ದಿನದ ಸುದ್ದಿ

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಲೋಕಸೇವಾ ಆಯೋಗದಿಂದ ಆಗಸ್ಟ್ 24 ರಂದು ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗಾಗಿ ಪೂರ್ವಭಾವಿ ಪರೀಕ್ಷೆಯನ್ನು ದಾವಣಗೆರೆ ಕೇಂದ್ರದಲ್ಲಿ 30 ಪರೀಕ್ಷಾ ಕೇಂದ್ರದಲ್ಲಿ ನಡೆಸಲಾಗುತ್ತಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರ ತಡೆಗಟ್ಟಲು ಮತ್ತು ಸುಗಮ ರೀತಿಯಲ್ಲಿ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ಸಿಆರ್‍ಪಿಸಿ ಸೆಕ್ಷನ್ 144 ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪರಿಧಿ ವ್ಯಾಪ್ತಿಯ ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು ಹಾಗೂ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳು ಮತ್ತು ಸೈಬರ್ ಕೆಫೆಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version