ಕ್ರೀಡೆ
ಖೇಲೋ ಇಂಡಿಯಾ | ಚಿನ್ನದ ಪದಕ ಗೆದ್ದವರು
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2022/04/kheloindia_suddidina_goldmedal.jpg&description=ಖೇಲೋ ಇಂಡಿಯಾ | ಚಿನ್ನದ ಪದಕ ಗೆದ್ದವರು', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2022/04/kheloindia_suddidina_goldmedal.jpg&description=ಖೇಲೋ ಇಂಡಿಯಾ | ಚಿನ್ನದ ಪದಕ ಗೆದ್ದವರು', 'pinterestShare', 'width=750,height=350'); return false;" title="Pin This Post">
ಸುದ್ದಿದಿನ ಡೆಸ್ಕ್ : ಬೆಂಗಳೂರಿನಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಮಂಗಳವಾರ ನಡೆದ ಫುಟ್ಬಾಲ್ ಪಂದ್ಯದಲ್ಲಿ ಚೆನ್ನೈನ ಎಸ್ಆರ್ಎಂ ವಿಶ್ವವಿದ್ಯಾಲಯದ ಮಹಿಳಾ ತಂಡ ಚಿನ್ನದ ಪದಕ ಗಳಿಸಿದೆ.
ಭಾರತಿಯಾರ್ ವಿಶ್ವವಿದ್ಯಾಲಯದ ತಂಡವನ್ನು 3-0ಗೋಲುಗಳಿಂದ ಸೋಲಿಸುವ ಮೂಲಕ ಮೇಲುಗೈ ಸಾಧಿಸಿತು. ಪುರುಷರ ವಾಲಿಬಾಲ್ ಫೈನಲ್ಸ್ ಪಂದ್ಯದಲ್ಲಿ ಚೆನ್ನೈನ ಎಸ್ಆರ್ಎಂ ವಿಶ್ವವಿದ್ಯಾಲಯ ತಂಡ ಕೇರಳದ ಕ್ಯಾಲಿಕಟ್ ವಿಶ್ವವಿದ್ಯಾಲಯ ತಂಡವನ್ನು 3 ಸೆಟ್ಗಳ ಅಂತರದಿಂದ ಪರಾಭವಗೊಳಿಸಿ, ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದೆ.
ಟ್ರ್ಯಾಪ್ ಶೂಟಿಂಗ್ ಸ್ಪರ್ಧೆಯಲ್ಲಿ ಪುರುಷರ ವಿಭಾಗದಲ್ಲಿ ಆರವ್ ಸಿಂಗ್ ದಾಗರ್ ಚಿನ್ನ, ಜಂಗಶರ್ ವಿರ್ಕ್ ಬೆಳ್ಳಿ ಮತ್ತು ಶಾರ್ದೂಲ್ ವಿಹಾನ್ ಕಂಚಿನ ಪದಕ ಗಳಿಸಿದರು. ಇದಕ್ಕೂ ಮುನ್ನ ನಡೆದ 200ಮೀ ಬಟರ್ಫ್ಲೈ ಈಜು ಸ್ಪರ್ಧೆಯಲ್ಲಿ ಗುಜರಾತ್ ವಿಶ್ವವಿದ್ಯಾಲಯದ ಆರ್ಯನ್ ಪಾಂಚಾಲ್ ಚಿನ್ನ ಗೆದ್ದಿದ್ದರು. ಜೈನ್ ವಿಶ್ವವಿದ್ಯಾಲಯದ ರಾಜ್ ರೆಲೇಕರ್ ಎರಡನೇ ಸ್ಥಾನ ಪಡೆದರು.
ಎಸ್ಆರ್ಎಂ ವಿಶ್ವವಿದ್ಯಾನಿಲಯದ ವಿಕಾಸ್ ಪ್ರಭಾಕರ್ ಮೂರನೇ ಸ್ಥಾನ ಪಡೆದರು. ಮಲ್ಲಕಂಬ ಸ್ಪರ್ಧೆಯಲ್ಲಿ ಮಹಿಳಾ ವಿಭಾಗದಲ್ಲಿ ಮುಂಬೈ ವಿಶ್ವವಿದ್ಯಾನಿಲಯ ಮೊದಲ ಸ್ಥಾನವನ್ನು ಗಳಿಸಿತು ಮತ್ತು ನಂತರದ ಸ್ಥಾನವನ್ನು ಸಾವಿತ್ರಿಬಾಯಿ ಫುಲೆ ವಿಶ್ವವಿದ್ಯಾಲಯ ಮತ್ತು ಸಂತ ಗಾಡ್ಗೆ ಬಾಬಾ ಅಮರಾವತಿ ವಿಶ್ವವಿದ್ಯಾಲಯವು ಗಳಿಸಿತು.
