ದಿನದ ಸುದ್ದಿ

ಕಿಸಾನ್ ಸಮ್ಮಾನ್ ನಿಧಿ : ರಾಜ್ಯ ಸರ್ಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ 956 ಕೋಟಿ ರೂಪಾಯಿ ನೇರ ನಗದು ವರ್ಗಾವಣೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಮುಖ್ಯಮಂತ್ರಿ ಕಿಸಾನ್ ಸಮ್ಮಾನ್ ನಿಧಿಯೋಜನೆಯಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ರಾಜ್ಯದ ಸುಮಾರು 47 ಲಕ್ಷದ 83 ಸಾವಿರ ರೈತರಿಗೆ 956ಕೋಟಿ 71ಲಕ್ಷ ರೂಪಾಯಿ ಆರ್ಥಿಕ ಸಹಾಯಧನ ವರ್ಗಾಯಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ರೈತರ ಖಾತೆಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದರು.

2021-22ನೇ ಸಾಲಿನಲ್ಲಿ 50 ಲಕ್ಷದ 35ಸಾವಿರ ರೈತರಿಗೆ 1ಸಾವಿರದ 975ಕೋಟಿ ರೂಪಾಯಿ ಆರ್ಥಿಕ ನೆರವನ್ನು ರೈತರ ಖಾತೆಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ. ಎಲ್ಲಾ ಪಾವತಿಗಳನ್ನು ಆಧಾರ್ ಆಧಾರಿತ ಡಿಬಿಟಿ ಮುಖಾಂತರ ಮಾಡಲಾಗಿದೆ.

ದೇಶದ ಎಲ್ಲಾ ರಾಜ್ಯಗಳ ಪೈಕಿ ರಾಜ್ಯ ಅತಿಹೆಚ್ಚು ಅಂದರೆ ಶೇಕಡ 96 ರಷ್ಟು ಆಧಾರ್ ಆಧಾರಿತ ಪಾವತಿಗಳನ್ನು ಅತ್ಯುತ್ತಮವಾಗಿ ನಿರ್ವಹಿಸಿದ ರಾಜ್ಯವಾಗಿದೆ. ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯ ಅರ್ಹ ರೈತರಿಗೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರ 4 ಸಾವಿರ ರೂಪಾಯಿ ಆರ್ಥಿಕ ನೆರವನ್ನು ಎರಡು ಕಂತುಗಳಲ್ಲಿ ನೀಡುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version