ದಿನದ ಸುದ್ದಿ
ಪತ್ರಕರ್ತ ಸಂಘದ ಅಧ್ಯಕ್ಷರಾಗಿ ತಗಡೂರು ಆಯ್ಕೆ
ಸುದ್ದಿದಿನ, ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹಿರಿಯ ಉಪಾಧ್ಯಕ್ಷ ಶಿವಾನಂದ
ತಗಡೂರು ಅವರು ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ತಮ್ಮ ವಿರುದ್ಧ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅಧ್ಯಕ್ಷರಾಗಿದ್ದ ಎನ್.ರಾಜು ಅವರು ನೈತಿಕ ಹೊಣೆವೊತ್ತು ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂದಾಯ ಭವನದಲ್ಲಿರುವ ಪತ್ರಕರ್ತರ ಸಂಘದ ಕಚೇರಿಯಲ್ಲಿ ರಾಜ್ಯ ಕಾರ್ಯಕಾರಿ ಸಭೆ ಕರೆಯಲಾಗಿತ್ತು.
ಆರಂಭದಲ್ಲಿ ಎನ್.ರಾಜು ಅವರ ಸ್ಥಾನಕ್ಕೆ ಪ್ರಭಾರ ಅಧ್ಯಕ್ಷರನ್ನಾಗಿ ಶಿವಾನಂದ ತಗಡೂರು ಅವರನ್ನು ನೇಮಕ ಮಾಡಬೇಕೆಂದು ಕೆಲವರು ಸಲಹೆ ನೀಡಿದರು. ಆದರೆ, ಕಾನೂನಾತ್ಮಕ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಹಾಗೂ ಸಂಘ ಸುಗಮವಾಗಿ ತನ್ನ ಕಾರ್ಯಚಟುವಟಿಕೆ ಮುಂದುವರಿಸಲು ಖಾಯಂ ಅಧ್ಯಕ್ಷರನ್ನು ನೇಮಕ ಮಾಡುವುದು ಉತ್ತಮ ಎಂದು ಬಹುತೇಕ ಸದಸ್ಯರು ಒಕ್ಕೂರಲಿನಿಂದ ಅಭಿಪ್ರಾಯ ವ್ಯಕ್ತಪಡಿಸಿದರು.
ಈ ಕುರಿತು ಗಂಭೀರ, ಸುಧೀರ್ಘ ಚರ್ಚೆ ನಂತರ ಖಾಯಂ ಅಧ್ಯಕ್ಷರನ್ನಾಗಿ ಶಿವಾನಂದ ತಗಡೂರು
ಅವರ ನೇಮಕಕ್ಕೆ ಕಾರ್ಯಕಾರಿಣಿ ಸಭೆ ಸರ್ವಾನುಮತದಿಂದ ಸಮ್ಮತಿಸಿತು. ಸಂಘದ ಘನತೆ-ಗೌರವ ಮತ್ತು ಸಂಘಟನಾತ್ಮಕ, ವೃತ್ತಿಪರ ಪತ್ರಕರ್ತರ ಹಿತ ಕಾಯುವ ನಿಟ್ಟಿನಲ್ಲಿ ಸಂಘವನ್ನು ಶಿವಾನಂದ ತಗಡೂರು ನೇತೃತ್ವದಲ್ಲಿ ಮುನ್ನೆಡೆಸಿಕೊಂಡು ಹೋಗಲು
ಸಭೆ ಒಮ್ಮತದಿಂದ ತೀರ್ಮಾನವನ್ನು ಕೈಗೊಂಡಿತು.
ಸಮಿತಿ ರಚನೆ
ಎನ್.ರಾಜು ವಿರುದ್ಧ ಕೇಳಿ ಬಂದಿರುವ ಹಣಕಾಸಿನ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಸತ್ಯಾಸತ್ಯತೆ ತಿಳಿಯಲು ಮತ್ತು ಕಾನೂನಾತ್ಮಕ ಹೋರಾಟಕ್ಕೆ ಮೊದಲು ಆಂತರಿಕ ಲೆಕ್ಕಪರಿಶೋಧನೆ ನಡೆಸಲು ಸಮಿತಿ ರಚಿಸುವಂತೆ ಸಭೆಯಲ್ಲಿ ಸಲಹೆ ಕೇಳಿಬಂದಿತು.