98ಕೆಜಿ ಸೀನಿಯರ್ ವೇಟ್ಲಿಫ್ಟಿಂಗ್ ಸ್ಪರ್ಧೆಯಲ್ಲಿ ಪುಣೆಯ ಸಾವಿತ್ರಿ ಬಾಯಿ ಫುಲೆ ವಿಶ್ವವಿದ್ಯಾಲಯದ ವೈಷ್ಣವ್ ಠಾಕೂರ್ 313ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕ ಗೆದ್ದರು. ಸಂತ ಬಾಬಾ ಭಾಗ್ ಸಿಂಗ್ ವಿಶ್ವವಿದ್ಯಾನಿಲಯದ ಗುರುಪ್ರೀತ್ ರೈಹ್ 290ಕೆಜಿ ಭಾರ ಎತ್ತುವ ಮೂಲಕ ಬೆಳ್ಳಿ ಮತ್ತು ಕಳಿಂಗ ವಿಶ್ವವಿದ್ಯಾಲಯದ ಪುನಿತ್ ಚಂದ್ರ ಸಾಹು 285ಕೆಜಿ ಭಾರ ಎತ್ತುವ ಮೂಲಕ ಕಂಚಿನ ಪದಕ ವಿಜೇತರಾದರು.
WINNERS!✨
🏅 Gold – Aarti Patel
🥈 Silver – Jyoti Patel
🥉 Bronze – Riya Verma#Swimming: 50m Breaststroke Women 🏊♀️#KIUG2021 #KheloIndia pic.twitter.com/eCPwwzznMP— Doordarshan Sports (@ddsportschannel) April 26, 2022
Every athlete is made to feel special at the #KheloIndiaGames: Shrivalli Rashmikaa
The budding tennis player is representing Osmania University at the #KheloIndiaUniversityGames2021
Details: https://t.co/HM2AtmpQVq pic.twitter.com/FNL9De9HAf
— PIB India (@PIB_India) April 26, 2022
Check out What happens Behind The Scenes📽 of #KheloIndia University Games 👀#KIUG2021 pic.twitter.com/oseJTiGt5S
— Khelo India (@kheloindia) April 26, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
RCB ಗೆ ಹದಿನೆಂಟರ ಇಡಿಗಂಟು | ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ : ವಿರಾಟ್ ಕೊಹ್ಲಿ
ಸುದ್ದಿದಿನಡೆಸ್ಕ್:ಇಂಡಿಯನ್ ಪ್ರೀಮಿಯರ್ ಲೀಗ್ – ಐಪಿಎಲ್ ಟಿ-20 ಕ್ರಿಕೆಟ್ನ 18 ನೇ ಆವೃತ್ತಿಯ ಪ್ರಶಸ್ತಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಡಿಗೇರಿಸಿಕೊಂಡಿದೆ.
ನಿನ್ನೆ ರಾತ್ರಿ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಆರ್ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದ ನಂತರ, ಆರ್ಸಿಬಿ ನಾಯಕ ರಜತ್ ಪಾಟಿದಾರ್, ವಿರಾಟ್ ಕೊಹ್ಲಿ ಮತ್ತು ಎಲ್ಲಾ ಅಭಿಮಾನಿಗಳು ಈ ಗೆಲುವಿಗೆ ಹೆಚ್ಚು ಅರ್ಹರು ಎಂದು ಹೇಳಿದರು. ಪ್ರತಿಯೊಬ್ಬ ಆಟಗಾರನನ್ನು ಬೆಂಬಲಿಸಿದ್ದಕ್ಕಾಗಿ, ತಂಡದ ನಿರ್ವಹಣೆ ಮತ್ತು ತರಬೇತಿ ಸಿಬ್ಬಂದಿಗೆ ಅವರು ಧನ್ಯವಾದ ಅರ್ಪಿಸಿದರು.
ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ, ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ಗಳಿಗೆ 190 ರನ್ ಗಳಿಸಿತು. ವಿರಾಟ್ ಕೊಹ್ಲಿ ಗರಿಷ್ಠ 43 ರನ್ ಗಳಿಸಿದರೆ, ನಾಯಕ ಪಾಟಿದಾರ್ 26 ರನ್ ಗಳಿಸಿದರು. ಪಂಜಾಬ್ ಕಿಂಗ್ಸ್ ಪರ ಅರ್ಶ್ದೀಪ್ ಸಿಂಗ್ ಮತ್ತು ಕೈಲ್ ಜೇಮಿಸನ್ ತಲಾ 3 ವಿಕೆಟ್ ಪಡೆದರು. 191 ರನ್ಗಳ ಗುರಿ ಬೆನ್ನತ್ತಿದ ಪಂಜಾಬ್ ಕಿಂಗ್ಸ್, ನಿಗದಿತ 20 ಓವರ್ಗಳಲ್ಲಿ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಶಶಾಂಕ್ ಸಿಂಗ್ ಅಜೇಯ 61 ರನ್ ಗಳಿಸಿದರು.
ಅಸಾಧಾರಣ ಬೌಲಿಂಗ್ಗಾಗಿ, ಪಾಂಡ್ಯ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದರು. ಪಂದ್ಯದ ನಂತರದ ಪ್ರಸ್ತುತಿಯಲ್ಲಿ, ಗುಜರಾತ್ ಟೈಟಾನ್ಸ್ನ ಸಾಯಿ ಸುದರ್ಶನ್ ಅತಿ ಹೆಚ್ಚು ರನ್ ಗಳಿಸಿದ್ದಕ್ಕಾಗಿ ಆರೆಂಜ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರೆ. ಅದೇ ತಂಡದ ಸಹ ಆಟಗಾರ ಪ್ರಸಿದ್ಧ್ ಕೃಷ್ಣ ಈ ಋತುವಿನಲ್ಲಿ ಅತಿ ಹೆಚ್ಚು ವಿಕೆಟ್ಗಳನ್ನು ಪಡೆದಿದ್ದಕ್ಕಾಗಿ ಪರ್ಪಲ್ ಕ್ಯಾಪ್ ಪ್ರಶಸ್ತಿಯನ್ನು ಪಡೆದರು. ಮುಂಬೈ ಇಂಡಿಯನ್ಸ್ನ ಸೂರ್ಯ ಕುಮಾರ್ ಯಾದವ್ ಪಂದ್ಯಾವಳಿಯಾದ್ಯAತ ತಮ್ಮ ಅಸಾಧಾರಣ ಬ್ಯಾಟಿಂಗ್ಗಾಗಿ ಅತ್ಯಂತ ಮೌಲ್ಯಯುತ ಆಟಗಾರ ಎಂಬ ಪ್ರಶಸ್ತಿಯನ್ನು ಪಡೆದರು.
ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ
17 ವರ್ಷಗಳ ನಂತರ ವಿರಾಟ್ ಕೊಹ್ಲಿ ಅಂತಿಮವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಎತ್ತಿ ಹಿಡಿದರು. ಫೈನಲ್ನಲ್ಲಿ 35 ಎಸೆತಗಳಲ್ಲಿ 43 ರನ್ ಗಳಿಸಿದ ಕೊಹ್ಲಿ, ಸುಮಾರು ಎರಡು ದಶಕಗಳಿಂದ ಬೆನ್ನಟ್ಟಿದ ಕ್ಷಣ ಅಂತಿಮವಾಗಿ ವಾಸ್ತವವಾದಾಗ ಭಾವುಕರಾದರು “ಈ ಗೆಲುವು ತಂಡಕ್ಕೆ ಎಷ್ಟು ಮುಖ್ಯವೋ, ಅಭಿಮಾನಿಗಳಿಗೂ ಅಷ್ಟೇ ಮುಖ್ಯ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ದಿನ ಬರುತ್ತದೆ ಎಂದು ಭಾವಿಸಿರಲಿಲ್ಲ ಎಂದು ಗೆದ್ದು ಭಾವುಕರಾಗಿದ್ದ ವಿರಾಟ್ ಕೊಹ್ಲಿ ಪಂದ್ಯದ ನಂತರದ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಆರ್ಸಿಬಿ ಗೆಲುವಿನ ಸಂಭ್ರಮದಲ್ಲಿ ಕರ್ನಾಟಕ, ವಿಶೇಷವಾಗಿ ರಾಜಧಾನಿ ಬೆಂಗಳೂರು, ನಿನ್ನೆ ರಾತ್ರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯಗಳಿಸಿದ ನಂತರ ಸಂತೋಷದಿAದ ತುಂಬಿ ತುಳುಕುತ್ತಿತ್ತು. ಅಭಿಮಾನಿಗಳು ಇಂದು ಬೆಳಗಿನ ಜಾವದವರೆಗೆ ಪಟಾಕಿ ಸಿಡಿಸಿ ಬೀದಿಗಳಲ್ಲಿ ಜಮಾಯಿಸಿ ಸಂಭ್ರಮಿಸಿದರು. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್ಸಿಬಿಯನ್ನು ಶ್ಲಾಘಿಸುತ್ತಾ, “ಐಪಿಎಲ್ ಐತಿಹಾಸಿಕ ವಿಜಯಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿನಂದನೆ. ಕನಸು ಕೊನೆಗೂ ನನಸಾಗಿದೆ.
