ಕ್ರೀಡೆ
ದಾವಣಗೆರೆ | ರಾಜ್ಯ ಖೋ-ಖೋ ತಂಡಕ್ಕೆ ಮಹಮ್ಮದ್ ತಾಸೀನ್ ಆಯ್ಕೆ
ಸುದ್ದಿದಿನ,ದಾವಣಗೆರೆ : ಡಿ. 26 ರಿಂದ 30 ರವರೆಗೆ ಚತ್ತೀಸ್‍ಗಡ ರಾಜ್ಯದ ರಾಯಪುರದಲ್ಲಿ ನಡೆಯುವ 53ನೇ ಸೀನಿಯರ್ ನ್ಯಾಷನಲ್ ಖೋ-ಖೋ ಚಾಂಪಿಯನ್‍ಷಿಪ್‍ನಲ್ಲಿ ಭಾಗವಹಿಸಲಿರುವ ಕರ್ನಾಟಕ ರಾಜ್ಯ ಪುರುಷರ ಖೋ-ಖೋ ತಂಡಕ್ಕೆ ದಾವಣಗೆರೆ ಕ್ರೀಡಾ ವಸತಿ ನಿಲಯದ ಖೋ-ಖೋ ಕ್ರೀಡಾಪಟುವಾದ ಮಹಮ್ಮದ್ ತಾಸೀನ್ ಇವರು ಆಯ್ಕೆಯಾಗಿರುತ್ತಾರೆ.
ಈ ಕ್ರೀಡಾಪಟುವು ಇಲಾಖೆಯ ತರಬೇತುದಾರರಾದ ಜೆ.ರಾಮಲಿಂಗಪ್ಪ ಇವರ ಬಳಿ ತರಬೇತಿ ಪಡೆಯುತ್ತಿದ್ದಾರೆ.ಕರ್ನಾಟಕ ರಾಜ್ಯ ಪುರುಷರ ಖೋ-ಖೋ ತಂಡವು ಉತ್ತಮ ಸಾಧನೆ ಮಾಡಿ, ರಾಜ್ಯ ಹಾಗೂ ಜಿಲ್ಲೆಗೆ ಕೀರ್ತಿ ತರಲೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಬಿ. ಶ್ರೀನಿವಾಸ್, ಇಲಾಖೆಯ ಎಲ್ಲಾ ತರಬೇತುದಾರರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243