ದಿನದ ಸುದ್ದಿ
ಪ್ರಧಾನಮಂತ್ರಿ ಅಭಿವೃದ್ಧಿ ಪ್ಯಾಕೇಜ್‌ನಡಿ ಕಾರ್ಯನಿರ್ವಹಿಸುತ್ತಿರುವ ಕಾಶ್ಮೀರಿ ಪಂಡಿತರು ರಾಜೀನಾಮೆ ನೀಡಿಲ್ಲ : ಕೇಂದ್ರ ಸರ್ಕಾರ
ಸುದ್ದಿದಿನ ಡೆಸ್ಕ್ : ಕಾಶ್ಮೀರ ಕಣಿವೆಯಲ್ಲಿ ಕಾಶ್ಮೀರಿ ಪಂಡಿತರೊಬ್ಬರ ಹತ್ಯೆ ಪ್ರತಿಭಟಿಸಿ ಇತ್ತೀಚೆಗೆ ನಡೆದ ಪ್ರತಿಭಟನೆಯಲ್ಲಿ ಪ್ರಧಾನಮಂತ್ರಿಗಳ ಅಭಿವೃದ್ಧಿ ಪ್ಯಾಕೇಜ್-ಪಿಎಂಡಿಪಿಯಡಿ ಕಾರ್ಯ ನಿರ್ವಹಿಸುತ್ತಿರುವ ಯಾವುದೇ ಕಾಶ್ಮೀರಿ ಪಂಡಿತರು ರಾಜಿನಾಮೆ ನೀಡಿಲ್ಲ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಸ್ಪಷ್ಟಪಡಿಸಿದೆ.
ಪಿಎಂಡಿಪಿ ಅಡಿ 5 ಸಾವಿರದ 502ಮಂದಿ ಕಾಶ್ಮೀರಿ ಪಂಡಿತರಿಗೆ ಸರ್ಕಾರಿ ಉದ್ಯೋಗ ಕಲ್ಪಿಸಲಾಗಿದೆ ಎಂದು ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಕಣಿವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಶ್ಮೀರಿ ವಲಸಿಗರು ಹಾಗೂ ಜಮ್ಮು ಮತ್ತು ಕಾಶ್ಮೀರ ಸರ್ಕಾರದ ವಿವಿಧ ಇಲಾಖೆಗಳಿಗೆ ನಿಯೋಜಿಸಲಿರುವ ಉದ್ಯೋಗಿಗಳಿಗಾಗಿ 6 ಸಾವಿರ ಸಂಚಾರಿ ವಸತಿಗಳ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿದೆ ಎಂದು ಹೇಳಿದ್ದಾರೆ.
ಕಾಶ್ಮೀರಿ ವಲಸಿಗರ ಕುಂದುಕೊರತೆಗಳ ನಿವಾರಣೆಗಾಗಿ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಕಳೆದ ವರ್ಷ ಸೆಪ್ಟಂಬರ್‌ನಲ್ಲಿ ಪೋರ್ಟಲ್‌ವೊಂದಕ್ಕೆ ಚಾಲನೆ ನೀಡಲಾಗಿದೆ ಎಂದು ಉತ್ತರದಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243