ರಾಜಕೀಯ
ಲೋಕಸಭಾ ಚುನಾವಣೆ ನಂತರ ಸಚಿವ ಸಂಪುಟ ವಿಸ್ತರಣೆ
ಸುದ್ದಿದಿನ ಡೆಸ್ಕ್ : ದೋಸ್ತಿ ಸರ್ಕಾರದ ಸಚಿವ ಸಂಪುಟ ಸೇರುವ ಕನಸಿನಲ್ಲಿದ್ದ ಸಚಿವಸ್ಥಾನಾಕಾಂಕ್ಷಿಗಳಿಗೇ ಮತ್ತೊಮ್ಮೆ ನಿರಾಸೆ ಎದುರಾಗಿದೆ. ಹೌದು ದೋಸ್ತಿ ಸರ್ಕಾರದ ಸಂಪುಟ ಪುನರ್ ರಚನೆ ಲೋಕಸಭಾ ಚುನಾವಣೆಯವರೆಗೂ ನಡೆಯೋದು ಡೌಟ್. ಮೊದಲು ವಿಧಾನಪರಿಷತ್ ಚುನಾವಣೆ ಬಳಿಕ ಸಂಪುಟ ಪುನರ್ ರಚನೆ ಎಂದಿದ್ದ ನಾಯಕರು, ಇದೀಗ ವಿಧಾನ ಉಪಚುನಾವಣೆ ಬಳಿಕ ಪುನರ್ ರಚನೆ ಎನ್ನುತ್ತಿದ್ದಾರೆ.
ಆದ್ರೆ ಉಪಚುನಾವಣೆ ಮುಗಿಯುವ ಹೊತ್ತಿಗೆ ನವೆಂಬರ್ ಕಳೆದಿರುತ್ತೆ. ಡಿಸೆಂಬರ್ ವೇಳೆಗೆ ಲೋಕಸಭೆ ಎಲೆಕ್ಷನ್ ಹವಾ ಶುರುವಾಗುತ್ತೆ. ಹೀಗಾಗಿ ಸಂಪುಟ ಪುನರ್ ರಚನೆ ಬಹುತೇಕ ಡೌಟ್. ಹೀಗಾಗಿ ಸಚಿವ ಸಂಪುಟ ಸೇರುವ ಕನಸಿನಲ್ಲಿದ್ದ ಶಾಸಕರಿಗೆ ಬೇಸರವಾಗಿದ್ದು, ಅಸಮಧಾನ ಭುಗಿಲೇಳುವ ಸಾಧ್ಯತೆ ಇದೆ.
ಇನ್ನು ಸಚಿವ ಸಂಪುಟ ವಿಸ್ತರಣೆಯಾಗದೇ ಹೋದಲ್ಲಿ ರಾಜ್ಯ ರಾಜಕಾರಣದಲ್ಲಿ ಯಾವ ಬೆಳವಣಿಗೆಗಳು ನಡೆಯುತ್ತವೆ ಅನ್ನೋದು ಕುತೂಹಲ ಮೂಡಿಸಿದೆ. ಮೂಲದ ಪ್ರಕಾರ ಈಗಾಗಲೇ ಸಂಪುಟ ವಿಸ್ತರಿಸಿದರೆ ಸರ್ಕಾರ ಉರುಳಬಹುದು ಹಾಗಾಗಿ ಲೋಕಸಭಾ ಚುನಾವಣೆವರೆಗೂ ಮುಂದೂಡಬೇಕೆಂದು ಮಾಜಿ ಪ್ರಧಾನಿ ದೇವೇಗೌಡರು ರಾಜ್ಯ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಮೂಲಕ ರಾಹುಲ್ ಗಾಂಧಿಗೆ ಒತ್ತಡ ಹೇರಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ಮುಂದಿನ ವಾರ ಸಂಪುಟ ವಿಸ್ತರಣೆ ಅನುಮಾನ. ಒಟ್ಟಿನಲ್ಲಿ ದೋಸ್ತಿ ಸರ್ಕಾರವನ್ನು ಉಳಿಸಿಕೊಳ್ಳಲು ದೇವೆಗೌಡರು ಹಾಗೂ ಕಾಂಗ್ರೆಸ್ ಹೈಕಮಾಂಡ ದಿನಕ್ಕೊಂದು ತಂತ್ರ ಹೂಡುತ್ತಿರೋದಂತು ಸುಳ್ಳಲ್ಲ.ಈ ಹಿನ್ನೆಲೆಯಲ್ಲಿ ಶಾಸಕ ಬಿ.ಸಿ.ಪಾಟೀಲ್ ಅಸಮಾಧಾನ ವ್ಯಕ್ತಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986815401
ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ | ಮತದಾರರಿಗೆ ವಿಶೇಷ ಸಾಂದರ್ಭಿಕ ರಜೆ
ಸುದ್ದಿದಿನ,ದಾವಣಗೆರೆ : ವಿಧಾನ ಪರಿಷತ್ನ ಆಗ್ನೆಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರಕ್ಕೆ ಜೂನ್ 3 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾರರಾಗಿರುವ ಶಿಕ್ಷಕರಿಗೆ ಹಾಗೂ ಪದವೀಧರರಿಗೆ ಮತದಾನ ಮಾಡಲು ವಿಶೇಷ ಸಾಂದರ್ಭಿಕ ರಜೆಯನ್ನು ನೀಡಲಾಗಿರುತ್ತದೆ.
