Connect with us

ದಿನದ ಸುದ್ದಿ

ಮುರಾದಾಬಾದ್‌ ಕಿಸಾನ್‌ ಮಹಾಪಂಚಾಯತ್‌ನಲ್ಲಿ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಲು ಆಗ್ರಹ

Published

on

ಸುದ್ದಿದಿನ,ಮುರಾದಾಬಾದ್‌: ರೈತ ವಿರೋಧಿ ಕಾನೂನುಗಳನ್ನು ಸರ್ಕಾರ ಹಿಂಪಡೆಯಲೇಬೇಕು ಎಂದು ಮುರಾದಾಬಾದ್‌ನಲ್ಲಿ ನಡೆದ ಕಿಸಾನ್‌ ಮಹಾಪಂಚಾಯತ್‌ನಲ್ಲಿ ರೈತರು ಆಗ್ರಹಿಸಿದರು.

ಶುಕ್ರವಾರ ನಡೆದ ಮಹಾಪಂಚಾಯತ್‌ನಲ್ಲಿ ಭಾರತೀಯ ಕಿಸಾನ್‌ ಯೂನಿಯನ್‌ನ ರಾಕೇಶ್‌ ಟಿಕಾಯತ್‌ ಸೇರಿದಂತೆ ವಿವಿಧ ಮುಖಂಡರು ಭಾಗವಹಿಸಿದ್ದರು. ಉತ್ತರ ಪ್ರದೇಶದ ಆರು ಜಿಲ್ಲೆಗಳ ಬಿಕೆಯು ಸಂಘಟನೆಯ ಜಿಲ್ಲಾ ಹಾಗೂ ಮಂಡಲ್‌ ಮಟ್ಟದ ಪದಾಧಿಕಾರಿಗಳು ಹಾಗೂ ಅಸಂಖ್ಯಾ ರೈತರು ಭಾಗವಹಿಸಿದ್ದರು.

”ಮಹಾಪಂಚಾಯತ್‌ನಲ್ಲಿ ಭಾಗವಹಿಸಿರುವ ಎಲ್ಲಾ ರೈತರಿಗೆ ಅಗತ್ಯವಿರುವ ಮೂಲಭೂತ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ಪೊಲೀಸರು ಕಾನೂನು ಸುವ್ಯವಸ್ಥೆ ನಿಯಂತ್ರಣದಲ್ಲಿಡಲು ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಹರಿಯಾಣದಲ್ಲಿ ನಡೆದ ಅಹಿತಕರ ಘಟನೆ ಇಲ್ಲಿ ಮರುಕಳಿಸದಂತೆ ಎಚ್ಚರ ವಹಿಸಲಾಗಿದೆ.’ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !

Published

on

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !

ಹಿರಿಯೂರು/ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ವೇಳೆ, ಕೆ.ಆರ್. ಹಳ್ಳಿ ಗೇಟ್ ಸಮೀಪ ದಿಢೀರನೆ ಮತ್ತೊಂದು ಕಾರು ಅಡ್ಡ ಬಂದಿದೆ. ಅಡ್ಡ ಬಂದ ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದಾಗ ನಿಯಂತ್ರಣ ತಪ್ಪಿದ ಶಾಸಕರ ಕಾರು ರಸ್ತೆ ಡಿವೈಡರ್‌ಗೆ ಭೀಕರವಾಗಿ ಡಿಕ್ಕಿಯಾಗಿದೆ.

http://Visit : www.suddidina.com

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಜಖಂಗೊಂಡಿದೆಯಾದರೂ, ಕಾರಿನಲ್ಲಿದ್ದ ಶಾಸಕ ಸಮರ್ಥ್ ಶಾಮನೂರು ಹಾಗೂ ಸಿಬ್ಬಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಸುರಕ್ಷಿತವಾಗಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

ದಿನದ ಸುದ್ದಿ

ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ

Published

on

ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ

ದಾವಣಗೆರೆ: ಭದ್ರಾ ಡ್ಯಾಂ ನೀರು ಹರಿಸಬೇಕು ಎಂದು ಒತ್ತಾಯಿಸಿ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದ ದಾವಣಗೆರೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ ಎಂದಿನಂತೆ ಇತ್ತು. ವಾಹನಗಳ ಓಡಾಟವೂ ಯಥಾಸ್ಥಿತಿ ಇತ್ತು. ಅಂಗಡಿ ಮುಂಗಟ್ಟುಗಳು ಬಂದ್ ಆಗಲಿಲ್ಲ. ಶಾಲಾ ಕಾಲೇಜುಗಳು ಎಂದಿನಂತೆ ನಡೆದವು.

