ದಿನದ ಸುದ್ದಿ
ರಾಜ್ಯದ ಎಲ್ಲಾ ಕಚೇರಿಗಳಲ್ಲಿ ಕಾವೇರಿ ತಂತ್ರಾಂಶ ಅಳವಡಿಕೆ: ಸಚಿವ ಕೃಷ್ಣ ಬೈರೇಗೌಡ
ಸುದ್ದಿದಿನ, ಬೆಂಗಳೂರು : ಪ್ರಸ್ತುತ ನೋಂದಣಿ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಸೆಂಟರ್ ಫಾರ್ ಸ್ಮಾರ್ಟ್ ಗೌವರ್‍ನೆನ್ಸ್ ಸಂಸ್ಥೆಯ ಸಹಯೋಗದೊಂದಿಗೆ ಹೊಸ, ನಾಗರೀಕ ಸ್ನೇಹಿ, ವಂಚನೆ ರಹಿತ ಕಾವೇರಿ-2 ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ, ತಂತ್ರಾಂಶವನ್ನು ರಾಜ್ಯಾದ್ಯಂತ ಹಂತ ಹಂತವಾಗಿ ಅಳವಡಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಸೋಮವಾರ ವಿಕಾಸಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಒಟ್ಟು 256 ನೋಂದಣಿ ಕಚೇರಿಗಳಿದ್ದು, ಇದೇ ಶನಿವಾರ ದೊಳಗಾಗಿ ಬಹುತೇಕ ಎಲ್ಲಾ ಕಚೇರಿಗಳಲ್ಲೂ ಕಾವೇರಿ-2 ತಂತ್ರಾಂಶವನ್ನು ಅಳವಡಿಸಲಾಗುವುದು ಎಂದು ಹೇಳಿದರು.
ಕಾವೇರಿ-2 ತಂತ್ರಾಂಶದ ನೋಂದಣಿ ಪ್ರಕ್ರಿಯೆಯನ್ನು ಮೂರು ಹಂತಗಳಲ್ಲಿ ವಿಭಜಿಸುವ ಮೂಲಕ ಬಳಕೆದಾರ ಸ್ನೇಹಿಯಾಗಿರುತ್ತದೆ. ಪೂರ್ವ ನೋಂದಣಿ ಪ್ರಕ್ರಿಯೆಯು ಸಂಪೂರ್ಣ ಆನ್‌ಲೈನ್ ಮತ್ತು ಸಂಪರ್ಕ ರಹಿತವಾಗಿರುತ್ತದೆ. ನಾಗರೀಕರು ನೋಂದಣಿ ಕಛೇರಿಗೆ ಹಾಜರಾಗುವ ಮೊದಲೇ ಎಲ್ಲಾ ನೋಂದಣಿ ಸಂಬಂಧ ಡೇಟಾವನ್ನು ತಂತ್ರಾಂಶದಲ್ಲಿ ನಮೂದಿಸಿ, ದಾಖಲಾತಿಗಳನ್ನು ಆನ್‌ಲೈನ್ ಮೂಲಕ ಅಪ್‌ಲೋಡ್ ಮಾಡಿ ಉಪನೋಂದಣಾಧಿಕಾರಿಗಳ ವರಿಶೀಲನೆಗೆ ಸಲ್ಲಿಸುತ್ತಾರೆ. ಪರಿಶೀಲಿಸಿದ ದಾಖಲೆಗಳನ್ನು ನಾಗರೀಕರಿಗೆ ನಿಗದಿತ ಶುಲ್ಕಗಳನ್ನು ಪಾವತಿಸಲು ಕಳುಹಿಸಲಾಗುತ್ತದೆ. ನಂತರ ನಾಗರೀಕರು ತಮ್ಮ ಅನುಕೂಲಕ್ಕೆ, ಅನುಗುಣವಾಗಿ ನೋಂದಣಿ ಪ್ರಕ್ರಿಯೆಗೆ ದಿನಾಂಕ ಹಾಗೂ ಸಮಯವನ್ನು ನಿಗದಿಪಡಿಸಬಹುದಾಗಿದೆ ಎಂದು ತಿಳಿಸಿದರು.
Launch of Kaveri 2.0 service at sub Registrar office in TataNagar.
Transparent, Online Citizen-friendly registration process with launch of Kaveri 2.0. Document upload, verification and payment will be online.
