ದಿನದ ಸುದ್ದಿ
ರಾಜ್ಯದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 7 ಸಾವಿರ : ಗುಣಮುಖರಾದವರು 3955
ಸುದ್ದಿದಿನ,ಬೆಂಗಳೂರು: ರಾಜ್ಯದಲ್ಲಿ ಭಾನುವಾರ 176 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢವಾಗಿದೆ. ರಾಜ್ಯದಲ್ಲಿ ಕೊರೊನ ಸೋಂಕಿತರ ಸಂಖ್ಯೆ 7 ಸಾವಿರದ ಗಡಿ ದಾಟಿದೆ. ಇವತ್ತು ಸಹ ಬೆಂಗಳೂರಿನಲ್ಲಿ ಕೊರೊನ ಮರಣ ಕೇಕೆ ಮುಂದುವರಿದಿದ್ದು, ಮೂವರು ಸಾವನ್ನಪ್ಪಿರೋದನ್ನು ಆರೋಗ್ಯ ಇಲಾಖೆ ಖಚಿತಪಡಿಸಿದೆ.
ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ಬೆಂಗಳೂರು ನಗರ 42, ಯಾದಗಿರಿ 22, ಉಡುಪಿ 21, ಬೀದರ್ 20, ಕಲಬುರಗಿ 13, ಧಾರವಾಡ 10, ಬಳ್ಳಾರಿ 8, ಕೋಲಾರ 7, ಮಂಡ್ಯ 5, ದಕ್ಷಿಣ ಕನ್ನಡ 5, ಬಾಗಲಕೋಟೆ 4, ರಾಮನಗರ 3, ರಾಯಚೂರು 2, ಶಿವಮೊಗ್ಗ 2 ಮತ್ತು ಬೆಳಗಾವಿ, ಹಾಸನ, ವಿಜಯಪುರ ಹಾಗೂ ಬೆಂಗಳೂರು ಗ್ರಾಮಾಂತರದಲ್ಲಿ ತಲಾ ಒಂದು ಪ್ರಕರಣಗಳು ಬೆಳಕಿಗೆ ಬಂದಿವೆ.
ಭಾನುವಾರ ಪತ್ತೆಯಾದ 176 ಪ್ರಕರಣಗಳ ಪೈಕಿ 88 ಮಂದಿ ಅಂತರಾಜ್ಯ ಮತ್ತು 6 ಜನರು ಅಂತರಾಷ್ಟ್ರೀಯ ಪ್ರಯಾಣದ ಹಿನ್ನೆಲೆ ಹೊಂದಿದ್ದಾರೆ. ಒಟ್ಟು ಇವತ್ತು ಕೊರೊನಾದಿಂದ ಐವರು ನಿಧನ ಹೊಂದಿದ್ದು, ಸಾವನ್ನಪ್ಪಿದವರ ಸಂಖ್ಯೆ 86ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ 2956 ಸಕ್ರಿಯ ಪ್ರಕರಣಗಳಿವೆ. ಇಂದು 312 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಕೋವಿಡ್19 ಮಾಹಿತಿ: 14ನೇ ಜೂನ್ 2020
- ಒಟ್ಟು ಪ್ರಕರಣಗಳು: 7000
- ಮೃತಪಟ್ಟವರು: 86
- ಗುಣಮುಖರಾದವರು: 3955
- ಹೊಸ ಪ್ರಕರಣಗಳು: 176
ಇತರೆ ಮಾಹಿತಿ
ಜಿಲ್ಲಾವಾರು ಸೋಂಕಿತರು, ಟೆಲಿಮೆಡಿಸಿನ್ ಸೌಲಭ್ಯದ ಮಾಹಿತಿ, ಕೊರೊನ ನಿಗಾ ಅಪ್ಲಿಕೇಶನ್ ಹಾಗೂ ಸಹಾಯವಾಣಿ ವಿವರಗಳಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243