ದಿನದ ಸುದ್ದಿ
ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದು ಮಾಡಲ್ಲ : ವದಂತಿ ಹಬ್ಬಿಸಿದರೆ ಬೀಳತ್ತೆ ಕ್ರಿಮಿನಲ್ ಕೇಸ್..!
ಸುದ್ದಿದಿನ,ಬೆಂಗಳೂರು: ಮಹಾಮಾರಿ ಕೊರೊನಾ ಸಂಕಷ್ಟದ ನಡುವೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಬೇಕಾ, ಬೇಡ್ವಾ? ಎಂಬ ಗೊಂದಲದಲ್ಲಿ ಸರ್ಕಾರ ಇದೆ. ಆದರೆ ಯಾವುದೇ ಕಾರಣಕ್ಕೂ ನಮ್ಮ ರಾಜ್ಯದಲ್ಲಿ ಪರೀಕ್ಷೆ ರದ್ದು ಮಾಡುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಎಸ್ಎಸ್ಎಲ್ಸಿ ಎಕ್ಸಾಂ ಸಾರ್ವಜನಿಕ ಶಿಕ್ಷಣ ಇಲಾಖೆಯ ಪಾಲಿಗೆ ನುಂಗಲಾರದ ಬಿಸಿತುಪ್ಪವಾಗಿದೆ. ಕೊರೊನಾ ಹಾವಳಿ ನಡ್ವೆಯೂ ಸರ್ಕಾರ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸೋಕೆ ಮುಂದಾಗಿದೆ. ಆದ್ರೀಗ ಸರ್ಕಾರ ಮಾಡಿಕೊಂಡಿರೋ ವ್ಯವಸ್ಥೆ ಏನು. ಆ ವ್ಯವಸ್ಥೆ ಸಾಕಾಗುತ್ತಾ ಅನ್ನೋ ಪ್ರಶ್ನೆಗಳು ಶುರುವಾಗಿವೆ. ಇದ್ರ ಜೊತೆಗೆ ಎಸ್ಎಸ್ಎಲ್ಸಿ ಎಕ್ಸಾಂ ಬಗ್ಗೆ ಸುಳ್ಳುಸುದ್ದಿ ಹಬ್ಬಿಸೋರಿಗೆ ಸರ್ಕಾರ ಖಡಕ್ ವಾರ್ನಿಂಗ್ ಕೊಟ್ಟಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ಬಗ್ಗೆ ವದಂತಿ ಹಬ್ಬಿಸಿದರೆ ಕ್ರಿಮಿನಲ್ ಕೇಸ್..!
ಇದಿಷ್ಟೇ ಅಲ್ಲದೆ ಸಾರ್ವಜನಿಕ ಶಿಕ್ಷಣ ಇಲಾಖೆ ಸುಳ್ಳು ಸುದ್ದಿ ಹಬ್ಬಿಸೋರಿಗೆ ಖಡಕ್ ವಾರ್ನಿಂಗ್ ಕೊಟ್ಟಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಕ್ಕೂ ಮುನ್ನ ಪರೀಕ್ಷೆ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದರೆ ಕ್ರಿಮಿನಲ್ ಕೇಸ್ ಹಾಕಲಾಗುತ್ತೆ ಅಂತಾ ಸುತ್ತೋಲೆ ಪ್ರಕಟಿಸಲಾಗಿದೆ. ಈ ಬಗ್ಗೆ ನಿಗಾವಹಿಸಲು ಜಿಲ್ಲಾಮಟ್ಟದಲ್ಲೂ ನೋಡಲ್ ಅಧಿಕಾರಿಗಳ ನೇಮಕ ಮಾಡಿ ಶಿಕ್ಷಣ ಇಲಾಖೆ ಆಯುಕ್ತ ಡಾ.ಕೆ.ಜಿ.ಜಗದೀಶ್ ಆದೇಶಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243