ದಿನದ ಸುದ್ದಿ
ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ಕ್ರೀಡಾಪಟುಗಳ ಆಯ್ಕೆ
ಸುದ್ದಿದಿನ,ದಾವಣಗೆರೆ: ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ದಾವಣಗೆರೆ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಆಯ್ಕೆಯಾಗಿರುವರು.
ಜೂನ್.6 ರಿಂದ 12ರ ವರೆಗೆ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎಸ್.ಜಿ.ಎಫ್.ಐ. 19 ವರ್ಷದೊಳಗಿನ ಪದವಿ ಪೂರ್ವ ಕಾಲೇಜುಗಳ ಖೋ-ಖೋ ಪಂದ್ಯಾವಳಿಯಲ್ಲಿ ಆಶೀಪ್ ಕುನ್ನೂರ್ ಮತ್ತು ಶರಣ ಬಸವ ಮಾದರ್ ಭಾಗವಹಿಸಲಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಸುಚೇತನ ನೆಲವಿಗಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243