ಈ ಹಿನ್ನೆಲೆಯಲ್ಲಿ ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್ ನೇತೃತ್ವದಲ್ಲಿ ಸಮಿತಿ ರಚಿಸಲು ಸಭೆ ಸಮ್ಮತಿ ನೀಡಿತು.
ಇದೀಗ ಕೇಳಿಬರುತ್ತಿರುವ ಆರೋಪಗಳ ಸಂಬಂಧ ಸಂಘದ ಆರ್ಥಿಕ ವ್ಯವಹಾರಗಳ ಕುರಿತು ಆಂತರಿಕ
ಪರಿಶೀಲನೆಗೆ ಹಿರಿಯ ಪತ್ರಕರ್ತರಾದ ಶ್ರೀಯುತ ಗುಡಿಹಳ್ಳಿ ನಾಗರಾಜ್ ಅವರ ನೇತೃತ್ವದಲ್ಲಿ ಐವ್ವರು ಹಿರಿಯ ಸದಸ್ಯರ ಸಮಿತಿಯೊಂದನ್ನು ರಚಿಸಲಾಯಿತು.
ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಕಾನೂನು ತೊಡಕುಗಳಿಗೆ ಅವಕಾಶವಾಗದಂತೆ ಸಂಘವನ್ನು
ನಿಯಮಾನುಸಾರ ನಡೆಸಿಕೊಂಡು ಹೋಗಲು ತೀರ್ಮಾನಿಸಿತು.
ಸಭೆಯಲ್ಲಿ ಉಪಾಧ್ಯಕ್ಷ ಮತ್ತಿಕೆರೆ ಜಯರಾಂ, ಕಾರ್ಯದರ್ಶಿ ಲಿಥಕರ್ ಜೈನ್, ಸೊಗಡು
ವೆಂಕಟೇಶ್, ಮೈಸೂರು ಸಂಘದ ಜಿಲ್ಲಾಧ್ಯಕ್ಷ ಸಿ.ಕೆ.ಮಹೇಂದ್ರ, ಲೋಕೇಶ್‌ಬಾಬು, ಟೆಲೆಕ್ಸ್ ಎನ್.ರವಿಕುಮಾರ್, ರವೀಶ್, ಶ್ರೀನಿವಾಸ್, ವೆಂಕಟೇಶ್, ಚಂದ್ರಪ್ಪ, ದುರುಗೇಶ್, ಕುಟ್ಟಪ್ಪ, ಲೊಚೇನಶ್ ಹೂಗಾರ್, ನಿಂಗಪ್ಪ ಚಾವಡಿ, ಸತ್ಯನಾರಾಯಣ, ಶಿವಮೊಗ್ಗ ವೈದ್ಯ ಸೇರಿದಂತೆ ರಾಜ್ಯ ಸಂಘದ ಪದಾಧಿಕಾರಿಗಳು, ವಿವಿಧ ಜಿಲ್ಲೆಯ
ಜಿಲ್ಲಾಧ್ಯಕ್ಷರು, ರಾಜ್ಯ ಸಮಿತಿ ನಿರ್ದೇಶಕರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಶಿವಾನಂದ ತಗಡೂರು ಹಿನ್ನೆಲೆ
ಶಿವಾನಂದ ತಗಡೂರು ಹಾಸನ ಜಿಲ್ಲೆಯಲ್ಲಿ ವಿಜಯಕರ್ನಾಟಕ ಸೇರಿದಂತೆ ವಿವಿಧ
ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಪ್ರಸ್ತುತ ವಿಜಯವಾಣಿ ಪತ್ರಿಕೆಯಲ್ಲಿ ವಿಶೇಷ ವರದಿಗಾರರಾಗಿ ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಂಘದಲ್ಲಿ ಅನೇಕಹುದ್ದೆಗಳನ್ನು ನಿರ್ವಹಿಸಿರುವ ಅನುಭವ ಹೊಂದಿದ್ದಾರೆ.