ನಗರದ ಜಯದೇವ ವೃತ್ತದಲ್ಲಿ ಮಾಜಿ ಸಚಿವ ಎಸ್. ಎ. ರವೀಂದ್ರನಾಥ್ ನೇತೃತ್ವದಲ್ಲಿ ಲೋಕಿಕೆರೆ ನಾಗರಾಜ್, ಲಿಂಗರಾಜ್ ಶಾಮನೂರು, ಕೊಳೇನಹಳ್ಳಿ ಸತೀಶ್ ಸೇರಿದಂತೆ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಹೆದ್ದಾರಿ ಬಂದ್ ನಡೆಸಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಸಂಜೆ ಹೊತ್ತಿಗೆ ಬಿಡುಗಡೆ ಮಾಡಿದರು.

http://Visit : www.suddidina.com

ದಾವಣಗೆರೆ ಬಂದ್ ಯಶಸ್ವಿ ಆಗಲಿಲ್ಲ. ಬಂದ್ ಎಂಬಂತ ವಾತಾವರಣವೂ ನಿರ್ಮಾಣ ಆಗಿರಲಿಲ್ಲ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲಿಲ್ಲ. ಮಳೆ ಆರಂಭವಾದ ಕಾರಣ ಕಡಿಮೆ ಪ್ರಮಾಣದಲ್ಲಿ ಸೇರಿದ್ದ ರೈತ ಮುಖಂಡರು ರಾಜ್ಯ ಸರ್ಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ವಿರುದ್ಧ ಘೋಷಣೆ ಹಾಕಿದರು. ಕೂಡಲೇ ಭದ್ರಾ ಡ್ಯಾಂ ನೀರು ಹರಿಸುವ ಮೂಲಕ ರೈತರ ಹಿತ ಕಾಪಾಡುವಂತೆ ಒತ್ತಾಯಿಸಿದರು.

Continue Reading

ದಿನದ ಸುದ್ದಿ

ಅಂತರ್ಜಾತಿ ವಿವಾಹದ ಬೆನ್ನಲ್ಲೇ ದೇವಸ್ಥಾನ ನೌಕರ ಅಮಾನತು? ಜಾತಿ ತಾರತಮ್ಯದ ಆರೋಪ!

Published

on

ಅಂತರ್ಜಾತಿ ವಿವಾಹದ ಬೆನ್ನಲ್ಲೇ ದೇವಸ್ಥಾನ ನೌಕರ ಅಮಾನತು? ಜಾತಿ ತಾರತಮ್ಯದ ಆರೋಪ!

ಕಣ್ಣೂರು: ಮಗಳು ಬೇರೆ ಜಾತಿಯ ಯುವಕನನ್ನು ವಿವಾಹವಾದ ಬಳಿಕ ತಮ್ಮನ್ನು ದೇವಸ್ಥಾನದ ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ಕಣ್ಣೂರಿನ ಮುಚ್ಚಿಲೋಟ್ ಭಗವತಿ ದೇವಸ್ಥಾನದ ಉಪಕರ್ಮಿ ಸಿ.ವಿ. ರಾಜನ್ ಆರೋಪಿಸಿದ್ದಾರೆ. ಈ ಆರೋಪವು ದೇವಸ್ಥಾನದ ಆಚರಣೆಗಳು, ಜಾತಿ ವ್ಯವಸ್ಥೆ ಹಾಗೂ ವೈಯಕ್ತಿಕ ಆಯ್ಕೆಯ ಹಕ್ಕಿನ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮಾರ್ಚ್ 15, 2026ರಂದು ವಾಣಿ ಸಮುದಾಯಕ್ಕೆ ಸೇರಿದ ರಾಜನ್ ಅವರ ಮಗಳು ಪೊದುವಾಲ್ ಸಮುದಾಯದ ಯುವಕನನ್ನು ವಿವಾಹವಾಗಿದ್ದರು. ಮದುವೆಗೂ ಮುನ್ನವೇ, 2025ರ ಆಗಸ್ಟ್‌ನಲ್ಲಿ ನಡೆದ ನಿಶ್ಚಿತಾರ್ಥದ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ರಾಜನ್ ಅವರನ್ನು ಕೆಲಸದಿಂದ ದೂರವಿರಲು ಸೂಚಿಸಿತ್ತು ಎಂದು ಅವರು ಹೇಳಿದ್ದಾರೆ.

