ದಿನದ ಸುದ್ದಿ

ರಾಜ್ಯದ ಎಲ್ಲಾ ಕಚೇರಿಗಳಲ್ಲಿ ಕಾವೇರಿ ತಂತ್ರಾಂಶ ಅಳವಡಿಕೆ: ಸಚಿವ ಕೃಷ್ಣ ಬೈರೇಗೌಡ

Published

on

ಸುದ್ದಿದಿನ, ಬೆಂಗಳೂರು : ಪ್ರಸ್ತುತ ನೋಂದಣಿ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸಲು ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಸೆಂಟರ್ ಫಾರ್ ಸ್ಮಾರ್ಟ್ ಗೌವರ್‍ನೆನ್ಸ್ ಸಂಸ್ಥೆಯ ಸಹಯೋಗದೊಂದಿಗೆ ಹೊಸ, ನಾಗರೀಕ ಸ್ನೇಹಿ, ವಂಚನೆ ರಹಿತ ಕಾವೇರಿ-2 ತಂತ್ರಾಂಶವನ್ನು ಅಭಿವೃದ್ಧಿಪಡಿಸಿದೆ, ತಂತ್ರಾಂಶವನ್ನು ರಾಜ್ಯಾದ್ಯಂತ ಹಂತ ಹಂತವಾಗಿ ಅಳವಡಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಒಟ್ಟು 256 ನೋಂದಣಿ ಕಚೇರಿಗಳಿದ್ದು, ಇದೇ ಶನಿವಾರ ದೊಳಗಾಗಿ ಬಹುತೇಕ ಎಲ್ಲಾ ಕಚೇರಿಗಳಲ್ಲೂ ಕಾವೇರಿ-2 ತಂತ್ರಾಂಶವನ್ನು ಅಳವಡಿಸಲಾಗುವುದು ಎಂದು ಹೇಳಿದರು.

ಕಾವೇರಿ-2 ತಂತ್ರಾಂಶದ ನೋಂದಣಿ ಪ್ರಕ್ರಿಯೆಯನ್ನು ಮೂರು ಹಂತಗಳಲ್ಲಿ ವಿಭಜಿಸುವ ಮೂಲಕ ಬಳಕೆದಾರ ಸ್ನೇಹಿಯಾಗಿರುತ್ತದೆ. ಪೂರ್ವ ನೋಂದಣಿ ಪ್ರಕ್ರಿಯೆಯು ಸಂಪೂರ್ಣ ಆನ್‌ಲೈನ್ ಮತ್ತು ಸಂಪರ್ಕ ರಹಿತವಾಗಿರುತ್ತದೆ. ನಾಗರೀಕರು ನೋಂದಣಿ ಕಛೇರಿಗೆ ಹಾಜರಾಗುವ ಮೊದಲೇ ಎಲ್ಲಾ ನೋಂದಣಿ ಸಂಬಂಧ ಡೇಟಾವನ್ನು ತಂತ್ರಾಂಶದಲ್ಲಿ ನಮೂದಿಸಿ, ದಾಖಲಾತಿಗಳನ್ನು ಆನ್‌ಲೈನ್ ಮೂಲಕ ಅಪ್‌ಲೋಡ್ ಮಾಡಿ ಉಪನೋಂದಣಾಧಿಕಾರಿಗಳ ವರಿಶೀಲನೆಗೆ ಸಲ್ಲಿಸುತ್ತಾರೆ. ಪರಿಶೀಲಿಸಿದ ದಾಖಲೆಗಳನ್ನು ನಾಗರೀಕರಿಗೆ ನಿಗದಿತ ಶುಲ್ಕಗಳನ್ನು ಪಾವತಿಸಲು ಕಳುಹಿಸಲಾಗುತ್ತದೆ. ನಂತರ ನಾಗರೀಕರು ತಮ್ಮ ಅನುಕೂಲಕ್ಕೆ, ಅನುಗುಣವಾಗಿ ನೋಂದಣಿ ಪ್ರಕ್ರಿಯೆಗೆ ದಿನಾಂಕ ಹಾಗೂ ಸಮಯವನ್ನು ನಿಗದಿಪಡಿಸಬಹುದಾಗಿದೆ ಎಂದು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version