ದಿನದ ಸುದ್ದಿ
Kempe Gowda Statue | ಚೆನ್ನೈ-ಬೆಂಗಳೂರು-ಮೈಸೂರು ವಂದೇ ಭಾರತ್ ರೈಲು ಸೇವೆ ನವೆಂಬರ್ 10ರಂದು ಪ್ರಧಾನಿ ಉದ್ಘಾಟನೆ
ಸುದ್ದಿದಿನ ಡೆಸ್ಕ್ : ಚೆನ್ನೈ-ಬೆಂಗಳೂರು-ಮೈಸೂರು ನಡುವೆ 5ನೇ ವಂದೇ ಭಾರತ್ ರೈಲು ಸೇವೆಗೆ ಮುಂದಿನ ತಿಂಗಳ 10ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ( Prime minister Narendra modi ) ಹಸಿರು ನಿಶಾನೆ (Green Signal ) ತೋರಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಅಂದು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯವಿಮಾನ ನಿಲ್ದಾಣದ 2ನೇ ಟರ್ಮಿನಲ್ ಲೋಕಾರ್ಪಣೆ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡ ಪ್ರತಿಮೆಯನ್ನು ಅನಾವರಣ ಮಾಡುವ ಕಾರ್ಯಕ್ರಮವಿದೆ. ನಂತರ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ ಎಂದು ಸಚಿವ ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243