ದಿನದ ಸುದ್ದಿ
ಬಾಹ್ಯಾಕಾಶ ವಿಜ್ಞಾನಿ ಡಾ. ಕೆ. ಕಸ್ತೂರಿ ರಂಗನ್ ನಿಧನ ; ಭಾನುವಾರ ಅಂತಿಮ ದರ್ಶನ ವ್ಯವಸ್ಥೆ
ಸುದ್ದಿದಿನಡೆಸ್ಕ್:ಭಾರತೀಯ ಬಾಹ್ಯಾಕಾಶ ವಿಜ್ಞಾನಿ, ಇಸ್ರೋದ ಮುಖ್ಯಸ್ಥರಾಗಿದ್ದ ಡಾ. ಕೆ. ಕಸ್ತೂರಿ ರಂಗನ್ ಅವರು ಇಂದು ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಅವರಿಗೆ 84 ವರ್ಷ ವಯಸ್ಸಾಗಿತ್ತು. ಅವರು ಭಾರತ ಸರ್ಕಾರದ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾಗಿದ್ದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯ ಹಿಂದಿನ ಪ್ರಮುಖ ಶಕ್ತಿಯಾಗಿದ್ದರು.
ಕಸ್ತೂರಿ ರಂಗನ್ ಅವರು ನವದೆಹಲಿಯ ಜವಹರಲಾಲ್ ನೆಹರು ವಿಶ್ವವಿದ್ಯಾಲಯ, ರಾಜಸ್ತಾನದ ಸೆಂಟ್ರಲ್ ಯೂನಿವರ್ಸಿಟಿ ಹಾಗೂ ಎನ್‌ಐಐಟಿ ವಿಶ್ವವಿದ್ಯಾನಿಲಯಗಳ ಕುಲಪತಿಗಳಾಗಿದ್ದರು. ಅವರು ಕರ್ನಾಟಕ ಜ್ಞಾನ ಆಯೋಗದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ರಾಜ್ಯಸಭಾ ಸದಸ್ಯರೂ ಆಗಿದ್ದ ಅವರು, ಭಾರತೀಯ ಯೋಜನಾ ಆಯೋಗದ ಸದಸ್ಯರಾಗಿದ್ದರು. ಪಶ್ಚಿಮಘಟ್ಟದ ಸಂರಕ್ಷಣೆ ಕುರಿತ ಕಸ್ತೂರಿ ರಂಗನ್ ವರದಿಯಿಂದ ಅವರು ಜನಜನಿತರಾಗಿದ್ದರು. ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯ ಆವರಣದಲ್ಲಿ ಭಾನುವಾರ ಬೆಳಗ್ಗೆ 10 ರಿಂದ 12 ರ ವರೆಗೆ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243