ದಿನದ ಸುದ್ದಿ

ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟ : ಜೈನ್ ವಿಶ್ವವಿದ್ಯಾಲಯ ತಂಡ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ

Published

on

ಸುದ್ದಿದಿನ, ಬೆಂಗಳೂರು : ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ ತಂಡ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಹೊಂದಿದೆ.

ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಕ್ರೀಡಾಪಟುಗಳು ಈವರೆಗೆ ಒಟ್ಟು 16 ಚಿನ್ನ, 6ಬೆಳ್ಳಿ ಮತ್ತು 17 ಕಂಚಿನ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಪಂಜಾಬ್ ವಿಶ್ವ ವಿದ್ಯಾಲಯ 11 ಚಿನ್ನ, 6 ಬೆಳ್ಳಿ ಮತ್ತು 17 ಕಂಚಿನ ಪದಕಗಳನ್ನು ಗೆದ್ದುಕೊಂಡು ಪದಕ ಪಟ್ಟಿಯಲ್ಲಿ 2ನೇ ಸ್ಥಾನ ಪಡೆದಿದೆ.

ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯ ಸ್ಪರ್ಧಿಗಳು ನಿನ್ನೆ ಒಂದೇ ದಿನ 2 ಚಿನ್ನ ಸೇರಿದಂತೆ ಒಟ್ಟು 6 ಪದಕಗಳನ್ನು ಗೆದ್ದುಕೊಳ್ಳುವ ಮೂಲಕ ಪದಕ ಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ.

ನಿನ್ನೆ ಕೊನೆಗೊಂಡ ಆರ್ಚರಿ ಸ್ಪರ್ಧೆಯಲ್ಲಿ ತನಿಶ್ ದೀಪ್ ಸಿಂಗ್ ಅವರು ಸಾಗರ್ ಚೋಪ್ರಾ ವಿರುದ್ಧ145-144 ಅಂಕಗಳಿಂದ ಸೋಲಿಸಿ ಚಿನ್ನದ ಪದಕ ಗೆದ್ದುಕೊಂಡರು. ನಿನ್ನೆ ನಡೆದ ಮಹಿಳೆಯರ 10 ಸಾವಿರ ಮೀಟರ್ ಓಟದ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕೆಎಂ ಲಕ್ಷ್ಮಿ ಖೇಲೋ ಇಂಡಿಯಾ ಕ್ರೀಡಾಕೂಟ ನೂತನ ದಾಖಲೆಯೊಂದಿಗೆ ಚಿನ್ನದ ಪದಕ ತಮ್ಮದಾಗಿಸಿಕೊಂಡರು.

ಇಂದು ನಡೆಯಲಿರುವ ಪುರುಷರ ಹಾಕಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬೆಂಗಳೂರು ಸಿಟಿ ಮತ್ತು ಗುರುನಾನಕ್ ವಿಶ್ವವಿದ್ಯಾಲಯ ತಂಡಗಳು ಪ್ರಶಸ್ತಿಗಾಗಿ ಮುಖಾಮುಖಿಯಾಗಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version