ದಿನದ ಸುದ್ದಿ
ಗ್ರಾಮೀಣ ಅಭಿವೃದ್ಧಿಯಲ್ಲಿ ದೇಶದಲ್ಲಿಯೇ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ : ಸಚಿವ ಕೆ ಎಸ್ ಈಶ್ವರಪ್ಪ
ಸುದ್ದಿದಿನ,ದಾವಣಗೆರೆ : ನರೇಗಾ ಯೋಜನೆ ಜಾರಿಗೆ ಬಂದ ನಂತರ ಇಡೀ ಕರ್ನಾಟಕದಾದ್ಯಂತ ಗ್ರಾಮಾಂತರ ಪ್ರದೇಶಗಳು ಅಭಿವೃದ್ಧಿಯಾಗುತ್ತಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.
ಸೋಮವಾರ ಹೊನ್ನಾಳಿ ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಲಾದ ರಾಜೀವ್ ಗಾಂಧಿ ಸೇವಾ ಕೇಂದ್ರ, ನೂತನ ಗ್ರಾಮ ಪಂಚಾಯಿತಿ ಕಟ್ಟಡ ಮತ್ತು ಘನತ್ಯಾಜ್ಯ ವಿಲೇವಾರಿ ಘಟಕ ಹಾಗೂ ಸೋಲಾರ್ ಪ್ಯಾನೆಲ್ ಉದ್ಘಾಟಿಸಿ ಅವರು ಮಾತಾನಾಡಿದರು.
ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕರ್ನಾಟಕದ 6000 ಗ್ರಾಮ ಪಂಚಾಯತಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಲಾಗುತ್ತಿದೆ. ಗ್ರಾಮ ಪಂಚಾಯಿತಿ ಕಟ್ಟಡಗಳು ಗ್ರಾಮೀಣ ಜನರ ಬೆವರಹನಿಯ ಪ್ರತಿಫಲವಾಗಿವೆ. ಉದ್ಯೋಗ ಖಾತರಿ ಯೋಜನೆಯಡಿ ಈ ಹಿಂದೆ 13 ಕೋಟಿ ಮಾನವ ದಿನಗಳ ಗುರಿ ನಿಗದಿಪಡಿಸಲಾಗಿತ್ತು, ನವೆಂಬರ್ ತಿಂಗಳ ಹೊತ್ತಿಗೆ ಅವುಗಳನ್ನು ಸಂಪೂರ್ಣವಾಗಿ ಬಳಕೆ ಮಾಡಿಕೊಂಡು 1.40 ಕೋಟಿ ಹೆಚ್ಚಿನ ಮಾನವ ದಿನಗಳ ಬೇಡಿಕೆ ನೀಡಿ, ಆ ದಿನಗಳನ್ನು ಬಳಕೆ ಮಾಡಿಕೊಳ್ಳಲಾಗಿದೆ.
ಈ ಹಿಂದೆ ಉದ್ಯೋಗ ಖಾತ್ರಿಯಡಿ ಕೆಲಸ ಮಾಡಿದ ಕಾರ್ಮಿಕರಿಗೆ ಕೂಲಿ ಪಾವತಿ ಮಾಡಲು 8 ತಿಂಗಳುಗಳ ಕಾಲ ಕಾಯಬೇಕಿತ್ತು ಆದರೆ ಪ್ರಸ್ತುತ ದಿನಗಳಲ್ಲಿ ಬಡವರಿಗೆ ಮತ್ತು ಕಾರ್ಮಿಕರಿಗೆ ಅನುಕೂಲ ಆಗಲಿ ಎನ್ನುವ ದೃಷ್ಟಿಯಿಂದ ನೇರವಾಗಿ ಕೂಲಿ ಹಣವನ್ನು 2 ರಿಂದ 3 ತಿಂಗಳಲ್ಲಿ ಅವರ ಖಾತೆಗಳಿಗೆ ಜಮಾ ಮಾಡಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದ ಎಲ್ಲಾ ಗ್ರಾಮಗಳಲ್ಲಿ ಪ್ರತಿಮನೆಗೂ ಕುಡಿಯುವ ನೀರನ್ನು ನಲ್ಲಿಯ ಮೂಲಕ ಸರಬರಾಜು ಮಾಡುವ ಯೋಜನೆ ಅನುಷ್ಠಾನಗೊಳಿಸಲಾಗಿದೆ. ಹೊನ್ನಾಳಿ ತಾಲ್ಲೂಕಿನಲ್ಲಿಯೂ ಕೂಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಜಾರಿಗೊಳಿಸಲಾಗಿದೆ. 2023 ರೊಳಗೆ ಕರ್ನಾಟಕದ ಎಲ್ಲಾ ಮನೆಗಳಿಗೂ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲಾಗುವುದು. ದಾವಣಗೆರೆಯಲ್ಲಿ ಒಟ್ಟು 195 ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳ ನಿರ್ಮಾಣ ಮಾಡಲಾಗುತ್ತಿದೆ.
