ದಿನದ ಸುದ್ದಿ
ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ | ಯಡಿಯೂರಪ್ಪಗೆ ಅರಸು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಯಾವ ನೈತಿಕ ಹಕ್ಕಿದೆ : ಸಿದ್ದರಾಮಯ್ಯ ಕಿಡಿ
ಸುದ್ದಿದಿನ, ಬೆಂಗಳೂರು : ಎರಡು ವರ್ಷಗಳಿಂದ ಪ್ರತಿಷ್ಠಿತ ‘ದೇವರಾಜ ಅರಸು ಪ್ರಶಸ್ತಿ’ ಪ್ರದಾನ ಮಾಡದೆ ನಾಡಿನ ಹೆಮ್ಮೆಯ ನಾಯಕನಿಗೆ ಅಗೌರವ ತೋರಿದ ರಾಜ್ಯ ಬಿಜೆಪಿ ಸರ್ಕಾರದ ನಡೆ ಖಂಡನೀಯ. ಅರಸು ಅವರಿಗೆ ಅಗೌರವ ತೋರಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅರಸು ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಯಾವ ನೈತಿಕ ಹಕ್ಕಿದೆ? ಎಂದು ಮಾಜಿಮುಖ್ಯಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಇಂದು ಮಾಜಿ ಮುಖ್ಯಮಂತ್ರಿ ಡಿ. ದೇವರಾಜು ಅರಸು ಅವರ ಹುಟ್ಟು ಹಬ್ಬ ಈ ಸಂಬಂಧ ಟ್ವೀಟ್ ಮಾಡಿರುವ ಅವರು ಮುಖ್ಯಮಂತ್ರಿಗಳೇ, ಡಿ.ದೇವರಾಜ ಅರಸು ಅವರ ಮೇಲೆ ನಿಮಗೆ ಒಂದಿಷ್ಟಾದರೂ ಗೌರವ ಇದ್ದರೆ ಮೊದಲು ಅವರು ಜಾರಿಗೆ ತಂದಿದ್ದ ‘ಉಳುವವನನ್ನೇ ಭೂ ಒಡೆಯನನ್ನಾಗಿ ಮಾಡುವ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿಮಾಡಿ ಉಳ್ಳವನಿಗೆ ಭೂಮಿ ನೀಡಲು ಹೊರಟಿರುವ ನಿಮ್ಮ ತೀರ್ಮಾನವನ್ನು ಹಿಂದಕ್ಕೆ ಪಡೆಯಿರಿ ಎಂದು ಎಚ್ಚರಿಕೆ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243