ದಿನದ ಸುದ್ದಿ

ಕಾವಲ ಭೈರವಸಂದ್ರ ಗಲಭೆ | ಹಿಂದೂ-ಮುಸ್ಲಿಮರು ಶಾಂತಿಯಿಂದ ವರ್ತಿಸಿ : ಸಿದ್ದರಾಮಯ್ಯ ಮನವಿ

Published

on

ಸುದ್ದಿದಿನ, ಬೆಂಗಳೂರು:  ಕಳೆದ ರಾತ್ರಿ ಕಾವಲಭೈರಸಂದ್ರದಲ್ಲಿ ನಡೆದ ಗಲಭೆ ಮತ್ತು ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ. ಹಿಂದೂ-ಮುಸ್ಲಿಮ್ ಎರಡು ಸಮುದಾಯದವರು ಸಂಯಮದಿಂದ ವರ್ತಿಸಿ ಶಾಂತಿ ಕಾಪಾಡಬೇಕೆಂದು ಕೈಮುಗಿದು ಮನವಿ ಮಾಡುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ‌.

ಕೊರೋನಾ ಚಿಕಿತ್ಸೆಯಲ್ಲಿರುವ ಅವರು, ಗಲಭೆಗೆ ಪ್ರಚೋದಿಸಿದ್ದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ
ಬೆಂಗಳೂರು ಪೊಲೀಸ್ ಕಮಿಷನರ್‌ಗೆ ತಿಳಿಸಿದ್ದೇನೆ. ಶಾಂತಿ ಸ್ಥಾಪನೆಯ ರಾಜ್ಯ ಸರ್ಕಾರದ ಪ್ರಯತ್ನಕ್ಕೆ
ನಮ್ಮ ಪಕ್ಷದ ಸಂಪೂರ್ಣ ಸಹಕಾರ ಇದೆ ಎಂದಿದ್ದಾರೆ.

ಇಂತಹ ಕೋಮು ಗಲಭೆಗಳಲ್ಲಿ‌ ಸಾವು-ನೋವಿಗೆ ಈಡಾಗುವವರು ಅಮಾಯಕರು ಎಂಬ ಸತ್ಯವನ್ನು ಅನುಭವದ ಪಾಠ ನಮಗೆ ಹೇಳಿಕೊಟ್ಟಿದೆ. ಮೊದಲು ಎರಡೂ ಧರ್ಮಗಳ ಹಿರಿಯರು ಒಂದೆಡೆ ಕೂತು ಪರಸ್ಪರ ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸಬೇಕೆಂದು ಕೋರುತ್ತೇನೆ ಎಂದು ಹೇಳಿದ್ದಾರೆ.

ಪೊಲೀಸ್ ಠಾಣೆಯ ಮೇಲೆ ನಡೆದ ದಾಳಿ ಖಂಡನೀಯ. ಇದರಿಂದ ಪೊಲೀಸರು ನೈತಿಕ ಸ್ಥೈರ್ಯ‌ ಕಳೆದು ಕೊಳ್ಳಬಾರದು. ಇಂತಹ ಪ್ರಕರಣಗಳ ಸಂದರ್ಭಗಳಲ್ಲಿ ಪೊಲೀಸರು ತಕ್ಷಣ ವಿವೇಚನೆಯಿಂದ ನಿರ್ಧಾರ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು.
ಸಣ್ಣ ನಿರ್ಲಕ್ಷ್ಯ ಅನಾಹುತಕ್ಕೆ ದಾರಿಮಾಡಿಕೊಡುತ್ತದೆ ಎಂದು ಎಚ್ಚರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version