ಎರಡು ಅವಧಿಗೆ ಉಪಾಧ್ಯಕ್ಷರಾಗಿದ್ದ ತಗಡೂರು ಅವರು, ಬರವಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಸಾಹಿತ್ಯ, ಸಂಸ್ಕೃತಿ ಸೇರಿದಂತೆ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ತಗಡೂರು
ಅವರು, ಸಜ್ಜನ, ಸರಳತೆ, ಉತ್ತಮ ಬರವಣಿಗೆ ಹಿನ್ನೆಲೆಯಲ್ಲಿ ಹೆಚ್ಚು ಜನರ ಪ್ರೀತಿ ಗಳಿಸಿದ್ದಾರೆ.
ದಿನದ ಸುದ್ದಿ
ತೆರಿಗೆ ಹಂಚಿಕೆಯಲ್ಲಿ ಕೇಂದ್ರದ ತಾರತಮ್ಯ ನೀತಿ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ : ಡಿಸಿಎಂ ಡಿ.ಕೆ.ಶಿವಕುಮಾರ್
ಸುದ್ದಿದಿನ,ಬೆಂಗಳೂರು:ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯವಾಗಿದ್ದು ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅತಿಹೆಚ್ಚು ತೆರಿಗೆ ಪಾವತಿಸುವ ಕರ್ನಾಟಕಕ್ಕೆ ತಾರತಮ್ಯವಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹಣವನ್ನು ಉತ್ತರ ಪ್ರದೇಶ, ದೆಹಲಿ, ಬಿಹಾರಕ್ಕೆ ನೀಡುತ್ತಿದ್ದಾರೆ. ಆಂಧ್ರಕ್ಕಿಂತಲೂ ಕಡಿಮೆ ಹಣ ನಮಗೆ ನೀಡಿದ್ದಾರೆ ಎಂದು ಆರೋಪಿಸಿದರು.
ಮೈಸೂರು ದಸರಾಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರಿನ ವಿದ್ಯುತ್ ದೀಪಾಲಂಕಾರವನ್ನು 10-12 ದಿನಗಳವರೆಗೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಮೈಸೂರು ದಸರಾ | ಅಂಬಾರಿ ಹೊತ್ತ ಅಭಿಮನ್ಯು ಜಂಬೂ ಸವಾರಿ
ಸುದ್ದಿದಿನಡೆಸ್ಕ್:ಮೈಸೂರು ದಸರಾ ಅಂಗವಾಗಿ ಶನಿವಾರ ವಿಜಯದಶಮಿಯಂದು ಅದ್ಧೂರಿ ಜಂಬೂ ಸವಾರಿ ನಡೆಯಿತು. ಅಕ್ಟೋಬರ್ 3 ರಂದು ದಸರಾ ಉದ್ಘಾಟನೆಯಾದಾಗಿನಿಂದ ಮೈಸೂರು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿದೆ. ಮೈಸೂರಿನ ಜಂಬೂಸವಾರಿಯಲ್ಲಿ 750ಕೆಜಿಯ ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ರಾಜಬೀದಿಗಳಲ್ಲಿ ರಾಜಗಾಂಭಿರ್ಯದಿಂದ ಸಾಗಿದನು. ಈ ಉತ್ಸವವನ್ನು ಸಾವಿರಾರು ಜನರು ಕಣ್ಣು ತುಂಬಿಸಿಕೊಂಡಿದ್ದಾರೆ.
ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಮಧ್ಯಾಹ್ನ 1:55ರ ಸುಮಾರಿಗೆ ಸಿಎಂ ಸಿದ್ದರಾಮಯ್ಯ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದರು. ಈ ಮೂಲಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಿದರು.
ವಿಶ್ವವಿಖ್ಯಾತ ಜಂಬೂಸವಾರಿಯ ಸಲುವಾಗಿ ಅಭಿಮನ್ಯು ಆನೆ 750 ಕೆ.ಜಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ರಾಜ ಗಾಂಭೀರ್ಯದಿಂದ ರಾಜಬೀದಿಗಳಲ್ಲಿ ಹೆಜ್ಜೆ ಹಾಕಿದನು. ಈ ಐತಿಹಾಸಿಕ ಕ್ಷಣವನ್ನು ದೇಶ- ವಿದೇಶ ಮತ್ತು ನೆರೆಹೊರೆಯ ಜಿಲ್ಲೆಯ ಲಕ್ಷಾಂತರ ಮಂದಿ ಕಣ್ಣುಂಬಿಕೊಳ್ಳಲು ರಾಜ ಬೀದಿಗಳಲ್ಲಿ ಕಿಕ್ಕಿರಿದು ಸೇರಿದ್ದರು.
