ಸಿನಿ ಸುದ್ದಿ
ಕರುಣಾನಿಧಿ ಸಿನಿಯಾನ

ಸುದ್ದಿದಿನ ಡೆಸ್ಕ್ | ಕರುಣಾನಿಧಿ ಕೇವಲ ರಾಜಕೀಯ ಮುತ್ಸದ್ದಿಯಷ್ಟೇಯಲ್ಲ. ಅವರೊಬ್ಬ ಅದ್ಭುತ ಬರಹಗಾರ. ತನ್ನ 20 ನೇ ವಯಸ್ಸಿನಲ್ಲಿ, ಕರುಣಾನಿಧಿಯು ಜುಪಿಟರ್ ಪಿಕ್ಚರ್ಸ್ ಚಿತ್ರಕಥೆಗಾರನಾಗಿ ಕೆಲಸ ಮಾಡಿದರು. ಅವರು ‘ರಾಜಕುಮಾರಿ’ ಎಂಬ ಸಿನೆಮಾಗೆ ಕತೆ, ಚಿತ್ರಕತೆ, ಸಂಭಾಷಣೆ ಬರೆದರು. ಈ ಸಿನೆಮಾ ಹೆಚ್ಚು ಜನಪ್ರಿಯತೆಯನ್ನು ಕರುಣಾನಿಧಿಯವರಿಗೆ ತಂದುಕೊಟ್ಟಿತು.
ಚಿತ್ರಕಥೆಗಾರನಾಗಿ ಕರುಣಾನಿಧಿ ಹಲವಾರು ಗೌರವಗಳಿಗೆ ಪಾತ್ರರಾದವರು. 2011 ರ ತನಕ ಅವರು ಸಿನೆಮಾಗಾಗಿ ಬರೆದರು. ಅವರು ತಮ್ಮ ಕಾದಂಬರಿ ಆಧಾರಿತ ಐತಿಹಾಸಿಕ ಸಿನೆಮಾ ‘ಪೊನ್ನಾರ್ ಶಂಕರ್’ ಎಂಬ ಸಿನೆಮಾವು ಅವರ ಬರಹದ ಅತ್ಯುತ್ತಮ ಸಿನೆಮಾವೂ ಹೌದು.
ಕರುಣಾನಿಧಿ ಸಿನಿಯಾನ
- ರಾಜಕುಮಾರಿ 1947
- ಅಭಿಮನ್ಯು 1948
- ಮರುಧಾನತ್ತು ಇಳವರಸಿ 1950
- ಮನ್ಥಿರಿ ಕುಮಾರಿ 1950
- ಪರಾಸಕ್ತಿ 1952
- ಮನ ಮಗಳ್ 1952
- ಮನೋಹರ. 1952
- ಪನಮ್ 1952
- ತಿರುಂಬಿ ಪಾರ್ 1953
- ಮಲೈಕಲನ್ 1954
- ರಂಗೂನ್ ರಾಧಾ 1956
- ರಾಜಾ ರಾಣಿ 1956
- ಪುದೈಯಾಳ್ 1957
- ಪದುಮೈ ಪಿತನ್
- ಕುರವಂಜಿ 1960
- ಅರಸಿಳಂಗ್ ಕುಮಾರಿ 1961
- ತಾಯಿಲ್ಲ ಪಿಲೈ 1961
- ಇರುವರ್ ಉಲ್ಲಂ 1963
- ಕಾಂಚಿ ತಲೈವಾನ್ 1963
- ಪೂಂಪುಹಾರ್ 1964
- ಪೂಮಾಲೈ 1965
- ಅವನ್ ಪಿತಾನ? 1966
- ಪಿಲೈಯೊ ಪಿಲೈ 1972
- ಕಲಮ್ ಪತಿಲ್ ಸೊಲ್ಲುಮ್ 1980
- ಪಲೈವಾನ ರೊಜಕಲ್ 1985
- ನೀತಿಕು ತಾಂಡಾನೈ 1987
- ಪಾದಯ ತೆನಿಕ್ಕಲ್ 1988
- ಪಾಸಾ ಪರವಾಯ್ಗಲ್ 1988
- ನ್ಯಾಯ ತರಸು 1989
- ಕಾವಲುಕ್ಕು ಕೇತಿಕರಣ್ 1990
- ಮಧುರೈ ಮೀನಾಕ್ಷಿ 1993
- ಪುತಿಯಾ ಪರಸಕ್ತಿ 1996
- ಮನಿನ್ ಮೈನ್ದನ್ 2005
- ಕಣ್ಣಮ್ಮ 2005
- ಪಾಸ ಕಿಲಿಗಲ್ 2006
- ಉಲಿಯಿನ್ ಒಸೈ 2008
- ಪೆನ್ ಸಿಂಗಂ 2010
- ಇಲಿಯಂಗ್ನಾನ್ 2011
- ಪೊನ್ನಾರ್ ಶಂಕರ್ 2011
ಸುದ್ದಿದಿನ.ಕಾಂ| ವಾಟ್ಸಾಪ್|9986715401

