಿ1 week ago

ಕಾಂಗ್ರೆಸ್ ಸರಕಾರದ ದುರಾಡಳಿತ ; ಆರೋಪ ಪಟ್ಟಿ ಬಿಡುಗಡೆ

ಸುದ್ದಿದಿನ,ದಾವಣಗೆರೆ:ಮುಖ್ಯಮಂತ್ರಿಗಳೇ, ಒಳ್ಳೆಯ ಕಾರಣಕ್ಕೆ ನಿಮ್ಮ ಸರಕಾರ ಯಾವಾಗ ಸುದ್ದಿಯಾಗಿದೆ ಹೇಳಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು...

Trending