ಸರ್ಕಾರಿ ಹಾಗೂ ಖಾಸಗಿ ಶಾಲಾ ಕಾಲೇಜುಗಳು, ಅನುದಾನಿತ ಹಾಗೂ ಅನುದಾನ ರಹಿತ ವಿದ್ಯಾ ಸಂಸ್ಥೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕುಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಉಳಿದ ಕೈಗಾರಿಕೆ ಸಂಸ್ಥೆಗಳು ಹಾಗೂ ಸಹಕಾರ ರಂಗದ ಸಂಘ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ ಔದ್ಯಮಿಕ ಸಂಸ್ಥೆಗಳಲ್ಲಿ ಮತ್ತು ಇತರ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅಂತಹ ಅರ್ಹ ಮತದಾರರಿಗೆ ಸೀಮಿತವಾದಂತೆ ಚಲಾಯಿಸಲಿರುವ ಮತದಾರರಿಗೆ ಮತದಾನದ ದಿನವಾದ ಜೂನ್ 3 ರ ಸೋಮವಾರದಂದು ವಿಶೇಷ ಸಾಂದರ್ಭಿಕ ರಜೆ ಯನ್ನು ಮಂಜೂರು ಮಾಡಲು ಆದೇಶಿಸಲಾಗಿದೆ.
ಮತದಾನ ಮಾಡುವ ಸಮಯದಲ್ಲಿ ಮತದಾರರನ್ನು ಗುರುತಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ ಮುಖ್ಯ ದಾಖಲಾತಿಯಾಗಿ ಹಾಜರು ಪಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದವರು ಗುರುತಿನ ಚೀಟಿ ಹೊಂದಿಲ್ಲದಿದ್ದಲ್ಲಿ ಅಂತಹವರು ಭಾರತ ಚುನಾವಣಾ ಆಯೋಗವು ನಿರ್ಧರಿಸಿರುವ ಪೂರಕ ದಾಖಲಾತಿಗಳ ಪೈಕಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ.
ಪೂರಕ ದಾಖಲಾತಿ
ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ಕಾರ್ಡ್, ಇಂಡಿಯಾನ್ ಪಾಸ್ ಪೋರ್ಟ್, ಕೇಂದ್ರ, ರಾಜ್ಯ ಸರ್ಕಾರದ ಅಡಿಯಲ್ಲಿ ಬರುವ ಸ್ಥಳೀಯ ಸಂಸ್ಥೆಗಳು ಅಥವಾ ಇತರ ಖಾಸಗಿ ಕೈಗಾರಿಕಾ ಮನೆಗಳಿಂದ ಅದರ ಉದ್ಯೋಗಿಗಳಿಗೆ ನೀಡಲಾದ ಸೇವಾ ಗುರುತಿನ ಕಾರ್ಡ್, ಸಂಸದರು, ಶಾಸಕರು, ಎಂಎಲ್ಸಿಗಳಿಗೆ ಅಧಿಕೃತ ಗುರುತಿನ ಚೀಟಿ, ಶಿಕ್ಷಣ ಸಂಸ್ಥೆಗಳಿಂದ ನೀಡಲಾದ ಸೇವಾ ಗುರುತಿನ ಕಾರ್ಡ್ಗಳು, ಇದರಲ್ಲಿ ಶಿಕ್ಷಕರು, ಪದವೀಧರರ ಕ್ಷೇತ್ರದ ಮತದಾರರನ್ನು ನೇಮಿಸಿಕೊಳ್ಳಬಹುದು, ವಿಶ್ವವಿದ್ಯಾಲಯವು ನೀಡಿದ ಪದವಿ, ಡಿಪ್ಲೋಮಾ ಮೂಲ ಪ್ರಮಾಣ ಪತ್ರ, ಸಕ್ಷಮ ಪ್ರಾಧಿಕಾರದಿಂದ ನೀಡಿದ ದೈಹಿಕನ್ಯೂನತೆಯ ಪ್ರಮಾಣ ಪತ್ರ, ವಿಶಿಷ್ಟ ಅಂಗವೈಕಲ್ಯ ಕಾರ್ಡ್(UDID) ಮೂಲಕ ಮತದಾನ ಮಾಡಬಹುದು ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮತದಾನದಲ್ಲಿ ಮಹಿಳೆಯರದೇ ಮೇಲುಗೈ
ಸುದ್ದಿದಿನ ಡೆಸ್ಕ್ : ಲೋಕಸಭೆಯ ಆರನೇ ಹಂತದ ಚುನಾವಣೆಯಲ್ಲಿ ಪುರುಷರಿಗಿಂತ ಶೇ.3ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಹಿಳಾ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.