ಈ ಸಲಾ ಕಪ್ ನಮ್ದೆ. ಅಚಲವಾದ ಚೈತನ್ಯದಿಂದ, ಈ ಗೆಲುವು ಕರ್ನಾಟಕದ ಹೆಮ್ಮೆಯನ್ನು ಹೆಚ್ಚಿಸಿದೆ. ಪ್ರಪಂಚದಾದ್ಯAತದ ಅಭಿಮಾನಿಗಳನ್ನು ರೋಮಾಂಚನಗೊಳಿಸಿದೆ ಎಂದು ಹೇಳಿದ್ದಾರೆ. ಐಪಿಎಲ್ ಪ್ರಶಸ್ತಿ ಗೆದ್ದ ಆರ್ಸಿಬಿ ತಂಡಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಆರ್ಸಿಬಿ ತಂಡ ಪಡೆದ ರೋಮಾಂಚಕ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಲಕ್ಷಾಂತರ ಅಭಿಮಾನಿಗಳ ಕನಸುಗಳು ನನಸಾಗಿದೆ. ಇಡೀ ಆರ್ಸಿಬಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಏ.10 ರಿಂದ ಬೇಸಿಗೆ ಕಬಡ್ಡಿ ತರಬೇತಿ ಶಿಬಿರ
ಸುದ್ದಿದಿನ,ದಾವಣಗೆರೆ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸೃಷ್ಟಿ ಕಬಡಿ ಅಕಾಡೆಮಿ(ರಿ), ದಾವಣಗೆರೆ ಇವರ ಸಂಯುಕ್ತಾಶ್ರಯದಲ್ಲಿ ಬೇಸಿಗೆ ಕಬಡ್ಡಿ ತರಬೇತಿ ಶಿಬಿರವನ್ನು ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಏಪ್ರಿಲ್ 10 ರಿಂದ 30 ರವರೆಗೆ ಬೆಳಿಗ್ಗೆ 6.30 ರಿಂದ 8 ಗಂಟೆಯ ವರೆಗೆ ಹಾಗೂ ಸಾಯಂಕಾಲ ಸಂಜೆ 5 ರಿಂದ 6.30 ರ ವರೆಗೆ ಆಯೋಜಿಸಲಾಗಿದೆ.
ಆಸಕ್ತ ಶಾಲಾ ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೇಸಿಗೆ ಕಬಡ್ಡಿ ತರಬೇತಿ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಇಲಾಖೆಯ ತರಬೇತುದಾರರಾದ ಶ್ರೀಶೈಲ ಎಸ್-ಮೊ.ನಂ: 9448667255 ಹಾಗೂ ನೂರುಲ್ಲ ಮೊ.ನಂ: 9740107364, ಶಿವಯೋಗಿ ಮೊ.ನಂ: 9019619900, ರಾಕೇಶ್ ಮೊನಂ:9448835907 ಇವರನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ4 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ4 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ6 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ1 day agoಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ45 minutes agoಬಾಳೆ ಸಸಿಗಳ ಮಾರಾಟ : ಸಂಪರ್ಕಿಸಿ