ದಿನದ ಸುದ್ದಿ
ಮತ್ತೆ ತಾಯಿಯಾಗಬೇಕು : ನಟಿ ಸಮಂತಾ

ಸುದ್ದಿದಿನಡೆಸ್ಕ್:ಇತ್ತೀಚೆಗೆ ನಟಿ ಸಮಂತಾ ಅವರ ಕಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಆ ಹೇಳಿಕೆಗಳ ಮೇಲೆ ನಾನಾ ರೀತಿಯ ಅನುಮಾನಗಳೂ ವ್ಯಕ್ತವಾಗಿವೆ.
ಟಾಲಿವುಡ್ ಸ್ಟಾರ್ ಹೀರೋಯಿನ್ ಸಮಂತಾ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಸದ್ಯ ಸಮಂತಾ ಸತತ ಚಿತ್ರಗಳಲ್ಲಿ ಬ್ಯುಸಿಯಾಗಿರುವುದು ಗೊತ್ತೇ ಇದೆ. ಇತ್ತೀಚಿಗೆ ಸಮಂತಾ ಅವರ ವೆಬ್ ಸಿರೀಸ್ ವಿಚಾರಕ್ಕೆ ಸುದ್ದಿಯಾಗಿದ್ದರು. ನಟಿಯ ಇತ್ತೀಚಿನ ವೆಬ್ ಸಿರೀಸ್ ಸಿಟಾಡೆಲ್ ಸಖತ್ ಸುದ್ದಿಯಾಗಿದೆ. ಸದ್ಯ ಈ ವೆಬ್ ಸೀರೀಸ್ ಒಟಿಟಿಯಲ್ಲಿ ಸ್ಟ್ರೀಮ್ ಆಗುತ್ತಿದೆ ಎಂದು ತಿಳಿದುಬಂದಿದೆ. ಈ ವೆಬ್ ಸರಣಿಯ ಪ್ರಚಾರದ ವೇಳೆ ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಇದರ ಭಾಗವಾಗಿ ಸಮಂತಾ ರಾಜ್ ಮತ್ತು ಡಿಕೆ ಸಂದರ್ಶನವೊಂದರಲ್ಲಿ ಹೇಳಿದ್ದು ದಿ ಫ್ಯಾಮಿಲಿ ಮ್ಯಾನ್ 2 ಚಿತ್ರೀಕರಣದ ವೇಳೆ ನಾನು ಹಲವು ಭಾವನೆಗಳಿಗೆ ಒಳಗಾಗಿದ್ದೆ ಎಂದು ಸಮಂತಾ ಹೇಳಿದ್ದಾರೆ. ಅಲ್ಲದೇ ಅವರ ನಿರ್ದೇಶನದಲ್ಲಿ ನಟಿಸುವುದು ಕಷ್ಟ ಎಂದಿದ್ದಾರೆ. ನಂತರ ಅದೇ ಸಂದರ್ಶನದಲ್ಲಿ ನಟಿ ಬೇರೆ ವಿಚಾರವನ್ನೂ ಹೇಳಿದ್ದಾರೆ.
ಹನಿ ಬನ್ನಿ ವೆಬ್ ಸರಣಿಯಲ್ಲಿ ತಾಯಿ ಪಾತ್ರದ ಬಗ್ಗೆ ಮಾತನಾಡುತ್ತಾ, ಅವರು ಸಂವೇದನಾಶೀಲ ಕಾಮೆಂಟ್ಗಳನ್ನು ಮಾಡಿದ್ದಾರೆ. ನನಗೆ ತಾಯಿಯಾಗುವ ಕನಸು ಇದೆ. ನಾನು ತಾಯಿಯಾಗಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ.
ಇದಕ್ಕಾಗಿ ತಡವಾಗಿದೆ ಎಂದು ಅವರು ಭಾವಿಸುವುದಿಲ್ಲ. ನಾನು ಜೀವನದಲ್ಲಿ ತುಂಬಾ ಖುಷಿಯಾಗಿದ್ದೇನೆ ಎಂದು ಸಮಂತಾ ಹೇಳಿದ ಮಾತುಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಆದರೆ ಸಮಂತಾ ಈ ಕಾಮೆಂಟ್ ಮಾಡಿದ ನಂತರ ಮತ್ತೊಮ್ಮೆ ಅವರ ಎರಡನೇ ಮದುವೆಯ ಸುದ್ದಿಗೆ ವೇಗ ಸಿಕ್ಕಿದೆ. ಈ ಹಿಂದೆ ರಾಜ್ ಹಾಗೂ ಡಿಕೆಶಿಯಲ್ಲಿ ರಾಜ್ ನನ್ನು ಪ್ರೀತಿಸುತ್ತಿದ್ದು, ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂದು ಹೇಳಲಾಗಿತ್ತು.
ಆದರೆ ಇದೀಗ ಸಮಂತಾ ಎರಡನೇ ಮದುವೆಯ ಸುದ್ದಿ ಮುನ್ನೆಲೆಗೆ ಬಂದಿದ್ದು, ಮತ್ತೆ ತಾಯಿಯಾಗಬೇಕು ಎಂದು ಕಾಮೆಂಟ್ ಮಾಡಿದ್ದಾರೆ. ಇದರೊಂದಿಗೆ ರಾಜ್ ಎರಡನೇ ಮದುವೆಯಾಗಲಿದ್ದಾರೆ ಎಂಬ ಸುದ್ದಿಗೆ ವೇಗ ಸಿಕ್ಕಿದೆ. ಈ ಸುದ್ದಿಯಲ್ಲಿನ ಸತ್ಯಗಳ ಹೊರತಾಗಿ, ಈ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಾಟ್ ಟಾಪಿಕ್ ಆಗಿದೆ. ಈ ಸುದ್ದಿಗೆ ಸಮಂತಾ ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡೋಣ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್ಬೌನ್ಸ್ ಕೇಸ್ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?

ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ಗುರುಪ್ರಸಾದ್ ಮೇಲೆ ಸಾಲು ಸಾಲು ಚೆಕ್ಬೌನ್ಸ್ ಕೇಸ್ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್ ಕೂಡ ಆಗಿತ್ತು. ಗುರುಪ್ರಸಾದ್ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್ ಗೌಡ.
ಹಣ ವಾಪಸ್ ಕೊಡಲಾಗದೇ ಕಿರಿಕ್ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್ ಅವರು. ಈ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದ, ಗುರುಪ್ರಸಾದ್ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್ 24ರಂದು ಇದ್ದ ಕೋರ್ಟ್ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್. ಮೆಡಿಕಲ್ ರಿಪೋರ್ಟ್ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.
ನಿನ್ನೆ ಅಂದರೆ ನವೆಂಬರ್ 2ಕ್ಕೆ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್ ರೀಚಬಲ್ ಬಂದಿತ್ತು ಮೊಬೈಲ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!

ಸುದ್ದಿದಿನಡೆಸ್ಕ್:ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
52 ವರ್ಷದ ಕನಕಪುರ ಮೂಲದ ಗುರುಪ್ರಸಾದ್ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್ ಚಿತ್ರದ ಮೂಲಕ ಮನೆಮಾತಾಗಿದ್ದರು.
ನಿರ್ದೇಶಕ ʻಮಠʼ ಗುರುಪ್ರಸಾದ್ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್ ಡೇ ವಿಶ್ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್ ಅವರ ಮೊಬೈಲ್ ನಾಟ್ ರೀಚಬಲ್ ಆಗಿತ್ತು, ಗುರುಪ್ರಸಾದ್ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025
-
ದಿನದ ಸುದ್ದಿ7 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
-
ದಿನದ ಸುದ್ದಿ5 days ago
ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ
-
ದಿನದ ಸುದ್ದಿ2 days ago
ಕವಿತೆ | ನಾನೊಲಿದೆನಯ್ಯಾ
-
ದಿನದ ಸುದ್ದಿ4 days ago
ತುಂಬಿದ ಕೊಡ ತುಳುಕಿತಲೇ ಪರಾಕ್..!
-
ದಿನದ ಸುದ್ದಿ3 days ago
ಜನಸಿರಿ ಫೌಂಡೇಶನ್ ವತಿಯಿಂದ ಕವಿಗಳ ಕಲರವ
-
ದಿನದ ಸುದ್ದಿ20 hours ago
ಉತ್ಸವಗಳ ಹೆಸರಲ್ಲಿ ಮೌಢ್ಯ ತೊರೆಯಬೇಕು : ಈಶ್ವರಾನಂದಪುರಿ ಸ್ವಾಮೀಜಿ
-
ದಿನದ ಸುದ್ದಿ19 hours ago
ಮಾರ್ಚ್ 3 ರಂದು ವಿಧಾನಮಂಡಲ ಅಧಿವೇಶನ; 7 ರಂದು ಬಜೆಟ್ ಮಂಡನೆಗೆ ಸರ್ಕಾರ ನಿರ್ಧಾರ