Physical presence only for photo, thumb and signature. Reduces… pic.twitter.com/oeXvlcFCZ5— Krishna Byre Gowda (@krishnabgowda) June 1, 2023
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಎಸ್.ಎಸ್.ಎಲ್.ಸಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ; ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನ
ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಗೆ ಪ್ರೊತ್ಸಾಹಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ಇಲಾಖೆ ಕಚೇರಿಗೆ ಸಲ್ಲಿಸಲು ಜಂಟಿ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ; ಶಾಸಕ ಶಾಮನೂರು ಶಿವಶಂಕರಪ್ಪ ಉದ್ಘಾಟನೆ
ಸುದ್ದಿದಿನ,ದಾವಣಗೆರೆ: ಖಾಸಗಿ ಬಸ್ ನಿಲ್ದಾಣ ಸಾರ್ವಜನಿಕರ ಬಳಕೆಗೆ ಮುಕ್ತವಾಗಿದ್ದು ಈ ಬಸ್ ನಿಲ್ದಾಣವು ಸುಸಜ್ಜಿತ ಹಾಗೂ ಹಲವು ಸೌಲಭ್ಯಗಳನ್ನು ಹೊಂದಿದೆ ಎಂದು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ; ಶಾಮನೂರು ಶಿವಶಂಕರಪ್ಪ ತಿಳಿಸಿದರು.
ಅವರು (07) ರಂದು ಪಿ.ಬಿ ರಸ್ತೆಯಲ್ಲಿನ ಡಾ. ಶಾಮನೂರು ಶಿವಶಂಕರಪ್ಪ ಖಾಸಗಿ ಬಸ್ ನಿಲ್ದಾಣದಲ್ಲಿ ಬಸ್ಸುಗಳ ಕಾರ್ಯಾರಂಭ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಈ ಬಸ್ ನಿಲ್ದಾಣ ಸ್ಮಾರ್ಟ್ ಸಿಟಿ’ ಯೋಜನೆಯಡಿ 20 ಕೋಟಿ ವೆಚ್ಚದಲ್ಲಿ ಸಿದ್ದಗೊಂಡು, ಈಚೆಗಷ್ಟೇ ಸಾರ್ವಜನಿಕರ ಬಳಕೆಗೆ ಮುಕ್ತವಾಗಿರುವ ಈ ಬಸ್ ನಿಲ್ದಾಣವು ಸುಸಜ್ಜಿತವಾಗಿದ್ದು, ಹತ್ತಾರು ಸೌಲಭ್ಯಗಳನ್ನು ಹೊಂದಿದೆ. 84 ಮಳಿಗೆ ಹಾಗೂ ಏಕಾಲಕ್ಕೆ 16 ಬಸ್ ನಿಲ್ಲಿಸಬಹುದಾಗಿದೆ. 200 ದ್ವೀಚಕ್ರ ವಾಹನ ನಿಲುಗಡೆಗೆ ಕೂಡ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಈ ಸುಸಜ್ಜಿತ ಬಸ್ ನಿಲ್ದಾಣವನ್ನು ದಾವಣಗೆರೆ ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಯಿತು. ಮಹಾನಗರ ಪಾಲಿಕೆ ಮೇಯರ್ ಚಮನ್ ಸಾಬ್, ಹರಿಹರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ದಿನೇಶ್ ಕೆ.ಶೆಟ್ಟಿ, ಉಪಮೇಯರ್ ಸೋಗಿ ಶಾಂತಕುಮಾರ್, ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷರಾದ ಮಲ್ಲೇಶಪ್ಪ, ಖಾಸಗಿ ಬಸ್ ಏಜೆಂಟರ ಸಂಘದ ಅಧ್ಯಕ್ಷರಾದ ಉಮೇಶ್‍ರಾವ್ ಸಾಳಂಕಿ, ಹಾಗೂ ದಾವಣಗೆರೆ ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಪದಾಧಿಕಾರಿಗಳು, ಖಾಸಗಿ ಬಸ್ ಏಜೆಂಟ್ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿ.ಯು.ಸಿ. ಮತ್ತು ಪದವಿ ,ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಗೆ ಪ್ರೊತ್ಸಾಹಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳು ತಮ್ಮ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಜಂಟಿ ನಿರ್ದೇಶಕಾರಾದ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಎಂಬ್ರಾಯ್ಡರಿ ಮತ್ತು ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಗನ್ ಮಿಸ್ ಫೈರ್ | ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು
-
ದಿನದ ಸುದ್ದಿ7 days ago
ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
-
ದಿನದ ಸುದ್ದಿ7 days ago
ದಿವಾಕರ. ಡಿ ಮಂಡ್ಯ ಅವರಿಗೆ ಪಿ ಎಚ್ ಡಿ ಪದವಿ
-
ದಿನದ ಸುದ್ದಿ7 days ago
ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್
-
ದಿನದ ಸುದ್ದಿ6 days ago
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ಬಹದ್ದೂರ್ ಶಾಸ್ತ್ರಿ ಜನ್ಮದಿನ ; ದೇಶದೆಲ್ಲೆಡೆ ಸ್ಮರಣೆ
-
ದಿನದ ಸುದ್ದಿ7 days ago
ಚಿನ್ನದ ಬೆಲೆ ಇಳಿಕೆ
-
ದಿನದ ಸುದ್ದಿ7 days ago
ಈ ದಿನ ಅಂತರಾಷ್ಟ್ರೀಯ ಹಿರಿಯ ನಾಗರಿಕರ ದಿನ