ಇದೇ ತಿಂಗಳ 25 ರಂದು ನಡೆದ ಆರನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿದ ಮತದಾರರ ಅಂಕಿ-ಅಂಶವನ್ನು ಬಿಡುಗಡೆಗೊಳಿಸಿರುವ ಚುನಾವಣಾ ಆಯೋಗ, ಶೇಕಡ 61.95 ಅರ್ಹ ಪುರುಷ ಮತದಾರರಿಗೆ ಹೋಲಿಸಿದರೆ. ಶೇಕಡ 64.95 ಅರ್ಹ ಮಹಿಳಾ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ, ಇದಲ್ಲದೆ, ಶೇಕಡ 18.67 ರಷ್ಟು ತೃತೀಯಲಿಂಗಿಗಳ ಮತದಾನದಲ್ಲಿ ಪಾಲ್ಗೊಂಡರು ಎಂದು ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243|
ದಿನದ ಸುದ್ದಿ
ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವು
ಸುದ್ದಿದಿನ ಡೆಸ್ಕ್ : ಇತ್ತೀಚೆಗಷ್ಟೇ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.
ಬಿಎಸ್ ವೈ ಅವರ ಬಳಿ ಸಹಾಯ ಕೋರಲು ಹೋದಾಗ ತನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ಅನ್ನು ಮಹಿಳೆ ದಾಖಲಿಸಿದ್ದರು.
ದೂರುದಾರೆಯು ಶ್ವಾಸಕೋಶದ ಕ್ಯಾನ್ಸರ್ನಿಂದ ಬಳಲುತ್ತಿದ್ದು, ಅವರನ್ನು ಹುಳಿಮಾವು ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ. ಆದರೆ ನಿನ್ನೆಯಷ್ಟೇ ಅವರು ಚೆನ್ನಾಗಿದ್ದರು ಎಂದು ಮೂಲಗಳು ಹೇಳುತ್ತಿವೆ. ವೈದ್ಯರ ವರದಿಯನ್ನು ಪೊಲೀಸರು ಎದುರು ನೋಡುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ನೂತನ ಸಂಸದರನ್ನು ಸ್ವಾಗತಿಸಲು ಲೋಕಸಭಾ ಕಾರ್ಯಾಲಯ ಸಜ್ಜು ; ಸಂಸದರಿಗೆ ಇಷ್ಟೆಲ್ಲಾ ಸವಲತ್ತುಗಳು..!
-
ದಿನದ ಸುದ್ದಿ7 days ago
ವಿಧಾನಪರಿಷತ್ ಚುನಾವಣೆ ; ಬಿರುಸಿನ ಪ್ರಚಾರ
-
ದಿನದ ಸುದ್ದಿ7 days ago
ಕವಿತೆ | ಒಂದು ಕಪ್ ಕಾಫಿ
-
ದಿನದ ಸುದ್ದಿ7 days ago
ಕ್ಯಾನ್ಸ್ ಚಲನಚಿತ್ರೋತ್ಸವ | ಭಾರತದ ನಿರ್ಮಾಪಕಿ ಪಾಯಾಲ್ ಕಪಾಡಿಯಾಗೆ ಗ್ರಾಂಡ್ ಪ್ರಿಕ್ಸ್ ಪ್ರಶಸ್ತಿ
-
ದಿನದ ಸುದ್ದಿ3 days ago
ಚನ್ನಗಿರಿ | ರಕ್ತದಾನ ಶಿಬಿರ
-
ಕ್ರೀಡೆ6 days ago
ಬೆಳಗಿನ ಪ್ರಮುಖ ಸುದ್ದಿಗಳು
-
ದಿನದ ಸುದ್ದಿ6 days ago
ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವು
-
ದಿನದ ಸುದ್ದಿ3 days ago
ಹಂಪಿಯಲ್ಲಿ ಎಂಟು ಐತಿಹಾಸಿಕ ಬಾವಿಗಳು ಪತ್ತೆ