ಈ ಜಂಬೂಸವಾರಿ ವೀಕ್ಷಣೆಗೆ ಅರಮನೆಯ ಆವರಣದಲ್ಲಿ 40 ಸಾವಿರ ಆಸನ ವ್ಯವಸ್ಥೆ ಮಾಡಲಾಗಿತ್ತು. ಆದರೂ ಅರಮನೆಯ ಬಳಿಕ ಚಿಕ್ಕ ಗಡಿಯಾರ, ಕೆ.ಆರ್.ಆಸ್ಪತ್ರೆ ಹಾಗೂ ಬನ್ನಿಮಂಟಪದ ರಸ್ತೆಗಳಲ್ಲಿ ಜನ ದಟ್ಟಣೆ ಹೆಚ್ಚಾಗಿದೆ. ಅಷ್ಟೇ ಅಲ್ಲದೇ ಜಂಬೂಸವಾರಿ ಸಾಗುವ ಸಮಯದಲ್ಲಿ ಸಾರ್ವಜನಿಕರು ಡಾ.ರಾಜ್‌ಕುಮಾರ್ ಪಾರ್ಕ್‌ನ ಮರಗಳ ಮೇಲೆ ಹಾಗೂ ಕಟ್ಟಡಗಳ ಮೇಲೆ ನಿಂತು ವೀಕ್ಷಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಇಂದಿನಿಂದ ಒಂದು ವಾರ ರಾಜ್ಯದಲ್ಲಿ ಭಾರೀ ಮಳೆ
ಸುದ್ದಿದಿನಡೆಸ್ಕ್:ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗಲಿದೆ. ಇಂದು ಮಧ್ಯಾಹ್ನದಿಂದಲೇ ನಗರದ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ.
ಜೊತೆಗೆ ಮುಂದಿನ 7 ದಿನಗಳ ಕಾಲ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಡುಗೋಡಿ, K.R.ಮಾರ್ಕೆಟ್, ಕಾರ್ಪೊರೇಷನ್ ಸರ್ಕಲ್, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ. ಜೊತೆಗೆ ಇಂದಿನಿಂದ ಅಕ್ಟೋಬರ್ 17ರ ವರೆಗೆ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ ಸಿ ಎಸ್ ಪಾಟೀಲ್ ಹೇಳಿದ್ದಾರೆ.
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಮಂಡ್ಯ, ಮೈಸೂರು ಕೊಡಗು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಅಕ್ಟೋಬರ್ 16, 17ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದು ಕೂಡ ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿಯೇ ಅಬ್ಬರಿಸಲಿದೆ.
ಇದೀಗ ಹವಾಮಾನ ಇಲಾಖೆ ಸೂಚನೆಯೊಂದನ್ನು ನೀಡಿದ್ದು, ಬೆಂಗಳೂರು ಜನರಿಗೆ ಎಚ್ಚರಿಕೆಯಿಂದಿರುವುದು ಒಳ್ಳೆಯದು. ವರದಿ ಪ್ರಕಾರ, ಬೆಂಗಳೂರಿನಲ್ಲಿ ಇನ್ನೂ 7 ದಿನ ಮಳೆರಾಯ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇಂದಿನಿಂದ 1 ವಾರದ ವೆರೆಗೆ ಸಿಟಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ5 days ago
ಅ.9 ರಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ
-
ದಿನದ ಸುದ್ದಿ5 days ago
ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ದಾವಣಗೆರೆ | ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ; ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ
-
ದಿನದ ಸುದ್ದಿ7 days ago
ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ವಸತಿ ಯೋಜನೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಗ್ರಾಮ ಸಭೆ ಕಡ್ಡಾಯ : ಸಚಿವ ಪ್ರಿಯಾಂಕ ಖರ್ಗೆ