ಈಗಾಗಲೇ 100 ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಸ್ಥಾಪನೆ ಮಾಡಲಾಗಿದೆ. ಜೊತೆಗೆ ಅಮೃತ ಯೋಜನೆಯಡಿ 750 ಗ್ರಾಮ ಪಂಚಾಯಿತಿಗಳಿಗೆ ತಲಾ 25 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಸೋಲಾರ್ ಗ್ರೀಡ್ ಮೂಲಕ ವಿದ್ಯುತ್ ಉತ್ಪಾದನೆ ಮಾಡಿ ಅದನ್ನು ಬಳಕೆ ಮಾಡಿಕೊಂಡು ಉಳಿದ ವಿದ್ಯುತ್ ಮಾರಾಟ ಮಾಡಿ ಆ ಹಣವನ್ನು ಗ್ರಾಮ ಪಂಚಾಯಿತಿಗಳಿಗೆ ವಾಪಸ್ಸು ನೀಡಲಾಗುವುದು, ಗ್ರಾಮದ ಅಭಿವೃದ್ಧಿಗೆ ನಾವೆಲ್ಲರೂ ಶ್ರಮಿಸಬೇಕು ಎಂದರು.
ಕೋವಿಡ್ ನಿಯಂತ್ರಣದಲ್ಲಿ ವಿಶ್ವದಲ್ಲೇ ಭಾರತ ಪ್ರಥಮ ಸ್ಥಾನದಲ್ಲಿದೆ. ಭಾರತದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಅದರಲ್ಲೂ ಹೊನ್ನಾಳಿ ತಾಲ್ಲೂಕು ಪ್ರಥಮ ಸ್ಥಾನದಲ್ಲಿದೆ ಎಂದು ಶ್ಲಾಘಿಸಿದರು.
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಮಾತನಾಡಿ, ರಾಜ್ಯದಲ್ಲಿ ಗ್ರಾಮಗಳ ಅಭಿವೃದ್ಧಿ, ಸ್ವಚ್ಛತೆ ಕಾಪಾಡುವುದು ಮಹಾತ್ಮ ಗಾಂಧೀಜಿಯವರ ಕನಸಾಗಿತ್ತು ಅದನ್ನು ಕರ್ನಾಟಕದಲ್ಲಿ ಸಚಿವರಾದ ಈಶ್ವರಪ್ಪನವರು ನನಸು ಮಾಡುವ ಉದ್ದೇಶದಿಂದ ಅನೇಕ ಯೋಜನೆಗಳನ್ನು ರೂಪಿಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಾಯೋಜಿತ ಜಲ ಜೀವನ್ ಮಿಷನ್ ಯೋಜನೆಯ ಮೂಲಕ ಪ್ರತಿ ಮನೆಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು.
ನರೇಗಾ ಯೋಜನೆಯಡಿ ಮಾನವ ದಿನಗಳನ್ನು 100 ರಿಂದ 150 ಕ್ಕೆ ಹೆಚ್ಚಿಸಲಾಗಿದೆ. ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಕೆರೆಗಳ ಹೂಳು ಎತ್ತುವುದು, ಅಂತರ್ಜಲ ವೃದ್ಧಿಸುವುದು ಸೇರಿದಂತೆ ತೋಟಗಾರಿಕೆ ಇಲಾಖೆಯ ಮೂಲಕ ಅನೇಕ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಾಗಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆಯ ಮೂಲಕ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಗ್ರಾಮಗಳಲ್ಲಿ ಕಸ ವಿಲೇವಾರಿ ಮಾಡಲು 27 ಘನತ್ಯಾಜ್ಯ ವಿಲೇವಾರಿ ವಾಹನಗಳನ್ನು ನೀಡಲಾಗಿದೆ. 300 ಜನ ಎಸ್‍ಸಿ, ಎಸ್‍ಟಿ ರೈತರಿಗೆ ಪೈಪು ಮತ್ತು ಪಂಪ್‍ಸೆಟ್ಟುಗಳನ್ನು ವಿತರಿಸಲಾಗಿದೆ, ಅರಕೆರೆ ಗ್ರಾಮದಲ್ಲಿ ಅಂದಾಜು 4 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಎ. ಬಿ. ರಂಗಪ್ಪ, ಹೊನ್ನಾಳಿ ತಹಶೀಲ್ದಾರ್ ಬಸವರಾಜ್, ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಮ ಭೋವಿ, ಪಂಚಾಯತ್ ರಾಜ್ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಜಿ.ಎಸ್. ಅಜ್ಜಪ್ಪ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಕೆ. ಎಸ್. ಮಂಜುಳ ಶಂಕ್ರಚಾರಿ, ಎ. ಬಿ ಹನುಮಂತಪ್ಪ ಅರಕೆರೆ, ಗ್ರಾ ಪಂ ಸದಸ್ಯರು ಹಾಗೂ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ7 days agoಕವಿತೆ | ದೇವರ ಹೂವು
-
ದಿನದ ಸುದ್ದಿ5 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ5 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ4 days agoವಸತಿ ಯೋಜನೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ1 day agoದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