ಸುಮಾರು 30 ವರ್ಷಗಳಿಂದ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿರುವ ರಾಜನ್, ದೇವಸ್ವಂ ಮಂಡಳಿಯ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಹಿಂದೆ ಕೆಲಸ ಮುಂದುವರಿಸಲು ಅವಕಾಶ ದೊರೆತಿತ್ತು. ಆದರೆ ಇದೀಗ ಹೊರಡಿಸಿರುವ ಅಮಾನತು ಆದೇಶದಲ್ಲಿ, ಸಮಿತಿ ಸದಸ್ಯರು ಹಾಗೂ ಭಕ್ತರೊಂದಿಗೆ ಅನುಚಿತವಾಗಿ ವರ್ತಿಸಿರುವುದು ಮತ್ತು ಪೂರ್ವಜರಿಂದ ಬಂದ ಸಾಂಪ್ರದಾಯಿಕ ಆಚರಣೆಗಳನ್ನು ಉಲ್ಲಂಘಿಸಿರುವುದು ಕಾರಣವೆಂದು ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ.

http://Visit : www.suddidina.com

ಈ ಆರೋಪಗಳಿಗೆ ಸೂಕ್ತ ಸಾಕ್ಷ್ಯ ನೀಡಲಾಗಿಲ್ಲ. ಹಾಗೂ ತಮ್ಮ ಮಗಳ ಅಂತರ್ಜಾತಿ ವಿವಾಹವೇ ತಮ್ಮ ವಿರುದ್ಧದ ಕ್ರಮಕ್ಕೆ ಪ್ರಮುಖ ಕಾರಣ ಎಂದು ಆರೋಪಿಸಿದ್ದು, ನನ್ನ ವಿರುದ್ಧದ ಆರೋಪಗಳಿಗೆ ಸಾಕ್ಷ್ಯ ನೀಡಿದ್ದಲ್ಲಿ ಅಥವಾ ತಪ್ಪು ಸಾಬೀತಾದಲ್ಲಿ ಕೆಲಸ ತೊರೆಯಲು ನಾನು ಸಿದ್ಧನಿದ್ದೇನೆ ಎಂದು ರಾಜನ್ ಅವರು ತಮ್ಮ ವಾದವನ್ನು ಮಂಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ದೇವಸ್ಥಾನದ ಸಮಿತಿ ಕಾರ್ಯದರ್ಶಿಗಳಾದ ಹರೀಂದ್ರನ್ ಅವರು, ರಾಜನ್ ಮುಂದುವರಿಯುವುದಕ್ಕೆ ಸಮಿತಿಗೆ ಯಾವುದೇ ಆಕ್ಷೇಪವಿಲ್ಲ ಮತ್ತು ಅಂತಿಮ ನಿರ್ಧಾರವನ್ನು ವ್ಯವಸ್ಥಾಪಕ ಟ್ರಸ್ಟಿ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಈ ನಡುವೆ ರಾಜನ್ ಅವರು ತಮಗೆ ಆದ ಅನ್ಯಾಯದ ಕುರಿತು ಮಲಬಾರ್ ದೇವಸ್ವಂ ಮಂಡಳಿ, ಮಾನವ ಹಕ್ಕುಗಳ ಆಯೋಗ ಹಾಗೂ ಸ್ಥಳೀಯ ಶಾಸಕರಾದ ವಿ ಕುಂಞಕೃಷ್ಣನ್ ಅವರಿಗೆ ದೂರು ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆ ಮುಂದಿನ ತಿಂಗಳು ದೇವಸ್ವಂ ಮಂಡಳಿಯಲ್ಲೇ ನಡೆಯಲಿದೆ ಎಂದು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಒಬ್ಬ ವಯಸ್ಕ ವ್ಯಕ್ತಿಯ ವಿವಾಹದ ಆಯ್ಕೆಗೆ ಆತನ ಪೋಷಕರೇ ಬೆಲೆ ತೆರಬೇಕೇ? ಎಂಬ ಪ್ರಶ್ನೆಯನ್ನು ಈ ಪ್ರಕರಣ ಮತ್ತೆ ಮುನ್ನೆಲೆಗೆ ತಂದಿದೆ.

Continue Reading

Trending